ಶುಕ್ರವಾರ, ಡಿಸೆಂಬರ್ 20, 2019

ಇಂದು ಜಿಲ್ಲೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಭೇಟಿ
ಯಾದಗಿರಿ, ಡಿಸೆಂಬರ್ ೨೦ (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ತ.ಮ. ವಿಜಯ್ ಭಾಸ್ಕರ್ ಅವರು ಡಿಸೆಂಬರ್ ೨೧ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಶನಿವಾರ ಬೆಳಿಗ್ಗೆ ೯ರಿಂದ ಸಂಜೆ ೪ ಗಂಟೆಯವರೆಗೆ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ನಡೆಸುವರು. ಸಂಜೆ ೪.೩೦ ಗಂಟೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ರಾತ್ರಿ ೧೦.೩೦ ಗಂಟೆಗೆ ರೈಲು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...