ಮಂಗಳವಾರ, ನವೆಂಬರ್ 26, 2019

ಇಂದು ಅಡಿಗಲ್ಲು ಸಮಾರಂಭ
ಯಾದಗಿರಿ, ನವೆಂಬರ್ ೨೬ (ಕರ್ನಾಟಕ ವಾರ್ತೆ): ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ೨೦೧೯-೨೦ನೇ ಸಾಲಿನ ೫೦೫೪ ಅಪೆಂಡಿಕ್ಸ್-ಇ ಯೋಜನೆಯಡಿಯಲ್ಲಿ ಗುರುಮಠಕಲ್ ತಾಲ್ಲೂಕಿನ ಅರಕೇರಾ- ಮೋಟ್ನಳ್ಳಿ ರಸ್ತೆ ಕಿ.ಮೀ. ೬.೫೦ರಿಂದ ೧೧.೭೦ರ ವರೆಗೆ ೫ ಕೋಟಿ ರೂ. ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಯ ಅಡಿಗಲ್ಲು ಸಮಾರಂಭವನ್ನು ನವೆಂಬರ್ ೨೭ರಂದು ಬೆಳಿಗ್ಗೆ ೧೧ ಗಂಟೆಗೆ ಯಂಪಾಡ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಶಿಲಾನ್ಯಾಸ ನೆರವೇರಿಸುವರು. ಶಾಸಕರಾದ ನಾಗನಗೌಡ ಕಂದಕೂರ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಬಿ.ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಲೋಕಸಭಾ ಸದಸ್ಯರಾದ ಡಾ.ಉಮೇಶ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಯಂಪಾಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮುಂಜುಬಾಯಿ ಜೈಯಿಂದ್ರ ಚವ್ಹಾಣ್, ಜಿಲ್ಲಾ ಪಂಚಾಯಿತಿ ಕಂದಕೂರ ಕ್ಷೇತ್ರದ ಸದಸ್ಯರಾದ ಸರಸ್ವತಿ ಸುಭಾಷಚಂದ್ರ ಕಟಕಟಿ, ತಾಲ್ಲೂಕು ಪಂಚಾಯಿತಿ ಕಂದಕೂರ ಕ್ಷೇತ್ರದ ಸದಸ್ಯರಾದ ಈಶ್ವರ ಕೆ.ನಾಯ್ಕ್ ರಾಠೋಡ ಅವರು ಅತಿಥಿಗಳಾಗಿ ಭಾಗವಹಿಸುವರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...