ಬುಧವಾರ, ನವೆಂಬರ್ 27, 2019

ಸಂವಿಧಾನ ದಿನಾಚರಣೆ: ಪ್ರತಿಜ್ಞಾವಿಧಿ ಸ್ವೀಕಾರ
ಯಾದಗಿರಿ, ನವೆಂಬರ್ ೨೬ (ಕರ್ನಾಟಕ ವಾರ್ತೆ): ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಂವಿಧಾನದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ಸಂವಿಧಾನ ಗೌರವಿಸುವುದು ನಮ್ಮ ಕರ್ತವ್ಯ
-ನ್ಯಾಯಾಧೀಶರಾದ ಶ್ರೀ ಶಿವನಗೌಡ
ಯಾದಗಿರಿ, ನವೆಂಬರ್ ೨೬ (ಕರ್ನಾಟಕ ವಾರ್ತೆ): ನಮ್ಮ ದೇಶದ ಪ್ರಜೆಗಳ ಹಿತ ರಕ್ಷಣೆಗಾಗಿ ಹಾಗೂ ಅವರ ಹಕ್ಕುಗಳ ಸಂರಕ್ಷಣೆಗಾಗಿ ಭಾರತ ಸಂವಿಧಾನ ರಚನೆಯಾಗಿದೆ. ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಹಾಗೂ ಅದನ್ನು ಗËರವಿಸುವುದು ನಮ್ಮ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಶಿವನಗೌಡ ಅವರು ಹೇಳಿದರು.
ನಗರದ ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ “ಸಂವಿಧಾನ ದಿನ” ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು- ನೆರವು ಕಾರ್ಯಕ್ರಮ ಮತ್ತು ಅಭಿಯಾನವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಭಾರತದ ಪ್ರಜೆಗಳಾದ ನಮಗೆ ನಮ್ಮ ಸವಿಂಧಾನವು ಅಮೂಲ್ಯವಾದ ಮೂಲ¨ ಹಕ್ಕುಗಳನ್ನು ನೀಡಿದೆ. ಅಲ್ಲದೆ ಮೂಲ¨ ಕರ್ತವ್ಯಗಳನ್ನು ನೀಡಿದ್ದು, ಅದನ್ನು ಪಾಲಿಸುವ ಹಾಗೂ ಗೌರವಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಪ್ರಜೆಯ ಮೇಲಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಪ್ರಕಾಶ ಅರ್ಜುನ ಬನಸೊಡೆ ಅವರು ಸಂವಿಧಾನದ ಮುನ್ನುಡಿಯನ್ನು ಓದಿ ಹೇಳಿದರು ಹಾಗೂ ಮೂಲ¨ ಹಕ್ಕುಗಳು ಮತ್ತು ಮೂಲ¨ ಕರ್ತವ್ಯ ಕುರಿತು ಉಪನ್ಯಾಸ ನೀಡಿದರು.
ರಾಷ್ಟಿçಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಜಿಲ್ಲಾ ಪ್ರಾಧಿಕಾರವು “ಸಂವಿಧಾನ ದಿನ” ಅಂಗವಾಗಿ ಮೂಲ¨ ಹಕ್ಕುಗಳು ಮತ್ತು ಮೂಲ¨ ಕರ್ತವ್ಯದ ಕುರಿತು ಜಿಲ್ಲೆಯಾದ್ಯಂತ ನವೆಂಬರ್ ೨೬ರಿಂದ ೨೦೨೦ರ ನವೆಂಬರ್ ೨೬ರವರೆಗೆ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ ಅವರು ಕಾರ್ಯಕ್ರಮದ ಅದs್ಯಕ್ಷತೆ ವಹಿಸಿದ್ದರು. ವಕೀಲರಾದ ಮಹಿಪಾಲರೆಡ್ಡಿ ಅವರು ಉಪನ್ಯಾಸ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಗೌರವಾನ್ವಿತ ಶ್ರೀ ನಾಮದೇವ ಕೆ.ಸಾಲಮಂಟಪಿ, ಸಿವಿಲ್ ನ್ಯಾಯಾಧೀಶರಾದ ಶ್ರೀ ಲೋಕೇಶ್ ಧನಪಾಲ ಹವಲೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಸ್ಮೀತಾ ಮಾಲಗಾಂವೆ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್. ಮಾಲಿಪಾಟೀಲ್, ಜವಾಹರ ಕಾನೂನು ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶೇಖ ಲಾಯಕ ಅಲಿ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ನಾಗಯ್ಯ ಗುತ್ತೇದಾರ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ ಕುಲಕರ್ಣಿ, ಜಂಟಿ ಕಾರ್ಯದರ್ಶಿ ವಿಜಯಕುಮಾರ ಕೊಂಕಲ್, ಖಜಾಂಚಿ ಪರಶುರಾಮ ಅವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...