ಮಕ್ಕಳ ಸಾಕ್ಷರತೆ ಹೆಚ್ಚಳದಿಂದ ಮೂಢನಂಬಿಕೆ ನಿರ್ಮೂಲನೆ
-:ಮುಕ್ಕಣ್ಣ ಕರಿಗಾರ
ಯಾದಗಿರಿ, ಡಿಸೆಂಬರ್ ೩೧ (ಕರ್ನಾಟಕ ವಾರ್ತೆ): ಮಕ್ಕಳ ಸಾಕ್ಷರತೆಯನ್ನು ಹೆಚ್ಚಿಸಿದರೆ ಮೂಢನಂಬಿಕೆಗಳನ್ನು ಹೋಗಲಾಡಿಸಬಹುದು. ಈ ಮೂಲಕ ಮಕ್ಕಳ ಸಂರಕ್ಷಣೆ ಮಾಡಬೇಕಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕೆ.ಎಸ್.ಆರ್.ಡಿ.ಪಿ.ಆರ್.ಯು- ಮಕ್ಕಳ ಹಕ್ಕುಗಳು ಮತ್ತು ಆಡಳಿತ ಕೋಶ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಯುನಿಸೆಫ್ ಹೈದರಾಬಾದ್ ಸಂಯುಕ್ತಾಶ್ರಯದಲ್ಲಿ “ಕರ್ನಾಟಕ ಗ್ರಾಮ ಸ್ವರಾಜ್ ಅಧಿನಿಯಮ ಹಾಗೂ ಮಕ್ಕಳ ಸಂರಕ್ಷಣೆಯ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಹಾಗೂ ನಾಗರಿಕ ಸಂಸ್ಥೆಗಳ ಸಹಭಾಗಿತ್ವ” ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಅವರಿಗೆ ತಮ್ಮ ಅಭಿಪ್ರಾಯಗಳನ್ನು, ಸಮಸ್ಯೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ವಾತಾವರಣವನ್ನು ಕಲ್ಪಿಸಿ ಅವರಿಗೆಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಬೇಕಾಗಿದೆ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ತಿದ್ದುಪಡಿ ಹಿನ್ನಲೆಯಲ್ಲಿ ಮಕ್ಕಳ ಸಂರಕ್ಷಣೆಯ ಕಾರ್ಯ ವಿಧಾನಗಳ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಮತ್ತು ನಾಗರಿಕ ಸಂಘ- ಸಂಸ್ಥೆಗಳ ಸಹಭಾಗಿತ್ವ, ಸಮನ್ವಯತೆ, ಸಹಕಾರ ಮತ್ತು ಭಾಗವಹಿಸುವಿಕೆಯ ಮಂಡನೆ ಹಾಗೂ ಮಕ್ಕಳಿಗೆÀ ಸಂಬAಧಿಸಿದ ವಿವಿಧ ಕಾನೂನುಗಳ ಬಗ್ಗೆ ಸಂಕ್ಷಿಪ್ತ ಪರಿಚಯ ಮತ್ತು ಅದರ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಮತ್ತು ಅಧಿಕಾರಿಗಳ ಜವಾಬ್ದಾರಿ ಮತ್ತು ಪಾತ್ರಗಳ ಕುರಿತು ಮಂಡನೆ, ವಿಪತ್ತು ನಿರ್ವಹಣೆಯ ಕುರಿತು ಉಪನ್ಯಾಸ ಕಾರ್ಯಕ್ರಮ ಹಾಗೂ ಚರ್ಚೆಗಳು ನಡೆದವು.
ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆ ಕೊಪ್ಪಳ ಪ್ರಾದೇಶಿಕ ಸಂಯೋಜಕರಾದ ರಾಘವೇಂದ್ರ ಭಟ್, ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಯುನಿಸೆಫ್ ಸಂಯೋಜಕರಾದ ಡಾ.ಕೆ.ಲೆನಿನ್ ಬಾಬು ಅವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಡಾ.ಹಣಮಂತರಾಯ ಕರಡಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದ್ಯಸರಾದ ಮಳಪ್ಪ ಎಸ್.ವಂಟೂರ್, ಬಾಲ ನ್ಯಾಯ ಮಂಡಳಿ ಸದಸ್ಯರಾದ ನಿರ್ಮಲಾದೇವಿ ಹೂಗಾರ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ನಾಗರಿಕ ಸಂಘ- ಸಂಸ್ಥೆಗಳ ನಿರ್ದೇಶಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಕೆ.ಎಸ್.ಆರ್.ಡಿ.ಪಿ.ಆರ್.ಯು.-ಮಕ್ಕಳ ಹಕ್ಕುಗಳು ಮತ್ತು ಆಡಳಿತ ಕೋಶ ಗದಗ ಸಂಯೋಜಕರಾದ ಮುತ್ತುರಾಜ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ