ಮಂಗಳವಾರ, ಡಿಸೆಂಬರ್ 3, 2019

ಜನಸ್ನೇಹಿ ಪೊಲೀಸ್ ವ್ಯವಸ್ಥೆ ಸುಧಾರಿಸಲು ಫೋನ್-ಇನ್ ಕಾರ್ಯಕ್ರಮ
ಮಹಿಳಾ ಮತ್ತು ಮಕ್ಕಳ ಪ್ರಕರಣಗಳಿಗೆ ತಕ್ಷಣ ಸ್ಪಂದನೆ
-:ಋಷಿಕೇಶ್ ಭಗವಾನ್ ಸೋನವಣೆ
ಯಾದಗಿರಿ, ಡಿಸೆಂಬರ್ ೦೩ (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳಿಗೆ ಸಂಬ0ಧಿಸಿದ0ತಹ ಪ್ರಕರಣಗಳಿಗೆ ತಕ್ಷಣ ಸ್ಪಂದಿಸುವAತೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅಕ್ರಮ ಚಟುವಟಿಕೆ, ಸಂಶಯಾಸ್ಪದ ವ್ಯಕ್ತಿಗಳು ಕಂಡುಬAದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಷ್ ಭಗವಾನ್ ಸೋನವಣೆ ಅವರು ಹೇಳಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ ಮಧ್ಯೆ ಉತ್ತಮ ಸಂಪರ್ಕ ಬೆಳೆಯುವ ನಿಟ್ಟಿನಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಹಮ್ಮಿಕೊಂಡಿದ್ದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಅವರು ಮಾತನಾಡಿದರು.
ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಒಟ್ಟು ೧೩ ಕರೆಗಳು ಸ್ವೀಕೃತವಾಗಿದ್ದು, ೩ ಕರೆಗಳು ಸಿವೀಲ್ ವ್ಯಾಜ್ಯಕ್ಕೆ ಸಂಬAಧಿಸಿವೆ. ಈ ಕುಂದುಕೊರತೆಗಳನ್ನು ಪರಿಹರಿಸಲು ಸಂಬAಧಪಟ್ಟ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಲಾಗಿದೆ. ೪ ಕರೆಗಳು ಮರಳು ಅಕ್ರಮ ಸಾಗಾಣಿಕೆ, ಗ್ರಾಮಗಳಲ್ಲಿ ಮಟಕಾ, ಇಸ್ಪೀಟ್ ಜೂಜಾಟ ಹಾಗೂ ಗ್ರಾಮಗಳ ಹೊಟೇಲ್‌ಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಕುರಿತ ದೂರುಗಳಾಗಿದ್ದು, ಸೂಕ್ತ ಮಾಹಿತಿಯನ್ನು ಪಡೆದುಕೊಂಡು ದಾಳಿ ನಡೆಸಲಾಗುವುದು ಎಂದು ತಿಳಿಸಿದರು.
ಯಾದಗಿರಿ ನಗರದ ರೈಲ್ವೆ ಸ್ಟೇಷನ್, ಗಾಂಧಿಚೌಕ್ ಏರಿಯಾಗಳಲ್ಲಿ ಸಾರ್ವಜನಿಕರಿಗೆ ಸಂಚಾರ ತೊಂದರೆ ಹೆಚ್ಚಾಗುತ್ತಿದೆ. ಆಟೊ ಚಾಲಕರು ಸಂಚಾರಕ್ಕೆ ತೊಂದರೆ ಆಗುವಂತೆ ರಸ್ತೆ ಮಧ್ಯದಲ್ಲಿ ನಿಲ್ಲಿಸುತ್ತಾರೆ. ಅದೇ ರೀತಿ ಶಹಾಪೂರ ನಗರದ ಬಸವೇಶ್ವರ ವೃತ್ತ, ಭೀಮರಾಯನಗುಡಿ ರಸ್ತೆ ಹಾಗೂ ಯಾದಗಿರಿ ರಸ್ತೆಯ ಮಾರ್ಗಗಳಲ್ಲಿ ಎಲ್ಲೆಂದರಲ್ಲಿ ಆಟೋಗಳನ್ನು ನಿಲ್ಲಿಸಿ ಸಂಚಾರ ಸುವ್ಯವಸ್ಥೆಗೆ ಅಡಚಣೆಯಾಗುತ್ತಿರುವ ಬಗ್ಗೆ ೩ ಕರೆಗಳು ಗಮನ ಸೆಳೆದವು.
ಎಟಿಎಮ್‌ನಲ್ಲಿ ನಕಲಿ ದುಡ್ಡು ಬಂದಿದ್ದು, ಟಿಎಮ್‌ವಿ ಬ್ಯಾಂಕ್ ಅಧಿಕಾರಿಗಳೊಂದಿಗೆ ಕಿರಿಕಿರಿ ಮಾಡುತ್ತಿರುವ ಬಗ್ಗೆ ಹಾಗೂ ನಾರಾಯಣಪೂರ ಠಾಣೆಯಲ್ಲಿ ವರದಿಯಾದ ವಂಚನೆ ಪ್ರಕರಣಕ್ಕೆ ಸಂಬAಧಿssಸಿದ ದೂರಿನ ಕರೆಗಳು ದಾಖಲಾದವು. ವಿದ್ಯುತ್ ಮೀಟರ್ ಸುಟ್ಟು ಕರೆಂಟ್ ಬಿಲ್ಲು ಹೆಚ್ಚಿಗೆ ಬರುತ್ತಿದೆ ಎಂಬ ಅಹವಾಲು ಕೂಡ ದೋರನಹಳ್ಳಿ ಗ್ರಾಮದಿಂದ ಬಂತು. ಈ ಎಲ್ಲಾ ಕರೆಗಳಿಗೂ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ನಿರ್ದಿಷ್ಟ ಪ್ರಕರಣಗಳನ್ನು ತಕ್ಷಣ ಪರಿಹರಿಸಲು ಸಂಬAಧಪಟ್ಟ ಪೊಲೀಸ್ ಠಾಣೆಯ ಪಿ.ಎಸ್.ಐ ರವರಿಗೆ ಸೂಚನೆ ನೀಡಲಾಗುವುದು. ಬಾಕಿ ಪ್ರಕರಣಗಳನ್ನು ಹೆಚ್ಚಿನ ತನಿಖೆ ನಡೆಸಿ, ಪರಿಹಾರ ಕಲ್ಪಿಸಲಾಗುವುದು. ಸಮಸ್ಯೆಗಳನ್ನು ಪರಿಹರಿಸಲು ಖುದ್ದಾಗಿ ಜಿಲ್ಲಾ ಮಟ್ಟದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
೧೦ ಅಹವಾಲು ಇತ್ಯರ್ಥ: ಕಳೆದ ನವೆಂಬರ್ ೫ರಂದು ನಡೆಸಿದ ಫೋನ್ ಇನ್ ಕಾರ್ಯಕ್ರಮದಲ್ಲಿ ೧೮ ಕರೆಗಳು ಬಂದಿದ್ದು, ಇವುಗಳಲ್ಲಿ ಸುಮಾರು ೧೦ ಅಹವಾಲುಗಳಿಗೆ ಸಂಬAಧಿಸಿದAತೆ ಕ್ರಮ ಕೈಗೊಂಡು ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಉಳಿದಂತೆ ೮ ಅಹವಾಲುಗಳು ಜಮೀನು ಹಾಗೂ ಸಿವೀಲ್ ವ್ಯಾಜ್ಯಗಳ ವಿಷಯಕ್ಕೆ ಸಂಬAಧಿಸಿದ್ದು, ಸಮಸ್ಯೆ ಪರಿಹರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ೧೫ ಮಟಕಾ ಜೂಜಾಟ, ೭ ಇಸ್ಪೀಟ್ ಜೂಜಾಟ ಹಾಗೂ ೫ ಅಬಕಾರಿ ದಾಳಿಗಳನ್ನು ಕೈಗೊಂಡು ಅಹವಾಲಿನ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಹತ್ತಿ ಬೆಳೆ ಜೊತೆಗೆ ಗಾಂಜಾ ಬೆಳೆಯುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಠಾಣೆಗೆ ತಿಳಿಸುವಂತೆ ಅವರು ಈ ಸಂದರ್ಭದಲ್ಲಿ ಕೋರಿದರು.
ಯಾದಗಿರಿ ಡಿವೈಎಸ್‌ಪಿ ಯು.ಶರಣಪ್ಪ, ಸಿಪಿಐ ಶರಣಗೌಡ ನ್ಯಾಮಣ್ಣವರ್, ಜಿಲ್ಲಾ ಅಪರಾಧ ದಳದ ಸಿಪಿಐ ದೌಲತ್ ಎನ್.ಕೆ ಅವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...