ಮಂಗಳವಾರ, ಆಗಸ್ಟ್ 16, 2016

“ಸ್ವಾತಂತ್ರ್ಯದಿಂದ ಸಾಮಾಜಿಕ ನ್ಯಾಯದೆಡೆಗೆ ನಮ್ಮ ಪಯಣ” ಪ್ರಗತಿ ರಥಕ್ಕೆ ಚಾಲನೆ
ಯಾದಗಿರಿ: ಆಗಸ್ಟ್. 15 (ಕರ್ನಾಟಕ ವಾರ್ತೆ) 70ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಮ್ಮಿಕೊಂಡಿರುವ “ಸ್ವಾತಂತ್ರ್ಯದಿಂದ ಸಾಮಾಜಿಕ ನ್ಯಾಯದೆಡೆಗೆ ನಮ್ಮ ಪಯಣ” ಎಂಬ ಪ್ರಗತಿ ರಥಕ್ಕೆ ಮಾಹಿತಿ ತಂತ್ರಜ್ಞಾನ-ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪ್ರಿಯಾಂಕ್ ಎಂ. ಖರ್ಗೆ ಅವರು ಚಾಲನೆ ನೀಡಿದರು.
ನಗರದ ಜಿಲ್ಲಾ ಕ್ರೀಡಂಗಣದಲ್ಲಿ ನಡೆದ 70ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಚಾರ ಜಾಥಕ್ಕೆ ಹಸಿರು ನಿಶಾನೆ ತೋರಿದರು.
ಪ್ರಗತಿ ರಥ 20 ದಿನ ಜಿಲ್ಲೆಯ 40 ಹಳ್ಳಿಗಳಲ್ಲಿ ಸಂಚರಿಸಿ ಸಮಾಜದ ವಿವಿಧ ವರ್ಗಗಳಿಗೆ ಸರ್ಕಾರ ಕಲ್ಪಿಸಿರುವ ಸಾಮಾಜಿಕ ನ್ಯಾಯ ಕುರಿತಂತೆ ಪ್ರಚಾರ ನಡೆಸಲಿದೆ. 6ರಿಂದ 8 ಸದಸ್ಯರಿರುವ ಕಲಾ ತಂಡÀ ಬೀದಿ ನಾಟಕ ಪ್ರದರ್ಶಿಸಲಿದೆ ಮತ್ತು ಸಾಕ್ಷ್ಯ ಚಿತ್ರಗಳ ಮೂಲಕ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಜೊತೆಗೆ ಇಲಾಖೆ ಹೊರತಂದಿರುವ ವಿವಿಧ ಕಿರು ಪುಸ್ತಕ, ಮಡಿಕೆ ಪತ್ರ ಇನ್ನಿತರವುಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಗುವುದು.
ಕಿರು ಹೊತ್ತಿಗೆ ಬಿಡುಗಡೆ:- 70ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆÀ ಹೊರತಂದಿರುವ “ಭಾರತದ ಸ್ವಾತಂತ್ರ್ಯ ಚಳಿವಳಿ” ಎಂಬ ಕಿರುಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಪ್ರಿಯಾಂಕ್ ಎಂ. ಖರ್ಗೆ ಬಿಡುಗಡೆ ಮಾಡಿದರು. ಸ್ವಾತಂತ್ರ್ಯ ಸಂಗ್ರಾಮ ನಡೆದ ಬಂದ ದಾರಿ ಮತ್ತು ವಿವಿಧ ಹೊರಾಟದ ಘಟನಾವಳಿಗಳ ಕಿರು ಪರಿಚಯ ಇದು ಒಳಗೊಂಡಿರುತ್ತದೆ.
ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಗುರುಮಠಕಲ್ ಶಾಸಕರಾದ ಶ್ರೀ ಬಾಬುರಾವ್ ಚಿಂಚನಸೂರ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಶ್ರೀ ಬಸರೆಡ್ಡಿ ಅನಪೂರ, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಶ್ರೀ ರವಿಂದ್ರಗೌಡ ಮಾಲಿಪಾಟೀಲ್, ಜಿಲ್ಲಾಧಿಕಾರಿ ಶ್ರೀ ಮನೋಜ್ ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾರ್ಹಕ ಅಧಿಕಾರಿ ಶ್ರೀ ವಿಕಾಸ್ ಕಿಶೋರ ಸುರಳಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ವಿನಾಯಕ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...