ಶುಕ್ರವಾರ, ಡಿಸೆಂಬರ್ 27, 2019

ಜಿಲ್ಲಾ ಮಟ್ಟದ “ಮಕ್ಕಳ ಸಂಸತ್” ಕಾರ್ಯಕ್ರಮ
ಯಾದಗಿರಿ, ಡಿಸೆಂಬರ್ ೨೭ (ಕರ್ನಾಟಕ ವಾರ್ತೆ): ಮಕ್ಕಳು ಸ್ವತಃ ತಮ್ಮನ್ನು ಕಾಡುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಮಾಡಿದ ಪಟ್ಟಿಯನ್ನು ಜನಪ್ರತಿನಿಧಿಗಳಿಗೆ ತಲುಪಿಸಿ, ಆ ಸಮಸ್ಯೆಗಳು ವಿಧಾನಸಭೆಯನ್ನು ಪ್ರತಿಧ್ವನಿಸುವಂತೆ ಮಾಡುವ ಉದ್ಧೇಶದಿಂದ ಮಕ್ಕಳ ಸಂಸತ್ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಹೇಳಿದರು.
ತಾಲ್ಲೂಕಿನ ಕಂದಕೂರÀ ಗ್ರಾಮದ ಎಸ್.ಎಲ್.ವಿ ಮೆಮೋರಿಯಲ್ ಶಾಲೆಯಲ್ಲಿ ಇತ್ತೀಚೆಗೆ ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ಹಾಗೂ ಅನಂತ ಸೇವಾ ಟ್ರಸ್ಟ್ ಸಂಯುಕ್ತಾಶ್ರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ “ಮಕ್ಕಳ ಸಂಸತ್” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದ ವಿವಿಧ ಭಾಗಗಳಲ್ಲಿನ ಮಕ್ಕಳ ಯಾವ ಸಮಸ್ಯೆ, ಬೇಡಿಕೆಗಳನ್ನು ವಿಧಾನ ಪರಿಷತ್ತು ಮತ್ತು ವಿಧಾನ ಸಭೆಯಲ್ಲಿ ಚರ್ಚೆಗೆ ಜನಪ್ರತಿನಿಧಿಗಳು ತೆಗೆದುಕೊಳ್ಳಬೇಕು? ಬಾಲ್ಯ ವಿವಾಹ, ಬಾಲ ಕಾರ್ಮಿಕ, ಜೀತ ಪದ್ಧತಿ, ಮಕ್ಕಳ ಮೇಲೆ ಆಗುವ ಲೈಂಗಿಕ ದೌರ್ಜನ್ಯಗಳು, ಕಾಣೆಯಾದ ಮಕ್ಕಳ ಇಂತಹ ಹಲವಾರು ವಿಚಾರವಾಗಿ ಮಕ್ಕಳೊಡನೆ ಸಮಾಲೋಚನೆ ನಡೆಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಮಕ್ಕಳೇ ಗುರುತಿಸುವ ಸಮಸ್ಯೆಗಳನ್ನು ರಾಜ್ಯ ಮಟ್ಟದ ಮಕ್ಕಳ ಸಂಸತ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆ ಮಕ್ಕಳೆ ಚರ್ಚಿಸುವ ಅವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿದೆ. ಮಕ್ಕಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. 
ದೇಶದಲ್ಲಿ ೨೦೧೧ರ ಜನಗಣತಿಯಂತೆ ಸುಮಾರು ೪೭ ಕೋಟಿಯಷ್ಟು ಮಕ್ಕಳಿದ್ದು, ಅವರಲ್ಲಿ ಹದಿವಯಸ್ಕರ (೧೦ ರಿಂದ ೧೮ ವರ್ಷದವರು) ಪ್ರಮಾಣ ಸುಮಾರು ಶೇ.೪೯ರಷ್ಟು. ಈ ಗುಂಪಿನ ಮಕ್ಕಳಲ್ಲಿ ಅದರಲ್ಲೂ ಹೆಣ್ಣು ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಈಗಲೂ ಅಪಾಯಕಾರಿ ಮಟ್ಟದಲಿಯೇ ಇದೆ. ಜೊತೆಗೆ ಹದಿವಯಸ್ಕರನ್ನು ಬಲವಂತವಾಗಿ ಬಾಲ್ಯವಿವಾಹಕ್ಕೀಡು ಮಾಡುವುದು, ಸಾಗಣೆ, ಮಾರಾಟಕ್ಕೆ ಗುರಿಯಾಗಿಸುವುದು, ದುಡಿಮೆಗೆ ದೂಡುವುದು, ಸಮಾಜ ವಿರೋಧಿ ಕೃತ್ಯಗಳಿಗೆ ಸೆಳೆಯುವುದು ಮೊದಲಾದವು ಜರುಗುತ್ತಿವೆ. ಈ ದೇಶದ ಮಾನವ ಸಂಪನ್ಮೂಲವನ್ನು ರಕ್ಷಿಸಿ, ಅವರನ್ನು ಉತ್ತಮ ಮಾರ್ಗದಲ್ಲಿ ನಡೆಸಿದಲ್ಲಿ ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಮಿಕ ನಿರೀಕ್ಷಕರಾದ ಶಿವಶಂಕರ ಬಿ.ತಳವಾರ ಅವರು ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆ ಭವಿಷ್ಯದಲ್ಲಿ ನೆರವಾಗಲಿದೆ. ಆದ್ದರಿಂದ ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಿಕೊAಡು ಕಾರ್ಮಿಕ ಇಲಾಖೆಯಿಂದ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷಿö್ಮÃ ಸಜ್ಜನ್ ಅವರು ಮಾತನಾಡಿ, ಕೋಟ್ಪಾ-೨೦೦೩ ಕಾಯ್ದೆಯಡಿಯಲ್ಲಿ ಸೆಕ್ಷನ್ ೪, ೫, ೬, ೬ಎ, ೬ಬಿ ಮತ್ತು ೭ರ ಪ್ರಕಾರ ಸಂಬAಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೊರೆಂಟ್, ಬಾರ್, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ ೧೦೦ ಮೀಟರ್ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬAಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದರು.
ಅನಂತ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶರಣಪ್ಪ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಶಿಕ್ಷಕರಾದ ಎಸ್.ಎಮ್.ಬೋಥಾಲ್ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...