ಶುಕ್ರವಾರ, ಸೆಪ್ಟೆಂಬರ್ 27, 2019

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಪಾಕ್ಷಿಕ ಕಾರ್ಯಕ್ರಮ
ಬಿಪಿಎಲ್ ಕುಟುಂಬಗಳಿಗೆ ೫ ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ
--:ಜಿ.ಪಂ ಸಿಇಒ ಶಿಲ್ಪಾ ಶರ್ಮಾ
ಯಾದಗಿರಿ, ಸೆಪ್ಟೆಂಬರ್ ೨೭ (ಕರ್ನಾಟಕ ವಾರ್ತೆ): ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದವರು ವರ್ಷದಲ್ಲಿ ೫ ಲಕ್ಷ ರೂ.ವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಹೇಳಿದರು.

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಸಂಘದ ಸಂಯುಕ್ತಾಶ್ರಯದಲ್ಲಿ ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಆರೋಗ್ಯ ಮೇಳವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳು ೧.೫೦ ಲಕ್ಷ ರೂ.ವರೆಗೂ ಸಹಪಾವತಿ (ಶೆ.೭೦ರಷ್ಟು ಫಲಾನುಭವಿ ಭರಿಸತಕ್ಕದ್ದು, ಶೆ.೩೦ರಷ್ಟು ಸರ್ಕಾರ ಭರಿಸುತ್ತದೆ)ಯೊಂದಿಗೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯಗಳು ಜಿಲ್ಲಾ ಸರ್ಕಾರಿ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಹಾಗೂ ಸಮುದಾಯ ಆಸ್ಪತ್ರೆಗಳಲ್ಲಿ ಲಭ್ಯ ಇವೆ. ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಯೋಜನೆಯ ಲಾಭ ಪಡೆಯಬಹುದು ಎಂದು ಹೇಳಿದರು.
ಗುಣಮಟ್ಟದ ಚಿಕಿತ್ಸೆಗಳು ಸರ್ಕಾರಿ ಆಸ್ಪತ್ರೆಯಲ್ಲಿಯೇ ಸಿಗುತ್ತಿವೆ. ಈ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆ ಬಡಜನರಿಗೆ ತುಂಬಾ ಉಪಯುಕ್ತವಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಭಗವಂತ ಅನವಾರ ಅವರು ಮಾತನಾಡಿ, ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದವರು ಯಾದಗಿರಿ ಜಿಲ್ಲಾ ಆಸ್ಪತ್ರೆ, ಸುರಪುರ, ಶಹಾಪುರ ತಾಲ್ಲೂಕು ಆಸ್ಪತ್ರೆ ಹಾಗೂ ವಡಗೇರಾ, ಗುರುಮಠಕಲ್, ದೋರನಹಳ್ಳಿ, ಹುಣಸಗಿ, ಅರಕೇರಾ ಬಿ., ಸೈದಾಪುರ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ೧೦ ರೂ. ನೀಡಿ ಹೆಸರು ನೋಂದಾಯಿಸಿ ಕಾರ್ಡ್ ಪಡೆಯಬೇಕು. ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಕಾರ್ಡ್ ಅನ್ನು ಸೇವಾ ಸಿಂಧು ಕೇಂದ್ರಗಳಲ್ಲೂ ವಿತರಿಸಲಾಗುತ್ತಿದೆ. ಈ ಕೇಂದ್ರಗಳಲ್ಲಿ ಕಾಗದದ ಕಾರ್ಡ್ಗೆ ೧೦ ರೂ. ಮತ್ತು ಲ್ಯಾಮಿನೇಶನ್ ಕಾರ್ಡ್ಗೆ ೩೫ ರೂ. ಮಾತ್ರ ಶುಲ್ಕ ನೀಡಿ ಕಾರ್ಡ್ ಪಡೆಯಬೇಕು. ಅಲ್ಲದೇ, ಯಾದಗಿರಿ ನಗರದ ತಹಸೀಲ್ ಕಚೇರಿ ಆವರಣದಲ್ಲಿ ಇತ್ತಿಚೆಗೆ ಆರಂಭಿಸಿರುವ “ಕರ್ನಾಟಕ ಒನ್” ಸಮಗ್ರ ನಾಗರಿಕ ಸೇವಾ ಕೇಂದ್ರದಲ್ಲಿಯೂ ಸಹ ಕಾರ್ಡ್ ಪಡೆಯಬಹುದು ಎಂದು ತಿಳಿಸಿದರು.
ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ಬಂದು ೧ ವರ್ಷ ಆದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ಮೇಳ ಆಯೋಜಿಸಿದ್ದು, ಮೇಳದಲ್ಲಿ ತಜ್ಞ ವೈದ್ಯರಿಂದ ತಪಾಸಣೆ ಜೊತೆಗೆ ಯೋಜನೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಕಾರ್ಡ್ ವಿತರಣೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ೪ ಕೌಂಟರ್ ಹಾಗೂ ತಾಲ್ಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಒಂದೊಂದು ಕೌಂಟರ್ ತೆರೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ನಾರಾಯಣಪ್ಪ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಹಣಮಂತರೆಡ್ಡಿ ಸೇರಿದಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಆರೋಗ್ಯ ಮೇಳದಲ್ಲಿ ಪಾಲ್ಗೊಂಡಿದ್ದರು.

ಗ್ರಾಮೀಣ ಭಾಗದ ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ
ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ
ಯಾದಗಿರಿ, ಸೆಪ್ಟೆಂಬರ್ ೨೭ (ಕರ್ನಾಟಕ ವಾರ್ತೆ): ಜಿಲ್ಲೆಯ ಎಲ್ಹೆರಿ, ಕಂದಕೂರ, ಚಿನ್ನಾಕರ, ಅನಪೂರ, ಕೊಂಕಲ್ ಗ್ರಾಮಗಳ ಸ್ಟಾಲ್, ಮಳಿಗೆ, ಅಂಗಡಿಗಳ ಮೇಲೆ ಬುಧವಾರ ಅನಿರೀಕ್ಷಿತ ದಾಳಿ ನಡೆಸಿದ ಅಧಿಕಾರಿಗಳು, ನಿಷೇಧಿತ ಪ್ಲಾಸ್ಟಿಕ್ ಮತ್ತು ಬಹಿರಂಗವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು.
ಬಾಲಕಾರ್ಮಿಕ ಪದ್ಧತಿ ೧೯೮೬ರ ಕಾಯ್ದೆಯಡಿಯಲ್ಲಿ ೧೮ ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಾಗೃತಿ ಮೂಡಿಸಿದರು.
ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳವರ ಆದೇಶ ಪಡೆದು ದಾಳಿ ನಡೆಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದು ನಿಷೇಧಿಸಲಾಗಿದ್ದು, ಉಲ್ಲಂಘಿಸಿದಲ್ಲಿ ೨೫೦೦೦ ರೂ.ಗಳವರೆಗೆ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ಹೇಳಿದರು.
ಸಾಕಷ್ಟು ಬಾರಿ ಜಾಥಾ ಮೂಲಕ, ಆಟೊ ಪ್ರಚಾರ, ಕರಪತ್ರಗಳ ವಿತರಣೆ, ಕಾನೂನು ಅರಿವು- ನೆರವು ಕಾರ್ಯಕ್ರಮಗಳು ಮತ್ತು ಹಲವಾರು ಬಾರಿ ಅನಿರೀಕ್ಷಿತ ತಪಾಸಣೆ, ದಾಳಿ ಮಾಡಿ ಸಾರ್ವಜನಿಕರಿಗೆ ಹಾಗೂ ಸಬಂಧಿಸಿದ ಅಂಗಡಿ ಮಾಲೀಕರುಗಳಿಗೆ ಮಾಹಿತಿ ನೀಡಿದರೂ ಸಹ ಹಲವಾರು ಅಂಗಡಿ ಮಾಲೀಕರು ನಿಯಮಗಳನ್ನು ಉಲ್ಲಂಘಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದು, ಬಹಿರಂಗವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಸೆಕ್ಷೆನ್ ೫ರಲ್ಲಿ ೬ ನೋಟಿಸು ಮತ್ತು ಸೆಕ್ಷೆನ್ ೭ರಲ್ಲಿ ೩ ನೋಟಿಸು ನೀಡಲಾಗಿರುತ್ತದೆ ಎಂದು ಅವರು ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷಿ ಸಜ್ಜನ್ ಅವರು ಮಾತನಾಡಿ, ಕೋಟ್ಪಾ-೨೦೦೩ ಕಾಯ್ದೆಯಡಿಯಲ್ಲಿ ಸೆಕ್ಷನ್ ೪, ೫, ೬, ೬ಎ, ೬ಬಿ ಮತ್ತು ೭ರ ಪ್ರಕಾರ ಸಂಬಂಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೊರೆಂಟ್, ಬಾರ್, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ ೧೦೦ ಮೀಟರ್ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬಂಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದರು.
ನಟರಾಜ ಮತ್ತು ಇನ್ನಿತರೆ ಸಿಬ್ಬಂದಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಗುರುವಾರ, ಸೆಪ್ಟೆಂಬರ್ 26, 2019

ಇಂದು ಕಾನೂನು ಅರಿವು-ನೆರವು ಕಾರ್ಯಕ್ರಮ
ಯಾದಗಿರಿ, ಸೆಪ್ಟೆಂಬರ್ ೨೬ (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದೇವದಾಸಿ ಪುನರ್ವಸತಿ ಯೋಜನೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ದೇವದಾಸಿಯರು ಹಾಗೂ ನೊಂದ ಮಹಿಳೆಯರಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಸೆಪ್ಟೆಂಬರ್ ೨೭ರಂದು ಬೆಳಿಗ್ಗೆ ೯ ಗಂಟೆಗೆ ಯಾದಗಿರಿ ನಗರದ ಸಿಡಿಪಿಒ ಕಚೇರಿಯ ತಾಲ್ಲೂಕು ಸ್ತಿ ಶಕ್ತಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರಿ ಶಿವನಗೌಡ ಅವರು ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪ್ರಭಾಕರ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರಿ ಪ್ರಕಾಶ ಅರ್ಜುನ ಬನಸೊಡೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜೆ.ಮಣ್ಣೂರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಗುರುರಾಜ ಹಿರೇಗೌಡ್ರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್. ಮಾಲಿಪಾಟೀಲ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ನಾಗಯ್ಯ ಗುತ್ತೆದಾರ, ಕಾರ್ಯದರ್ಶಿ ವಿನಯಕುಮಾರ ಕುಲಕರ್ಣಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಎಸ್.ಎನ್.ಹಿರೇಮಠ, ಡ್ಯಾಪ್ಕೂ ಕಚೇರಿ ಜಿಲ್ಲಾ ಮೇಲ್ವಿಚಾರಕಿ ಆರತಿ ಎಂ.ಧನಶ್ರಿÃ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.
ಇಂದು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಪಾಕ್ಷಿಕ ಕಾರ್ಯಕ್ರಮ
ಯಾದಗಿರಿ, ಸೆಪ್ಟೆಂಬರ್ ೨೬ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಸಂಘದ ಸಂಯುಕ್ತಾಶ್ರಯದಲ್ಲಿ ಆರೋಗ್ಯ ಮೇಳ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಪಾಕ್ಷಿಕ ಕಾರ್ಯಕ್ರಮವನ್ನು ಸೆಪ್ಟೆಂಬರ್ ೨೭ರಂದು ಬೆಳಿಗ್ಗೆ ೧೦.೪೫ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶು ಸಂಗೋಪನಾ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಶಾಸಕರಾದ ನಾಗನಗೌಡ ಕಂದಕೂರ, ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ(ರಾಜುಗೌಡ), ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ವಿನೋದ ಪಾಟೀಲ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೆÃಶಪ್ಪ ಅಚೋಲ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸೆ.೩೦ರಂದು ವಿದ್ಯುತ್ ಗ್ರಾಹಕರ ಸಭೆ
ಯಾದಗಿರಿ, ಸೆಪ್ಟೆಂಬರ್ ೨೬ (ಕರ್ನಾಟಕ ವಾರ್ತೆ): ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕಲಬುರಗಿ ವೃತ್ತದ ವ್ಯಾಪ್ತಿಗೆ ಬರುವ ಶಹಾಪುರ, ಸುರಪುರ ಮತ್ತು ಹುಣಸಗಿ ಉಪ ವಿಭಾಗಗಳಲ್ಲಿ ಜೆಸ್ಕಾಂ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ೩೦ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಶಹಾಪುರ ಜೆಸ್ಕಾಂ ಉಪ ವಿಭಾಗ ಕಚೇರಿ ಆವರಣದಲ್ಲಿ ಬೆಳಿಗ್ಗೆ ೧೦ರಿಂದ ೧೧.೩೦ ಗಂಟೆಯವರೆಗೆ ಸಭೆ ನಡೆಯಲಿದೆ. ಸುರಪುರದಲ್ಲಿ ಮಧ್ಯಾಹ್ನ ೧೨ರಿಂದ ೨ ಗಂಟೆಯವರೆಗೆ ಹಾಗೂ ಹುಣಸಗಿಯಲ್ಲಿ ಮಧ್ಯಾಹ್ನ ೩.೩೦ರಿಂದ ಸಂಜೆ ೫ ಗಂಟೆಯವರೆಗೆ ಸಭೆ ನಡೆಯಲಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

ಮತದಾರರ ಪರಿಶೀಲನಾ ಕಾರ್ಯಕ್ರಮ
ಮತದಾರರ ಪಟ್ಟಿ ತಿದ್ದುಪಡಿಗೆ ವೋಟರ್  ಹೆಲ್ಪ್ ಲೈನ್ ಆಪ್  ಸಹಕಾರಿ
ಯಾದಗಿರಿ: ಸೆಪ್ಟೆಂಬರ್ ೨೬ (ಕರ್ನಾಟಕ ವಾರ್ತೆ): ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಭಾರತ ಚುನಾವಣಾ ಆಯೋಗ ಪರಿಚಯಿಸಿರುವ ವೋಟರ್ ಹೆಲ್ಪ್ಲೈನ್ ಆ್ಯಪ್ ತುಂಬಾ ಸಹಕಾರಿಯಾಗಿದೆ ವೋಟರ್ ಹೆಲ್ಪ್ಲೈನ್ ಆ್ಯಪ್ ಮೂಲಕ ಮತದಾರರು ಮನೆಯಲ್ಲಿಯೇ ಕುಳಿತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಇದೆ ಎಂದು ಜಿಲ್ಲಾ ಮಟ್ಟದ ಮಾಸ್ಟರ್ ಟ್ರೆನರ್ ಹಣಮಂತರಾವ್ ಗೊಂಗ್ಲೆ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಗುರುವಾರ ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾರರ ಪರಿಶೀಲನಾ ಕಾರ್ಯಕ್ರಮದ ಅಂಗವಾಗಿ ವೋಟರ್ ಹೆಲ್ಪ್ಲೈನ್ ಆ್ಯಪ್ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಮತದಾರರ ಪಟ್ಟಿಯಲ್ಲಿ ಏನಾದರೂ ದೋಷಗಳು ಇದ್ದಲ್ಲಿ ಚುನಾವಣಾ ಶಾಖೆ, ಕಂಪ್ಯೂಟರ್ ಕೇಂದ್ರಗಳಿಗೆ ಅಲೆದಾಡಬೇಕಿಲ್ಲ. ತಮ್ಮಲ್ಲಿರುವ ಆ್ಯಂಡ್ರಾಯಿಡ್ ಮೊಬೈಲ್ ಮೂಲಕವೇ ಗುರುತಿನ ಚೀಟಿಯಲ್ಲಿನ ಮತದಾರರ ಪೋಟೋ, ಸ್ವ-ವಿಳಾಸ, ಜನ್ಮ ದಿನಾಂಕ, ವಯಸ್ಸು, ಹೆಸರು, ಲಿಂಗ, ಪೋಷಕರ ಹೆಸರು ತಿದ್ದುಪಡಿ ಮಾಡಬಹುದು. ಹೊಸ ಸೇರ್ಪಡೆಗೂ ಸಹ ಅವಕಾಶ ಕಲ್ಪಿಸಿಕೊಡಲಾಗಿದೆ. ಮತದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ತಿದ್ದುಪಡಿ ಮಾಡುವಾಗ ಸಂಬಂಧಪಟ್ಟ ಮೂಲ ದಾಖಲಾತಿಯನ್ನು ಅಪ್‌ಲೋಡ್ ಮಾಡುವುದು ಅವಶ್ಯವಿರುತ್ತದೆ. ೦೧-೦೧-೨೦೨೦ಕ್ಕೆ ೧೮ ವರ್ಷ ಪೂರ್ಣಗೊಳಿಸುವ ಅಭ್ಯರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ೧೬ ವರ್ಷ ಮೇಲ್ಪಟ್ಟವರು ಕೂಡ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಇವರನ್ನು ನಿರೀಕ್ಷಿತ ಮತದಾರರು ಎಂದು ಪರಿಗಣಿಸಲಾಗುತ್ತದೆ. ೧೮ ವರ್ಷ ಪೊರ್ಣಗೊಂಡ ನಂತರ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳುತ್ತದೆ ಎಂದು ಅವರು ಮಾಹಿತಿ ನೀಡಿದರು.
ವೋಟರ್ ಹೆಲ್ಪ್ಲೈನ್ ಆ್ಯಪ್‌ನಲ್ಲಿ ಫ್ಯಾಮಿಲಿ ಟ್ಯಾಗ್ ಮಾಡಲು ಅವಕಾಶ ನೀಡಿದ್ದು, ಇದರ ಮೂಲಕ ಒಂದು ಕುಟುಂಬದ ಸದಸ್ಯರು ಬೇರೆ ಬೇರೆ ಪಾರ್ಟ್ಗಳಲ್ಲಿ ಚದುರಿ ಹೋಗದಂತೆ ನೋಡಿಕೊಳ್ಳಲು ನೆರವಾಗುತ್ತದೆ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕ ಅಧಿಕಾರಿ ಅರುಣಕುಮಾರ ಕುಲಕರ್ಣಿ, ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿ ಅಜೀತ್ ಜಿ.ನಾಯಕ, ಚುನಾವಣಾ ಶಾಖೆಯ ಶಿರಸ್ತೆದಾರ್ ಪರಶುರಾಮ, ಖಲೀಲ್ ಸಾಬ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಸೂಚನೆ
ರೈತರ ಕೃಷಿ ಉತ್ಪನ್ನಗಳಿಗೆ ಅಡಮಾನ ಸಾಲ ವಿತರಿಸಿ
ಯಾದಗಿರಿ, ಸೆಪ್ಟೆಂಬರ್ ೨೬ (ಕರ್ನಾಟಕ ವಾರ್ತೆ): ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ರಾಶಿ ಮಾಡಿದ ತಕ್ಷಣ ಸಿಕ್ಕಷ್ಟು ಬೆಲೆಗೆ ಮಾರಾಟ ಮಾಡಿಹಾನಿ ಅನುಭವಿಸುವುದನ್ನು ತಪ್ಪಿಸಲು ಜಾರಿಗೆ ತಂದಿರುವ “ಕೃಷಿ ಉತ್ಪನ್ನ ಅಡಮಾನ ಸಾಲ ಯೋಜನೆ”ಯಡಿ ಸಾಲ ವಿತರಿಸುವ ಕೆಲಸವನ್ನು ಜಿಲ್ಲೆಯ ಬ್ಯಾಂಕ್ ಅಧಿಕಾರಿಗಳು ಮಾಡಬೇಕು ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾದ ಹನುಮನಗೌಡ ಬೆಳಗುರ್ಕಿ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮಾರುಕಟ್ಟೆ, ಖರೀದಿ ಹಾಗೂ ಬೆಳೆಗಳ ವಿಚಾರದ ಬಗ್ಗೆ ತಜ್ಞರು, ರೈತರು ಮತ್ತು ಸಂಬಂಧಿಸಿದ ಇಲಾಖಾ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.
ಎಪಿಎಂಸಿ, ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳು ಅಥವಾ ರಾಜ್ಯ- ಕೇಂದ್ರ ಸರ್ಕಾರಗಳ ಉಗ್ರಾಣ ನಿಗಮಗಳ ಗೋದಾಮುಗಳಲ್ಲಿ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ದಾಸ್ತಾನು ಮಾಡಬಹುದು. ದಾಸ್ತಾನು ಮಾಡಿದ ಬೆಳೆಗಳ ಮೌಲ್ಯದ ಕುರಿತು ರಸೀದಿ ತಂದರೆ ಬ್ಯಾಂಕ್‌ಗಳು ಬೆಳೆಸಾಲಕ್ಕೆ ವಿಧಿಸುವ ದರದಲ್ಲಿ ಅಡಮಾನ ಸಾಲವನ್ನು ವಿತರಿಸಬೇಕು. ಮಾರುಕಟ್ಟೆಯಲ್ಲಿ ಬೆಲೆ ಬಂದಾಗ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಪಡೆಯುವ ಜೊತೆಗೆ ಸಾಲವನ್ನು ಮರಳಿಸುತ್ತಾರೆ. ಇದರಿಂದ ಕಡಿಮೆ ಬೆಲೆಗೆ ಮಾರಾಟ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪುತ್ತದೆ. ಜಿಲ್ಲೆಯಲ್ಲಿ ಈ ಯೋಜನೆಯ ಅನುಷ್ಠಾನ ಕುರಿತಂತೆ ಆಯೋಗಕ್ಕೆ ವರದಿ ನೀಡಲು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಎ.ಕೃಷ್ಣಾ ಅವರಿಗೆ ಸೂಚಿಸಿದರು.
ಅದರಂತೆ, ರೈತರು ಫಸಲು ದಾಸ್ತಾನು ಮಾಡಿದ ರಸೀದಿಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ)ಗೆ ತಂದುಕೊಟ್ಟರೆ ಮುಂಗಡ ಸಾಲ ನೀಡಲಾಗುತ್ತದೆ. ಒಬ್ಬ ರೈತನಿಗೆ ಬೆಳೆದ ಫಸಲಿನಲ್ಲಿ ಶೇ.೬೦ರಷ್ಟು ಅಥವಾ ಗರಿಷ್ಠ ೨ ಲಕ್ಷ ರೂ.ಗಳ ವರೆಗೆ ಸಾಲ ವಿತರಿಸಲು ಅವಕಾಶವಿದೆ. ಈ ಸಾಲಕ್ಕೆ ೯೦ ದಿನಗಳವರೆಗೆ ಯಾವುದೇ ಬಡ್ಡಿ ಇರುವುದಿಲ್ಲ. ಆ ನಂತರದ ಅವಧಿಗೆ ಸಾಲದ ಮೊತ್ತಕ್ಕೆ ಅನುಗುಣವಾಗಿ ಶೇ.೪ರಿಂದ ಶೇ.೧೦ರವರೆಗೆ ಬಡ್ಡಿ ವಿಧಿಸಲಾಗುತ್ತದೆ. ಸಾಲ ಮರುಪಾವತಿಗೆ ೧೮೦ ದಿನಗಳ ಕಾಲಾವಕಾಶ ಇರುತ್ತದೆ. ರೈತರು ಈ ಬಗ್ಗೆ ತಿಳಿದುಕೊಂಡು ಲಾಭ ಪಡೆದುಕೊಳ್ಳಬೇಕು ಎಂದು ಅವರು ವಿವರಿಸಿದರು.
ಜಿಲ್ಲೆಯಲ್ಲಿ ಒಂದೆಡೆ ಪ್ರವಾಹದಿಂದಾಗಿ ಬೆಳೆಹಾನಿ ಸಂಭವಿಸಿದರೆ, ಮತ್ತೊಂದೆಡೆ ಮಳೆ ಕೊರತೆಯಿಂದಾಗಿ ಬೆಳೆ ಹಾನಿಯಾಗುತ್ತಿವೆ. ಕೃಷಿಗೆ ಸಂಬಂಧಪಟ್ಟ ವಿವಿಧ ಇಲಾಖೆ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ರೈತರ ಹೊಲಗಳಿಗೆ ಕೊಂಡೊಯ್ಯಬೇಕು. ಕಚೇರಿಯಲ್ಲಿ ಕುಳಿತು ಅಥವಾ ಕಾಗದದ ಮೇಲೆ ಪ್ರಗತಿ ತೋರಿಸಿದರೆ ಪ್ರಯೋಜನವಾಗುವುದಿಲ್ಲ. ಹೈನುಗಾರಿಕೆಗೆ, ರೇಷ್ಮೆ, ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಪ್ರೊÃತ್ಸಾಹ ನೀಡಬೇಕು. ಫಸಲ್ ಬಿಮಾ ಯೋಜನೆಯನ್ನು ರೈತಸ್ನೆÃಹಿಯಾಗಿಸಬೇಕು. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ಮಹತ್ವಾಕಾಂಕ್ಷೆ ಜಿಲ್ಲೆಗಳಾಗಿದ್ದು, ಕೃಷಿ ಕ್ಷೆÃತ್ರದ ಅಭಿವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸುವಂತೆ ಅವರು ಸಲಹೆ ನೀಡಿದರು.
ತೊಗರಿಗೆ ಭಾರತ ಸರ್ಕಾರದ ಅಂಗ ಸಂಸ್ಥೆ ಜಿಯಾಲಾಜಿಕಲ್ ಇಂಡಿಕೇಶನ್ ರಿಜಿಸ್ಟಿçಯು ಭೌಗೋಳಿಕ ವಿಶೇಷ ಮಾನ್ಯತೆ (ಜಿಐ ಇಂಡಿಕೇಶನ್) ನೀಡಿದೆ. ಜಿಐ ಮಾನ್ಯತೆ ಸಿಕ್ಕಿರುವುದರಿಂದ ಈ ಭಾಗದ ತೊಗರಿಯನ್ನು ಅಂತರರಾಷ್ಟಿçÃಯ ಬ್ರಾö್ಯಂಡ್ ಆಗಿ ಗುರುತಿಸಲಾಗುತ್ತದೆ. ಇದರ ಪ್ರಯೋಜನಗಳು ಕುರಿತಂತೆ ರೈತರಿಗೆ ಕಾರ್ಯಾಗಾರ ಆಯೋಜಿಸಬೇಕು. ಬೇಳೆ ಕಾಳುಗಳ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಪ್ರಥಮ ಸ್ಥಾನ ಪಡೆದಿರುವುದಕ್ಕಾಗಿ ಕೇಂದ್ರ ಸರ್ಕಾರದಿಂದ ೧ ಕೋಟಿ ರೂ. ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ. ಇದನ್ನು ಬೇಳೆಕಾಳುಗಳ ಕಣಜವಾಗಿರುವ ಕಲ್ಯಾಣ ಕರ್ನಾಟಕಕ್ಕೆ ನೀಡಲು ಮನವಿ ಮಾಡುವುದಾಗಿ ಎಂದು ಅವರು ತಿಳಿಸಿದರು.
ನವ ಕರ್ನಾಟಕ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಚನ್ನಾರೆಡ್ಡಿಗೌಡ ಅವರು ಮಾತನಾಡಿ, ಜಿಲ್ಲೆಯಾದ್ಯಂತ ಹೆಸರು ರಾಶಿ ಆಗಿದೆ. ಹೆಚ್ಚಿನ ರೈತರು ತಾವು ಮಾಡಿದ ಬಾಕಿ ಅಥವಾ ಸಾಲ ಮರುಪಾವತಿಗಾಗಿ ಬಂದಷ್ಟು ಬೆಲೆಗೆ ಈಗಾಗಲೇ ಮಾರಾಟ ಮಾಡಿದ್ದಾರೆ. ಆದರೆ, ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿಗೆ ಜಿಲ್ಲೆಯಲ್ಲಿ ಇದುವರೆಗೆ ಖರೀದಿ ಕೇಂದ್ರಗಳನ್ನು ತೆರೆದಿಲ್ಲ. ಈಗ ತೆರೆದರೆ ಮಧ್ಯವರ್ತಿಗಳಿಗೆ ಲಾಭ ದೊರೆಯುತ್ತದೆ. ಬಡರೈತರಿಗೆ ಆಸರೆಯಾಗುವುದಿಲ್ಲ ಎಂದು ಸಭೆಯಲ್ಲಿ ಪ್ರಸ್ತಾಪಿಸಿದರು.
ಆಯೋಗದ ಅಧ್ಯಕ್ಷರು ಮಾತನಾಡಿ, ಜಿಲ್ಲಾಡಳಿತದಿಂದ ಹೆಸರು ಖರೀದಿ ಕೇಂದ್ರ ತೆರೆಯುವುದಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಲ್ಲಿ ಯಾವುದೇ ವಿಳಂಬವಾಗಿಲ್ಲ. ಸರ್ಕಾರದ ಮಟ್ಟದಲ್ಲಿ ಖರೀದಿ ಕೇಂದ್ರ ತೆರೆಯುವ ಕುರಿತು ನಿರ್ಧಾರವಾಗುತ್ತದೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಹೆಸರು ಕಾಳು ಖರೀದಿ ಕೇಂದ್ರ ಸ್ಥಾಪನೆ ಬಗ್ಗೆ ಸರ್ಕಾರದಿಂದ ಆದೇಶ ಬಂದಿದೆ. ಅದರಂತೆ ಜಿಲ್ಲೆಯಲ್ಲಿ ಹೆಚ್ಚು ಉತ್ಪಾದನೆ ಇರುವ ಪ್ರದೇಶಗಳಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಪ್ರತಿ ವರ್ಷ ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು, ತೊಗರಿ ಖರೀದಿಗೆ ಉತ್ಪನ್ನಗಳು ಮಾರುಕಟ್ಟೆಗೆ ಬರುವುದಕ್ಕೆ ಮುಂಚಿತವಾಗಿಯೇ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ವತಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ. ಸರ್ಕಾರದಿಂದ ಆದೇಶ ಬರುವುದು ತಡವಾದರೆ ರೈತರಿಗೆ ತಾವು ಬೆಳೆದ ಫಸಲುಗಳನ್ನು ಕಾಯ್ದಿಟ್ಟುಕೊಳ್ಳಲು ಸಮಸ್ಯೆ ಉಂಟಾಗುತ್ತದೆ. ಖರೀದಿ ಕೇಂದ್ರ ಆರಂಭದ ನಂತರವೂ ಖಾಲಿ ಚೀಲಗಳ ಕೊರತೆ, ಖರೀದಿ ಕೇಂದ್ರಗಳಲ್ಲಿ ಆನ್‌ಲೈನ್ ನೋಂದಣಿ ಸಮಸ್ಯೆ ಕಂಡುಬರುತ್ತದೆ ಎಂದು ಗಮನಕ್ಕೆ ತಂದರು.
ಮಾರುಕಟ್ಟೆಯಲ್ಲಿ ಎಲ್ಲಾ ರಸಗೊಬ್ಬರಗಳ ಬೆಲೆ ಹೆಚ್ಚಾಗಿದೆ. ಅದಕ್ಕೆ ತಕ್ಕಂತೆ ರೈತರ ಫಸಲುಗಳಿಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಮಾರುಕಟ್ಟೆಗೆ ಬರುವ ಮುಂಚಿತವಾಗಿ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳನ್ನು ಖರೀದಿಸಲು ಖರೀದಿ ಕೇಂದ್ರಗಳನ್ನು ತೆರೆಯಬೇಕು. ರೈತರು ಬೆಳೆದ ಬೆಳೆಗಳ ಕುರಿತು ಜಿಪಿಎಸ್ ಮಾಹಿತಿ ಸರ್ಕಾರದ ಬಳಿಯೇ ಇರುವುದರಿಂದ ಖರೀದಿ ಪ್ರಮಾಣ ಹಾಗೂ ಇನ್ನಿತರ ಅನವಶ್ಯಕ ಷರತ್ತುಗಳನ್ನು ವಿಧಿಸಬಾರದು ಎಂದು ರೈತಮುಖಂಡರು ಮನವಿ ಮಾಡಿದರು.
ಬಿಎಸ್‌ಸಿ ಅಗ್ರಿ ಪದವಿ ಪಡೆದವರಿಗೆ ಮಾತ್ರ ರಸಗೊಬ್ಬರ ಮತ್ತು ಕ್ರಿಮಿನಾಶಕಗಳನ್ನು ಮಾರಾಟ ಮಾಡುವ ಮಳಿಗೆ ಸ್ಥಾಪನೆಗೆ ಅನುಮತಿ ನೀಡಬೇಕು. ಕ್ರಿಮಿನಾಶಕಗಳ ಸಿಂಪಡಣೆಯಲ್ಲಿ ರೈತರು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಹೆಚ್ಚಿನ ಜಾಗೃತಿ ಮೂಡಿಸಲು ರೈತ ಶ್ರಿÃನಿವಾಸ್ ಅವರು ಕೋರಿದರು.
ಜಂಟಿ ಕೃಷಿ ನಿರ್ದೇಶಕರಾದ ದೇವಿಕಾ ಆರ್., ಕೃಷಿ ಇಲಾಖೆಯ ಉಪನಿರ್ದೇಶಕ ಸಮದ್ ಪಟೇಲ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಬಾಬು, ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ಭೀಮರಾಯ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ದತ್ತಪ್ಪ ಕಲ್ಲೂರ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಅಬ್ದುಲ್ ನಯೀಮ್ ಚೌಧರಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ನಿಯಮಿತ ವ್ಯವಸ್ಥಾಪಕ ಮಾರಣ್ಣ ಎನ್.ಎಚ್. ಅವರು ಉಪಸ್ಥಿತರಿದ್ದರು.
ರೈತ ಮುಖಂಡರಾದ ಶಿವಕುಮಾರ ಮಂಡಗಳ್ಳಿ, ಮಲ್ಕಣ್ಣ ಮಂಡಗಳ್ಳಿ, ಮಾರ್ಥಂಡಪ್ಪ ಡಿ.ಮಾನೇಗಾರ, ಭೀಮರಾಯ ಠಾಣಗುಂದಿ, ಶಿವರಾಜ ನಗನೂರ, ಶರಣರಡ್ಡಿ ಹತ್ತಿಗುಡೂರ, ಬಿ.ಎಲ್.ಬಿಜಾಸ್ಪುರಕರ್ ಸೇರಿದಂತೆ ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕಾನೂನು ಅರಿವು-ನೆರವು ಕಾರ್ಯಕ್ರಮ
ಲೈಂಗಿಕ ದೌರ್ಜನ್ಯ ತಡೆಗೆ ಪೋಕ್ಸೊ ಕಾಯ್ದೆ ಜಾರಿ
--:ನ್ಯಾಯಾಧೀಶರಾದ ಶ್ರೀ ಶಿವನಗೌಡ 
ಯಾದಗಿರಿ: ಸೆಪ್ಟೆಂಬರ್ ೨೬ (ಕರ್ನಾಟಕ ವಾರ್ತೆ): ದೇಶದಲ್ಲಿ ೧೪ ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಅಪರಾಧ ಪ್ರಕರಣಗಳ ನಿಯಂತ್ರಣಕ್ಕಾಗಿ ಜಾಮೀನು ರಹಿತ ಪ್ರಕರಣ ದಾಖಲಿಸಲು ಪೋಕ್ಸೊ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಶಿವನಗೌಡ ಅವರು ಹೇಳಿದರು.
ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸೃಷ್ಟಿ ಚಾರಿಟೇಬಲ್ ಟ್ರಸ್ಟ್, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ನಾಲ್ಸಾ (NALSA) ಸ್ಕಿಮ್-೨೦೧೫ ಕುರಿತು ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೋಂದ ಬಾಲಕಿಯ ಹೇಳಿಕೆಯನ್ನು ಗೌಪ್ಯವಾಗಿಟ್ಟು, ನ್ಯಾಯಾಲಯದ ಬಾಗಿಲು ಬಂದ್ ಮಾಡಿ ವಿಚಾರಣೆ ನಡೆಸಲಾಗುತ್ತದೆ. ಸಹನೆ, ತಾಳ್ಮೆಯ ಮನೋಭಾವನೆಯೇ ಮಹಿಳೆ, ಮಕ್ಕಳು ಹಾಗೂ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯದಂತಹ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳೆಯರನ್ನು ಅಪಹರಣ ಮಾಡಿ ವೇಶ್ಯಾವಾಟಿಕೆ ದಂಧೆಗೆ ನೂಕುವುದು, ಲೈಂಗಿಕ ಶೋಷಣೆ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ತಿಳಿಸಿದರು.
ವಯಸ್ಕರಾಗಿರುವ ಯುವತಿಯರು, ವಿದ್ಯಾರ್ಥಿಗಳು ಕಾನೂನುಗಳ ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕವಾಗಿದೆ. ಪ್ರತಿಯೊಬ್ಬರು ಕಾನೂನುಗಳ ಸದುಪಯೋಗ ಮಾಡಿಕೊಳ್ಳಬೇಕು. ಇದರಿಂದ ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ. ಲೈಂಗಿಕ ದೌರ್ಜನ್ಯ ತಡೆಯುವ ಬಗ್ಗೆ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕುಗಳಲ್ಲಿರುವ ಕಾನೂನು ಸೇವೆಗಳ ಪ್ರಾಧಿಕಾರಗಳು ಸಾಮಾನ್ಯ ಜನರಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಸುತ್ತಿವೆ. ಸಾರ್ವಜನಿಕರು ಕಾನೂನು ತಿಳಿದು ಸದುಪಯೋಗ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ವಕೀಲರಾದ ಆರ್.ಎಸ್.ಪಾಟೀಲ್ ಅವರು ಮಾತನಾಡಿ, ವ್ಯಕ್ತಿಗೆ ಕಾನೂನು ಅರಿವು ಮುಖ್ಯವಾಗಿದೆ. ಮನುಷ್ಯ ಹುಟ್ಟಿನಿಂದ ಸಾವಿನ ವರೆಗೂ ಕಾನೂನು ಅನ್ವಯಿಸುತ್ತದೆ. ಹೀಗಾಗಿ ದಿನನಿತ್ಯದ ಜೀವನಕ್ಕೆ ಬೇಕಾಗಿರುವ ಕಾನೂನಿನ ಸವಲತ್ತು ತಿಳಿದುಕೊಳ್ಳುವುದು ಅವಶ್ಯವಾಗಿದೆ. ಸಮಾಜಘಾತುಕ ಶಕ್ತಿಗಳಿಂದ ಮಹಿಳೆ, ಮಕ್ಕಳು ಹಾಗೂ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿವೆ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರಿ ಪ್ರಕಾಶ ಅರ್ಜುನ ಬನಸೊಡೆ, ಪ್ರಾಂಶುಪಾಲರಾದ ಡಾ.ಶ್ರಿÃನಿವಾಸರಾವ್, ಕರ್ನಾಟಕ ರಾಜ್ಯ ಕಾನೂ ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್.ಮಾಲಿಪಾಟೀಲ್, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿಗಳಾದ ವಿನಯಕುಮಾರ ಕುಲಕರ್ಣಿ ಹಾಗೂ ಸೃಷ್ಟಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಬೀರೇಶ ಚಿರತೆನೋರ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅನಿತಾ ಪ್ರಾರ್ಥನಾ ಗೀತೆ ಹಾಡಿದರು. ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಹರೀಶ ರಾಥೋಡ ಅವರು ಕಾರ್ಯಕ್ರಮ ನಿರೂಪಿಸಿದರು. ಮಲ್ಲಿಕಾರ್ಜುನ ಹೊರಟೂರು ಅವರು ವಂದಿಸಿದರು.

ಕೆ.ವಿ.ಕೆ, ಕಲಿಕೆ ಸಂಸ್ಥೆ ವತಿಯಿಂದ ಶೇಂಗಾ ಬೆಳೆ ಕ್ಷೆತ್ರೊತ್ಸವ
ಶೇಂಗಾ ಉತ್ತಮ ಇಳುವರಿಗೆ ಗುಣಮಟ್ಟದ ಬೀಜ ಬಳಸಿ
--:ಡಾ.ಮಲ್ಲಿಕಾರ್ಜುನ ಕೆಂಗನಾಳ
ಯಾದಗಿರಿ, ಸೆಪ್ಟೆಂಬರ್ ೨೬ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಯಥೇಚ್ಛವಾಗಿ ಶೇಂಗಾ ಬೆಳೆಯಲಾಗುತ್ತಿದ್ದು, ರೈತರು ಹೆಚ್ಚಿನ ಇಳುವರಿ ಪಡೆಯಲು ಉತ್ತಮ ಇಳುವರಿ ನೀಡುವ ಶೇಂಗಾ ಬೀಜದ ಹೊಸ ತಳಿಗಳನ್ನು ಆಯ್ಕೆ ಮಾಡಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಮಲ್ಲಿಕಾರ್ಜುನ ಕೆಂಗನಾಳ ಅವರು ಸಲಹೆ ನೀಡಿದರು.
ಯಾದಗಿರಿ ತಾಲ್ಲೂಕಿನ ಆಶಾಪೂರ ತಾಂಡಾದಲ್ಲಿ ಮಂಗಳವಾರ ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ಟಾಟಾ ಟ್ರಸ್ಟ್ನ ಕಲಿಕೆ ಸಂಸ್ಥೆಯ ಫಲಾನುಭವಿ ರೈತರ ಕ್ಷೆತ್ರಗಳಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆಗಳಲ್ಲಿ ಬೆಳೆದ ಶೇಂಗಾ ಬೆಳೆಯ ವೀಕ್ಷಣೆ ಮತ್ತು ಬೆಳೆದ ರೈತರ ಅನಿಸಿಕೆಗಳನ್ನು ಇತರೆ ರೈತರೊಂದಿಗೆ ಹಂಚಿಕೊಳ್ಳುವ ಉದ್ದೆಶದಿಂದ ಹಮ್ಮಿಕೊಂಡಿದ್ದ ಶೇಂಗಾ ಬೆಳೆಯ ಕ್ಷೆತ್ರೊತ್ಸವದಲ್ಲಿ ಅವರು ಮಾತನಾಡಿದರು.
ಶೇಂಗಾ ಜಿಲ್ಲೆಯ ಪ್ರಮುಖ ಬೆಳೆಯಾಗಿದ್ದು ಮುಂಗಾರು, ಹಿಂಗಾರು ಮತ್ತು ಬೇಸಿಗೆ ಮೂರು ಹಂಗಾಮುಗಳಲ್ಲಿ ಬೆಳೆಯಲಾಗುತ್ತಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರ ಕ್ಷೆತ್ರಗಳಲ್ಲಿ ಜಿ೨-೫೨ ಹೊಸ ಶೇಂಗಾ ತಳಿಯನ್ನು ಪ್ರಾಯೋಗಿಕವಾಗಿ ಬೆಳೆದ ರೈತರ ಅನುಭವಗಳನ್ನು ಮತ್ತು ಅವರ ಅನಿಸಿಕೆಗಳನ್ನು ತಿಳಿಯಲು ಶೇಂಗಾ ಬೆಳೆಯ ಕ್ಷೆತ್ರೊತ್ಸವ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಬಿತ್ತನೆ ಮಾಡುವ ಮುಂಚೆ ಬೀಜೋಪಚಾರ ಮಾಡಬೇಕು. ಸಾಧ್ಯವಾದಷ್ಟು ಸಾವಯವ ಗೊಬ್ಬರಗಳಾದ ಸಗಣಿ ಮತ್ತು ತಿಪ್ಪೆ ಗೊಬ್ಬರಗಳನ್ನು ಬಳಸಬೇಕು. ಲಘು ಪೋಷಕಾಂಶಗಳಾದ ಸತುವು, ಕಬ್ಬಿಣ ಮತ್ತು ಗಂಧಕಗಳನ್ನು ಹಾಕುವುದರಿಂದ ಹೆಚ್ಚಿನ ಇಳುವರಿ ಪಡೆಯಬಹುದು. ಕೀಟ ಮತ್ತು ರೋಗಗಳ ನಿಯಂತ್ರಣಕ್ಕೆ ಜೈವಿಕ ಪೀಡೆನಾಶಕಗಳನ್ನು ಬಳಸಬೇಕೆಂದು ಕರೆ ನೀಡಿದರು.
ಟಾಟಾ ಟ್ರಸ್ಟ್ನ ಕಲಿಕೆ ಸಂಸ್ಥೆಯ ಅರುಣಕುಮಾರ ಅವರು ಮಾತನಾಡಿ, ರೈತರು ತಮ್ಮ ಕೃಷಿ ಆದಾಯ ಹೆಚ್ಚಿಸಿಕೊಳ್ಳಲು ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು ಅತೀ ಮುಖ್ಯ. ಅದರಲ್ಲೂ ಖರ್ಚು ಕಡಿಮೆ ಮಾಡುವ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು, ಪರಿಸರದ ಮೇಲೆ ದುಷ್ಪರಿಣಾಮ ಬೀರದಂತೆ ಕಾಳಜಿ ವಹಿಸಿದಲ್ಲಿ ಮಾತ್ರ ಜೀವಿಗಳ ಉಳಿವಿಗೆ ಒಳ್ಳೆಯದು ಎಂದು ತಿಳಿಸಿದರು.
ರೈತರು ಕಡಿಮೆ ವೆಚ್ಚದ ಬೀಜೋಪಚಾರ, ಮೋಹಕ ಬಲೆಗಳು ಮತ್ತು ಜೈವಿಕ ಪೀಡೆನಾಶಕಗಳು ಮುಂಜಾಗ್ರತಾ ಕ್ರಮವಾಗಿ ಬಳಸಿದಲ್ಲಿ ರೋಗ ಮತ್ತು ಕೀಟಗಳಿಂದ ಬೆಳೆಗಳನ್ನು ಸಂರಕ್ಷಿಸಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರೈತರು ಶೇಂಗಾ ಬೆಳೆಯ ಬೇಸಾಯದಲ್ಲಿ ವಿವಿಧ ಹಂತದಲ್ಲಿ ಕಂಡುಬರುವ ಸಮಸ್ಯೆಗಳನ್ನು ಚರ್ಚಿಸಿ ಸಲಹೆಗಳನ್ನು ಪಡೆದುಕೊಂಡರು. ಬೆಳೆಗಳಿಗೆ ಕ್ರಿಮಿನಾಶಕಗಳನ್ನು ಸಿಂಪರಣೆ ಮಾಡುವಾಗ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಬಗ್ಗೆ ಮಾಹಿತಿ ನೀಡಿ, ಸುರಕ್ಷಾ ಕವಚದ ಬಳಕೆಯ ಕುರಿತು ಪ್ರಾಯೋಗಿಕವಾಗಿ ಹೇಳಿಕೊಡಲಾಯಿತು.
ಕಲಿಕೆ ಸಂಸ್ಥೆಯ ಆನಂದ, ಶಾಂತನಗೌಡ, ಸಿದ್ದಪ್ಪ ಮತ್ತು ಸಾಯಬರೆಡ್ಡಿ ಹಾಗೂ ೫೦ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಪ್ರಗತಿ ಪರಿಶೀಲನಾ ಸಭೆ
ನೆರೆಹಾನಿಗೊಳಗಾದ ಶಾಲೆಗಳ ತುರ್ತು ದುರಸ್ತಿಗೆ ಸೂಚನೆ
ಯಾದಗಿರಿ: ಸೆಪ್ಟೆಂಬರ್ ೨೫ (ಕರ್ನಾಟಕ ವಾರ್ತೆ): ನೆರೆಹಾವಳಿ ಸಂದರ್ಭದಲ್ಲಿ ಹಾನಿಗೊಳಗಾದ ಜಿಲ್ಲೆಯ ೧೬ ಶಾಲೆಗಳನ್ನು ತಕ್ಷಣ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ.ಅನಿಲ್ ಕುಮಾರ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅವರು ಮಾತನಾಡಿದರು.
ಪ್ರವಾಹ ಸಂದರ್ಭದಲ್ಲಿ ಹಾನಿಯಾಗಿದ್ದರೂ ಆಯಾ ಇಲಾಖೆಗಳ ಲಭ್ಯವಿರುವ ಅನುದಾನದಲ್ಲಿಯೇ ದುರಸ್ತಿ ಕಾರ್ಯ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು. ನೆರೆ ಪರಿಹಾರ ನಿಧಿಯ ಅನುದಾನಕ್ಕಾಗಿ ನಿರೀಕ್ಷೆ ಇಟ್ಟುಕೊಳ್ಳಬಾರದು. ಲಭ್ಯವಿರುವ ಅನುದಾನದಲ್ಲಿ ಕಾಮಗಾರಿ ಸಾಧ್ಯವಿಲ್ಲದಿದ್ದರೆ ಮಾತ್ರ ಪ್ರಸ್ತಾವನೆ ಸಲ್ಲಿಸಬೇಕೆಂದು ಆರ್ಥಿಕ ಇಲಾಖೆಯಿಂದ ಸ್ಪಷ್ಟ ಸೂಚನೆ ಇದೆ. ಆದ್ದರಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಕೂಡ ಲಭ್ಯವಿರುವ ಅನುದಾನದಲ್ಲಿಯೇ ಶಾಲೆಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಅದೇ ರೀತಿ ನೆರೆ ಹಾವಳಿಯಿಂದಾಗಿ ಉಂಟಾದ ಹಾನಿ ಪರಿಹಾರ ವಿತರಣೆಯಲ್ಲಿ ಅಧಿಕಾರಿಗಳು ವಿಳಂಬ ಮಾಡಬಾರದು. ರಸ್ತೆ, ಕುಡಿಯುವ ನೀರು ಹಾಗೂ ಮೂಲಕ ಸೌಕರ್ಯ ಒದಗಿಸುವಂತೆ ಅವರು ನಿರ್ದೇಶಿಸಿದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ೧೩ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳಿದ್ದು, ೩ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ. ೫ ಪ್ರಕರಣಗಳಿಗೆ ಎಫ್‌ಎಸ್‌ಎಲ್ ವರದಿ ಬಾಕಿ ಇದ್ದು, ೫ ತಿರಸ್ಕೃತವಾಗಿವೆ ಎಂಬುದಾಗಿ ಜಂಟಿ ಕೃಷಿ ನಿರ್ದೇಶಕರಾದ ದೇವಿಕಾ ಆರ್. ಅವರಿಂದ ಮಾಹಿತಿ ಪಡೆದ ಕಾರ್ಯದರ್ಶಿಗಳು, ಬಾಕಿ ಇರುವ ರೈತರ ಕುಟುಂಬಗಳಿಗೆ ಶೀಘ್ರ ಪರಿಹಾರ ವಿತರಿಸಬೇಕು. ಮಾಸಾಶನ, ರೈತರ ಮಕ್ಕಳ ಶಾಲಾ ದಾಖಲಾತಿ ಬಗ್ಗೆಯೂ ಗಮನಹರಿಸಬೇಕು. ಜಿಲ್ಲೆಗೆ ಅಗತ್ಯಕ್ಕನುಗುಣವಾಗಿ ಬಿತ್ತನೆ ಬೀಜಗಳನ್ನು ಮುಂಚಿತವಾಗಿಯೇ ದಾಸ್ತಾನು ಮಾಡಿಕೊಳ್ಳಬೇಕು. ಅದಕ್ಕೆ ತಕ್ಕಂತೆ ರಸಗೊಬ್ಬರ ಕೂಡ ಸಂಗ್ರಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಮೃತ ರೈತರ ಹೆಸರಿನಲ್ಲಿ ಸಾಲ ಇರದ ಕಾರಣಕ್ಕೆ ಪ್ರಕರಣಗಳು ತಿರಸ್ಕೃತವಾಗಿವೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದ್ದು, ತಿರಸ್ಕೃತ ಆತ್ಮಹತ್ಯೆ ಪ್ರಕರಣಗಳನ್ನು ಮತ್ತೊಮ್ಮೆ ಪರಿಶೀಲಿಸಲು ಸೂಚನೆ ನೀಡಿದ್ದಾರೆ. ನೆರೆಹಾವಳಿಯಲ್ಲಿ ಬೆಳೆಹಾನಿಯಿಂದಾಗಿ ಪರ್ಯಾಯ ಬೆಳೆಗಳ ಬಿತ್ತನೆಗೆ ರೈತರು ಮುಂದಾಗಿರುವುದರಿಂದ ರಸಗೊಬ್ಬರದ ಕೊರತೆ ಉಂಟಾಗಿದೆ. ಯೂರಿಯಾ ರಸಗೊಬ್ಬರ ಪೂರೈಕೆಗೆ ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟಿಯ ಗ್ರಾಮೀಣ ಉದ್ಯೊಗ ಖಾತರಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ೨೬.೬೧ ಲಕ್ಷ ಮಾನವ ದಿನಗಳ ಗುರಿ ಹೊಂದಲಾಗಿದ್ದು, ೧೦.೯೯ ಮಾನವ ದಿನಗಳ ಗುರಿಯನ್ನು ಈಗಾಗಲೇ ತಲುಪುವ ಮೂಲಕ ಶೇ.೪೧.೩೨ರಷ್ಟು ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುರಪುರ ತಾಲ್ಲೂಕಿನ ತಳ್ಳಳ್ಳಿ ಬಿ ಮತ್ತು ಯಕ್ತಾಪುರ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನಗನೂರ, ಎಂ.ಬೊಮ್ಮನಳ್ಳಿ, ಕಾಚಾಪುರ ಹಾಗೂ ಯಕ್ತಾಪುರ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಇ ರಾಜ್‌ಕುಮಾರ ಪತ್ತಾರ ಅವರು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಮಹತ್ವಾಕಾಂಕ್ಷೆ ಜಿಲ್ಲೆಯ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಯಿತು. ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಸಭೆಯಲ್ಲಿ ಹಾಜರಿದ್ದರು.
ವಿವಿಧೆಡೆ ಭೇಟಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ.ಅನಿಲ್ ಕುಮಾರ್ ಅವರು ಸಭೆಯ ನಂತರ ಕಲಿಕೆ ಟಾಟಾ ಟ್ರಸ್ಟ್, ಅಜೀಂ ಪ್ರೆÃಮ್‌ಜಿ ಫೌಂಡೇಶನ್ ಕೇಂದ್ರಗಳಿಗೆ ಹಾಗೂ ಜಿಲ್ಲೆಯ ಕೊಳ್ಳೂರ ಎಂ. ಬ್ರಿಡ್ಜ್ಗೆ ಭೇಟಿ ನೀಡಿದರು.

ಬುಧವಾರ, ಸೆಪ್ಟೆಂಬರ್ 25, 2019

ಇಂದು ಕಾನೂನು ಅರಿವು-ನೆರವು ಕಾರ್ಯಕ್ರಮ
ಯಾದಗಿರಿ, ಸೆಪ್ಟೆಂಬರ್ ೨೫ (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸೃಷ್ಟಿ ಚಾರಿಟೇಬಲ್ ಟ್ರಸ್ಟ್, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ನಾಲ್ಸಾ (NALSA) ಸ್ಕಿಮ್-೨೦೧೫ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಸೆಪ್ಟೆಂಬರ್ ೨೬ರಂದು ಬೆಳಿಗ್ಗೆ ೯.೩೦ ಗಂಟೆಗೆ ಯಾದಗಿರಿ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರಿ ಶಿವನಗೌಡ ಅವರು ಉದ್ಘಾಟಿಸುವರು. ಪ್ರಾಂಶುಪಾಲ ಡಾ|| ಶ್ರಿನಿವಾಸರಾವ್ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರಿ ಪ್ರಕಾಶ ಅರ್ಜುನ ಬನಸೊಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್. ಮಾಲಿಪಾಟೀಲ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ನಾಗಯ್ಯ ಗುತ್ತೆದಾರ, ಸೃಷ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೀರೇಶ್ ಚಿರತೆನೋರ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ವಿನಯಕುಮಾರ ಕುಲಕರ್ಣಿ, ಜಂಟಿ ಕಾರ್ಯದರ್ಶಿ ವಿಜಯಕುಮಾರ ಕೊಂಕಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ವಕೀಲರಾದ ಆರ್.ಎಸ್.ಪಾಟೀಲ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.
ಕೃಷಿ ಬೆಲೆ ಆಯೋಗ ಅಧ್ಯಕ್ಷರ ಪ್ರವಾಸ
ಯಾದಗಿರಿ, ಸೆಪ್ಟೆಂಬರ್ ೨೫ (ಕರ್ನಾಟಕ ವಾರ್ತೆ): ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾದ ಹನುಮನಗೌಡ ಬೆಳಗುರ್ಕಿ ಅವರು ಸೆಪ್ಟೆಂಬರ್ ೨೫ರಂದು ಜಿಲ್ಲೆಗೆ ಆಗಮಿಸಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ ೨೬ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲೆಯ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮಾರುಕಟ್ಟೆ, ಖರೀದಿ ಹಾಗೂ ಬೆಳೆಗಳ ವಿಚಾರದ ಬಗ್ಗೆ ತಜ್ಞರು, ರೈತರು ಮತ್ತು ಸಂಬಂಧಿಸಿದ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ ೨.೩೦ ಗಂಟೆಗೆ ಕಲಬುರಗಿ ಜಿಲ್ಲೆಗೆ ಪ್ರಯಾಣ ಬೆಳೆಸುವರು.
ನಾಳೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಯಾದಗಿರಿ, ಸೆಪ್ಟೆಂಬರ್ ೨೫ (ಕರ್ನಾಟಕ ವಾರ್ತೆ): ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆಪ್ಟೆಂಬರ್ ೨೭ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಯಾದಗಿರಿ ನಗರದ ಲುಂಬಿನಿ ವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶು ಸಂಗೋಪನಾ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ, ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ(ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೆÃಶಪ್ಪ ಅಚೋಲ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಸುರಪುರ ಇತಿಹಾಸ ಸಂಶೋಧನಾ ಕೇಂದ್ರದ ಅಧ್ಯಕ್ಷರು ಹಾಗೂ ಇತಿಹಾಸತಜ್ಞರಾದ ಭಾಸ್ಕರರಾವ್ ಮುಡಬೂಳ ಅವರು ಉಪನ್ಯಾಸ ನೀಡುವರು.
ಅ.೧ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಯಾದಗಿರಿ, ಸೆಪ್ಟೆಂಬರ್ ೨೫ (ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕ್ರಿÃಡಾ ಮತ್ತು ಯುವ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ೨೦೧೯-೨೦ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅಕ್ಟೊÃಬರ್ ೧ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಬಾಲಭವನ ಸೊಸೈಟಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶು ಸಂಗೋಪನಾ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರಿÃ ಶಿವನಗೌಡ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರಿÃ ಪ್ರಕಾಶ ಅರ್ಜುನ ಬನಸೊಡೆ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ, ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ(ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೆÃಶಪ್ಪ ಅಚೋಲ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ ಅವರು ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ರಾಷ್ಟ್ರೀಯ ಜಂತುಹುಳ ನಿವಾರಣಾ ದಿನಾಚರಣೆ
ಅಪೌಷ್ಟಿಕತೆ ನಿವಾರಣೆಗೆ ಅಲ್ಬೆಂಡಾಜೋಲ್ ಮಾತ್ರೆ ಸಹಾಯಕ
-ಜಿ.ಪಂ ಸಿಇಒ ಶಿಲ್ಪಾ ಶರ್ಮಾ
ಯಾದಗಿರಿ: ಸೆಪ್ಟೆಂಬರ್ ೨೫, (ಕರ್ನಾಟಕ ವಾರ್ತೆ): ಮಕ್ಕಳ ಅಪೌಷ್ಟಿಕತೆ ನಿವಾರಣೆಯಲ್ಲಿ ಜಂತುಹುಳ ನಾಶಕ ಅಲ್ಬೆಂಡಾಜೋಲ್ ಮಾತ್ರೆಯು ತುಂಬಾಸಹಕಾರಿಯಾಗಿದೆ. ಪ್ರತಿಯೊಬ್ಬ ಪಾಲಕ-ಪೋಷಕರು ತಮ್ಮ ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆಯನ್ನು ಚೀಪಲು ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮನವಿ ಮಾಡಿದರು.
ನಗರದ ಗಾಂಧಿ ವೃತ್ತದಲ್ಲಿರುವ ಪಂಪ ಮಹಾಕವಿ ಮಂಟಪದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಸಂಘ (ಆರ್‌ಸಿಎಚ್ ವಿಭಾಗ) ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಾದ್ಯಂತ ಸೆಪ್ಟೆಂಬರ್ ೨೫ರಂದು ೧ ವರ್ಷದಿಂದ ೧೯ ವರ್ಷದ ಎಲ್ಲಾ ಮಕ್ಕಳಿಗೆ ಸರ್ಕಾರಿ ಮತ್ತು ಖಾಸಗಿ ಶಾಲೆ- ಕಾಲೇಜುಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ. ಬಾಕಿ ಉಳಿದ ಮಕ್ಕಳಿಗೆ ಸೆಪ್ಟೆಂಬರ್ ೩೦ರ ಮಾಪ್‌ಅಪ್ ದಿನದಂದು ಅಲ್ಬೆಂಡಾಜೋಲ್ ಮಾತ್ರೆ ನೀಡಲಾಗುವುದು ಎಂದು ಅವರು ತಿಳಿಸಿದರು.
ನಮ್ಮ ಯಾದಗಿರಿ ಜಿಲ್ಲೆಯಲ್ಲಿ ೩,೪೫,೨೫೪ ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆ ನೀಡುವ ಗುರಿ ಇದೆ. ಜಂತುಹುಳು ನಾಶಕ ಮಾತ್ರೆಯು ಎಲ್ಲಾ ಮಕ್ಕಳಿಗೂ ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಗಳು ರಾಷ್ಟಿçÃಯ ಜಂತುಹುಳ ನಿವಾರಣಾ ದಿನದಂದು ಈ ಔಷಧಿ ತೆಗೆದುಕೊಳ್ಳಲು ಶಿಫಾರಸು ಮಾಡಿವೆ. ಅಲ್ಬೆಂಡಾಜೋಲ್ ಮಾತ್ರೆ ಚೀಪುವುದರಿಂದ ಮಕ್ಕಳಲ್ಲಿ ರಕ್ತ ಹೀನತೆ ನಿಯಂತ್ರಣ ಮತ್ತು ಪೋಷಕಾಂಶ ಹೀರಿಕೆಯನ್ನು ಸುಧಾರಿಸುತ್ತದೆ ಎಂದು ಅವರು ಹೇಳಿದರು.
ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಭಗವಂತ ಅನವಾರ ಅವರು ಮಾತನಾಡಿ, ಜಂತುಹುಳು ಸೋಂಕಿನಿಂದಾಗಿ ಮಕ್ಕಳು ರಕ್ತ ಹೀನತೆ, ಪೌಷ್ಟಿಕಾಂಶ ಕೊರತೆ, ಹಸಿವಾಗದಿರುವುದು, ನಿಶಕ್ತ ಮತ್ತು ಆತಂಕ, ಹೊಟ್ಟೆ ನೋವು, ವಾಕರಿಕೆ, ವಾಂತಿ, ಅತಿಸಾರ, ತೂಕ ಕಡಿಮೆಯಾಗುವುದು ಸೇರಿದಂತೆ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗಬಹುದು. ೧-೨ ವರ್ಷ ಮಕ್ಕಳಿಗೆ ಅರ್ಧ ಮಾತ್ರೆ (೪೦೦ ಎಂ.ಜಿ), ೨-೧೯ ವರ್ಷದ ಮಕ್ಕಳಿಗೆ ೧ ಮಾತ್ರೆ (೪೦೦ ಎಂ.ಜಿ) ನೀಡಿ ಸರಿಯಾಗಿ ಚೀಪಲು ತಿಳಿಸಬೇಕು. ಯಾವುದೇ ಕಾರಣಕ್ಕೂ ಇದನ್ನು ನುಂಗಬಾರದು. ನುಂಗಿದರೆ ಮಾತ್ರೆ ಸರಿಯಾಗಿ ಕೆಲಸ ಮಾಡುವುದಿಲ್ಲ. ಅನಾರೋಗ್ಯ ಪೀಡಿತ ಅಥವಾ ಬೇರೆ ಔಷಧಿ ತೆಗೆದುಕೊಂಡ ಮಕ್ಕಳಿಗೆ ಈ ಜಂತುಹುಳ ನಾಶಕ ಮಾತ್ರೆಗಳನ್ನು ನೀಡಬಾರದು ಎಂದು ತಿಳಿಸಿದರು.
ಅಲ್ಬೆಂಡಾಜೋಲ್ ಮಾತ್ರೆಯನ್ನು ಮಕ್ಕಳಿಗೆ ನೀಡುವುದರಿಂದ ದುಂಡು ಹುಳು, ಟೇಪ್ ಹುಳು ಮತ್ತು ಕೊಕ್ಕೆ ಹುಳುಗಳನ್ನು ಹೋಗಲಾಡಿಸುವುದಲ್ಲದೆ ಅನೀಮಿಯಾ ಖಾಯಿಲೆಯನ್ನು ತಡೆಗಟ್ಟಬಹುದಾಗಿರುತ್ತದೆ. ಪೋಷಕಾಂಶ ಸೇವನೆಯನ್ನು ವೃದ್ಧಿಸುತ್ತದೆ. ಏಕಾಗ್ರತೆ, ಕಲಿಕಾ ಸಾಮರ್ಥ್ಯ ಮತ್ತು ಶಾಲೆಯ, ಅಂಗನವಾಡಿ ಕೇಂದ್ರದಲ್ಲಿನ ಮಕ್ಕಳ ಹಾಜರಾತಿ ಹೆಚ್ಚಳಕ್ಕೆ ಸಹಕಾರಿಯಾಗುತ್ತದೆ. ಈ ಮೂಲಕ ಮಕ್ಕಳು ಮಾನಸಿಕ ಮತ್ತು ಶಾರೀರಿಕವಾಗಿ ದೃಢಕಾಯರಾಗಿರುತ್ತಾರೆ ಎಂದು ಹೇಳಿದರು
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಸೂರ್ಯಪ್ರಕಾಶ ಎಂ.ಕಂದಕೂರ ಅವರು ಮಾತನಾಡಿ, ಶೌಚಾಲಯ ಬಳಕೆ ಮಾಡದಿರುವುದರಿಂದ ಮಕ್ಕಳಲ್ಲಿ ಹೆಚ್ಚಾಗಿ ಜಂತುಹುಳು ಕಂಡುಬರುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಶೌಚಾಲಯವನ್ನು ಬಳಸಬೇಕು. ಶೌಚದ ಬಳಿಕ ಕೈಗಳನ್ನು ಸಾಬೂನಿನಿಂದ ತೊಳೆದುಕೊಳ್ಳಬೇಕು. ಮನೆಯ ಸುತ್ತಲು ನೈರ್ಮಲ್ಯ ಕಾಪಾಡಬೇಕು ಎಂದು ಸಲಹೆ ನೀಡಿದರು.
ಅಲ್ಬೆಂಡಾಜೋಲ್ ಮಾತ್ರೆಯನ್ನು ತೆಗೆದುಕೊಂಡ ನಂತರ ಮಕ್ಕಳಲ್ಲಿ ಕೆಲವೊಮ್ಮೆ ವಾಕರಿಕೆ, ಸೌಮ್ಯ ಹೊಟ್ಟೆ ನೋವು, ವಾಂತಿಯಾಗುವುದು, ಅತಿಸಾರ ಹಾಗೂ ಬಳಲಿಕೆ ಕಂಡುಬರಬಹುದು. ಅವರು ಜಂತುಹುಳುಗಳನ್ನು ಹೊಂದಿದ್ದಲ್ಲಿ ಇವುಗಳನ್ನು ನಿರೀಕ್ಷಿಸಬಹುದು. ಆದರೆ, ಯಾವುದೇ ಗಾಬರಿಯಾಗಬೇಡಿ. ಯಾವುದೇ ವೈದ್ಯಕೀಯ ನೆರವಿಗಾಗಿ ಉಚಿತ ಆರೋಗ್ಯ ಸಹಾಯವಾಣಿಗೆ ಕರೆ ಮಾಡಿ. ಹೆಚ್ಚಿನ ಮಾಹಿತಿಗಾಗಿ ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಂಪರ್ಕಿಸಲು ಅವರು ಕೋರಿದರು.
ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ವಿನೋದ ಪಾಟೀಲ ಅವರು ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆ ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ರಾಷ್ಟ್ರೀಯ ವ್ಯವಸ್ಥಾಪಕ ರನಪಾಲ್ ಸಿಂಗ್ ಅವರು ಮಾತನಾಡಿದರು. ಸಿಪಿಐ ಶರಣಗೌಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹಣಮಂತರೆಡ್ಡಿ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಕಾವೇರಿ, ದಿವ್ಯಾ ಅವರು ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ ಅವರು ನಿರೂಪಿಸಿದರು. ಹಿರಿಯ ಆರೋಗ್ಯ ಸಹಾಯಕ ಪರಮರೆಡ್ಡಿ ಅವರು ವಂದಿಸಿದರು.

ಮಂಗಳವಾರ, ಸೆಪ್ಟೆಂಬರ್ 24, 2019

ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ
ಯಾದಗಿರಿ, ಸೆಪ್ಟೆಂಬರ್ ೨೪ (ಕರ್ನಾಟಕ ವಾರ್ತೆ): ಹೊನಗೇರಾ ಗ್ರಾಮದಲ್ಲಿ ಇತ್ತಿಚೆಗೆ “ಪೋಷಣ್ ಅಭಿಯಾನ” ಯೋಜನೆಯಡಿ ಪೌಷ್ಟಿಕ ಆಹಾರ ಶಿಬಿರ, ಸೀಮಂತ ಕಾರ್ಯಕ್ರಮ, ಅನ್ನಪ್ರಾಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತಾಲ್ಲೂಕು ಪಂಚಾಯಿತಿ ಸದಸ್ಯೆ ಶೈಲಜಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸಾಜಿದ್ ಅವರು ಪೋಷಣ್ ಅಭಿಯಾನದ ಮಾಸಾಚರಣೆ ಮಹತ್ವ, ಗರ್ಭಿಣಿ- ಬಾಣಂತಿ ಆರೈಕೆ, ಪೌಷ್ಟಿಕ ಆಹಾರದ ಮಹತ್ವ ಹಾಗೂ ಸ್ಥಳೀಯವಾಗಿ ಸಿಗುವ ಆಹಾರ ಸಾಮಗ್ರಿಗಳ ಮಹತ್ವವನ್ನು ತಿಳಿಸಿದರು.
ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಮೇಲ್ವಿಚಾರಕಿ ಕೆ.ಎಂ.ನದಾಫ್ ಅವರು ಇಲಾಖೆ ಯೋಜನೆ ಕುರಿತು ತಿಳಿಸಿದರು.
ಈ ಸಂದರ್ಭದಲ್ಲಿ ೮ ಜನ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು. ಸ್ತ್ರೀ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶರಣಮ್ಮ, ಗ್ರಾಮ ಪಂಚಾಯಿತಿ ಸದಸ್ಯೆ ಮಂಜುಳಾ, ಆರೋಗ್ಯ ಸಹಾಯಕ ತಾಯಪ್ಪ, ಪ್ರಾಥಮಿಕ ಶಾಲೆಯ ಸಹಶಿಕ್ಷಕ ಹಣಮಂತ ಅವರು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಗರ್ಭಿಣಿ, ಬಾಣಂತಿಯರು ಮತ್ತು ಮಕ್ಕಳ ತಾಯಂದಿರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಪೋಲಿಯೊ ವದಂತಿಗೆ ಕಿವಿಕೊಡಬೇಡಿ
ಯಾದಗಿರಿ, ಸೆಪ್ಟೆಂಬರ್ ೨೪ (ಕರ್ನಾಟಕ ವಾರ್ತೆ): ಕಳೆದ ಒಂದು ವಾರದಿಂದ ಸಾಮಾಜಿಕ ಜಾಲತಾಣವಾದ ವಾಟ್ಸ್ಆ್ಯಪ್‌ನಲ್ಲಿ ಪೋಲಿಯೊ ಲಸಿಕೆ ಕುರಿತು ಹರಿದಾಡುತ್ತಿರುವ ವದಂತಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಭಗವಂತ ಅನವಾರ ಅವರು ಮನವಿ ಮಾಡಿದ್ದಾರೆ.
“ಮಕ್ಕಳಿಗೆ ಪೋಲಿಯೊ ಲಸಿಕೆಯನ್ನು ಹಾಕಿಸಬಾರದು. ಈ ಲಸಿಕೆಯಲ್ಲಿ ವೈರಸ್ ಬೆರೆತಿರುತ್ತದೆ. ಪೋಲಿಯೊ ಲಸಿಕೆ ತಯಾರು ಮಾಡಿದ ಕಂಪನಿಯ ಮಾಲೀಕನನ್ನು ಬಂಧಿಸಲಾಗಿದೆ” ಎಂಬ ಸುಳ್ಳು ವದಂತಿಯನ್ನು ವಾಟ್ಸ್ಆ್ಯಪ್‌ನಲ್ಲಿ ಹರಡಲಾಗಿದೆ. ಈ ಆಡಿಯೋದಲ್ಲಿ ಯಾವುದೇ ಸತ್ಯಾಂಶವಿಲ್ಲ. ಪೋಲಿಯೊ ಲಸಿಕೆಯನ್ನು ೧೯೯೫ರಿಂದ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಯಶಸ್ವಿಯಾಗಿ ನಡೆದುಕೊಂಡು ಬಂದಿರುತ್ತದೆ. ಈ ಪ್ರಯತ್ನದಿಂದಾಗಿ ೨೦೧೩ರಲ್ಲಿ ಭಾರತ ದೇಶವು ಪೋಲಿಯೊ ಮುಕ್ತ ದೇಶವಾಗಿದೆ. ಪೋಲಿಯೊ ಲಸಿಕೆಯು ಸಂಪೂರ್ಣ ಸುರಕ್ಷಿತವಾಗಿದ್ದು, ಇದರ ಬಗ್ಗೆ ಸಾರ್ವಜನಿಕರು ಯಾವುದೇ ಆತಂಕ ಪಡದೆ ತಮ್ಮ ಮಕ್ಕಳಿಗೆ ಪೋಲಿಯೊ ಲಸಿಕೆಯನ್ನು ತಪ್ಪದೇ ಹಾಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ದರಪಟ್ಟಿ ಆಹ್ವಾನ
ಯಾದಗಿರಿ, ಸೆಪ್ಟೆಂಬರ್ ೨೪ (ಕರ್ನಾಟಕ ವಾರ್ತೆ): ಪ್ರವಾಸೋದ್ಯಮ ಇಲಾಖೆ ಯಾದಗಿರಿ ಸಹಾಯಕ ನಿರ್ದೇಶಕರ ಕಚೇರಿಗೆ ದೈನಂದಿನ ಕೆಲಸ ಕಾರ್ಯಗಳಿಗೆ ಬಾಹ್ಯ ಮೂಲದ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್ ಹಾಗೂ ಗ್ರೂಪ್ “ಡಿ” ಸಿಬ್ಬಂದಿಗಳ ಸೇವೆಯನ್ನು ಒದಗಿಸಲು ಅರ್ಹ ಏಜೆನ್ಸಿಗಳಿಂದ ದರಪಟ್ಟಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಮ್ಯಾನ್ ಪವರ್ ಏಜೆನ್ಸಿಯವರು ಸೆಪ್ಟೆಂಬರ್ ೨೪ರಿಂದ ಸೆ.೩೦ರ ವರೆಗೆ ದರಪಟ್ಟಿಗಳನ್ನು ಪಡೆದು, ಸೆಪ್ಟೆಂಬರ್ ೩೦ರಂದು ಬೆಳಿಗ್ಗೆ ೧೧ ಗಂಟೆಯೊಳಗಾಗಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು. ಅದೇ ದಿನಾಂಕದಂದು ಮಧ್ಯಾಹ್ನ ೧ ಗಂಟೆಗೆ ದರಪಟ್ಟಿಗಳನ್ನು ತೆರೆಯಲಾಗುವುದು. ಬಾಹ್ಯ ಮೂಲದ ಆಧಾರದ ಮೇಲೆ ಸಿಬ್ಬಂದಿಗಳ ಸೇವೆಯನ್ನು ಒಂದು ವರ್ಷದವರೆಗೆ ಪಡೆಯಲು ಪರಿಷ್ಕೃತ ದರ ಹಾಗೂ ಕಾಲಮಿತಿ, ಸರ್ಕಾರದ ನಿಯಮ ಮತ್ತು ಷರತ್ತುಗಳು ಅನ್ವಯಿಸುತ್ತವೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

ಸೋಮವಾರ, ಸೆಪ್ಟೆಂಬರ್ 23, 2019

ಇಂದು ಹಿರಿಯ ನಾಗರಿಕರ ಕ್ರಿಡಾಕೂಟ
ಯಾದಗಿರಿ, ಸೆಪ್ಟೆಂಬರ್ ೨೩ (ಕರ್ನಾಟಕ ವಾರ್ತೆ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಹಿರಿಯ ನಾಗರಿಕರಿಗೆ ಕ್ರಿಡಾಕೂಟ ಹಾಗೂ ಸಾಂಸ್ಕೃತಿಕ ಚಟುವಟಿಕೆಯನ್ನು  ಸೆಪ್ಟೆಂಬರ್ ೨೪ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಕ್ರಿಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಆಸಕ್ತಿಯುಳ್ಳ ಹಿರಿಯ ನಾಗರಿಕರು ಕ್ರಿಡಾಕೂಟ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ:೦೮೪೭೩ ೨೫೩೫೩೧ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

ಮಾನ್‌ಧನ್ ಯೋಜನೆಗೆ ಹೆಸರು ನೋಂದಾಯಿಸಿ
 ಯಾದಗಿರಿ, ಸೆಪ್ಟೆಂಬರ್ ೨೩ (ಕರ್ನಾಟಕ ವಾರ್ತೆ): ಅಸಂಘಟಿತ ಕಾರ್ಮಿಕರು ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿಯಲ್ಲಿ ಹೆಸರು ನೋಂದಾಯಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಹಾತ್ಮಗಾಂಧಿ ರಾಷ್ಟಿಯ ಗ್ರಾಮೀಣ ಉದ್ಯೊಗ ಖಾತರಿ ಯೋಜನೆ (ಎಂನರೇಗಾ)ಯ ಜಿಲ್ಲಾ ಐಇಸಿ ಸಂಯೋಜಕ ಪರಶುರಾಮ ಜಿನಕೇರಾ ಅವರು ಸಲಹೆ ನೀಡಿದರು.
ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಪ್ರಧಾನಮಂತ್ರಿ ಶ್ರಮಯೋಗಿ ಮಾನ್- ಧನ್ ಯೋಜನೆ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಂನರೇಗಾ ಮತ್ತಿತರ ಕಾರ್ಮಿಕರು ಈ ಯೊಜನೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವ ಮೂಲಕ ಸದುಪಯೋಗ ಪಡೆದುಕೊಳ್ಳಬೇಕು. ಕಾರ್ಮಿಕ ಇಲಾಖೆಯಿಂದ ಈ ಯೋಜನೆಯಡಿ ಈಗಾಗಲೇ ಅಸಂಘಟಿತ ಕೂಲಿಕಾರರ ನೋಂದಣಿ ಆರಂಭಿಸಲಾಗಿದೆ. ಅಸಂಘಟಿತ ಕಾರ್ಮಿಕರು ಹತ್ತಿರದ ಕಾಮನ್ ಸರ್ವೀಸ್ ಸೆಂಟರ್, ಗ್ರಾಮ ಪಂಚಾಯಿತಿ ಅಥವಾ ಕಾರ್ಮಿಕ ಇಲಾಖೆ ಶಾಖೆಯಲ್ಲಿ ನೋಂದಣಿ ಮಾಡಬೇಕು. ನರೇಗಾ ಕೂಲಿಕಾರ್ಮಿಕರನ್ನು ಸೇರ್ಪಡೆ ಮಾಡಿಸಿದರೆ ಪಿಂಚಣಿ ಸೌಲಭ್ಯದಿಂದ ಕುಟುಂಬಗಳು ಸುಸ್ಥಿರ ಜೀವನ ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಮಿಕ ಇಲಾಖೆಯ ಎಕ್ಸಿಕ್ಯೂಟಿವ್ ಲಕ್ಷö್ಮಣ ಪೂಜಾರ ಅವರು ಮಾತನಾಡಿ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಗೆ ಒಳಪಡಬೇಕಾದರೆ ೧೮ರಿಂದ ೪೦ ವರ್ಷ ವಯೋಮಿತಿ ಇರಬೇಕು. ಮಾಸಿಕ ಆದಾಯ ೧೫ ಸಾವಿರ ರೂ. ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಈ ಯೋಜನೆ ಅಡಿಯಲ್ಲಿ ಅಸಂಘಟಿತ ಕಾರ್ಮಿಕರಾದ ಗೃಹ, ಬೀದಿಬದಿ ವ್ಯಾಪಾರಿಗಳು, ಬೀಡಿ ಕಾರ್ಮಿಕರು, ಚಿಂದಿ ಆಯುವವರು, ಎಂನರೇಗಾ ಅಕುಶಲ ಹಾಗೂ ಮುಂತಾದ ಅಸಂಘಟಿತ ಕಾರ್ಮಿಕರು ಒಳಪಡುತ್ತಾರೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಧರ್ಮಿಬಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಐಇಸಿ ಸಂಯೋಜಕ ಮಲ್ಲಿಕಾರ್ಜುನ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮು ಪವಾರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಜರಿದ್ದರು.

ನೆರೆ ಪೀಡಿತ ಪ್ರದೇಶಗಳಲ್ಲಿ ಪರ್ಯಾಯ ಬೆಳೆಗೆ ಸಲಹೆ
ಯಾದಗಿರಿ: ಸೆಪ್ಟೆಂಬರ್ ೨೩ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕಳೆದ ತಿಂಗಳು ನೆರೆ ಹಾವಳಿಯಿಂದ ಕೃಷ್ಣಾ ಮತ್ತು ಭೀಮಾ ನದಿಪಾತ್ರದ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಹಾನಿಯಾಗಿರುತ್ತದೆ. ಈ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರೈತರು ಭತ್ತದ ಗದ್ದೆಗಳಲ್ಲಿ ಪರ್ಯಾಯವಾಗಿ ಮತ್ತೆ ಭತ್ತವನ್ನು ಬೆಳೆಯಲು ಮುಂದಾದರೆ ಹತ್ತಿ ಮತ್ತು ತೊಗರಿ ಬೆಳೆಗಳು ಹಾನಿಯಾದ ಪ್ರದೇಶಗಳಲ್ಲಿ ಪರ್ಯಾಯ ಬೆಳೆ ಬೆಳೆಯುವುದು ಅನಿವಾರ್ಯವಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಮಲ್ಲಿಕಾರ್ಜುನ ಕೆಂಗನಾಳ ಅವರು ಸಲಹೆ ನೀಡಿದರು.
ಶಹಾಪೂರ ತಾಲ್ಲೂಕಿನ ಕೃಷ್ಣಾ ನದಿ ಪ್ರವಾಹದಿಂದ ಬೆಳೆ ಹಾನಿಯಾಗಿರುವ ಕೊಳ್ಳೂರ ಎಂ. ಗ್ರಾಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಪರ್ಯಾಯ ಬೆಳೆಗಳ ಬೇಸಾಯ ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭತ್ತ, ಹತ್ತಿ, ತೊಗರಿ ಹಾಗೂ ಮತ್ತಿತರೆ ಬೆಳೆಗಳು ಮುಳುಗಡೆಯಾದಲ್ಲಿ ಬೇರೆ ಬೆಳೆಗಳನ್ನು ಬೆಳೆಯಲು ಈಗ ಸರಿಯಾದ ಸಮಯವಾಗಿದೆ. ಅದರಲ್ಲಿ ಪ್ರಮುಖವಾಗಿ ಕಪ್ಪು ಮಣ್ಣಿನ ಭೂಮಿಗಳಲ್ಲಿ ಬಿಳಿಜೋಳ, ಕಡಲೆ, ಅಗಸಿ ಮತ್ತು ಕುಸುಬೆ ಬೆಳೆಯಲು ಸೂಕ್ತವಾಗಿದೆ. ಇದರೊಂದಿಗೆ ಹಿಂಗಾರು ಸೂರ್ಯಕಾಂತಿ ಬೆಳೆಯನ್ನೂ ಸಹ ಬೆಳೆಯಬಹುದು. ನೀರಾವರಿ ವ್ಯವಸ್ಥೆ ಇರುವ ರೈತರು ಹೈಬ್ರಿಡ್ ಜೋಳ, ಸಜ್ಜೆ, ಶೇಂಗಾ ಮತ್ತು ಸೂರ್ಯಕಾಂತಿ ಬೆಳೆ ಬೆಳೆಯಬಹುದಾಗಿದೆ ಎಂದು ತಿಳಿಸಿದರು.
ಕೆಂಪು ಭೂಮಿಯಲ್ಲಿ ಶೇಂಗಾ, ಸಜ್ಜೆ ಮತ್ತು ಗೋವಿನಜೋಳ ಬೆಳೆಯುವುದು ಒಳ್ಳೆಯದು. ರೈತರು ಕೃಷಿ ಇಲಾಖೆಯಲ್ಲಿ ಜಾರಿಯಲ್ಲಿರುವ ಯೋಜನೆಗಳನ್ನು ತಿಳಿದುಕೊಳ್ಳಬೇಕು. ಲಭ್ಯವಿರುವ ಯೋಜನೆಯಲ್ಲಿ ರಿಯಾಯಿತಿ ದರದಲ್ಲಿ ಬೀಜಗಳನ್ನು ಪಡೆಯಬೇಕು. ಕೀಟ ಮತ್ತು ರೋಗಗಳ ನಿಯಂತ್ರಣಕ್ಕೆ ಜೈವಿಕ ಪೀಡೆನಾಶಕಗಳನ್ನು ಬಳಸಿ ಬೇಸಾಯದ ಖರ್ಚು ಕಡಿಮೆ ಮಾಡಿಕೊಳ್ಳಲು ಸಲಹೆ ನೀಡಿದರು.
ರೈತರು ಬೆಳೆಗಳಿಗೆ ಬಳಸುವ ಕೀಟನಾಶಕಗಳನ್ನು ಅದರಲ್ಲಿ ಪ್ರಮುಖವಾಗಿ ಹತ್ತಿ, ಭತ್ತ ಮತ್ತು ತೊಗರಿ ಬೆಳೆಯಲ್ಲಿ ಹೆಚ್ಚು ಜಾಗರೂಕವಾಗಿ ಬಳಸಬೇಕು. ಸಿಂಪರಣೆ ಮಾಡುವಾಗ ಸುರಕ್ಷಾ ಕವಚ ಅಥವಾ ಉಡುಪು ಬಳಸಿ ಸಿಂಪರಣೆ ಮಾಡಲು ಹೇಳಿದರು. ಇದರೊಂದಿಗೆ ಶಿಫಾರಿಸಿದ ಪೀಡೆನಾಶಕಗಳನ್ನು ಮಾತ್ರ ಬಳಸಲು ರೈತರಿಗೆ ಕರೆ ನೀಡಿದರು.
ತರಬೇತಿಯಲ್ಲಿ ಸುಮಾರು ೬೦ಕ್ಕೂ ಹೆಚ್ಚು ರೈತರು ಭಾಗವಹಿಸಿ ಮಾಹಿತಿ ಪಡೆದರು.

ಎಸಿಬಿ ಅಧಿಕಾರಿಗಳಿಂದ ಅಹವಾಲು ಸ್ವಿಕಾರ
ಯಾದಗಿರಿ, ಸೆಪ್ಟೆಂಬರ್ ೨೩ (ಕರ್ನಾಟಕ ವಾರ್ತೆ): ಯಾದಗಿರಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ಜನಸಂಪರ್ಕ ಸಭೆ ನಡೆಸಿ ಅರ್ಜಿ ಅಹವಾಲು ಸ್ವಿಕಾರ ಮಾಡಲಿದ್ದು, ನಿಗದಿಪಡಿಸಿದ ದಿನಾಂಕಗಳಂದು ಸಾರ್ವಜನಿಕರು ಅಧಿಕಾರಿಗಳಿಗೆ ಭೇಟಿಯಾಗಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಇನ್‌ಸ್ಪೆಕ್ಟರ್ ಬಾಬಾಸಾಹೇಬ ಪಾಟೀಲ್ (ಮೊ:೯೪೮೦೮ ೦೬೩೧೩), ಪೊಲೀಸ್ ಇನ್‌ಸ್ಪೆಕ್ಟರ್ ಗುರುಪಾದ ಎಸ್.ಬಿರಾದಾರ (ಮೊ:೯೪೮೦೮ ೦೬೩೧೪) ಅವರು ಅಹವಾಲು ಸ್ವಿÃಕರಿಸುವರು. ಸೆಪ್ಟೆಂಬರ್ ೨೪ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಸುರಪುರ ತಾಲ್ಲೂಕಿನ ದೇವಾಪುರ ಗ್ರಾಮ ಪಂಚಾಯಿತಿ ಕಾರ್ಯಾಲಯ, ಸೆ.೨೫ರಂದು ಹುಣಸಗಿ ಪ್ರವಾಸಿ ಮಂದಿರ, ಸೆ.೨೬ರಂದು ಶಹಾಪುರ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವಿÃಕರಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಳದ ಸಂಪರ್ಕ ಪಡೆದುಕೊಳ್ಳಲು ಸೂಚನೆ
ಯಾದಗಿರಿ, ಸೆಪ್ಟೆಂಬರ್ ೨೩ (ಕರ್ನಾಟಕ ವಾರ್ತೆ): ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ಹಾಗೂ ವಾಣಿಜ್ಯ ಮಳಿಗೆಗಳು ನಳದ ಸಂಪರ್ಕ ಪಡೆದುಕೊಳ್ಳಬಹುದು. ನಗರಸಭೆಯಿಂದ ನೀರು ಸರಬರಾಜು ಮಾಡುವ ನಳಗಳ ಸಂಪರ್ಕವನ್ನು ಪಡೆದುಕೊಳ್ಳಲು ಪ್ರಕಟಣೆ ಹೊರಡಿಸಿದಾಗಿನಿಂದ ೭ ದಿನ ಕಾಲಾವಕಾಶ ನೀಡಲಾಗಿದೆ. ಆಸಕ್ತಿಯುಳ್ಳವರು ಕಡ್ಡಾಯವಾಗಿ ನೀರು ಸರಬರಾಜು ಶಾಖೆಯ ದೂ:೦೮೪೭೩-೨೫೦೩೧೦ ಸಂಪರ್ಕಿಸಬೇಕು ಎಂದು ಪೌರಾಯುಕ್ತರಾದ ರಮೇಶ ಸುಣಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಾಶ್ರಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಯಾದಗಿರಿ, ಸೆಪ್ಟೆಂಬರ್ ೨೩ (ಕರ್ನಾಟಕ ವಾರ್ತೆ): ೨೦೧೯-೨೦ನೇ ಸಾಲಿನ ರಾಜ್ಯ ಬಾಲ ಭವನ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ತಾಲ್ಲೂಕು ಮಟ್ಟದ ಕಲಾಶ್ರಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕಲಾಶ್ರಿà ಪ್ರಶಸ್ತಿಗಾಗಿ ೯ರಿಂದ ೧೬ ವರ್ಷದ ಮಕ್ಕಳಿಗೆ ಸೃಜನಾತ್ಮಕ ಬರವಣಿಗೆ (ಕಥೆ, ಕವನ, ಪ್ರಬಂಧ) ಸೃಜನಾತ್ಮಕ ಕಲೆ(ಜೇಡಿಮಣ್ಣಿನ ಕಲೆ, ಚಿತ್ರಕಲೆ, ಕರಕುಶಲ), ಸೃಜನಾತ್ಮಕ ಪ್ರದರ್ಶನ ಕಲೆ (ಶಾಸ್ತಿಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ತಾನಿ ಶಾಸ್ತಿçÃಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಣಿ ಪ್ರದರ್ಶನ, ಸುಗಮ ಸಂಗೀತ ಹಾಗೂ ಏಕಪಾತ್ರಾಭಿನಯ, ಯೋಗ ನೃತ್ಯ, ಮ್ಯಾಜಿಕ್, ಇತ್ಯಾದಿ) ಇವುಗಳಲ್ಲಿ ಯಾವುದಾದರೊಂದು ಕಲೆಯಲ್ಲಿ ಮಾತ್ರ ಪ್ರದರ್ಶಿಸಲು ಅವಕಾಶವಿರುತ್ತದೆ. ವಿಜ್ಞಾನದಲ್ಲಿ ನೂತನ ಅವಿಷ್ಕಾರ(ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಒಂದು ವಿಷಯ) ಈ ಎಲ್ಲಾ ಸ್ಪರ್ಧೆಗಳು ತಾಲ್ಲೂಕು ಮಟ್ಟದ ಕಲಾಶ್ರಿà ಪ್ರಶಸ್ತಿ ಕಾರ್ಯಕ್ರಮವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಜಿಲ್ಲೆಯ ೬ ತಾಲ್ಲೂಕುಗಳಲ್ಲಿ ಸ್ಥಳೀಯ ಮಟ್ಟದ ಆಯ್ಕೆ ಶಿಬಿರವನ್ನು ಸೆಪ್ಟೆಂಬರ್ ೩೦ರೊಳಗಾಗಿ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ:೯೧೧೩೫ ೬೭೦೩೫ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ಯಾದಗಿರಿ, ಸೆಪ್ಟೆಂಬರ್ ೨೩ (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ೨೦೧೯-೨೦ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಹೊಸ ಮತ್ತು ನವೀಕರಣ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ವೆಬ್‌ಸೈಟ್ https://scholarships.gov.in ನಿಂದ ನೇರವಾಗಿ ಆನ್‌ಲೈನ್‌ನಲ್ಲಿ ಅಥವಾ ಆ್ಯಂಡ್ರಾಯಿಡ್ ಮೊಬೈಲ್ ಬಳಕೆದಾರರು “ಎನ್‌ಎಸ್‌ಪಿ”ಯ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡು ಮೊಬೈಲ್ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಸಬೇಕು. ಪ್ರಿಂಟ್‌ಔಟ್ ಪಡೆದುಕೊಂಡು ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ದ್ವಿÃಪ್ರತಿಗಳಲ್ಲಿ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಬೇಕು ಮತ್ತು ಇನ್ನೊಂದು ಪ್ರತಿಯನ್ನು ಆಯಾ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ, ಆಯಾ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರ ಕಾರ್ಯಾಲಯಗಳಲ್ಲಿ ಸಲ್ಲಿಸಬೇಕು. ಮೆಟ್ರಿಕ್ ಪೂರ್ವ ಹೊಸ ಹಾಗೂ ನವೀಕರಣ ಅರ್ಜಿಗಳನ್ನು ಸಲ್ಲಿಸಲು ಅಕ್ಟೊÃಬರ್ ೧೫ ಕೊನೆಯ ದಿನವಾಗಿದೆ. ಅದರಂತೆ ಮೆಟ್ರಿಕ್ ನಂತರ ಮತ್ತು ಮೆರಿಟ್ ಕಂ. ಮೀನ್ಸ್ನ ಹೊಸ ಹಾಗೂ ನವೀಕರಣ ಅರ್ಜಿಗಳನ್ನು ಸಲ್ಲಿಸಲು ಅಕ್ಟೊÃಬರ್ ೩೧ ಕೊನೆಯ ದಿನವಾಗಿರುತ್ತದೆ. ಮನೆಯಿಂದಲೇ “ಎನ್‌ಎಸ್‌ಪಿ”ಯ ಮೊಬೈಲ್ ಅಪ್ಲಿಕೇಶನ್ ಬಳಸಿ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್ www.gokdom.kar.nic.in ಅಥವಾ ಜಿಲ್ಲೆಯ ವೆಬ್‌ಸೈಟ್ https://dom.karnataka.gov.in/yadgir ನಿಂದ ಪಡೆದುಕೊಳ್ಳಬಹುದು. ಕಚೇರಿ ದೂ:೦೮೪೭೩-೨೫೩೨೩೫ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಡೆಂಗ್ಯೂ, ಚಿಕನ್‌ಗುನ್ಯಾ ಜ್ವರ ಮುಂಜಾಗ್ರತೆಗೆ ಸಲಹೆ
ಯಾದಗಿರಿ, ಸೆಪ್ಟೆಂಬರ್ ೨೩ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಳೆಗಾಲ ಇರುವುದರಿಂದ ಸಾರ್ವಜನಿಕರು ಡೆಂಗ್ಯೂ, ಚಿಕನ್‌ಗುನ್ಯಾ ಜ್ವರ ಬರದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡೆಂಗ್ಯೂ ರೋಗವು ಇಡೀಸ್ ಈಜೀಪ್ಟಿ ಎಂಬ ಸೊಳ್ಳೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸ್ವಚ್ಛವಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿಯನ್ನು ಬೆಳೆಸುವ ಈ ಸೊಳ್ಳೆಯು ದಿನದಲ್ಲಿ ಮಾತ್ರ ಕಚ್ಚುತ್ತದೆ. ೭ ದಿನಗಳಲ್ಲಿ ಮೊಟ್ಟೆಯಿಂದ ಮರಿ ಸೊಳ್ಳೆಯಾಗಿ ಪರಿವರ್ತನೆಗೊಳ್ಳುತ್ತದೆ. ಕಾರಣ ನೀರು ಸಂಗ್ರಹಿಸುವ ತೊಟ್ಟಿ, ಬ್ಯಾರಲ್, ಪಾತ್ರೆಗಳನ್ನು ಪ್ರತಿ ೩-೪ ದಿನಗಳಿಗೊಮ್ಮೆ ಸ್ವಚ್ಛವಾಗಿ ತಿಕ್ಕಿ ತೊಳೆದು ಬಿಸಿಲಿನಲ್ಲಿ ಒಣಗಿಸಿದ ನಂತರ ನೀರನ್ನು ತುಂಬಬೇಕು. ಏರ್‌ಕೂಲರ್‌ನಲ್ಲಿ ಸಂಗ್ರಹವಾದ ನೀರು ಮತ್ತು ಹೂವಿನ ಕುಂಡಲಿಗಳಲ್ಲಿ ಸಂಗ್ರಹಿಸಿದ ನೀರನ್ನು ಕೂಡ ಪ್ರತಿ ೩-೪ ದಿನಗಳಿಗೊಮ್ಮೆ ಬದಲಾಯಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ತೀವ್ರ ತಲೆನೋವು, ಕಣ್ಣು ನೋವು, ಕೀಲು ಮತ್ತು ಸ್ನಾಯು ನೋವು, ಹಸಿವಾಗದೇ ಇರುವುದು, ತುರಿಕೆ ಹಾಗೂ ತೀವ್ರ ಜ್ವರ ಡೆಂಗ್ಯೂ ರೋಗದ ಲಕ್ಷಣಗಳಾಗಿವೆ. ರೋಗದ ಲಕ್ಷಣ ಕಂಡುಬಂದಲ್ಲಿ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರನ್ನು ಸಂಪರ್ಕಿಸಬೇಕು. ಹೆಚ್ಚಿನ ವಿಶ್ರಾಂತಿ ಪಡೆಯಬೇಕು. ನೀರಿನ ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ದ್ರವ ಪದಾರ್ಥಗಳನ್ನು ಸೇವಿಸಬೇಕು. ಸೊಳ್ಳೆಯು ಕಚ್ಚದಂತೆ ಉದ್ದನೆಯ ತೋಳಿನ ಅಂಗಿ ಮತ್ತು ಪ್ಯಾಂಟ್‌ಗಳನ್ನು ಧರಿಸಬೇಕು ಹಾಗೂ ಸೊಳ್ಳೆ ಬತ್ತಿ, ಸೊಳ್ಳೆ ಪರದೆಯನ್ನು ಬಳಸಬೇಕು. ಕುಡಿಯುವ ನೀರಿನ ಮೂಲಗಳಾದ ಬಾವಿ, ಬೋರ್‌ವೆಲ್ ಹಾಗೂ ಕೈ ಪಂಪ್‌ಗಳ ಕನಿಷ್ಠ ೧೦೦ ಅಡಿ ಸುತ್ತಮುತ್ತಲು ತಿಪ್ಪೆಗುಂಡಿ, ಕಸ-ಕಡ್ಡಿ ಹಾಗೂ ಮಲ ವಿಸರ್ಜನೆ ಮಾಡದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಮೂಲಗಳಿಗೆ ಮೇಲ್ಮಟ್ಟದ ಸಂಗ್ರಹಗಾರಗಳಲ್ಲಿ ಪ್ರತಿದಿನ ಹಾಗೂ ತೆರೆದ ಬಾವಿಗಳಲ್ಲಿ ವಾರಕ್ಕೊಮ್ಮೆ ಕ್ಲೊÃರಿನೇಷನ್ ಮಾಡಬೇಕು. ಕ್ಲೊರಿನೇಷನ್ ಮಾಡಿದ ನೀರನ್ನೆ ಬಳಸಬೇಕು ಎಂದು ಅವರು ತಿಳಿಸಿದ್ದಾರೆ.
ಹೆಚ್೧ಎನ್೧ ಜ್ವರ: ಮುಂಜಾಗ್ರತೆಗೆ ಮನವಿ
ಯಾದಗಿರಿ, ಸೆಪ್ಟೆಂಬರ್ ೨೩ (ಕರ್ನಾಟಕ ವಾರ್ತೆ): ಹೆಚ್೧ಎನ್೧ ರೋಗದ ಬಗ್ಗೆ ಜಿಲ್ಲೆಯ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೀವ್ರ ಸ್ವರೂಪದ ಜ್ವರ, ಅತೀ ಭೇದಿ/ವಾಂತಿ, ಅತಿಯಾದ ಮೈ-ಕೈ ಮತ್ತು ತಲೆ ನೋವು, ಕೆಮ್ಮು ಮತ್ತು ಹಳದಿ ಕಫ, ನೆಗಡಿ ಮತ್ತು ಗಂಟಲು ಕೆರೆತ, ಉಸಿರಾಟದ ತೊಂದರೆ ಹೆಚ್೧ಎನ್೧ ರೋಗದ ಲಕ್ಷಣಗಳಾಗಿವೆ ಎಂದು ಅವರು ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮಗಳು: ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತç ಅಥವಾ ಟಿಶ್ಯೂ ಕಾಗದದಿಂದ ಮುಚ್ಚಿಕೊಳ್ಳಬೇಕು. ಮೂಗು, ಕಣ್ಣು ಅಥವಾ ಬಾಯಿಯನ್ನು ಮುಟ್ಟುವ ಮೊದಲು ಮತ್ತು ನಂತರ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಚೆನ್ನಾಗಿ ತೊಳೆದುಕೊಳ್ಳಬೇಕು. ಚೆನ್ನಾಗಿ ನಿದ್ದೆ ಮಾಡಬೇಕು. ದೈಹಿಕವಾಗಿ ಚಟುವಟಿಕೆಯಿಂದಿರಬೇಕು ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು. ಧಾರಾಳವಾಗಿ ನೀರು/ದ್ರವ ಪದಾರ್ಥಗಳನ್ನು ಕುಡಿಯುವ ಜೊತೆಗೆ ಪೌಷ್ಟಿಕಾಂಶವಿರುವ ಆಹಾರ ಸೇವಿಸಬೇಕು. ಇದರಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಜನಸಂದಣಿಯಿರುವ ಸ್ಥಳಗಳಿಗೆ ಹೋದಾಗ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಉದಾಹರಣೆಗೆ ರೋಗ ಲಕ್ಷಣವಿರುವ ವ್ಯಕ್ತಿಗಳಿಂದ ದೂರವಿರಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಏನು ಮಾಡಬಾರದು: ಹಸ್ತಲಾಘವ, ಆಲಿಂಗನ ಮಾಡಬಾರದು. ವೈದ್ಯರ ಸಲಹೆ ಇಲ್ಲದೆ ಔಷಧಿಯನ್ನು ತೆಗೆದುಕೊಳ್ಳಬಾರದು. ರಸ್ತೆ ಅಥವಾ ಎಲ್ಲೆಂದರಲ್ಲಿ ಉಗಳಬಾರದು. ಅನಾವಶ್ಯಕವಾಗಿ ಜನಸಂದಣಿ ಪ್ರದೇಶಗಳಿಗೆ ಭೇಟಿ ನೀಡಬಾರದು ಹಾಗೂ ಪ್ರಯಾಣಿಸಬಾರದು. ಫ್ಲೂ ತರಹದ ಚಿಹ್ನೆಗಳಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಆಸ್ಪತ್ರೆ, ನಗರಸಭೆಗೆ ಸಚಿವ ಪ್ರಭು ಬಿ.ಚವ್ಹಾಣ್ ಅನಿರೀಕ್ಷಿತ ಭೇಟಿ
ಮೂಳೆತಜ್ಞ, ಫಾರ್ಮಾಸಿಸ್ಟ್, ನಗರಸಭೆ ಎಇ ಅಮಾನತಿಗೆ ಶಿಫಾರಸು
ಯಾದಗಿರಿ: ಸೆಪ್ಟೆಂಬರ್ ೨೧ (ಕರ್ನಾಟಕ ವಾರ್ತೆ): ಪಶುಸಂಗೋಪನೆ ಸಚಿವರು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಜಿಲ್ಲಾ ಆಸ್ಪತ್ರೆ ಹಾಗೂ ಯಾದಗಿರಿ ನಗರಸಭೆಗೆ ಶನಿವಾರ ಅನಿರೀಕ್ಷಿತವಾಗಿ ಭೇಟಿ ನೀಡಿದರು. ಕೆಲಸಕ್ಕೆ ಸರಿಯಾಗಿ ಹಾಜರಾಗದ ಜಿಲ್ಲಾ ಆಸ್ಪತ್ರೆಯ ಮೂಳೆತಜ್ಞ ಡಾ.ಸುನೀಲ್, ಫಾರ್ಮಾಸಿಸ್ಟ್ ಗೋವಿಂದಮೂರ್ತಿ ಹಾಗೂ ಅನಧಿಕೃತ ಗೈರು ಮತ್ತು ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರಿದ ಕಾರಣಕ್ಕೆ ನಗರಸಭೆಯ ಸಹಾಯಕ ಇಂಜಿನಿಯರ್ ಶಿವರಾಜ ಸುಂಧಾಳೆ ಅವರಿಗೆ ನೋಟಿಸ್ ನೀಡಿ, ಅಮಾನತು ಮಾಡಲು ಶಿಫಾರಸು ಮಾಡಿದರು.
ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವರು, ಮಹಿಳಾ ಸರ್ಜಿಕಲ್ ವಾರ್ಡ್, ಪುರುಷರ ಸರ್ಜಿಕಲ್ ವಾರ್ಡ್, ನವಜಾತ ಶಿಶುಗಳ ವಾರ್ಡ್ ಹಾಗೂ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿದರು. ಅಲ್ಲಿರುವ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ಆಸ್ಪತ್ರೆಗೆ ಬಂದಿದ್ದ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು.
ವೈದ್ಯರು ಮತ್ತು ಸಿಬ್ಬಂದಿಗಳ ಹಾಜರಾತಿಯನ್ನು ಈ ಸಂದರ್ಭದಲ್ಲಿ ಸುದೀರ್ಘವಾಗಿ ಪರಿಶೀಲಿಸಿದ ಸಚಿವರು, ಸಮಯಕ್ಕೆ ಸರಿಯಾಗಿ ಹಾಜರಾಗದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳಿಗ್ಗೆಯೇ ಬೆಳಿಗ್ಗೆ ಮತ್ತು ಮಧ್ಯಾಹ್ನದ ಹಾಜರಾತಿ ಹಾಕಿ ಮಧ್ಯಾಹ್ನ ಕೆಲಸ ನಿರ್ವಹಿಸದವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಭಗವಂತ ಅನವಾರ, ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ನಾರಾಯಣಪ್ಪ ಅವರಿಗೆ ಸೂಚಿಸಿದರು.
ಆಸ್ಪತ್ರೆಯ ಬ್ಲಾಕ್‌ವೊಂದರಲ್ಲಿ ಅವಧಿ ಮುಗಿದ ಔಷಧಗಳು, ಗ್ಲೌಸ್‌ಗಳು, ವೈದ್ಯಕೀಯ ತ್ಯಾಜ್ಯ ಹಾಗೂ ಇನ್ನಿತರ ತ್ಯಾಜ್ಯ ವಸ್ತುಗಳನ್ನು ಕಂಡು ಕೆಂಡಾಮಂಡಲರಾದ ಸಚಿವರು, ಪ್ರಧಾನಮಂತ್ರಿಗಳು ಪ್ರತಿದಿನ ಸ್ವಚ್ಛ ಭಾರತಕ್ಕಾಗಿ ಶ್ರಮಿಸಿ ಎಂದು ಕರೆ ನೀಡುತ್ತಿದ್ದಾರೆ. ಬ್ಲಾಕ್‌ನಲ್ಲಿ ಬಿಸಾಡಿರುವ ಬಕೀಟ್ ಮತ್ತು ಪ್ಲಾಸ್ಟಿಕ್ ವಸ್ತುಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಹೇಳುವ ನೀವು ಜಿಲ್ಲಾ ಆಸ್ಪತ್ರೆಯ ಪರಿಸರವನ್ನೆÃ ಸ್ವಚ್ಛವಾಗಿಟ್ಟುಕೊಂಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ನಗರಸಭೆಗೆ ಭೇಟಿ: ಯಾದಗಿರಿ ನಗರಸಭೆ ಕಚೇರಿಗೂ ದಿಢೀರ್ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು, ಅಧಿಕಾರಿಗಳು ವೈದ್ಯರು ಮತ್ತು ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲಿಸಿದರು. ನಗರದಲ್ಲಿ ಸ್ವಚ್ಛತೆ ಕಾಪಾಡಬೇಕು. ಎಸ್‌ಸಿ/ಎಸ್‌ಟಿ ಅನುದಾನವನ್ನು ಸದ್ಬಳಕೆ ಮಾಡಬೇಕು. ನಗರದ ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು. ಬಾಕಿ ಇರುವ ಮುಟೇಷನ್ ಕೆಲಸವನ್ನು ತಿಂಗಳಲ್ಲಿ ಪೂರ್ಣಗೊಳಿಸಿ, ಮುಂದಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಾಜರುಪಡಿಸುವಂತೆ ಪೌರಾಯುಕ್ತರಾದ ರಮೇಶ ಸುಣಗಾರ ಅವರಿಗೆ ಸೂಚಿಸಿದರು.
ವಾರ್ತಾ ವಾಹನದಲ್ಲಿ ಸಂಚಾರ: ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾಹನದಲ್ಲಿ ಪತ್ರಕರ್ತರೊಂದಿಗೆ ಸಂಚರಿಸಿ ಜಿಲ್ಲಾ ಆಸ್ಪತ್ರೆ ಹಾಗೂ ನಗರಸಭೆಗೆ ಭೇಟಿ ನೀಡಿದರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್ ಅವರು ಕೂಡ ಸಚಿವರೊಂದಿಗೆ ವಾರ್ತಾ ವಾಹನದಲ್ಲಿ ಸಂಚರಿಸಿದರು.

ಶನಿವಾರ, ಸೆಪ್ಟೆಂಬರ್ 21, 2019

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ
ಕೇಂದ್ರ ಸ್ಥಾನದಲ್ಲಿದ್ದು ಕೆಲಸ ಮಾಡಲು ತಾಕೀತು
-:ಸಚಿವ ಪ್ರಭು ಬಿ.ಚವ್ಹಾಣ್
ಯಾದಗಿರಿ: ಸೆಪ್ಟೆಂಬರ್ ೨೧ (ಕರ್ನಾಟಕ ವಾರ್ತೆ): ಯಾದಗಿರಿ ಹಿಂದುಳಿದ ಜಿಲ್ಲೆಯಿಂದ ಮುಂದುವರೆದ ಜಿಲ್ಲೆಗಳ ಸಾಲಿನಲ್ಲಿ ಗುರುತಿಸಿಕೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸವಿದ್ದು, ಕೆಲಸ ಮಾಡಬೇಕು ಎಂದು ಪಶುಸಂಗೋಪನೆ ಸಚಿವರು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ತಾಕೀತು ಮಾಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಕೆಲವರು ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಿಂದ ಯಾದಗಿರಿಗೆ ಬರುತ್ತಿರುವುದಾಗಿ ತಿಳಿದುಬಂದಿದೆ. ಜಿಲ್ಲಾಡಳಿತ ಭವನದ ಹಿಂದುಗಡೆ ನೌಕರರಿಗಾಗಿ ನಿರ್ಮಿಸಿದ ವಸತಿಗೃಹಗಳಲ್ಲಿ ವಾಸವಿರಬೇಕು. ಸರ್ಕಾರಿ ವೇಳಾ ಪಟ್ಟಿಯ ಅನುಸಾರ ಕಚೇರಿಗೆ ಬರಬೇಕು. ಇಲಾಖಾ ಮುಖ್ಯಸ್ಥರು ಬಯೋಮೆಟ್ರಿಕ್ ಹಾಜರಾತಿಗೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಕುಂದುಕೊರತೆ, ಸಮಸ್ಯೆಗಳ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಜನರ ತೆರಿಗೆಯ ಹಣದಿಂದ ಸಂಬಳ ಪಡೆಯುವ ನಾವು ಅವರ ಕೆಲಸ ಮಾಡಿಕೊಡಲು ಏನು ಸಮಸ್ಯೆ? ಎಂದು ಅವರು ಪ್ರಶ್ನಿಸಿದರು.
ಪ್ರತಿಯೊಂದು ಇಲಾಖೆಯನ್ನು ಖುದ್ದಾಗಿ ಪರಿಶೀಲಿಸುತ್ತೆÃನೆ. ಹಾಜರಾತಿ ಕಡ್ಡಾಯವಾಗಿರಬೇಕು. ಕೆಲ ಕಚೇರಿಗಳಲ್ಲಿ ಮಧ್ಯಾಹ್ನದ ಹಾಜರಾತಿಯನ್ನು ಬೆಳಿಗ್ಗೆಯೇ ಹಾಕುತ್ತಿರುವುದು ಕಂಡುಬಂದಿದೆ. ಈ ರೀತಿ ಕಂಡುಬಂದರೆ ಇಲಾಖಾ ಮುಖ್ಯಸ್ಥರು ಪರಿಶೀಲಿಸಿ ಶಿಸ್ತು ಕ್ರಮ ಜರುಗಿಸಬೇಕು. ನಿಯಮಬಾಹಿರವಾಗಿ ಕೆಲಸ ಮಾಡುವ ಮತ್ತು ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಎಚ್ಚರಿಕೆ ನೀಡಿದರು.
ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಜಿಲ್ಲೆಯಲ್ಲಿ ಖಾಲಿ ಹುದ್ದೆಗಳ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಸಭೆಯಲ್ಲಿ ಮಾಹಿತಿ ಪಡೆದ ಸಚಿವರು, ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇರುವುದು ಗಮನಕ್ಕೆ ಬಂದಿದೆ. ಖಾಲಿ ಹುದ್ದೆಗಳ ಕುರಿತು ಮುಖ್ಯಮಂತ್ರಿಯವರ ಗಮನಕ್ಕೆ ತಂದು, ಭರ್ತಿಗೆ ಒತ್ತಾಯಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಜಿಲ್ಲೆಯಲ್ಲಿರುವ ವಿವಿಧ ನಿಗಮಗಳಿಗೆ ಬೇರೆ ಜಿಲ್ಲೆಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಇದರಿಂದ ನಿಗಮಗಳ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮತ್ತು ಪ್ರಗತಿ ಪರಿಶೀಲನೆಗೆ ತೊಂದರೆಯಾಗುತ್ತಿದೆ. ಕಾರಣ ಜಿಲ್ಲೆಯ ವಿವಿಧ ನಿಗಮಗಳಿಗೆ ಜಿಲ್ಲೆಯ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಪ್ರಭಾರ ವಹಿಸಲಾಗುವುದು ಎಂದು ತಿಳಿಸಿದರು.
ತಿರಸ್ಕೃತ ರೈತರ ಆತ್ಮಹತ್ಯೆ ಪ್ರಕರಣ ಪರಿಶೀಲಿಸಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ೧೩ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳಿದ್ದು, ೩ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ. ೫ ಪ್ರಕರಣಗಳಿಗೆ ಎಫ್‌ಎಸ್‌ಎಲ್ ವರದಿ ಬಾಕಿ ಇದ್ದು, ೫ ತಿರಸ್ಕೃತವಾಗಿವೆ ಎಂಬುದಾಗಿ ಜಂಟಿ ಕೃಷಿ ನಿರ್ದೇಶಕರಾದ ದೇವಿಕಾ ಆರ್. ಅವರಿಂದ ಮಾಹಿತಿ ಪಡೆದ ಸಚಿವರು, ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಕ್ಕೆ ಶೀಘ್ರ ಪರಿಹಾರ ವಿತರಿಸಬೇಕು. ತಿರಸ್ಕರಿಸಿದ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಮತ್ತೊಮ್ಮೆ ಪರಿಶೀಲಿಸಿ ಎಂದು ಸೂಚಿಸಿದರು.
ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಮಾತನಾಡಿ, ಪಹಣಿ ಮತ್ತು ಸಾಲ ಹೊಂದಿದ ರೈತರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ಮಾತ್ರ ಪರಿಗಣಿಸಲಾಗುತ್ತಿದೆ. ಎಷ್ಟೊÃ ರೈತರ ಹೆಸರಿನಲ್ಲಿ ಪಹಣಿ ಮತ್ತು ಸಾಲ ಇರುವುದಿಲ್ಲ. ಅವರ ಹಿರಿಯರು ಮತ್ತು ಪೋಷಕರ ಹೆಸರಿನಲ್ಲಿರುತ್ತದೆ. ಹಾಗಾಗಿ, ಅವರ ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ತಿರಸ್ಕರಿಸಲಾಗುತ್ತಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಎಲ್ಲಾ ರೈತರ ಪ್ರಕರಣಗಳಿಗೂ ಪರಿಹಾರ ಸಿಗುವಂತಾಗಬೇಕು ಎಂದು ಹೇಳಿದರು.
ಸಚಿವರು ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಹಾನಿಗೊಳಗಾದ ಮನೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.
ಸುರಪುರ ತಾಲ್ಲೂಕಿನ ತಳ್ಳಳ್ಳಿ ಬಿ ಮತ್ತು ಯಕ್ತಾಪುರ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನಗನೂರ, ಎಂ.ಬೊಮ್ಮನಳ್ಳಿ, ಕಾಚಾಪುರ ಹಾಗೂ ಯಕ್ತಾಪುರ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಇ ರಾಜ್‌ಕುಮಾರ ಪತ್ತಾರ ಅವರು ಮಾಹಿತಿ ನೀಡಿದರು.
ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಿ: ಸ್ವಚ್ಛ ಭಾರತ ಮತ್ತು ಪ್ಲಾಸ್ಟಿಕ್ ಮುಕ್ತ ಭಾರತ ಪ್ರಧಾನಮಂತ್ರಿಗಳ ಕನಸಾಗಿದೆ. ಹಾಗಾಗಿ, ಕಚೇರಿ ಹಾಗೂ ಸುತ್ತಮುತ್ತಲಿನಲ್ಲಿ ಸ್ವಚ್ಛತೆ ಕಾಪಾಡಬೇಕು. ಜಿಲ್ಲೆಯ ಯಾವುದೇ ಗ್ರಾಮ, ತಾಲ್ಲೂಕು ಕೇಂದ್ರ, ಜಿಲ್ಲಾ ಕಚೇರಿ, ನಗರಸಭೆ, ಪುರಸಭೆ, ಶಾಲಾ-ಕಾಲೇಜು ಹಾಗೂ ವಸತಿನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಲಾಗುವುದು. ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರು ಕೂಡ ಭೇಟಿ ನೀಡಬೇಕು ಮತ್ತು ವರದಿ ನೀಡಬೇಕು ಎಂದು ಸಚಿವರು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಗುರುನಾಥ ಎನ್.ಗೌಡಪ್ಪನವರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಗುರುವಾರ, ಸೆಪ್ಟೆಂಬರ್ 19, 2019

ಜಿಲ್ಲಾ ಮಟ್ಟದ ದಸರಾ ಕ್ರಿಡಾಕೂಟಕ್ಕೆ ಚಾಲನೆ
ದೈಹಿಕ, ಮಾನಸಿಕ ಸದೃಢತೆಗೆ ಕ್ರಿಡೆಗಳು ಪೂರಕ
-ರಾಜಶೇಖರಗೌಡ ಪಾಟೀಲ್ ವಜ್ಜಲ್
ಯಾದಗಿರಿ, ಸೆಪ್ಟೆಂಬರ್ ೧೯ (ಕರ್ನಾಟಕ ವಾರ್ತೆ): ಕ್ರಿಡಾ ಚಟುವಟಿಕೆಗಳು ಜೀವನದ ಬಹುಮುಖ್ಯ ಭಾಗವಾಗಿದ್ದು, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರಿಡೆಗಳು ಪೂರಕವಾಗಿವೆ. ಆದ್ದರಿಂದ ಪ್ರತಿಯೊಬ್ಬರೂ ಕ್ರಿಡೆಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಹೇಳಿದರು.
ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ೨೦೧೯-೨೦ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರಿಡಾಕೂಟಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಕ್ರಿಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯ. ಆದ್ದರಿಂದ ಕ್ರಿಡಾಪಟುಗಳಿಗೆ ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ. ಇಂದಿನ ಸೋಲು ಮುಂದಿನ ಗೆಲುವಿಗೆ ಪೂರಕವಾಗುತ್ತದೆ. ಸೋತಾಗ ನಿರಾಶರಾಗದೆ ತೀರ್ಪುಗಾರರು ನೀಡುವ ತೀರ್ಪಿಗೆ ಬದ್ಧರಾಗಿರಬೇಕು. ಎಲ್ಲರೂ ಕ್ರಿಡೆಗಳಲ್ಲಿ ಭಾಗವಹಿಸುವ ಮೂಲಕ ಕ್ರಿಡಾ ಸ್ಫೂರ್ತಿ ಮೆರೆಯಬೇಕು ಎಂದು ಅವರು ಹೇಳಿದರು.
ಜಿಲ್ಲಾ ಮಟ್ಟದಲ್ಲಿ ವಿಜೇತರಾದ ಕ್ರಿಡಾಪಟುಗಳು ಮುಂದೆ ವಿಭಾಗಮಟ್ಟ ಹಾಗೂ ರಾಜ್ಯ ಮಟ್ಟದ ಕ್ರಿಡೆಗಳಲ್ಲಿ ಭಾಗವಹಿಸಿ ಜಿಲ್ಲೆಯ ಕೀರ್ತಿ ತರಬೇಕು ಎಂದು ಸಲಹೆ ನೀಡಿದ ಅವರು, ಜಿಲ್ಲಾ ಕ್ರಿಡಾಂಗಣದ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ ೮ ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಕ್ರಿಡೆಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರತಿಯೊಬ್ಬರಲ್ಲಿಯೂ ಪ್ರತಿಭೆ ಇರುತ್ತದೆ. ಪ್ರತಿಭೆಗಳನ್ನು ಗುರುತಿಸಲು ಇಂತಹ ಕ್ರಿಡಾಕೂಟಗಳು ವೇದಿಕೆಯನ್ನು ಕಲ್ಪಿಸುತ್ತವೆ. ಹೀಗಾಗಿ ಎಲ್ಲರೂ ಕ್ರಿಡಾ ಚಟುವಟಿಕೆಗಳಲ್ಲಿ ಭಾಗಹಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ ಅವರು ಮಾತನಾಡಿ, ಗುರಿ ಸಾಧನೆಗೆ ಕ್ರಿಡಾಪಟುಗಳಲ್ಲಿ ಸತತ ಪ್ರಯತ್ನ ಇರಬೇಕು. ಅಂದಾಗ ಏನಾದರೂ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.
ಸದಾಶಿವಪ್ಪಗೌಡ ರೊಟ್ನಡಗಿ, ನಗರಸಭೆಯ ಸದಸ್ಯರಾದ ಹಣಮಂತ ಟಿ.ನಾಯಕ, ಸುರಪುರ ತಾಲ್ಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಂಜೀವ್ ದರಬಾರಿ, ಯಾದಗಿರಿ ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಹಣಮಂತ ಹೊಸಮನಿ, ಗೌರವ ಅಧ್ಯಕ್ಷರಾದ ಶಂಕರಗೌಡ ಪಾಟೀಲ್, ಉಪನ್ಯಾಸಕರಾದ ರುದ್ರಗೌಡ ಪಾಟೀಲ್ ಅವರು ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚನ್ನಬಸಪ್ಪ ಕುಳಗೇರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪವಿತ್ರಾ ಶಿರವಾಳ ಕ್ರಿÃಡಾ ಪ್ರತಿಜ್ಞಾವಿಧಿ ಬೋಧಿಸಿದರು. ಶೃತಿ ಹಾಗೂ ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ತುಳಜಪ್ಪ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಬಸಲಿಂಗಪ್ಪ ವಂದಿಸಿದರು.

ಬುಧವಾರ, ಸೆಪ್ಟೆಂಬರ್ 18, 2019

ಇಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
ಯಾದಗಿರಿ, ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ 2019-20ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 19ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ವೆಂಕಟರಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಶರಣಪ್ಪ ಮಟ್ಟೂರ. ಬಿ.ಜಿ ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ವಿನೋದ ಪಾಟೀಲ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚೋಲ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಅವರು ಆಹ್ವಾನಿತರಾಗಿ ಭಾಗವಹಿಸುವರು.
ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಆಯುಕ್ತರ ಪ್ರವಾಸ
ಯಾದಗಿರಿ, ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಅಂಗವಿಕಲ ವ್ಯಕ್ತಿಗಳ ಅಧಿನಿಯಮ ರಾಜ್ಯ ಆಯುಕ್ತರಾದ ವಿ.ಎಸ್.ಬಸವರಾಜು ಅವರು ಸೆಪ್ಟೆಂಬರ್ 20 ಮತ್ತು 21ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳುವರು.
ಸೆ.20ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ವಿಕಲಚೇತನರ ಸಮಸ್ಯೆಗಳ ಕುರಿತಾದ ಕುಂದು ಕೊರತೆ ವಿಚಾರಣೆ, ಸ್ವೀಕರಿಸಲಾದ ದೂರುಗಳು, ವಿಲೇ ಮಾಡಿದ ದೂರುಗಳ ಕುರಿತು ಕುಂದುಕೊರತೆ ಸಭೆ ನಡೆಸುವರು.
ಸೆ.21ರಂದು ಬೆಳಿಗ್ಗೆ 9.30 ಗಂಟೆಗೆ ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016ರ ಬಗ್ಗೆ ಅರಿವು ಮೂಡಿಸುವುದು, ಅಂಗವಿಕಲ ವ್ಯಕ್ತಿಗಳ ಅಧಿನಿಯಮ- 1995ರ ಅನುಷ್ಠಾನ ಮತ್ತು ಅಂಗವಿಕಲರ ಮಕ್ಕಳ ರಕ್ಷಣೆಯ ಕುರಿತು, ಶಿಕ್ಷಣ ಇಲಾಖೆಯಲ್ಲಿ ಅಂಗವಿಕಲ ಮಕ್ಕಳ ಶಿಕ್ಷಣ, ಪುನಶ್ಚೇತನ ಮತ್ತು ಮೂಲಭೂತ ಸೌಕರ್ಯವನ್ನು ಕಲ್ಪಿಸುವ ಕುರಿತು ಹಾಗೂ ಶೇ.5ರಷ್ಟು ಆಯವ್ಯಯ, ಖರ್ಚು ಹಾಗೂ 2018-19ರ ಕ್ರಿಯಾಯೋಜನೆ ಕುರಿತು, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016ರ ಬಗ್ಗೆ ಅರಿವು ಮೂಡಿಸುವುದು ಹಾಗೂ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ರಕ್ಷಣೆ ಕುರಿತು ಚರ್ಚಿಸಿ, ಪರಿಶೀಲನೆ ನಡೆಸುವರು. ಸದರಿ ವಿಷಯಗಳ ಕುರಿತಂತೆ ಮಧ್ಯಾಹ್ನ 12 ಮತ್ತು ಮಧ್ಯಾಹ್ನ 2.45 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸುವರು.
ಗರ್ಭಿಣಿಯರು ಆರೋಗ್ಯ ಕಡೆ ಹೆಚ್ಚಿನ ಗಮನಹರಿಸಿ
-ಜಿ.ಪಂ ಸದಸ್ಯ ಶಿವಲಿಂಗಪ್ಪ ಪುಟಗಿ
ಯಾದಗಿರಿ, ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಗರ್ಭಿಣಿಯರು ಸದೃಢವಾಗಿದ್ದರೆ ಆರೋಗ್ಯವಂತ ಮಕ್ಕಳು ಜನಿಸಲು ಸಾಧ್ಯ. ಆದ್ದರಿಂದ ನಿಮ್ಮ ಕೆಲಸಕ್ಕೆ ಎಷ್ಟು ಮಹತ್ವ ನೀಡುತ್ತಿರೊ, ಅಷ್ಟೇ ಮಹತ್ವ ನಿಮ್ಮ ಆರೋಗ್ಯ ಮತ್ತು ಸ್ವಚ್ಛತೆಗೆ ಕೊಡಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಿವಲಿಂಗಪ್ಪ ಪುಟಗಿ ಅವರು ಹೇಳಿದರು.
ಯಡ್ಡಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ “ಪೋಷಣ್ ಅಭಿಯಾನ” ಯೋಜನೆಯಡಿ ಪೌಷ್ಟಿಕ ಆಹಾರ ಶಿಬಿರ, ಸೀಮಂತ ಕಾರ್ಯಕ್ರಮ ಹಾಗೂ ಗರ್ಭಿಣಿ, ಬಾಣಂತಿ, ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ಗ್ರಾಮೀಣ ಮಹಿಳೆಯರಿಗಾಗಿ ಅವರ ಆರೋಗ್ಯ ದೃಷ್ಟಿಯಿಂದ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಬಗ್ಗೆ ತಿಳಿದುಕೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಹಣಮಂತರೆಡ್ಡಿ ಅವರು ಮಾತನಾಡಿ, ಗರ್ಭಿಣಿ, ಬಾಣಂತಿಯರು ಪ್ರತಿದಿನ ತಮ್ಮ ಊಟದಲ್ಲಿ ತರಕಾರಿಗಳು, ಹಣ್ಣುಗಳು, ಮೊಳಕೆಕಾಳು, ಮೊಟ್ಟೆ, ಹಾಲು, ಮೊಸರು ಇರುವಂತೆ ನೋಡಿಕೊಳ್ಳಬೇಕು. ಕಬ್ಬಿಣಾಂಶ ಹೆಚ್ಚಿರುವಂತಹ ಆಹಾರ ಪದಾರ್ಥಗಳ ಸೇವನೆ ಮಾಡಬೇಕು. ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ಮಾತೃ ಪೂರ್ಣ ಯೋಜನೆಯಡಿ ಅಂಗನವಾಡಿ ಕೇಂದ್ರದಲ್ಲಿ ನೀಡುತ್ತಿರುವ ಅನ್ನ, ತರಕಾರಿಯುಕ್ತ ಸಾಂಬಾರು, ಹಾಲು, ಮೊಟ್ಟೆ, ಶೇಂಗಾದ ಚಿಕ್ಕಿಯನ್ನು ಸೇವಿಸಬೇಕು ಎಂದು ತಿಳಿಸಿದರು.
ಗರ್ಭಿಣಿಯರು ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆಸ್ಪತ್ರೆಯಲ್ಲಿಯೇ ಹೆರಿಗೆ ಮಾಡಿಸಿಕೊಳ್ಳಬೇಕು. ಪೌಷ್ಟಿಕ ಆಹಾರ ಸೇವನೆ ಮಾಡಬೇಕು ಎಂದು ಹೇಳಿದರು. ಗರ್ಭಿಣಿ ಮತ್ತು ಮಕ್ಕಳ ಚುಚ್ಚುಮದ್ದುಗಳ ಕುರಿತು ಮಾಹಿತಿ ನೀಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ವನಜಾಕ್ಷಿ ಬೆಂಡಿಗೇರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿಯಲ್ಲಿ ಮೊದಲನೇ ಹೆರಿಗೆಗೆ 3 ಕಂತುಗಳಲ್ಲಿ ಸರಕಾರದಿಂದ 5000 ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯಡಿ ಮೊದಲನೇ ಮತ್ತು ಎರಡನೇ ಗರ್ಭಿಣಿ/ ಬಾಣಂತಿಯರಿಗೆ ಸರಕಾರದಿಂದ 6000 ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಆದ್ದರಿಂದ ಅರ್ಹ ಗರ್ಭಿಣಿ, ಬಾಣಂತಿಯರು ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಹತ್ತಿಕುಣಿ ವೈದ್ಯಾಧಿಕಾರಿ ರಾಮಕೃಷ್ಣರೆಡ್ಡಿ ಅವರು ಗರ್ಭಿಣಿಯರ ಮತ್ತು ಮಕ್ಕಳ ಆರೋಗ್ಯ ತಪಾಸಣೆ ಮಾಡಿದರು. ಗರ್ಭಿಣಿಯರಿಗೆ ಪ್ರೊಟೀನ್ ಪೌಡರ್, ಕಬ್ಬಿಣಾಂಶ ಮಾತ್ರೆ, ಕ್ಯಾಲ್ಸಿಯಂ ಮಾತ್ರೆಗಳನ್ನು ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಿಬಾಯಿ ಚವ್ಹಾಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅನುರಾಧಾ ಬಂದಳ್ಳಿಕರ್, ಎಸ್.ಡಿ.ಎಂ.ಸಿ ಅಧ್ಯಕ್ಷ ಭೀಮರಾಯ, ಶಾಲಾ ಮುಖ್ಯಶಿಕ್ಷಕಿ ಶೀಲಾಬಾಯಿ, ಸಹಶಿಕ್ಷಕ ಬಸವರಾಜ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಅಮರಗುಂಡೇಶ್ವರಿ, ಹಣಮಂತ, ಅಂಗನವಾಡಿ ಕಾರ್ಯಕರ್ತೆಯರಾದ ಕ್ಯಾದಿಗಮ್ಮ, ಅನಿತಾ, ಸುನಂದಾ, ಸುನಿತಾ ಹಾಜರಿದ್ದರು.
ಗರ್ಭಿಣಿಯರಿಗೆ ಈ ಸಂದರ್ಭದಲ್ಲಿ ಸೀಮಂತ ಮಾಡಲಾಯಿತು. ಅಂಗನವಾಡಿ ಕಾರ್ಯಕರ್ತೆ ಮಲ್ಲಮ್ಮ ಪ್ರಾಥನಾ ಗೀತೆ ಹಾಡಿದರು. ಅಂಗನವಾಡಿ ಕಾರ್ಯಕರ್ತೆ ಕವಿತಾ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಕವಿತಾ ಕುಲಕರ್ಣಿ ನಿರೂಪಣೆ ಮಾಡಿದರು.

ಕೃಷಿ ವಿಜ್ಞಾನ ಕೇಂದ್ರದಿಂದ ಸಾವಿರ ಗಿಡ ನೆಡುವ ಅಭಿಯಾನ
ಯಾದಗಿರಿ, ಸೆಪ್ಟೆಂಬರ್ ೧೮ (ಕರ್ನಾಟಕ ವಾರ್ತೆ): ಜಿಲ್ಲೆಯ ಕವಡಿಮಟ್ಟಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರ ಆವರಣದಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಾಗೂ ಪ್ರಧಾನಮಂತ್ರಿಗಳ ಜನ್ಮದಿನದ ಅಂಗವಾಗಿ ಅರಣ್ಯ ಸಂರಕ್ಷಣೆ ಹಾಗೂ ಪರಿಸರ ಕಾಳಜಿಯನ್ನು ಜನರಲ್ಲಿ ಮೂಡಿಸುವ ನಿಟ್ಟಿನಲ್ಲಿ ಇಫ್ಕೊ ರಸಗೊಬ್ಬರಗಳ ಸಂಸ್ಥೆಯೊಂದಿಗೆ ಸಾವಿರ ಗಿಡಗಳನ್ನು ನೆಡುವ ಬೃಹತ್ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಮಲ್ಲಿಕಾರ್ಜುನ ಕೆಂಗನಾಳ ಅವರು ಮಾತನಾಡಿ, ಹೆಚ್ಚುತ್ತಿರುವ ಬರಗಾಲಗಳನ್ನು ತಡೆಯಲು ಮತ್ತು ಸಕಾಲದಲ್ಲಿ ಮಳೆಯಾಗಲು ಅರಣ್ಯ ಸಂರಕ್ಷಣೆ ಅತ್ಯವಶ್ಯಕವಾಗಿದೆ. ಪ್ರತಿಯೊಬ್ಬ ರೈತರು ಕೇವಲ ಗಿಡ ಕಡಿಯುವುದನ್ನು ಮಾತ್ರ ಮಾಡದೆ ಪ್ರತಿ ಎಕರೆ ಭೂಮಿಗೆ ಕನಿಷ್ಠ ೧೦ ಗಿಡಗಳನ್ನು ನೆಡಬೇಕು ಎಂದು ತಿಳಿಸಿದರು.
ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ.ಮೋಹನ ಚವ್ಹಾಣ ಅವರು ಮಾತನಾಡಿ, ಗಿಡಗಳನ್ನು ನೆಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ನಾವು ಉಸಿರಾಡುವ ಗಾಳಿ ಶುದ್ಧವಾಗಿರಬೇಕೆಂದರೆ ಮರಗಳು ಅಗತ್ಯ. ಈಗಾಗಲೇ ನೀರಿಗಾಗಿ ಹಾಹಾಕಾರ ಉಂಟಾಗುತ್ತಿದೆ. ಮುಂದಿನ ದಿನಗಳಲ್ಲಿ ಉಸಿರಾಡಲು ಶುದ್ಧ ಗಾಳಿಯೂ ದೊರೆಯದಿದ್ದರೆ ಜೀವಸಂಕುಲಗಳ ಬದುಕು ವಿನಾಶದೆಡೆಗೆ ಸಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ರೈತರು ಆದಷ್ಟು ಮಟ್ಟಿಗೆ ತಮಗೆ ಅವಶ್ಯಕ ಬೆಳೆಗಳನ್ನು ಬೆಳೆಯದೇ, ಇತರೆ ಪ್ರಾಣಿ- ಪಕ್ಷಿಗಳಿಗೆ ಸಹಾಯಕವಾಗುವ ಮತ್ತು ಮುಂದಿನ ಪೀಳಿಗೆಗೆ ಕೊಡಬಹುದಾದ ಗಿಡಗಳನ್ನು ಬೆಳೆಸಬೇಕು. ಅಮೂಲ್ಯ ಸಂಪತ್ತಾದ ಕಾಡನ್ನು ಎಲ್ಲರೂ ಸಂರಕ್ಷಿಸೋಣ ಎಂದು ಸಲಹೆ ನೀಡಿದರು.
ರೈತರಿಗೆ ಹಿಂಗಾರು ಹಂಗಾಮಿನ ಬೆಳೆಗಳ ಬಿತ್ತನೆ ತಯಾರಿ, ಬೀಜೋಪಚಾರ, ಸಸ್ಯ ಸಂರಕ್ಷಣೆ ಮುಂಜಾಗ್ರತೆಗಳ ಮಾಹಿತಿ ಮತ್ತು ಪ್ರಸಕ್ತ ಹತ್ತಿ, ತೊಗರಿ ಹಾಗೂ ಭತ್ತ ಬೆಳೆಗಳ ಬಗ್ಗೆಯೂ ಸಹ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಂಜಲಾಪೂರ, ಕವಡಿಮಟ್ಟಿ, ಗುಡಿಹಾಳ ಮತ್ತು ಚಂದಲಾಪೂರ ಗ್ರಾಮದ ರೈತರು ಭಾಗವಹಿಸಿದ್ದರು. ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಸಂಶೋಧನಾ ಕೇಂದ್ರದ ಡಾ.ಮಹೇಶ, ಶ್ರಿÃದೇವಿ, ಸುಮಂಗಲಾ, ಮಾಳಗಿ, ಮಲ್ಲಿಕಾರ್ಜುನ ಸ್ವಾಮಿ, ಶಶಿಧರ ರೆಡ್ಡಿ, ಸುರೇಶ ಮತ್ತು ಇತರೆ ಕಾರ್ಮಿಕ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...