ಬುಧವಾರ, ಆಗಸ್ಟ್ 17, 2016

ವಯಸ್ಕರ ಸಾಕ್ಷರತಾ ಪರೀಕ್ಷೆ ಯಶಸ್ವಿಗೊಳಿಸಲು ಪ್ರಭಾರಿ ಜಿಲ್ಲಾಧಿಕಾರಿ ಶ್ರೀ ವಿಕಾಸ್ ಕಿಶೋರ್ ಸುರಳಕರ್ ಕರೆ
ಯಾದಗಿರಿ: ಆಗಸ್ಟ್. 17 (ಕರ್ನಾಟಕ ವಾರ್ತೆ) “ಸಾಕ್ಷರ ಭಾರತ” ಕಾರ್ಯಕ್ರಮದಡಿ ಇದೇ ತಿಂಗಳ ಆಗಸ್ಟ್ 21 ರಂದು ಮೂಲ (ವಯಸ್ಕರ) ಸಾಕ್ಷರತೆ ಮೌಲ್ಯಮಾಪನ/ಪರೀಕ್ಷೆ ನಡೆಯಲಿದ್ದು, ಅದನ್ನು ಯಶಸ್ವಿಯಾಗಿಸುವ ಕುರಿತಂತೆ ಪ್ರಭಾರಿ ಜಿಲ್ಲಾಧಿಕಾರಿಗಳೂ ಆಗಿರುವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ವಿಕಾಸ್ ಕಿಶೋರ್ ಸುರಳಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ದತಾ ಸಭೆ ನಡೆಯಿತು.
ಜಿಲ್ಲಾ ಪಂಚಾಯತ್, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿಗಳ ವತಿಯಿಂದ ನಡೆದ ಸಭೆಗೆ ಕೆಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧಿಕಾರಿಗಳು, ಸದಸ್ಯ ಕಾರ್ಯದರ್ಶಿಗಳು ಹಾಗೂ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಹಾಜರಿದ್ದು, ಪರೀಕ್ಷೆ ಯಶಸ್ವಿಯಾಗಿ ನಡೆಸುವ ಬಗ್ಗೆ ತಮ್ಮ ಸಲಹೆ ನೀಡಿದರು.
ಜಿಲ್ಲಾ ವ್ಯಾಪ್ತಿಯಲ್ಲಿ 2016-17ನೇ ಸಾಲಿನಲ್ಲಿ, 3 ತಾಲೂಕುಗಳ 117 ಗ್ರಾಮ ಪಂಚಾಯಿತಿಯ ಗ್ರಾಮಗಳ ವ್ಯಾಪ್ತಿಯಲ್ಲಿ 15 ವರ್ಷ ಮೇ¯್ಪಟ್ಟ ವಯೋಮಾನದ ಅನಕ್ಷರಸ್ಥರು ಸಾಕ್ಷರ ಭಾರತ ಕಾರ್ಯಕ್ರಮದಡಿ ಕಲಿತ ನವ ಸಾಕ್ಷರರು (ಕಲಿಕಾರ್ಥಿಗಳು) ಸಾಕ್ಷರತಾ ಮೌಲ್ಯಮಾಪನ/ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಶ್ರೀ ಯಲ್ಲಪ್ಪ ಕಾಡ್ಲೂರು ಅವರು ಸಭೆಗೆ ತಿಳಿಸಿದರು.
ಈ ಸಾಲಿನಲ್ಲಿ 90,764 ಮಂದಿಯನ್ನು ಸಾಕ್ಷರತಾರನ್ನಾಗಿಸುವ ಗುರಿ ಹೊಂದಲಾಗಿದೆ. ಆಗಸ್ಟ್ 21 ರಂದು 60,943 ಮಂದಿ ಸಾಕ್ಷರರು ಪರೀಕ್ಷೆ ಬರೆಯಲಿದ್ದು, ಇದಕ್ಕಾಗಿ 220 ಉಪ ಪರೀಕ್ಷಾ ಕೇಂದ್ರಗಳು ಸೇರಿದಂತೆ 337 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. 220 ಮಂದಿ ಮುಖ್ಯ ಅಧೀಕ್ಷಕರು, 189 ಮಂದಿ ಪರೀಕ್ಷಾ ಕೇಂದ್ರ ವೀಕ್ಷಕರು ಸೇರಿದಂತೆ 1,100 ಮಂದಿ ಅಧಿಕಾರಿಗಳು ಹಾಗೂ ಶಿಕ್ಷಕರು ಪರೀಕ್ಷಾ ಕಾರ್ಯದಲ್ಲಿ ತೊಡಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಲಿಕಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆ ತರಲು ಸಮಸ್ಯೆಯಾಗುತ್ತದೆ. ತಾವೇ ಖುದ್ದಾಗಿ ಅವರ ಮನೆಗೆ ಹೋಗಿ ಕೇಂದ್ರಕ್ಕೆ ಕರೆ ತರಬೇಕೆಂದು ಶಿಕ್ಷಕರೊಬ್ಬರು ಅಳಲು ತೊಡಿಕೊಂಡರು. ಇನ್ನುಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂಬ ಬಗ್ಗೆ ಸಭೆಗೆ ಮಾಹಿತಿ  ಬಂತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಭಾರಿ ಜಿಲ್ಲಾಧಿಕಾರಿಗಳೂ ಆಗಿರುವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ವಿಕಾಸ್ ಕಿಶೋರ್ ಸುರಳಕರ್ , ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರನ್ನು ಪರೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ  ವಿವಿಧ ಇಲಾಖೆಗಳ ಅಧಿಕಾರಿಗಳ ಸಹಕಾರದಿಂದ ವಯಸ್ಕರ ಸಾಕ್ಷರತಾ ಪರೀಕ್ಷೆ ಯಶಸ್ವಿಗೊಳಿಸಬೇಕೆಂದು ಸೂಚಿಸಿದರು.
ಕಳೆದ ಬಾರಿ ಇದ್ದ 15 ಪರೀಕ್ಷೆ ಕೇಂದ್ರಗಳಿಗೆ ಒಬ್ಬ ನೋಡಲ್ ಅಧಿಕಾರಿ ನಿಯೋಜನೆ ಬದಲು, ಈ ಬಾರಿ 5 ಪರೀಕ್ಷಾ ಕೇಂದ್ರಗಳಿಗೆ ತಲಾ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು  ನಿಯೋಜಿಸಬೇಕೆಂದು ಹೇಳಿದರು.
ಉತ್ತೀರ್ಣರಾದವರಿಗೆ ಪ್ರಮಾಣ ಪತ್ರ: ಪರೀಕ್ಷೆಯಲ್ಲಿ ಉತ್ತೀರ್ಣರಾದ ಕಲಿಕಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಶ್ರೀ ವಿಕಾಸ್ ಕಿಶೋರ ಸುರಳಕರ್ ತಿಳಿಸಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶ್ರೀ ಚಂದ್ರಕಾಂತ್ ಮಿಣಜಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಶ್ರೀ ಚಂದ್ರಕಾಂತ್ ಜಾಧÀವ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀ ಮಾರುತಿ ಹುಜರತಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀ ಬಂದೇ ನವಾಜ್, ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಶ್ರೀ ಬಿ. ವೆಂಕೋಬ ಮುಂತಾದವರು ಇದ್ದರು.

ಮಂಗಳವಾರ, ಆಗಸ್ಟ್ 16, 2016

“ಸ್ವಾತಂತ್ರ್ಯದಿಂದ ಸಾಮಾಜಿಕ ನ್ಯಾಯದೆಡೆಗೆ ನಮ್ಮ ಪಯಣ” ಪ್ರಗತಿ ರಥಕ್ಕೆ ಚಾಲನೆ
ಯಾದಗಿರಿ: ಆಗಸ್ಟ್. 15 (ಕರ್ನಾಟಕ ವಾರ್ತೆ) 70ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಮ್ಮಿಕೊಂಡಿರುವ “ಸ್ವಾತಂತ್ರ್ಯದಿಂದ ಸಾಮಾಜಿಕ ನ್ಯಾಯದೆಡೆಗೆ ನಮ್ಮ ಪಯಣ” ಎಂಬ ಪ್ರಗತಿ ರಥಕ್ಕೆ ಮಾಹಿತಿ ತಂತ್ರಜ್ಞಾನ-ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪ್ರಿಯಾಂಕ್ ಎಂ. ಖರ್ಗೆ ಅವರು ಚಾಲನೆ ನೀಡಿದರು.
ನಗರದ ಜಿಲ್ಲಾ ಕ್ರೀಡಂಗಣದಲ್ಲಿ ನಡೆದ 70ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಚಾರ ಜಾಥಕ್ಕೆ ಹಸಿರು ನಿಶಾನೆ ತೋರಿದರು.
ಪ್ರಗತಿ ರಥ 20 ದಿನ ಜಿಲ್ಲೆಯ 40 ಹಳ್ಳಿಗಳಲ್ಲಿ ಸಂಚರಿಸಿ ಸಮಾಜದ ವಿವಿಧ ವರ್ಗಗಳಿಗೆ ಸರ್ಕಾರ ಕಲ್ಪಿಸಿರುವ ಸಾಮಾಜಿಕ ನ್ಯಾಯ ಕುರಿತಂತೆ ಪ್ರಚಾರ ನಡೆಸಲಿದೆ. 6ರಿಂದ 8 ಸದಸ್ಯರಿರುವ ಕಲಾ ತಂಡÀ ಬೀದಿ ನಾಟಕ ಪ್ರದರ್ಶಿಸಲಿದೆ ಮತ್ತು ಸಾಕ್ಷ್ಯ ಚಿತ್ರಗಳ ಮೂಲಕ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಜೊತೆಗೆ ಇಲಾಖೆ ಹೊರತಂದಿರುವ ವಿವಿಧ ಕಿರು ಪುಸ್ತಕ, ಮಡಿಕೆ ಪತ್ರ ಇನ್ನಿತರವುಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಗುವುದು.
ಕಿರು ಹೊತ್ತಿಗೆ ಬಿಡುಗಡೆ:- 70ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆÀ ಹೊರತಂದಿರುವ “ಭಾರತದ ಸ್ವಾತಂತ್ರ್ಯ ಚಳಿವಳಿ” ಎಂಬ ಕಿರುಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಪ್ರಿಯಾಂಕ್ ಎಂ. ಖರ್ಗೆ ಬಿಡುಗಡೆ ಮಾಡಿದರು. ಸ್ವಾತಂತ್ರ್ಯ ಸಂಗ್ರಾಮ ನಡೆದ ಬಂದ ದಾರಿ ಮತ್ತು ವಿವಿಧ ಹೊರಾಟದ ಘಟನಾವಳಿಗಳ ಕಿರು ಪರಿಚಯ ಇದು ಒಳಗೊಂಡಿರುತ್ತದೆ.
ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಗುರುಮಠಕಲ್ ಶಾಸಕರಾದ ಶ್ರೀ ಬಾಬುರಾವ್ ಚಿಂಚನಸೂರ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಶ್ರೀ ಬಸರೆಡ್ಡಿ ಅನಪೂರ, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಶ್ರೀ ರವಿಂದ್ರಗೌಡ ಮಾಲಿಪಾಟೀಲ್, ಜಿಲ್ಲಾಧಿಕಾರಿ ಶ್ರೀ ಮನೋಜ್ ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾರ್ಹಕ ಅಧಿಕಾರಿ ಶ್ರೀ ವಿಕಾಸ್ ಕಿಶೋರ ಸುರಳಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ವಿನಾಯಕ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...