ಸೋಮವಾರ, ಡಿಸೆಂಬರ್ 16, 2019

ಎಸಿಬಿ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಯಾದಗಿರಿ, ಡಿಸೆಂಬರ್ ೧೬ (ಕರ್ನಾಟಕ ವಾರ್ತೆ): ಯಾದಗಿರಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ಜನಸಂಪರ್ಕ ಸಭೆ ನಡೆಸಿ ಅರ್ಜಿ ಅಹವಾಲು ಸ್ವೀಕಾರ ಮಾಡಲಿದ್ದು, ನಿಗದಿಪಡಿಸಿದ ದಿನಾಂಕಗಳAದು ಸಾರ್ವಜನಿಕರು ಅಧಿಕಾರಿಗಳನ್ನು ಭೇಟಿಯಾಗಿ ಭ್ರಷ್ಟಾಚಾರಕ್ಕೆ ಸಂಬAಧಿಸಿದAತೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಭ್ರಷ್ಟಾಚಾರ ನಿಗ್ರಹ ದಳದ ಡಿಎಸ್‌ಪಿ ಡಾ.ಸಂತೋಷ ಕೆ.ಎಂ (೯೪೮೦೮ ೦೬೨೪೨), ಪೊಲೀಸ್ ಇನ್‌ಸ್ಪೆಕ್ಟರ್ ಬಾಬಾಸಾಹೇಬ ಪಾಟೀಲ್ (ಮೊ:೯೪೮೦೮ ೦೬೩೧೩), ಪೊಲೀಸ್ ಇನ್‌ಸ್ಪೆಕ್ಟರ್ ಗುರುಪಾದ ಎಸ್.ಬಿರಾದಾರ (ಮೊ:೯೪೮೦೮ ೦೬೩೧೪) ಅವರು ಅಹವಾಲು ಸ್ವೀಕರಿಸುವರು. ಡಿಸೆಂಬರ್ ೧೭ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ವಡಗೇರಾ ತಾಲ್ಲೂಕಿನ ಖಾನಾಪುರ ಗ್ರಾಮ ಪಂಚಾಯಿತಿ ಕಾರ್ಯಾಲಯ, ಡಿ.೧೮ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಸುರಪುರ ತಹಸೀಲ್ ಕಾರ್ಯಾಲಯದ ಆವರಣದಲ್ಲಿ ಅಹವಾಲು ಸ್ವೀಕರಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...