ವಿಕಲಚೇತನರ ಕ್ರೀಡಾಕೂಟ
ಯಾದಗಿರಿ, ನವೆಂಬರ್ ೨೫ (ಕರ್ನಾಟಕ ವಾರ್ತೆ): ವಿಕಲಚೇತನರು ಕೂಡ ಎಲ್ಲರಂತೆ ಸ್ಪರ್ಧೆ ಮಾಡುವ ಸಾಮರ್ಥ್ಯ ಹೊಂದಿರುತ್ತಾರೆ. ವಿಕಲಚೇತನರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಅವರಲ್ಲಿ ಸಹ ಆತ್ಮಸ್ಥೆöÊರ್ಯ ಬರುತ್ತದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಶರಣಪ್ಪ ಪಾಟೀಲ್ ಅವರು ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರಿಗಾಗಿ ಏರ್ಪಡಿಸಿದ್ದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಚುಟುವಟಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವು ಸಹ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಡಿಸೆಂಬರ್ ೩ರಂದು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ದಿನಾಚರಣೆ ಪ್ರಯುಕ್ತ ವಿಕಲಚೇತನರಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರಾದ ಅಜೀತ್ ದೋಖಾ, ಸುಭಾಸ ವಕೀಲ, ತಾಲ್ಲೂಕು ಮಟ್ಟದ ಅಂಗವಿಕಲರ ಹೋರಾಟ ಅಧ್ಯಕ್ಷರಾದ ಸಾಹೇಬ ಜಾನಿ ಅವರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಇಲಾಖೆ ಸಿಬ್ಬಂದಿಗಳಾದ ನಾಗಮ್ಮ ಜಕಾತಿ, ರಾಧಾ ಜಿ, ಶರಣಪ್ಪ, ಅಬ್ದುಲ್, ಮಲ್ಲಯ್ಯ, ತಿಪ್ಪಣ್ಣ ಹಾಗೂ ವಿ.ಆರ್.ಡಬ್ಲೂö್ಯ ಮತ್ತು ಎಮ್.ಆರ್.ಡಬ್ಲೂö್ಯ ರವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ