ಬುಧವಾರ, ನವೆಂಬರ್ 27, 2019

ಡಿ.೩ರಂದು ವಿಶ್ವ ವಿಕಲಚೇತನರ ದಿನಾಚರಣೆ
ಯಾದಗಿರಿ, ನವೆಂಬರ್ ೨೭ (ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಎಲ್ಲಾ ಸಂಘ- ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ೨೦೧೯-೨೦ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಡಿಸೆಂಬರ್ ೩ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಶಿವನಗೌಡ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಪ್ರಕಾಶ ಅರ್ಜುನ ಬನಸೊಡೆ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚೋಲಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ ಅವರು ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಅವರು ಭಾಗವಹಿಸುವರು.
ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ
ಯಾದಗಿರಿ, ನವೆಂಬರ್ ೨೭ (ಕರ್ನಾಟಕ ವಾರ್ತೆ): ಯಾದಗಿರಿ ಉಪವಿಭಾಗದಲ್ಲಿ ೨೦೧೫-೧೬ರಲ್ಲಿ ನೋಂದಣಿಯಾದ ಮತ್ತು ನವೀಕರಿಸಿದ ಎಲ್ಲಾ ಹಣಕಾಸು ಸಂಸ್ಥೆಗಳ ಲೇವಾದೇವಿಗಾರರು ಮತ್ತು ಗಿರವಿದಾರರ ಪರವಾನಗಿಗಳನ್ನು ದಿ:೦೧-೦೪-೨೦೨೦ ರಿಂದ ೩೧-೦೩-೨೦೨೫ರ ಅವಧಿಗಾಗಿ ನವೀಕರಣ ಅರ್ಜಿಗಳನ್ನು ಕರ್ನಾಟಕ ಮನಿಲೆಂಡಿAಗ್ ಕಾಯ್ದೆ- ೧೯೬೫ ನಿಯಮ ೫(೨) ರನ್ವಯ ಅಗತ್ಯ ದಾಖಲೆಗಳೊಂದಿಗೆ ೨೦೨೦ರ ಜನವರಿ ೩೧ರೊಳಗಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
ಲೇವಾದೇವಿ ಪರವಾನಗಿ ಶುಲ್ಕ ೫೦೦೦ ರೂ. ಮತ್ತು ಗಿರಿವಿದಾರರಿಗೆ ಪರವಾನಗಿ ಶುಲ್ಕ ೨೫೦೦ ರೂ.(೫ ವರ್ಷದ ಅವಧಿಗಾಗಿ) ಲೆಕ್ಕ ಶೀರ್ಷಿಕೆ ೧೪೭೫-೦೦-೨೦೦-೦೧ರಡಿ ಚಲನ ಮೂಲಕ ಕರ್ನಾಟಕ ಎಸ್.ಬಿ.ಐ ಯಾದಗಿರಿಯಲ್ಲಿ ನವೀಕರಣ ತುಂಬಿ, ಚಲನಿನ ಪ್ರತಿ ನವೀಕರಣ ಪ್ರಸ್ತಾವನೆಯೊಂದಿಗೆ ಮುದ್ದಾಂ ಸಲ್ಲಿಸಬೇಕು.
ಶಾಖೆಗಳನ್ನು ಹೊಂದಿದ ಹಣಕಾಸು ಸಂಸ್ಥೆಯವರು ೨೫೦೦ ರೂ. ಪರವಾನಗಿ ಶುಲ್ಕವನ್ನು ಪ್ರತ್ಯೇಕವಾಗಿ ಭರಿಸಬೇಕು. ೨೦೨೦ರ ಜನವರಿ ೩೧ರ ನಂತರ ಬಂದ ಅರ್ಜಿಗಳನ್ನು ಕಲಂ (೪)ರ ಪ್ರಕಾರ ಶುಲ್ಕದೊಂದಿಗೆ ೫ ಸಾವಿರ ರೂ. ದಂಡ ವಸೂಲಿ ಮಾಡಲಾಗುವುದು. ಸಂಸ್ಥೆಯ ಮೂಲ ಲೇವಾದೇವಿ ಪರವಾನಗಿ ಮತ್ತು ನಕಲು ಪ್ರತಿ ಸಲ್ಲಿಸಬೇಕು. ಪಾಲುದಾರರ ಡೀಡ್ ಬದಲಾವಣೆಗೊಂಡಿದ್ದಲ್ಲಿ ನಕಲು ಪ್ರತಿ ಮತ್ತು ೩೧-೦೩-೨೦೧೬ರವರೆಗಿನ ಆಡಿಟ್ ವರದಿಯನ್ನು ಲಗತ್ತಿಸಬೇಕು.
ಏಪ್ರಿಲ್- ೨೦೧೯ರಿಂದ ಜನವರಿ- ೨೦೨೦ರ ವರೆಗಿನ ೧೦ ತಿಂಗಳವಾರು ಸಾಲ ವಿಚಾರಣೆ, ಸಾಲ ವಸೂಲಿ ಹಾಗೂ ಪ್ರತಿ ತಿಂಗಳ ಕೊನೆಯಲ್ಲಿ ಬಾಕಿ ಉಳಿದಿರುವ ಬಗ್ಗೆ ತಃಖ್ತೆಯನ್ನು ದ್ವಿಪ್ರತಿಗಳಲ್ಲಿ ಲಗತ್ತಿಸಬೇಕು. ತಪ್ಪಿದಲ್ಲಿ ಲೇವಾದೇವಿ ಕಾಯ್ದೆ ಪ್ರಕಾರ ಹಣಕಾಸು ಸಂಸ್ಥೆಯ ಪರವಾನಿಗೆ ರದ್ದುಪಡಿಸಲು ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ:೯೮೮೬೦೧೪೨೭೮ ಸಂಪರ್ಕಿಸಬಹುದು ಎಂದು ಯಾದಗಿರಿ ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...