ನಾಳೆ ಜಿಲ್ಲಾಧಿಕಾರಿಗಳಿಂದ ಫೋನ್ ಇನ್ ಕಾರ್ಯಕ್ರಮ
ಯಾದಗಿರಿ, ನವೆಂಬರ್ 30 (ಕರ್ನಾಟಕ ವಾರ್ತೆ): “ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ” ಯೋಜನೆಯ ಕುರಿತಂತೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಡಿಸೆಂಬರ್ 2ರಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯ ಸಾರ್ವಜನಿಕರು ಯೋಜನೆಯ ಬಗ್ಗೆ ಸಂಶಯಗಳಿದ್ದರೆ ನೇರವಾಗಿ ಮೊ:9449933946 ಸಂಖ್ಯೆಗೆ ಕರೆ ಮಾಡಿ ಮುಕ್ತವಾಗಿ ಮಾತನಾಡಿ ತಿಳಿದುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಪತ್ರಿಕೋದ್ಯಮ ಅಭ್ಯರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ
ಯಾದಗಿರಿ, ನವೆಂಬರ್ 30 (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಯಾದಗಿರಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಿಂದ 2019-20ನೇ ಸಾಲಿನ ವಿಶೇಷ ಘಟಕ ಉಪಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ನೀಡಲು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀμï ಭಾμÉಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಬೇರೆ ಯಾವುದೇ ಉದ್ಯೋಗ ಮಾಡಬಾರದು. 10 ತಿಂಗಳ ತರಬೇತಿ ಇದಾಗಿದ್ದು, ಆಯ್ಕೆಯಾದ ಇಬ್ಬರು ಅಭ್ಯರ್ಥಿಗಳಿಗೆ ಮಾಸಿಕವಾಗಿ ತಲಾ 15,000 ರೂ.ಗಳ ಶಿಷ್ಯವೇತನ ನೀಡಲಾಗುವುದು.
ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯವರಾಗಿರಬೇಕು. ಒಂದು ವೇಳೆ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ದೈಹಿಕವಾಗಿ ಸದೃಢರಾಗಿರಬೇಕು. ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಡಿಸೆಂಬರ್ 5ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ (ಮಿನಿ ವಿಧಾನಸೌಧ), “ಬಿ” ಬ್ಲಾಕ್, ಮೊದಲನೇ ಮಹಡಿ, ಕೊಠಡಿ ಸಂಖ್ಯೆ: ಬಿ2ಎ, ಬಿ2ಬಿ ಹಾಗೂ ಬಿ3, ಚಿತ್ತಾಪುರ ರಸ್ತೆ, ಯಾದಗಿರಿ-585202, ದೂ:08473-253722, ಇ-ಮೇಲ್: varthabhavanyadagiri@gmail.com ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಮಿಕ ಬಂಧುಗಳ ನೇಮಕಕ್ಕೆ ಅರ್ಜಿ ಆಹ್ವಾನ
ಯಾದಗಿರಿ, ನವೆಂಬರ್ 30 (ಕರ್ನಾಟಕ ವಾರ್ತೆ): ಕಾರ್ಮಿಕ ಇಲಾಖೆ ಮತ್ತು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗಳ ಯೋಜನೆ ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ಒಗ್ಗೂಡಿಸಿ ಒಂದೇ ಸೂರಿನಡಿ (Umbrella Scheme) ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಎಂಬ ಯೋಜನೆಯನ್ನು ರೂಪಿಸಿದ್ದು, ಕಾರ್ಮಿಕ ಬಂಧುಗಳ ಮುಖೇನ ಇಲಾಖೆಯು ಅನುಷ್ಠಾನಗೊಳಿಸಲಿದೆ. ಈ ಕಾರ್ಮಿಕ ಬಂಧುಗಳನ್ನು ನೇಮಕ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಮಿಕ ಬಂಧುಗಳು ನಗರ ಪ್ರದೇಶದ ವಾರ್ಡ್‍ಗಳ ವ್ಯಾಪ್ತಿಯಲ್ಲಿ ಹಾಗು ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಏಕವ್ಯಕ್ತಿ ಸಂಸ್ಥೆಯಂತೆ ಸ್ವಯಂಸೇವಕರಾಗಿ ಕಮೀಷನ್ ಆಧಾರದ ಮೇಲೆ ಕಾರ್ಯನಿರ್ವಹಿಸಲಿದ್ದು, ಇವರು ಕಾರ್ಮಿಕರನ್ನು ಸಶಕ್ತರನ್ನಾಗಿ ಮಾಡಿ ಅವರ ಉನ್ನತೀಕರಣಕ್ಕಾಗಿ ಕೆಲಸ ಮಾಡಲಿದ್ದಾರೆ. ಅಸಂಘಟಿತ ಕಾರ್ಮಿಕರನ್ನು ಫಲಾನುಭವಿಗಳನ್ನಾಗಿ ನೋಂದಾಯಿಸಲು ವಿವಿಧ ಸೌಲಭ್ಯಗಳ ಕ್ಲೇಮ್ ಅರ್ಜಿಗಳನ್ನು ವಿಲೇವಾರಿ ಮಾಡಲು, ವಂತಿಗೆ ಸಂಗ್ರಹಿಸಿ ಮಂಡಳಿಗಳಿಗೆ ಪಾವತಿ ಮಾಡಲು, ಅರ್ಹ ನೋಂದಾಯಿತ ಕಾರ್ಮಿಕರು ಸ್ಮಾರ್ಟ್ ಕಾರ್ಡ್‍ನ್ನು ಪಡೆಯಲು, ಕಾರ್ಮಿಕರು ಮತ್ತು ಅಧಿಕಾರಿಗಳಿಗೆ ಸಹಕಾರ ನೀಡುವುದು ಮತ್ತು ಅಸಂಘಟಿತ ಕಾರ್ಮಿಕರಿಗೆ ಅರಿವು ಮೂಡಿಸಲು ನೆರವಾಗುವುದರ ಜೊತೆಗೆ ಅಸಂಘಟಿತ ಕಾರ್ಮಿಕರ ಸರ್ವತೋಮುಖ ಏಳಿಗೆಗೆ ಶ್ರದ್ಧೆಯಿಂದ ಶ್ರಮಿಸುವುದು, ಮುಂತಾದ ತತ್ಸಂಬಂಧ ಕೆಲಸ ಕಾರ್ಯಗಳನ್ನು ಕಾರ್ಮಿಕ ಬಂಧುಗಳು ನಿರ್ವಹಿಸಬೇಕಾಗುತ್ತದೆ.
ಅರ್ಹತೆ ಮತ್ತು ವಿದ್ಯಾರ್ಹತೆ: ಅವನು / ಅವಳು ಅಂಗೀಕೃತ ಶೈಕ್ಷಣಿಕ ಸಂಸ್ಥೆ, ಮಂಡಳಿಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ನಿರುದ್ಯೋಗಿ ಅಸಂಘಟಿತ ಕಾರ್ಮಿಕರನ್ನು ಸಹ ಪರಿಗಣಿಸಲಾಗುವುದು. ಕಾರ್ಮಿಕ ಬಂಧುವಾಗಿ ಆಯ್ಕೆಯಾಗುವ ಗ್ರಾಮ ಪಂಚಾಯಿತಿ ಅಥವಾ ಪಟ್ಟಣದ ವ್ಯಾಪ್ತಿಯಲ್ಲಿ ನೆಲಸಿದವರಾಗಿರಬೇಕು. ವಯೋಮಿತಿ 21ರಿಂದ 35 ವರ್ಷ ಇದ್ದು, ದ್ವಿಚಕ್ರ ವಾಹನ, ಡ್ರೈವಿಂಗ್ ಲೈಸೆನ್ಸ್ ಮತ್ತು ಸ್ಮಾರ್ಟ್ ಫೋನ್ ಹೊಂದಿರಬೇಕು ಹಾಗು ಕನಿಷ್ಠ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಕಮೀಷನ್ ಆಧಾರದ ಮೇಲೆ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲು ಸಿದ್ಧರಿರಬೇಕು.
ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ ಅಂದಾಜು ಕನಿಷ್ಠ 1000 ಹಾಗೂ ನಗರ ಪ್ರದೇಶದ ಅಸಂಘಟಿತ ಕಾರ್ಮಿಕರು ಲಭ್ಯವಿರುವ ಸ್ಥಳಗಳಲ್ಲಿ ಒಬ್ಬರಂತೆ ಪ್ರತಿ 5ರಿಂದ 10 ವಾರ್ಡ್‍ಗಳಿಗೆ ತಲಾ ಒಬ್ಬರಂತೆ ಕಾರ್ಮಿಕ ಬಂಧುವನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಜಿಲ್ಲೆಯ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ, ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 6ರೊಳಗಾಗಿ ಕಾರ್ಮಿಕ ಇಲಾಖೆಗೆ ಸಲ್ಲಿಸತಕ್ಕದ್ದು ಎಂದು ಅವರು ತಿಳಿಸಿದ್ದಾರೆ.