ಗುರುವಾರ, ಡಿಸೆಂಬರ್ 19, 2019

ಡಿ.೨೧ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ
ಯಾದಗಿರಿ, ಡಿಸೆಂಬರ್ ೧೯ (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ತಿದ್ದುಪಡಿ ಜಾರಿಗೆ ತಂದಿರುವುದನ್ನು ವಿರೋಧಿಸಿ ಹಾಗೂ ನಾಗರಿಕ ರಾಷ್ಟಿçಯ ನೋಂದಣಿ ಜಾರಿ ಮಾಡಿದ್ದನ್ನು ವಿರೋಧಿಸುವ ಹಿನ್ನೆಲೆಯಲ್ಲಿ ಕೆಲವು ಸಂಘ-ಸ0ಸ್ಥೆಗಳು “ಬಂದ್” ಪ್ರತಿಭಟನೆಗೆ ರಾಷ್ಟಿçಯ ಕರೆ ನೀಡಿರುವ ಪ್ರಯುಕ್ತ ಯಾದಗಿರಿ ಜಿಲ್ಲೆಯಾದ್ಯಂತ ಡಿಸೆಂಬರ್ ೧೮ರ ರಾತ್ರಿ ೯ ಗಂಟೆಯಿ0ದ ಡಿ.೨೧ರ ರಾತ್ರಿ ೧೧.೫೯ ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ ೧೯೭೩ರ ಕಲಂ ೧೪೪ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಾದ್ಯಂತ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಮಾಡಬಾರದು. ಮೆರವಣಿಗೆ, ಸಭೆ, ಸಮಾರಂಭ, ರ‍್ಯಾಲಿ ನಡೆಸಬಾರದು. ಬಹಿರಂಗ ಘೋಷಣೆ ಅಥವಾ ಪ್ರಚೋದನಕಾರಿ ಘೋಷಣೆಗಳನ್ನು ಕೂಗುವುದನ್ನು ಮಾಡಬಾರದು. ಬಂದೂಕು, ಭರ್ಚಿ, ಕತ್ತಿ, ಚಾಕು, ಕುಡುಗೋಲು, ಕೊಡಲಿ, ಬಡಿಗೆ ಸೇರಿದಂತೆ ಯಾವುದೇ ಮಾರಕಾಸ್ತç ಮತ್ತು ಸ್ಫೋಟಕ ವಸ್ತುಗಳನ್ನು ಜೊತೆಗೆ ಕೊಂಡೊಯ್ಯಬಾರದು. ಜೀವಂತ ಅಥವಾ ಮೃತ ವ್ಯಕ್ತಿಯ ಭಾವಚಿತ್ರ ಅಥವಾ ಪ್ರತಿರೂಪವನ್ನು ಪ್ರದರ್ಶಿಸುವ ಇಲ್ಲವೇ ಇತರೆ ಕಾರ್ಯವನ್ನು ನಿಷೇಧಿಸಲಾಗಿದೆ. ಶವ ಸಂಸ್ಕಾರ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಶಾಲಾ-ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...