ಶುಕ್ರವಾರ, ನವೆಂಬರ್ 22, 2019

ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ಮುಂದೂಡಿಕೆ
ಯಾದಗಿರಿ, ನವೆಂಬರ್ ೨೨ (ಕರ್ನಾಟಕ ವಾರ್ತೆ): ಯಾದಗಿರಿ ಜಿಲ್ಲಾ ಪಂಚಾಯಿತಿಯ ಮೂರನೇಯ ಅವಧಿಗೆ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರನ್ನು ಆಯ್ಕೆ ಮಾಡಲು ನವೆಂಬರ್ ೨೫ರಂದು ನಿಗದಿಪಡಿಸಿದ್ದ ಚುನಾವಣೆ ಸಭೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಯಚೂರು ಮತ್ತು ಕಲಬುರಗಿ ಲೋಕಸಭಾ ಸದಸ್ಯರು ತಾವು ಲೋಕಸಭಾ ಅಧಿವೇಶನಕ್ಕೆ ಹಾಜರಾಗುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನ ಇಲ್ಲದ ದಿನಾಂಕದAದು ಸದರಿ ಚುನಾವಣೆಯನ್ನು ನಿಗದಿಪಡಿಸಲು ಪತ್ರ ಸಲ್ಲಿಸಿರುತ್ತಾರೆ. ಆದ್ದರಿಂದ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಚುನಾವಣೆಯ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು  ಅವರು ತಿಳಿಸಿದ್ದಾರೆ.
ನ.೨೫ರಂದು ವಿಕಲಚೇತನರ ಕ್ರೀಡಾಕೂಟ
ಯಾದಗಿರಿ, ನವೆಂಬರ್ ೨೨ (ಕರ್ನಾಟಕ ವಾರ್ತೆ): ೨೦೧೯-೨೦ನೇ ಸಾಲಿನ ಜಿಲ್ಲಾ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ನವೆಂಬರ್ ೨೫ರಂದು ಬೆಳಿಗ್ಗೆ ೧೧ ಗಂಟೆಗೆ ವಿಕಲಚೇತನರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲ್ಲಿ ಹಮ್ಮಿಕೊಳ್ಳಲಾಗಿದೆ.
ಆಸಕ್ತಿವುಳ್ಳ ವಿಕಲಚೇತನರು ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಚುಟುವಟಿಕೆಯಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ದೂ:೦೮೪೭೩-೨೫೩೫೩೧ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.
ಗೋಶಾಲೆಗೆ ಬಿಡಾಡಿದನಗಳ ಸಾಗಣೆ
ಯಾದಗಿರಿ, ನವೆಂಬರ್ ೨೨ (ಕರ್ನಾಟಕ ವಾರ್ತೆ): ಯಾದಗಿರಿ ನಗರಸಭೆ ವ್ಯಾಪ್ತಿಯ ರಸ್ತೆಗಳ ಮೇಲೆ ಬಿಡಾಡಿ ದನಗಳು ಎಲ್ಲೆಂದರಲ್ಲಿ ಮಲಗುತ್ತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಬಹಳಷ್ಟು ದೂರು ಬಂದಿರುವ ಕಾರಣ ನ.೧೭ರಂದು ರಾತ್ರಿ ವೇಳೆಯಲ್ಲಿ ಕಾರ್ಯಾಚರಣೆ ನಡೆಸಿ, ರಸ್ತೆ ಮೇಲೆ ಕಂಡುಬAದ ಬಿಡಾಡಿ ದನಗಳನ್ನು ಗೋಶಾಲೆಗೆ ಸಾಗಿಸಲಾಗಿದೆ ಎಂದು ಪೌರಾಯುಕ್ತರಾದ ರಮೇಶ ಸುಣಗಾರ ಅವರು ತಿಳಿಸಿದ್ದಾರೆ.
ಬಿಡಾಡಿ ದನಗಳ ಮಾಲೀಕರು ತಮ್ಮ ದನಗಳನ್ನು ರಸ್ತೆಯ ಮೇಲೆ ಬಿಡಬಾರದು. ಇಲ್ಲವಾದಲ್ಲಿ ಯಾವುದೇ ಮುನ್ಸೂಚನೆಯನ್ನು ನೀಡದೆ ಬಿಡಾಡಿ ದನಗಳಗಳನ್ನು ವಶಕ್ಕೆ ಪಡೆದುಕೊಳ್ಳುವ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
೪೮ ಸಹಕಾರ ಸಂಘ ಸಮಾಪನೆ: ಆಕ್ಷೇಪಣೆ ಆಹ್ವಾನ
ಯಾದಗಿರಿ, ನವೆಂಬರ್ ೨೨ (ಕರ್ನಾಟಕ ವಾರ್ತೆ): ಸುರಪುರ ಹಾಗೂ ಹುಣಸಗಿ ತಾಲ್ಲೂಕಿನ ವಿವಿಧ ಪ್ರಕಾರದ ಒಟ್ಟು ೪೮ ಸಹಕಾರ ಸಂಘಗಳು ಕಾರ್ಯನಿರತವಾಗಿರದೆ ಸುಮಾರು ವರ್ಷಗಳಿಂದ ಸ್ಥಗಿತಗೊಂಡಿವೆ. ಸಹಕಾರ ಅಭಿವೃದ್ಧಿ ಅಧಿಕಾರಿ ಕಾರ್ಯಾಲಯಕ್ಕೆ ಯಾವುದೇ ವರದಿ ಹಾಗೂ ಶಾಸನಬದ್ಧ ಲೆಕ್ಕ ಪರಿಶೋಧನಾ ವರದಿಗಳನ್ನು ಸಲ್ಲಿಸದೇ ಇರುವುದರಿಂದ ಸದರಿ ೪೮ ಸಹಕಾರ ಸಂಘಗಳನ್ನು ಸಮಾಪನೆಗೊಳಿಸಲು ತೀರ್ಮಾನಿಸಲಾಗಿದೆ.
ಈ ಸಂಬ0ಧ ಆಕ್ಷೇಪಣೆ ಸಲ್ಲಿಸಬಯಸುವವರು ಪ್ರಕಟಣೆ ಹೊರಡಿಸಿದ ೭ ದಿನಗಳೊಳಗಾಗಿ ಸಹಕಾರ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಯನ್ನು ಸಲ್ಲಿಸಬಹುದು. ಒಂದು ವೇಳೆ ನಿಗದಿತ ಅವಧಿಯೊಳಗಾಗಿ ಆಕ್ಷೇಪಣೆಗಳು ಸ್ವೀಕೃತವಾಗದಿದ್ದಲ್ಲಿ ಯಾವುದೇ ಆಕ್ಷೇಪಣೆಗಳಿರುವುದಿಲ್ಲ ಎಂದು ಪರಿಗಣಿಸಿ ಸಮಾಪನೆಗೆ ಕ್ರಮವಿಡಲಾಗುವುದು. ೪೮ ಸಹಕಾರ ಸಂಘಗಳ ವಿವಿರವಾದ ಪಟ್ಟಿಯನ್ನು ಹುಣಸಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಕಚೇರಿ ಹಾಗೂ ಯಾದಗಿರಿ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಮತ್ತು ಯಾದಗಿರಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ಸೂಚನಾ ಫಲಕಗಳಲ್ಲಿ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಹುಣಸಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...