ಮಂಗಳವಾರ, ಡಿಸೆಂಬರ್ 17, 2019

ಕರಡು ಮತದಾರರ ಪಟ್ಟಿ ಪ್ರಕಟ
ಯಾದಗಿರಿ, ಡಿಸೆಂಬರ್ ೧೭ (ಕರ್ನಾಟಕ ವಾರ್ತೆ): ಅರ್ಹತಾ ದಿನಾಂಕ: ೦೧.೦೧.೨೦೨೦ರಂತೆ ವಿಧಾನಸಭಾ ಕ್ಷೇತ್ರಗಳ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ತಹಸೀಲ್ದಾರರ ಕಚೇರಿಗಳಲ್ಲಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಡು ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಒಂದು ವೇಳೆ ಅರ್ಹತಾ ದಿನಾಂಕಕ್ಕೆ ಸಂಬAಧಿಸಿದAತೆ ಯುವಕರು, ಯುವತಿಯರು ಅಥವಾ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-೬ರಲ್ಲಿ ಅರ್ಜಿ ಸಲ್ಲಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಅವರುಗಳು ಸ್ಥಳಾಂತರ ಹೊಂದಿದಲ್ಲಿ, ಮೃತ ಹೊಂದಿದಲ್ಲಿ, ಹೆಸರು ಪುನರಾವರ್ತನೆಯಾಗಿದಲ್ಲಿ ಅವರುಗಳ ಹೆಸರನ್ನು ತೆಗೆದು ಹಾಕಲು ನಮೂನೆ-೭ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಬಯಸಿದಲ್ಲಿ ನಮೂನೆ-೮ರಲ್ಲಿ ಮತ್ತು ಹೆಸರು ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-೮ಎ ರಲ್ಲಿ ಸೂಕ್ತ ದಾಖಲೆಯೊಂದಿಗೆ ಅರ್ಜಿಗಳನ್ನು ಸಂಬAಧಪಟ್ಟ ಮತಗಟ್ಟೆ ಮಟ್ಟ ಅಧಿಕಾರಿ (ಬಿ.ಎಲ್.ಓ)ರವರಿಗೆ ಡಿಸೆಂಬರ್ ೧೬ರಿಂದ ೨೦೨೦ರ ಜನವರಿ ೧೫ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಸದರಿ ಅವಧಿಯಲ್ಲಿ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ೨೦೨೦ರ ಜನವರಿ ೨೭ರಂದು ಕಾಲೋಚಿತಗೊಳಿಸಲಾಗುವುದು. ನಂತರ ಪುರವಣಿ ಪಟ್ಟಿಯನ್ನು ೨೦೨೦ರ ಫೆಬ್ರುವರಿ ೪ರಂದು ತಯಾರಿಸಿ, ಅಂತಿಮ ಮತದಾರರ ಪಟ್ಟಿಯನ್ನು ೨೦೨೦ರ ಫೆಬ್ರುವರಿ ೭ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ನಾಳೆ ವಿಶ್ವ ಏಡ್ಸ್ ದಿನಾಚರಣೆ
ಯಾದಗಿರಿ, ಡಿಸೆಂಬರ್, ೧೭ (ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಬೆಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆ, ಭಾರತೀಯ ವೈದ್ಯಕೀಯ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೆಡ್ ರಿಬ್ಬನ್ ಕ್ಲಬ್ಸ್, ರೆಡ್‌ಕ್ರಾಸ್ ಸಂಸ್ಥೆ, ವಿಹಾನ್, ಶಾರದಾ ಪ್ಯಾರಾ ಮೆಡಿಕಲ್ ಕಾಲೇಜು, ಕಲ್ವಾರಿ ಚಾಪೆಲ್ ಟ್ರಸ್ಟ್, ಕರ್ನಾಟಕ ರಕ್ಷಣಾ ವೇದಿಕೆ, ಲಯನ್ಸ್ ಕ್ಲಬ್, ರೋಟರಿ ಸಂಸ್ಥೆ, ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ಘಟಕ ಸಂಯುಕ್ತಾಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಡಿಸೆಂಬರ್ ೧೯ರಂದು ಬೆಳಿಗ್ಗೆ ೧೦ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಅಧಿಕಾರಿಗಳ ನೂತನ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ ೯ ಗಂಟೆಗೆ ಏಡ್ಸ್ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾವನ್ನು ಆಯೋಜಿಸಲಾಗಿದ್ದು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಚಾಲನೆ ನೀಡುವರು. ಡಿಎಚ್‌ಒ ಕಚೇರಿಯಿಂದ ಪ್ರಾರಂಭವಾಗಿ ಗಾಂಧಿ ವೃತ್ತದ ಮೂಲಕ ಮರಳಿ ಡಿಎಚ್‌ಒ ಕಚೇರಿಗೆ ತಲುಪಲಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಶಿವನಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಅಧ್ಯಕ್ಷತೆ ವಹಿಸುವರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್ ಪಾಟೀಲ್, ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ನಾರಾಯಣಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯರಾದ ಸಿ.ಎಸ್.ಮಾಲಿಪಾಟೀಲ್ ಅವರು ಮಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾ ಅಂಧತ್ವ ಮತ್ತು ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ.ಭಗವಂತ ಅನವರ ಅವರು ವಿಶೇಷ ಉಪನ್ಯಾಸ ನೀಡುವರು.
೧೯ರಂದು ಬಜೆಟ್ ಸಿದ್ಧತಾ ಸಭೆ
ಯಾದಗಿರಿ, ಡಿಸೆಂಬರ್ ೧೭ (ಕರ್ನಾಟಕ ವಾರ್ತೆ): ಶಹಾಪುರ ನಗರಸಭೆಯ ೨೦೨೦-೨೧ನೇ ಸಾಲಿನ ಮುಂಗಡ ಪತ್ರ (ಬಜೆಟ್) ತಯಾರಿಸಲು ಸಾರ್ವಜನಿಕರು, ರಿಜಿಸ್ರ‍್ಡ್ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್, ಟ್ರೇಡ್ ಆ್ಯಂಡ್ ಇಂಡಸ್ಟಿçÃಯಲ್ ಅಸೋಸಿಯೇಷನ್, ಇತರೆ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು, ಪ್ರೋಮಿನೆಂಟ್ ಸಿಟಿಜನ್‌ಗಳಿಗೆ ಸಿದ್ಧತಾ ಸಭೆಯನ್ನು ಡಿಸೆಂಬರ್ ೧೯ರಂದು ಮಧ್ಯಾಹ್ನ ೩ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಕರೆಯಲಾಗಿದೆ. ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಲು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಯಾದಗಿರಿ, ಡಿಸೆಂಬರ್ ೧೭ (ಕರ್ನಾಟಕ ವಾರ್ತೆ): ಕೆಂಭಾವಿ ಪುರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ೨೦೧೯-೨೦ನೇ ಸಾಲಿನ ಶೇ.೨೪.೧೦ರಷ್ಟು ಹಾಗೂ ಶೇ.೭.೨೫ರಷ್ಟು ಕ್ರಿಯಾಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಎಂಎ, ಎಂ.ಎಸ್‌ಸಿ, ಎಂ.ಕಾA, ಎಂಎಸ್‌ಡಬ್ಲುö್ಯ, ಎಂಬಿಎ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯ ಜೊತೆಗೆ ಭಾವಚಿತ್ರ, ಅಂಕಪಟ್ಟಿ, ವಿದ್ಯಾಭ್ಯಾಸ ಪ್ರಮಾಣ ಪತ್ರ, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ದಾಖಲಾತಿಗಳನ್ನು ದೃಢೀಕರಿಸಿ ಡಿಸೆಂಬರ್ ೩೧ರಂದು ಸಂಜೆ ೫ ಗಂಟೆಯೊಳಗೆ ಸಲ್ಲಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.೨೦ರಂದು ವಿದ್ಯುತ್ ಗ್ರಾಹಕರ ಸಭೆ
ಯಾದಗಿರಿ, ಡಿಸೆಂಬರ್ ೧೭ (ಕರ್ನಾಟಕ ವಾರ್ತೆ): ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕಲಬುರಗಿ ವೃತ್ತದ ವ್ಯಾಪ್ತಿಗೆ ಬರುವ ಯಾದಗಿರಿ ಮತ್ತು ಗುರುಮಠಕಲ್ ಉಪ ವಿಭಾಗಗಳಲ್ಲಿ ಜೆಸ್ಕಾಂ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ಡಿಸೆಂಬರ್ ೨೦ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಜೆಸ್ಕಾಂ ಯಾದಗಿರಿ ಉಪ ವಿಭಾಗ ಕಚೇರಿ ಆವರಣದಲ್ಲಿ ಬೆಳಿಗ್ಗೆ ೧೦ರಿಂದ ೧೧.೩೦ ಗಂಟೆಯವರೆಗೆ ಸಭೆ ನಡೆಯಲಿದೆ. ಗುರುಮಠಕಲ್ ಉಪ ವಿಭಾಗ ಕಚೇರಿ ಆವರಣದಲ್ಲಿ ಮಧ್ಯಾಹ್ನ ೧೨ರಿಂದ ೨ ಗಂಟೆಯವರೆಗೆ ಸಭೆ ನಡೆಯಲಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...