ಗುರುವಾರ, ನವೆಂಬರ್ 21, 2019

ಹುಂಡೇಕಲ್ ಗ್ರಾಮಕ್ಕೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ
ಯಾದಗಿರಿ, ನವೆಂಬರ್ ೨೦ (ಕರ್ನಾಟಕ ವಾರ್ತೆ): ಶಹಾಪುರ ತಾಲ್ಲೂಕಿನ ಹುಂಡೇಕಲ್ ಗ್ರಾಮದ ಶಾಲೆ ಹಾಗೂ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಬುಧವಾರ ಅನಿರೀಕ್ಷಿತ ಭೇಟಿ ನೀಡಿದರು.

ಶಾಲೆಯಲ್ಲಿನ ಮಕ್ಕಳ ಹಾಜರಾತಿ ಹಾಗೂ ಶಿಕ್ಷಕರ ವಿವರ ಪಡೆದ ಜಿಲ್ಲಾಧಿಕಾರಿಗಳು, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು ಶ್ರಮಿಸಬೇಕು. ಓದಿನಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ವಿಶೇಷ ಗಮನಹರಿಸಿ ಬೋಧನೆ ಮಾಡಬೇಕು. ಮಕ್ಕಳಲ್ಲಿನ ಕಲಿಕಾ ಮಟ್ಟವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ನಂತರ ಹುಂಡೇಕಲ್ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...