ಮಂಗಳವಾರ, ನವೆಂಬರ್ 26, 2019

ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ
ಯಾದಗಿರಿ, ನವೆಂಬರ್ ೨೫ (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಯಾದಗಿರಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಿಂದ ೨೦೧೯-೨೦ನೇ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ನೀಡಲು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಯು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಬೇರೆ ಯಾವುದೇ ಉದ್ಯೋಗ ಮಾಡಬಾರದು. ೧೦ ತಿಂಗಳ ತರಬೇತಿ ಇದಾಗಿದ್ದು, ಆಯ್ಕೆಯಾದ ಇಬ್ಬರು ಅಭ್ಯರ್ಥಿಗಳಿಗೆ ಮಾಸಿಕವಾಗಿ ತಲಾ ೧೫,೦೦೦ ರೂ.ಗಳ ಶಿಷ್ಯವೇತನ ನೀಡಲಾಗುವುದು.
ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯವರಾಗಿರಬೇಕು. ಒಂದು ವೇಳೆ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಡಿಸೆಂಬರ್ ೫ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ (ಮಿನಿ ವಿಧಾನಸೌಧ), “ಬಿ” ಬ್ಲಾಕ್, ಮೊದಲನೇ ಮಹಡಿ, ಕೊಠಡಿ ಸಂಖ್ಯೆ: ಬಿ೨ಎ, ಬಿ೨ಬಿ ಹಾಗೂ ಬಿ೩, ಚಿತ್ತಾಪುರ ರಸ್ತೆ, ಯಾದಗಿರಿ-೫೮೫೨೦೨, ದೂ:೦೮೪೭೩-೨೫೩೭೨೨, ಇಮೇಲ್: varthabhavanyadagiri@gmail.com ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...