ಶುಕ್ರವಾರ, ಡಿಸೆಂಬರ್ 27, 2019

ನಾಳೆ ವಿದ್ಯುತ್ ವ್ಯತ್ಯಯ
ಯಾದಗಿರಿ, ಡಿಸೆಂಬರ್ ೨೭ (ಕರ್ನಾಟಕ ವಾರ್ತೆ): ೧೧ ಕೆವಿ ವಿದ್ಯುತ್ ಮಾರ್ಗಗಳ ಐ.ಪಿ.ಡಿ.ಎಸ್ ಕಾಮಗಾರಿ ಕೆಲಸ ಕೈಗೊಳ್ಳುತ್ತಿರುವುದರಿಂದ ಯಾದಗಿರಿ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ಡಿಸೆಂಬರ್ ೨೯ರಂದು ಬೆಳಿಗ್ಗೆ ೯ರಿಂದ ಸಂಜೆ ೫ ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇAಡಸ್ಟಿçÃಯಲ್ ಏರಿಯಾ (ಎಫ್-೪) ವ್ಯಾಪ್ತಿಯ ಮುಂಡರಗಿ ಇಂಡಸ್ಟಿçÃಯಲ್ ಏರಿಯಾ ಮತ್ತು ವರ್ಕನಹಳ್ಳಿ ಇಂಡಸ್ಟಿçÃಯಲ್ ಏರಿಯಾ ಹಾಗೂ ಮಾತಾ ಮಾಣಿಕೇಶ್ವರಿ ನಗರ (ಎಫ್-೧) ವ್ಯಾಪ್ತಿಯ ಶಹಜೀವನ್ ಶಾ ದರ್ಗಾ, ಅನಪೂರ ಮೌಲಾಲಿ ಲೇಔಟ್, ಆದರ್ಶ ನಗರ, ಹೊಸಳ್ಳಿ ಕ್ರಾಸ್ ಮತ್ತು ರಾಘವೇಂದ್ರ ಸ್ವಾಮಿ ದೇವಸ್ಥಾನ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಗ್ರಾಹಕರು ಜೆಸ್ಕಾಂನೊAದಿಗೆ ಸಹಕರಿಸಬೇಕಾಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಡಿ.೩೦ರಂದು ಉದ್ಘಾಟನಾ ಸಮಾರಂಭ
ಯಾದಗಿರಿ, ಡಿಸೆಂಬರ್ ೨೭ (ಕರ್ನಾಟಕ ವಾರ್ತೆ): ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ೨೦೧೮-೧೯ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆಯಡಿಯಲ್ಲಿ ಯಾದಗಿರಿ ತಾಲ್ಲೂಕಿನ ಹೆಡಗಿಮದ್ರಾ ಗ್ರಾಮದಲ್ಲಿ ೩೨ ಲಕ್ಷ ರೂ. ವೆಚ್ಚದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂರು ಕೋಣೆಗಳು ಮತ್ತು ಕಂಪೌAಡ್ ಗೋಡೆ ನಿರ್ಮಾಣದ ಹಾಗೂ ರಾಷ್ಟಿçÃಯ ಹೆದ್ದಾರಿಗಳ ೨೦೧೬-೧೭ನೇ ಸಾಲಿನ ಕೇಂದ್ರ ರಸ್ತೆ ನಿಧಿ ಯೋಜನೆಯಡಿಯಲ್ಲಿ ಯಾದಗಿರಿ ತಾಲ್ಲೂಕಿನ ಮುದ್ನಾಳ-ಹೆಡಗಿಮದ್ರಾ ವಾಯಾ ತಳಕ್ ತಾಲ್ಲೂಕು ಗಡಿಯವರೆಗಿನ (೮ ಕಿ.ಮೀ ದಿಂದ ೨೦ ಕಿ.ಮೀ ವರೆಗೆ) ೫೦೦ ಲಕ್ಷ ರೂ. ವೆಚ್ಚದ ರಸ್ತೆ ಸುಧಾರಣೆಯ ಉದ್ಘಾಟನಾ ಸಮಾರಂಭವನ್ನು ಡಿಸೆಂಬರ್ ೩೦ರಂದು ಹೆಡಗಿಮದ್ರಾ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಉದ್ಘಾಟಿಸುವರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಬಿ.ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಠಾಣಗುಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾರದಾ ರಾಚಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅನೀತಾಬಾಯಿ ಸುರೇಶ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಲಲಿತಮ್ಮ ಮರೆಪ್ಪ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.
ದರಪಟ್ಟಿ ಆಹ್ವಾನ
ಯಾದಗಿರಿ, ಡಿಸೆಂಬರ್ ೨೭ (ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಚೇರಿಗೆ ಅವಶ್ಯಕತೆ ಇರುವ ಪೀಠೋಪಕರಣಗಳನ್ನು ಖರೀದಿಸಲು ಅರ್ಹ ಸರಬರಾಜು ಸಂಸ್ಥೆಗಳಿAದ ದರಪಟ್ಟಿ ಆಹ್ವಾನಿಸಲಾಗಿದೆ.
ಆಸಕ್ತ ಸಂಸ್ಥೆಯವರು ಜನವರಿ ೨ರಂದು ಸಂಜೆ ೪ ಗಂಟೆಯೊಳಗಾಗಿ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಾರ್ಯಾಲಯಕ್ಕೆ ದರಪಟ್ಟಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ಕಚೇರಿಯಿಂದ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...