ಶನಿವಾರ, ಡಿಸೆಂಬರ್ 21, 2019

ಇಂದು ಅಭಿರಂಗ ಮಕ್ಕಳ ನಾಟಕೋತ್ಸವ
ಯಾದಗಿರಿ, ಡಿಸೆಂಬರ್ ೨೧ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ರಾಜ್ಯ ಬಾಲ ಭವನ ಸೂಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಬಾಲ ಭವನ ಸೂಸೈಟಿಯ ಸಂಯುಕ್ತಾಶ್ರಯದಲ್ಲಿ “ಅಭಿರಂಗ” ಮಕ್ಕಳ ನಾಟಕೋತ್ಸವವನ್ನು ಡಿಸೆಂಬರ್ ೨೨ರಂದು ಯಾದಗಿರಿ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೀದಿ ನಾಟಕ: ಸ್ವಚ್ಛ ಭಾರತ ಅಭಿಯಾನ, ಪರಿಸರ ಮಾಲಿನ್ಯ, ಹಾಗೂ ಬಾಲ್ಯ ವಿವಾಹದ ಕುರಿತು ಬೀದಿ ನಾಟಕ ಪ್ರದರ್ಶನವನ್ನು ಬೆಳಿಗ್ಗೆ ೧೧ರಿಂದ ಮಧ್ಯಾಹ ೧ ಗಂಟೆಗೆಯವರೆಗೆ ಯಾದಗಿರಿ ನಗರದ ಹೊಸ ಬಸ್‌ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ್ ಉದ್ಘಾಟಿಸುವರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶರಣಪ್ಪ ಪಾಟೀಲ್, ಜಿಲ್ಲಾ ಬಾಲ ಭವನ ಸೂಸೈಟಿಯ ಸದಸ್ಯರಾದ ಚನ್ನಬಸಪ್ಪ ಕುಳಗೇರಿ ಅವರು ಮುಖ್ಯ ಅಥಿತಿಗಳಾಗಿ ಆಗಮಿಸುವರು.
ರಂಗ ಪ್ರದರ್ಶನ: ಅಯ್ಯಪ್ಪ ದೊರೆ ಅವರ ನಿರ್ದೇಶನದ “ಭಕ್ತ ಪ್ರಹ್ಲಾದ” ಹಾಗೂ ಶ್ರೀನಿವಾಸ ಕಶೆಟ್ಟಿ ಅವರ ನಿರ್ದೇಶನದ “ನಂದಾ ದೀಪ” ರಂಗಪ್ರರ್ದಶನವನ್ನು ಸಂಜೆ ೫.೩೦ ರಿಂದ ೭ ಗಂಟೆಯವರೆಗೆ ಯಾದಗಿರಿ ನಗರದ ಲುಂಬಿನಿ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ್ ಅರ್ಜುನ ಬನಸೋಡೆ ಅವರು ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಅಧ್ಯಕ್ಷತೆ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಡಾ.ಹಣಮಂತ್ರಾಯ ಕರಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದೊಡ್ಡಪ್ಪ ಹೊಸಮನಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಬಿ.ಜಿ. ಪಾಟೀಲ್, ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಚನ್ನಬಸಪ್ಪ ಕುಳಗೇರಿ, ಕನ್ನಡ ಮತ್ತು ಸಂಸ್ಕçತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶರಣಪ್ಪ ಪಾಟೀಲ್ ಹಾಗೂ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಡಿಸೆಂಬರ್ ತಿಂಗಳ ಪಡಿತರ ಧಾನ್ಯ ಬಿಡುಗಡೆ
ಯಾದಗಿರಿ, ಡಿಸೆಂಬರ್ ೨೧ (ಕರ್ನಾಟಕ ವಾರ್ತೆ): ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಿಗೆ ಡಿಸೆಂಬರ್ ತಿಂಗಳ ಪಡಿತರ ಧಾನ್ಯ ಬಿಡುಗಡೆ ಮಾಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತ್ಯೋದಯ ಅನ್ನ ಯೋಜನೆಯ ೨೬,೫೩೪ ಪಡಿತರ ಚೀಟಿಗಳಿಗೆ ತಲಾ ೩೫ ಕೆ.ಜಿ ಅಕ್ಕಿ, ೨,೨೯,೪೨೨ ಬಿಪಿಎಲ್ ಪಡಿತರ ಚೀಟಿಗಳ ೮,೧೪,೮೫೭ ಸದಸ್ಯರಿಗೆ ತಲಾ ೭ ಕೆ.ಜಿ ಅಕ್ಕಿಯನ್ನು ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ವಿತರಿಸಲು ಹಂಚಿಕೆ ನೀಡಲಾಗಿದೆ. ಪಡಿತರ ಚೀಟಿದಾರರು ತಮ್ಮ ಹಕ್ಕಿನಲ್ಲಿರುವ ಅಕ್ಕಿಯನ್ನು ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ತಪ್ಪದೇ ಪಡೆದುಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.
ಜಿಲ್ಲೆಯ ೩೯೯ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಪಡಿತರ ಚೀಟಿದಾರರ ಕುಟುಂಬದ ಒಬ್ಬ ಸದಸ್ಯರ ಬೆರಳಚ್ಚನ್ನು/ಬಯೋಮೆಟ್ರಿಕ್ ಪಡೆದು ಪಡಿತರ ವಿತರಿಸಲು (Poiಟಿಣ oಜಿ Sಚಿಟe – PಔS Shoಠಿ ಒoಜuಟe) ವ್ಯವಸ್ಥೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯನ್ವಯ ಪಡಿತರ ಪಡೆದುಕೊಳ್ಳಲು ಯಾವುದೇ ದೂರು ಇದ್ದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್, ಜಿಲ್ಲೆಯ ಉಪ ನಿರ್ದೇಶಕರ ಕಚೇರಿ ಅಥವಾ ಸಹಾಯವಾಣಿ ೧೯೬೭ ಸಂಖ್ಯೆಗೆ ದೂರನ್ನು ದಾಖಲಿಸಬಹುದು. ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರು ಪಡಿತರ ಪಡೆಯುವ ವೇಳೆಯಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ ಸಂಖ್ಯೆಯೊAದಿಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...