ಭಾನುವಾರ, ಡಿಸೆಂಬರ್ 29, 2019

ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮ
ರಾಷ್ಟ್ರಕವಿ ಕುವೆಂಪು ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ


ಯಾದಗಿರಿ, ಡಿಸೆಂಬರ್ 29 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ. ರಜಪೂತ ಅವರು ವಿಶ್ವ ಮಾನವ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥರ ಅಸ್ತಂಗತರಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಮೂರು ದಿನಗಳ ಕಾಲ ಶೋಕಾರಣೆ ಆಚರಿಸಲು ಘೋಷಿಸಿದ ಪ್ರಯುಕ್ತ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಇದಕ್ಕೂ ಮೊದಲು ಒಂದು ನಿಮಿಷ ಮೌನಾಚರಣೆಯನ್ನು ಮಾಡಲಾಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಕಡ್ಡಿ, ಲಿಂಗೇರಿ ಕೊನಪ್ಪ ಪದವಿ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ. ಜ್ಯೋತಿಲತಾ ತಡಿಬಿಡಿ ಮಠ ಹಾಗೂ ಶುಭಂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಗುರುಪ್ರಸಾದ ವೈದ್ಯ. ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆರ್. ವಿ. ಪ್ರೌಢಶಾಲೆಯ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...