ಬುಧವಾರ, ಅಕ್ಟೋಬರ್ 16, 2024

                                                             ವಾ.ವಿ.ಸ.45

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

ಯಾದಗಿರಿ : ಅಕ್ಟೋಬರ್ 16, (ಕ.ವಾ) : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಅಕ್ಟೋಬರ್ 17 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಪ್ರವಾಸವು ಕೆಳಗಿನಂತಿದೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಶ್ರೀಶೈಲ ಜಿ.ಬಿದರಕುಂದಿ ಅವರು ತಿಳಿಸಿದ್ದಾರೆ.


     2024ರ ಅಕ್ಟೋಬರ್ 17ರ ಗುರುವಾರ ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ದಿಂದ ನಿರ್ಗಮಿಸಿ ಬೆಳಿಗ್ಗೆ 12 ಗಂಟೆಗೆ ಯಾದಗಿರಿ ಆಗಮಿಸಿ, ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಶ್ರೀಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 4 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  


ಗುರುವಾರ, ಅಕ್ಟೋಬರ್ 3, 2024

                                                            ವಾ.ವಿ.ಸಂ.09

 ನೇರ ಸಂದರ್ಶನಕ್ಕೆ ಆಹ್ವಾನ

ಯಾದಗಿರಿ : ಅಕ್ಟೋಬರ್ 03, (ಕ.ವಾ) : ಇದೇ 2024ರ ಅಕ್ಟೋಬರ್ 7 ರಂದು ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿವತಿಯಿಂದ ನೇರ ಸಂದರ್ಶನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ  ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಪ್ರಭಾಕರ ಅವರು ತಿಳಿಸಿದ್ದಾರೆ. 

     ಎಸ್ ಆರ್ ಜೆ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಕಲಬುರಗಿ, ಟೀಚರ್ಸ ಹುದ್ದೆಗೆ 10 ಹುದ್ದೆ ಖಾಲಿ ಇದ್ದು ಅರ್ಹತೆ ಯಾವುದೇ ಪದವಿ, ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಯಾದಗಿರಿ, ಸೈದಾಪೂರು, ಶಹಾಪೂರು, ಉದ್ಯೋಗ ಸ್ಥಳವಾಗಿದೆ. 21 ರಿಂದ 35 ವರ್ಷ ಒಳಗಿರಬೇಕು, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

     ಜಿಯೋ ಇನ್ಫೋಕಾಮ್ ಲಿಮಿಟೆಡ್, ಜಿಯೋ ಪಾಯಿಂಟ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ 08 ಹುದ್ದೆಗಳು ಖಾಲಿ ಇದ್ದು ಅರ್ಹತೆ ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಜಿಯೋ ಪಾಯಿಂಟ್ ಮ್ಯಾನೇಜರ್, ಹುದ್ದೆಗೆ 08 ಹುದ್ದೆಗಳು ಖಾಲಿ ಇದ್ದು ಅರ್ಹತೆ ಪಿಯುಸಿ, ಐಟಿಐ, ಡಿಪ್ಲೋಮ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಜಿಯೋ ಏರ್‌ಫೈಬರ್ ಪ್ರೀಲ್ಯಾನ್ಸರ್ ಹುದ್ದೆಗೆ 25 ಹುದ್ದೆಗಳು ಖಾಲಿ ಇದ್ದು, ಐಟಿಐ, ಡಿಪ್ಲೋಮ ವಿದ್ಯಾರ್ಹತೆ ಹೊಂದಿರಬೇಕು. ಯಾದಗಿರಿ, ಸುರಪುರ, ಶಹಾಪೂರು, ಗುರುಮಠಕಲ್, ಹುಣಸಗಿ, ವಡಿಗೇರ, ಯರಗೋಳ ಕಕ್ಕೇರಾ, ಸೈದಾಪೂರು ಗೋಗಿ ಪೇಠ ಉದ್ಯೋಗ ಸ್ಥಳವಾಗಿದೆ. ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. 19 ರಿಂದ 32 ವರ್ಷ ಒಳಗಿರಬೇಕು, ನಿರುದ್ಯೋಗಿ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. ನೇರ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ದಾಖಲಾತಿಗಳೊಂದಿಗೆ ವ್ಯಕ್ತಿ ಪರಿಚಯ ರಿಸ್ಯೂಮ್, ಬಯೋಡಾಟಾದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. ಹಾಗೂ ನೇರ ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. 

     ನೇರ ಸಂದರ್ಶನ ನಡೆಯುವ ಸ್ಥಳ ಚಿತ್ತಾಪೂರು ರೋಡ್ (ಮಿನಿ ವಿಧಾನ ಸೌಧ) ಜಿಲ್ಲಾಡಳಿತ ಭವನ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಬಿ-ಬ್ಲಾಕ್, ರೂ.ನಂ. ಬಿ1, ಬಿ2 2ನೇ ಮಹಡಿ ಯಾದಗಿರಿ.  ದೂ.ಸಂ.08473 253718, ಮೊ.ನಂ.9448566765ಗೆ ಕಛೇರಿಯ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮಂಗಳವಾರ, ಅಕ್ಟೋಬರ್ 1, 2024

                                                            ವಾ.ವಿ.ಸಂ.01

ಅ.2 ರಂದು ರಾಷ್ಟçಪಿತ ಮಹಾತ್ಮ ಗಾಂಧೀಜಿರವರ 155ನೇ ಜಯಂತಿ ದಿನಾಚರಣೆ

ಯಾದಗಿರಿ : ಅಕ್ಟೋಬರ್ 01, (ಕ.ವಾ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯೋಗದೊAದಿಗೆ ರಾಷ್ಟçಪಿತ ಮಹಾತ್ಮ ಗಾಂಧೀಜಿರವರ 155ನೇ ಜಯಂತಿ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ 2024-25ನೇ ಸಾಲಿನ

ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನ ಆಡಿಟೋರಿಯಂ ಸಭಾಂಗಣದಲ್ಲಿ 2024ರ ಅಕ್ಟೋಬರ್ 02 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.    

     ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪಗೌಡ ದರ್ಶನಾಪೂರ ಅವರು ಕಾರ್ಯಕ್ರಮ ಉದ್ಘಾಟಿಸುವರು.

     ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸುವರು. ರಾಯಚೂರು ಲೋಕಸಭಾ ಸದಸ್ಯರು ಶ್ರೀ ಜಿ.ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.

     ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಶ್ರೀ ವಿನಾಯಕ ಮಾಲಿ ಪಾಟೀಲ್ ಅತಿಥಿಗಳಾಗಿ ಪಾಲ್ಗೊಳ್ಳುವರು.

     ಯಾದಗಿರಿ ಸರಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲರಾದ ಶ್ರೀ ಸುಭಾಷಚಂದ್ರ ಕೌಲಗಿ ಅವರು ಉಪನ್ಯಾಸ ನೀಡಲಿದ್ದಾರೆ. 

     ಕಾರ್ಯಕ್ರಮಕ್ಕೆ ಯಾದಗಿರಿ ಜಿಲ್ಲಾ ಸಮಸ್ತ ಜನಪ್ರತಿನಿಧಿಗಳು ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಜಯಂತ್ಯೋತ್ಸವ ಸಮಿತಿ ಹಾಗೂ ಸಂಘ ಸಂಸ್ಥೆಗಳು, ಸಮಸ್ತ ನಾಗರೀಕರು, ಮಾಧ್ಯಮ ಮಿತ್ರರು ಹಾಗೂ ಸರ್ವರೂ ಆಗಮಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ.ಸಂಗೀತಾ, ಯಾದಗಿರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು (ಪ್ರ) ಸುಲೈಮಾನ ಡಿ.ನದಾಫ್ ಅವರು ಪ್ರಕಟಣೆ ಕೋರಿದೆ. 


ಮಂಗಳವಾರ, ಸೆಪ್ಟೆಂಬರ್ 24, 2024

                                                              ವಾ.ವಿ.ಸಂ.119

ಸೆ.25 ರಂದು ಅರಕೇರಾ.ಕೆ ಗ್ರಾಮ ಕ್ಕೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭೇಟಿ 

ಯಾದಗಿರಿ : ಸೆಪ್ಟೆಂಬರ್ 24, (ಕ.ವಾ) : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಎಸ್.ಮಧು ಬಂಗಾರಪ್ಪ ಅವರು ಬುಧವಾರ  ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11.30 ಗಂಟೆಗೆ ಯಾದಗಿರಿ ತಾಲೂಕಿನ ಅರಕೇರಾ.ಕೆ ಗ್ರಾಮದಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಇವರ ಸಹಭಾಗಿತ್ವದಲ್ಲಿ 2024-25ನೇ ಸಾಲಿನಲ್ಲಿ ರಾಜ್ಯದ ಎಲ್ಲ ಸರ್ಕಾರಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳ ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವರು. ಅಂದು ಮಧ್ಯಾಹ್ನ 2.30 ಗಂಟೆಗೆ ಯಾದಗಿರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರ್ಗಿ ವಿಭಾಗ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಂಜೆ 6.30 ಗಂಟೆಗೆ ಕಲಬುರ್ಗಿಗೆ ಪ್ರಯಾಣ ಬೆಳೆಸುವರು.


                                                              ವಾ.ವಿ.ಸಂ.118

ಜೀನಕೇರಾ ತಾಂಡದಲ್ಲಿ ಸಿಡಿಲು ಬಡಿದು ನಾಲ್ವರು ಸಾವು : 

ಕುಟುಂಬಸ್ಥರಿಗೆ ಸಚಿವರಾದ ಶರಣಬಸಪ್ಪ ದರ್ಶನಾಪುರ ಸಾಂತ್ವನ

ಯಾದಗಿರಿ : ಸೆಪ್ಟೆಂಬರ್ 24, (ಕ.ವಾ) : ಸೋಮವಾರ ಸಿಡಿಲು ಬಡಿದು ನಾಲ್ವರು ಮೃತಪಟ್ಟ ಯಾದಗಿರಿ ತಾಲ್ಲೂಕಿನ ಜಿನಕೇರಾ ತಾಂಡಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

     ಇಂತಹ ಘಟನೆಗಳು ಆಗದಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಆ ಕುಟುಂಬದ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ.

     ಸರ್ಕಾರದಿಂದ ಏನೆಲ್ಲ ಪರಿಹಾರ ಇದೆಯೋ ಅದನ್ನು ಆ ಕುಟುಂಬಗಳಿಗೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು. ಸಿಡಿಲು ಬಡಿದು ನೇನು (18), ಚೇನು (22), ಕಿಶನ್ (30) ಮತ್ತು ಸುಮಿ ಬಾಯಿ (30) ಮೃತಪಟ್ಟಿದ್ದಾರೆ. ಇನ್ನೂ 8 ಜನಕ್ಕೆ ಗಾಯಗಳಾಗಿದ್ದು ಒಬ್ಬರು ಡಿಸ್ಚಾರ್ಜ್ ಆಗಿದ್ದು, ಇನ್ನುಳಿದವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಸಚಿವರು ನುಡಿದರು. ಇದಕ್ಕೂ ಮುಂಚೆ ಸಿಡಿಲಿನಿಂದ ಗಾಯಗೊಂಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವನ್ನು ಸಚಿವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಶೀಲ್ದಾರ ಸುರೇಶ ಅಂಕಲಗಿ ಸೇರಿದಂತೆ ಹಲವು ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.










ಸೋಮವಾರ, ಸೆಪ್ಟೆಂಬರ್ 23, 2024

                                                              ವಾ.ವಿ.ಸಂ.108

 ಅ.1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಯಾದಗಿರಿ : ಸೆಪ್ಟೆಂಬರ್ 23, (ಕ.ವಾ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ 2024ರ ಅಕ್ಟೋಬರ್ 1 ರಂದು ಬೆಳಿಗ್ಗೆ 10.30 ಗಂಟೆಗೆ ಯಾದಗಿರಿ ಸರಕಾರಿ ಪದವಿ ಮಹಾವಿದ್ಯಾಲಯ ವಿಶ್ವನಾಥರೆಡ್ಡಿ ಮುದ್ನಾಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

     ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಕಾರ್ಯಕ್ರಮ ಉದ್ಘಾಟಿಸುವರು.

     ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ  ಸಬಲೀಕರಣ ಇಲಾಖೆ ಸಚಿವರಾದ ಶ್ರೀ ಲಕ್ಷಿö್ಮÃ ಹೆಬ್ಬಾಳಕರ್, ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸುವರು. ರಾಯಚೂರು ಲೋಕಸಭಾ ಸದಸ್ಯರು ಶ್ರೀ ಜಿ.ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.

     ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಶ್ರೀ ವಿನಾಯಕ ಮಾಲಿ ಪಾಟೀಲ್, ಸರಕಾರದ ಕಾರ್ಯದರ್ಶಿ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಛ್ ಇಲಾಖೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಮನೋಜ್ ಜೈನ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. 

     ಕಾರ್ಯಕ್ರಮಕ್ಕೆ ಜಿಲ್ಲಾ ಸಮಸ್ತ ಜನಪ್ರತಿನಿಧಿಗಳು ಮತ್ತು ಎಲ್ಲಾ ಸಂಘ ಸಂಸ್ಥೆಗಳು, ಹಿರಿಯ ನಾಗರಿಕರ ಹಾಗೂ ಮಾಧ್ಯಮ ಮಿತ್ರರು ಆಗಮಿಸುವಂತೆ, ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ.ಸಂಗೀತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ವೀರನಗೌಡ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್ ಅವರು ಪ್ರಕಟಣೆ ಕೋರಿದೆ.


ಭಾನುವಾರ, ಸೆಪ್ಟೆಂಬರ್ 22, 2024

                                                              ವಾ.ವಿ.ಸಂ.107

ಸೆ.26 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ

ಯಾದಗಿರಿ : ಸೆಪ್ಟೆಂಬರ್ 23, (ಕ.ವಾ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯಾದಗಿರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಯಾದಗಿರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ 2024ರ ಸೆಪ್ಟೆಂಬರ್ 26 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.


     ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಕಾರ್ಯಕ್ರಮ ಉದ್ಘಾಟಿಸುವರು.

     ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸುವರು. ರಾಯಚೂರು ಲೋಕಸಭಾ ಸದಸ್ಯರು ಶ್ರೀ ಜಿ.ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.

     ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಶ್ರೀ ವಿನಾಯಕ ಮಾಲಿ ಪಾಟೀಲ್ ಅತಿಥಿಗಳಾಗಿ ಪಾಲ್ಗೊಳ್ಳುವರು. 

     ಕಾರ್ಯಕ್ರಮಕ್ಕೆ ಜಿಲ್ಲಾ ಸಮಸ್ತ ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಗಳು, ಕ್ರೀಡಾಪಟುಗಳು, ಮಾಧ್ಯಮ ಮಿತ್ರರು ಹಾಗೂ ಸರ್ವರೂ ಆಗಮಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ.ಸಂಗೀತಾ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಶ್ರೀ ರಾಜು ಬಾವಿಹಳ್ಳಿ ಅವರು ಪ್ರಕಟಣೆ ಕೋರಿದೆ.  




                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...