ಸೋಮವಾರ, ಡಿಸೆಂಬರ್ 2, 2019

ಕೃಷಿಕ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ
ಯಾದಗಿರಿ, ಡಿಸೆಂಬರ್ ೦೨ (ಕರ್ನಾಟಕ ವಾರ್ತೆ): ಜಿಲ್ಲೆಯ ಕೃಷಿಕ ಮತಕ್ಷೇತ್ರಗಳ ಚುನಾವಣೆ ಪ್ರಯುಕ್ತ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಷ್ಕರಿಸಲಾಗುತ್ತಿದ್ದು, ಕರಡು ಮತದಾರರ ಪಟ್ಟಿಯನ್ನು ನವೆಂಬರ್ ೨೭ರಂದು ಎಲ್ಲಾ ತಾಲ್ಲೂಕಿನ ತಹಶೀಲ್ದಾರರ ಕಚೇರಿಗಳಲ್ಲಿ ಹಾಗೂ ಸಂಬAಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗಳಲ್ಲಿ ಪ್ರಚುರಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ತಿಳಿಸಿದ್ದಾರೆ.
ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ ೧೯೬೬ರ ಕಲಂ ೧೧ ಹಾಗೂ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ನಿಯಮಾವಳಿಗಳು ೧೯೬೮ರ ನಿಯಮ ೫ರನ್ವಯ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಯಾದಗಿರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ೧೦-ಯಲ್ಹೇರಿ, ೧೩-ಸಹಕಾರ ಮಾರುಕಟ್ಟೆ ವ್ಯವಹಾರ ಸಂಘ ಕ್ಷೇತ್ರ, ಶಹಾಪೂರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ೧-ಗೋಗಿಕೋನಾ, ೨-ಮದ್ರಿಕಿ, ೩-ಶಿರವಾಳ, ೪-ಶಹಾಪೂರ, ೫-ಸಗರÀ ಮತ್ತು ೧೨-ವರ್ತಕರ ಕ್ಷೇತ್ರ ಮತ್ತು ಸುರುಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ೩-ಕೆಂಭಾವಿ ಕ್ಷೇತ್ರಗಳ ಚುನಾವಣೆ ಪ್ರಯುಕ್ತ ಕೃಷಿಕ ಮತಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ನಿಗದಿತ ನಮೂನೆ ಅರ್ಜಿಗಳನ್ನು ಸಂಬAಧಪಟ್ಟ ಗ್ರಾಮ ಲೆಕ್ಕಿಗರ ಕಾರ್ಯಾಲಯ ಅಥವಾ ತಹಸೀಲ್ ಕಾರ್ಯಾಲಯಗಳಲ್ಲಿ ಸಲ್ಲಿಸಬಹುದಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ ೫ರಂದು ಎಲ್ಲಾ ತಾಲ್ಲೂಕಿನ ತಹಶೀಲ್ದಾರರ ಕಚೇರಿ ಹಾಗೂ ಸಂಬAಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗಳಲ್ಲಿ ಪ್ರಚುರಪಡಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ
ಯಾದಗಿರಿ, ಡಿಸೆಂಬರ್ ೦೨ (ಕರ್ನಾಟಕ ವಾರ್ತೆ): ಶಹಾಪೂರ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಸರ್ವೇ ನಂ ೩೪೭/೨ ಕ್ಷೇತ್ರ ೪ ಎಕರೆ ೩೮ ಗುಂಟೆ ವಸತಿ ಜಮೀನಿನಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಮೀಸಲಿಟ್ಟ ೮೩೬ ಚ.ಮೀ ನಿವೇಶನವನ್ನು ಶಹಾಪೂರ ಗೃಹರಕ್ಷಕ ದಳ ಇವರಿಗೆ ಮಂಜೂರಿಸಲು ನಿರ್ಣಯಿಸಿದ್ದು, ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಹೊರಡಿಸಿದ ೧೫ ದಿನಗಳೊಳಗಾಗಿ ಲಿಖಿತವಾಗಿ ಸಲ್ಲಿಸಲು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಿಸಿ
ಯಾದಗಿರಿ, ಡಿಸೆಂಬರ್ ೦೨ (ಕರ್ನಾಟಕ ವಾರ್ತೆ): ೨೦೧೯-೨೦ನೇ ಸಾಲಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ, ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ತಕ್ಷಣ ಜೋಡಣೆ ಮಾಡಿಸಬೇಕು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಮೆಟ್ರಿಕ್ ನಂತರದ ಕೋರ್ಸ್ಗಳಾದ ಪಿ.ಯು.ಸಿ, ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಇತರೆ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ಪ್ರವರ್ಗ-೧, ೨ಎ, ೩ಎ, ೩ಬಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಸಲ್ಲಿಸಿ ಅಪ್‌ಲೋಡ್ ಮಾಡಿದ ಬ್ಯಾಂಕ್ ಖಾತೆಯ ಸಂಖ್ಯೆಗೆ ತಮ್ಮ ಆಧಾರ್ ಸಂಖ್ಯೆಯನ್ನು ೭ ದಿನಗಳ ಒಳಗಾಗಿ ಜೋಡಣೆ ಮಾಡಿಸಬೇಕು. ಆಧಾರ್ ಜೋಡಣೆ ಮಾಡಿಸದಿದ್ದಲ್ಲಿ ವಿದ್ಯಾರ್ಥಿ ವೇತನದ ಅರ್ಜಿ ತಿರಸ್ಕೃತವಾಗುವುದು. ಅರ್ಜಿ ತಿರಸ್ಕೃತವಾದಲ್ಲಿ ಅದಕ್ಕೆ ಇಲಾಖೆ ಜವಾಬ್ದಾರಿ ಆಗಿರುವುದಿಲ್ಲ. ಕಾಲೇಜುಗಳ ಪ್ರಾಂಶುಪಾಲರು ತಮ್ಮ ಸಂಸ್ಥೆಯ ಎಲ್ಲಾ ಮಕ್ಕಳಿಗೆ ಆಧಾರ್ ಜೋಡಣೆ ಮಾಡಲು ತಿಳಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...