ಬುಧವಾರ, ಡಿಸೆಂಬರ್ 11, 2019

ಮಹತ್ವಾಕಾಂಕ್ಷೆ ಜಿಲ್ಲೆ ಅಭಿವೃದ್ಧಿಗೆ ಸಂಬ0ಧಿಸಿದ ಇಲಾಖೆಗಳ ಪ್ರಗತಿ ಪರಿಶೀಲನೆ
ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ಪ್ರಥಮ ಸ್ಥಾನ ಪಡೆಯಲು ಶ್ರಮಿಸಿ
-:ಜಿಲ್ಲೆಯ ನೋಡಲ್ ಅಧಿಕಾರಿ ಬಿ.ಆನಂದ್
ಯಾದಗಿರಿ, ಡಿಸೆಂಬರ್ ೧೧ (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ನೀತಿ ಆಯೋಗವು ಗುರುತಿಸಿದ ಮಹತ್ವಾಕಾಂಕ್ಷೆ ಜಿಲ್ಲೆಗಳ ರ‍್ಯಾಂಕಿ0ಗ್‌ನಲ್ಲಿ ಯಾದಗಿರಿ ಜಿಲ್ಲೆ ಸೆಪ್ಟೆಂಬರ್ ತಿಂಗಳಲ್ಲಿದ್ದ ಒಟ್ಟಾರೆ ಸ್ಕೋರ್ ೪೮.೯ರಿಂದ ಅಕ್ಟೋಬರ್‌ನಲ್ಲಿ ೪೮.೫ಕ್ಕೆ ಇಳಿಮುಖವಾಗಿದೆ. ಡೆಲ್ಟಾ ರ‍್ಯಾಂಕಿ0ಗ್‌ನಲ್ಲಿ ೯೦ನೇ ಸ್ಥಾನ ಪಡೆದಿದೆ. ಇದು ಉತ್ತಮ ಬೆಳವಣಿಗೆಯಲ್ಲ. ಜಿಲ್ಲೆಯು ಪ್ರಥಮ ಸ್ಥಾನ ಪಡೆಯಲು ಅಧಿಕಾರಿಗಳು ಶ್ರಮಿಸಬೇಕು ಎಂದು ನವದೆಹಲಿಯ ಎಫ್‌ಎ, ಡಿಬಿಟಿ, ಎಂಓಇಎಸ್ ಆ್ಯಂಡ್ ಡಿಎಸ್‌ಟಿ ಹೆಚ್ಚುವರಿ ಕಾರ್ಯದರ್ಶಿಗಳು ಹಾಗೂ ಮಹತ್ವಾಕಾಂಕ್ಷೆ ಜಿಲ್ಲೆಯ ನೋಡಲ್ ಅಧಿಕಾರಿಗಳಾದ ಬಿ.ಆನಂದ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮಹತ್ವಾಕಾಂಕ್ಷೆ ಜಿಲ್ಲೆಯ ಅಭಿವೃದ್ಧಿಗೆ ಸಂಬ0ಧಿಸಿದ0ತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಇಡೀ ದಿನ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮಗಳ ಅನುಷ್ಠಾನದ ಅಂಕಿ-ಅ0ಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸ್ಕೋರ್ ಮತ್ತು ಡೆಲ್ಟಾ ರ‍್ಯಾಂಕಿ0ಗ್ ಮೇಲೆ ಜಿಲ್ಲೆಯ ಪ್ರಗತಿಯನ್ನು ಪರಿಗಣಿಸಲಾಗುತ್ತದೆ. ಮೂಲಸೌಕರ್ಯದಲ್ಲಿ ಮಾತ್ರ ಸೆಪ್ಟೆಂಬರ್ ತಿಂಗಳಲ್ಲಿದ್ದ ಸ್ಕೋರ್ ೬೦ರಿಂದ ಅಕ್ಟೋಬರ್‌ನಲ್ಲಿ ೬೧.೨ಕ್ಕೆ ಏರಿಕೆ ಕಂಡುಬAದಿದೆ. ಶಿಕ್ಷಣದಲ್ಲಿ ಈ ಎರಡು ತಿಂಗಳ ಸ್ಕೋರ್ ೪೨.೯ಕ್ಕೆ ಸ್ಥಿರವಾಗಿದೆ. ಆದರೆ, ಆರೋಗ್ಯ ಮತ್ತು ಪೌಷ್ಟಿಕಾಂಶ ಪ್ರಗತಿಯಲ್ಲಿನ ಸ್ಕೋರ್ ೭೬.೫ರಿಂದ ೭೫.೨ಕ್ಕೆ ಇಳಿಮುಖವಾಗಿದೆ. ಕೃಷಿ ಮತ್ತು ಜಲಸಂಪನ್ಮೂಲ ವಿಭಾಗದಲ್ಲಿ ೧೯.೭ರಿಂದ ೧೯.೨ಕ್ಕೆ ಇಳಿಮುಖವಾಗಿದೆ. ಆರ್ಥಿಕ ಹಾಗೂ ಕೌಶಲ ಅಭಿವೃದ್ಧಿಯಲ್ಲಿನ ಸ್ಕೋರ್ ೨೫.೨ರಿಂದ ೨೪.೯ಕ್ಕೆ ಇಳಿಮುಖವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯು ಪ್ರಗತಿಯತ್ತ ಸಾಗಬೇಕೇ ಹೊರತು ಇಳಿಮುಖ ಕಂಡುಬರಬಾರದು. ಕೇಂದ್ರ ಸರ್ಕಾರವು ಈ ಮಹತ್ವಾಕಾಂಕ್ಷೆ ಜಿಲ್ಲೆಗಳ ಪ್ರಗತಿಯನ್ನು ಪ್ರತಿದಿನ ವೀಕ್ಷಣೆ ಮಾಡುತ್ತದೆ. ಪ್ರಧಾನಮಂತ್ರಿಗಳು ಕೂಡ ಖುದ್ದಾಗಿ ಪರಿಶೀಲನೆ ಮಾಡುತ್ತಿರುತ್ತಾರೆ. ಆದ್ದರಿಂದ ಜಿಲ್ಲೆಯ ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕೆಲಸ ಮಾಡಬೇಕು ಎಂದು ಅವರು ನಿರ್ದೇಶಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಜೊತೆಗೆ ಟಾಟಾ ಟ್ರಸ್ಟ್, ಅಜೀಮ್ ಪ್ರೇಮ್‌ಜಿ ಫೌಂಡೇಶನ್, ಸೆಲ್ಕೊ, ಬಿಇಎಲ್, ಎಂಆರ್‌ಪಿಎಲ್, ಎಚ್‌ಪಿಸಿಎಲ್ ಸಂಸ್ಥೆಗಳ ಸಹಯೋಗದಲ್ಲಿ ಶೈಕ್ಷಣಿಕ ಪ್ರಗತಿಗಾಗಿ ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯ ಕಾಲೇಜುಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳಿಗೆ ಸಂಬ0ಧಿಸಿದ ಮೂಲಸೌಕರ್ಯ ಅವಶ್ಯಕತೆಯಿದ್ದಲ್ಲಿ ನಿರ್ದಿಷ್ಟ ಪ್ರಸ್ತಾವನೆ ಸಲ್ಲಿಸುವಂತೆ ಅವರು ಪ್ರಾಂಶುಪಾಲರಿಗೆ ಸೂಚಿಸಿದರು.
ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ಗಳ ನೋಂದಣಿಯಲ್ಲಿ ಜಿಲ್ಲೆಯು ಹಿಂದುಳಿದಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿದ ಕುಟುಂಬಗಳಿಗೆ ಈ ಯೋಜನೆ ತುಂಬಾ ಉಪಯುಕ್ತವಾಗಿದ್ದು, ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಅದೇ ರೀತಿ ಮಹಿಳೆಯರು ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬAಧಿಸಿದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಅನಿಮಿಯಮುಕ್ತ ಜಿಲ್ಲೆಗಾಗಿ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಡಿಮೆ ಫಲಿತಾಂಶ ಹೊಂದಿದ ೨೩೦ ಶಾಲೆಗಳನ್ನು ಗುರುತಿಸಲಾಗಿದೆ. ಈ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳಕ್ಕಾಗಿ ವಿಶೇಷ ತರಗತಿ ನಡೆಸಲಾಗುತ್ತಿದೆ. ಅಲ್ಲದೆ, ಕಾರ್ಯಾಗಾರಗಳನ್ನು ಕೂಡ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಲ್ಲನಗೌಡ ಎಸ್.ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಭಾಕರ ಸೇರಿದಂತೆ ಟಾಟಾ ಟ್ರಸ್ಟ್, ಅಜೀಂ ಪ್ರೇಮ್‌ಜಿ ಫೌಂಡೇಶನ್, ಸೆಲ್ಕೊ, ಬಿಇಎಲ್, ಎಂಆರ್‌ಪಿಎಲ್-ಸಿಎಸ್‌ಆರ್, ಎಚ್‌ಪಿಸಿಎಲ್-ಸಿಎಸ್‌ಆರ್ ರಾಜ್ಯ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...