ಸೋಮವಾರ, ಡಿಸೆಂಬರ್ 9, 2019

ಕೃಷಿಕ ಕ್ಷೇತ್ರಗಳ ಚುನಾವಣಾ ವೇಳಾಪಟ್ಟಿ ಪ್ರಕಟ
ಯಾದಗಿರಿ, ಡಿಸೆಂಬರ್ 09 (ಕರ್ನಾಟಕ ವಾರ್ತೆ): ಜಿಲ್ಲೆಯ ಕೃಷಿಕ ಮತಕ್ಷೇತ್ರಗಳ ಬಾಕಿ ಇರುವ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸುವ ಸಂಬಂಧ ಚುನಾವಣಾ ವೇಳಾಪಟ್ಟಿ ಹಾಗೂ ಚುನಾವಣೆ ತಿಳಿವಳಿಕೆ ಪತ್ರವನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ತಿಳಿಸಿದ್ದಾರೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಯಾದಗಿರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ 10-ಯಲ್ಹೇರಿ, 13-ಸಹಕಾರ ಮಾರುಕಟ್ಟೆ ವ್ಯವಹಾರ ಸಂಘ ಕ್ಷೇತ್ರ, ಶಹಾಪೂರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ 1-ಗೋಗಿಕೋನಾ, 2-ಮದ್ರಿಕಿ, 3-ಶಿರವಾಳ, 4-ಶಹಾಪೂರ, 5-ಸಗರÀ, 12-ವರ್ತಕರ ಕ್ಷೇತ್ರ ಮತ್ತು ಸುರುಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ 3-ಕೆಂಭಾವಿ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುವುದು.
ಜಿಲ್ಲೆಯ ಈ ಎಲ್ಲಾ ಕ್ಷೇತ್ರಗಳಿಗೆ ಡಿಸೆಂಬರ್ 9ರಿಂದ ಡಿ.16ರ ವರೆಗೆ ಸಾರ್ವಜನಿಕ ರಜಾದಿನ ಹೊರತುಪಡಿಸಿ ನಾಮಪತ್ರ ಸಲ್ಲಿಸಬಹುದು. ಡಿ.17ರಂದು ಬೆಳಿಗ್ಗೆ 11 ಗಂಟೆಯಿಂದ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿ.19ರಂದು ಮಧ್ಯಾಹ್ನ 3 ಗಂಟೆಯವರೆಗೆ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಬಹುದು. ಮತದಾನದ ಅವಶ್ಯವಿದ್ದರೆ ಡಿ.29ರಂದು ಬೆಳಿಗ್ಗೆ 7ರಿಂದ ಸಾಯಂಕಾಲ 5 ಗಂಟೆಯವರೆಗೆ ನಡೆಸಲಾಗುವುದು. ಡಿ.31ರಂದು ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರೋತ್ಸಾಹ ಧನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಯಾದಗಿರಿ, ಡಿಸೆಂಬರ್ 09 (ಕರ್ನಾಟಕ ವಾರ್ತೆ): 2019-20ನೇ ಸಾಲಿಗೆ ಐಐಎಮ್, ಐಐಟಿ, ಐಐಎಸ್‍ಸಿ, ಐಐಐಟಿಎಸ್, ಎನ್‍ಐಟಿಎಸ್, ಐಐಎಸ್‍ಇಆರ್‍ಎಸ್, ಎಐಐಎಮ್‍ಎಸ್, ಎನ್‍ಎಲ್‍ಯು, ಐಎಸ್‍ಎಮ್, ಐಐಪಿ, ಐಎಸ್‍ಐ, ಜೆಐಪಿಎಮ್‍ಇಆರ್, ಎಸ್‍ಪಿಎ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ:8050770004 ಹಾಗೂ ಇಲಾಖೆಯ ವೆಬ್‍ಸೈಟ್ www.backwardclasses.kar.nic.in ನ್ನು ನೋಡಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಾವಧಿ ಟೆಂಡರ್ ಆಹ್ವಾನ
ಯಾದಗಿರಿ, ಡಿಸೆಂಬರ್ 09 (ಕರ್ನಾಟಕ ವಾರ್ತೆ): 2019-20ನೇ ಸಾಲಿನ ಲಿಂಕ್ ಡಾಕುಮೆಂಟ್ ಅನುದಾನದಡಿ ಸರಕಾರಿ ಪ್ರೌಢ ಶಾಲೆಗಳಿಗೆ ಪೀಠೋಪಕರಣಗಳನ್ನು ಸರಬರಾಜು ಮಾಡಲು ಇ-ಪ್ರೊಕ್ಯೂರಮೆಂಟ್ ಪೋರ್ಟಲ್ ಮುಖಾಂತರ ಅಲ್ಪಾವಧಿ ಮರು ಟೆಂಡರ್ ಆಹ್ವಾನಿಸಲಾಗಿದೆ.
ಟೆಂಡರ್‍ನ ಒಟ್ಟು ಮೊತ್ತ 20 ಲಕ್ಷ ರೂ.ಗಳಿದ್ದು, ಡಿಸೆಂಬರ್ 16ರಂದು ಸಾಯಂಕಾಲ 5.30 ಗಂಟೆಯವರೆಗೆ ಅರ್ಹ ಸರ್ಕರೇತರ ಸಂಸ್ಥೆಯ ಏಜೆನ್ಸಿಗಳು ಟೆಂಡರ್ ಸಲ್ಲಿಸಬಹುದು. ಡಿ.19ರಂದು ಬೆಳಿಗ್ಗೆ 11 ಗಂಟೆಗೆ ತಾಂತ್ರಿಕ ಬಿಡ್ ತೆರೆಯಲಾಗುವುದು. ಡಿ.23ರಂದು ಬೆಳಿಗ್ಗೆ 11 ಗಂಟೆಗೆ ಆರ್ಥಿಕ ಬಿಡ್ ತೆರೆಯಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...