ಬುಧವಾರ, ಡಿಸೆಂಬರ್ 11, 2019

ಕೆರೆಗಳ ಹೂಳೆತ್ತುವ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಾಗಾರ
ಕೆರೆಗಳ ಹೂಳೆತ್ತುವುದರಿಂದ ಅಂತರ್ಜಲಮಟ್ಟ ಹೆಚ್ಚಳ
-:ರಾಜಶೇಖರಗೌಡ ಪಾಟೀಲ್ ವಜ್ಜಲ್
ಯಾದಗಿರಿ, ಡಿಸೆಂಬರ್ ೧೧ (ಕರ್ನಾಟಕ ವಾರ್ತೆ): ೨೦೧೯-೨೦ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಕೆರೆಗಳ ಹೂಳೆತ್ತುವ ಯೋಜನೆಯ ಮೂಲಕ ಅನೇಕ ಕೆರೆಗಳ ಹೂಳನ್ನು ತೆಗೆಯಲಾಗಿದ್ದು, ಈ ಯೋಜನೆ ಅಂತರ್ಜಲ ಮಟ್ಟ ಹೆಚ್ಚಳವಾಗಲು ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನ ಇಲಾಖೆಗಳಾದ ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ, ಸಣ್ಣ ನೀರಾವರಿ ಇಲಾಖೆಗಳ ಕೆರೆಗಳ ಹೂಳೆತ್ತುವ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಕೆರೆಗಳ ಹೂಳೆತ್ತುವುದರಿಂದ ಕೆರೆಯ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಳವಾಗಿದೆ. ಅಲ್ಲದೇ ಕೆರೆಯ ಹೂಳನ್ನು ಜಮೀನುಗಳಿಗೆ ಹಾಕಿಕೊಂಡ ರೈತರು ಈ ಬಾರಿ ಉತ್ತಮ ಫಸಲು ಬೆಳೆದಿರುವುದನ್ನು ಮನಗಂಡು ರಾಷ್ಟçಮಟ್ಟದಲ್ಲಿ ಪ್ರಶಸ್ತಿ ಸಿಕ್ಕಿರುವುದು ಸಹ ಗಮನಾರ್ಹ ಸಂಗತಿಯಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು. ಕೆರೆಗಳ ಹೂಳನ್ನು ತೆಗೆದಿರುವುದರಿಂದ ಸಾಕಷ್ಟು ಪ್ರಯೋಜನವಾಗಿದೆ. ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳ ಹೂಳನ್ನು ಕೂಡ ತೆಗೆದು ಕೆರೆಗಳಿಗೆ ಮಳೆಯ ನೀರು ಸುಗಮವಾಗಿ ಹರಿದುಬರುವಂತೆ ಮಾಡುವ ಕಾಮಗಾರಿಯನ್ನು ಸಹ ಸೇರ್ಪಡೆ ಮಾಡಿದ್ದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.
ಜಿಲ್ಲೆಯ ರೈತರು, ರೈತ ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಕೆರೆಗಳ ಹೂಳೆತ್ತುವ ಕಾರ್ಯಕ್ರಮ ಒಂದು ರೈತೋಪಯೋಗಿ ಆಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಭೀಮರಾಯನಗುಡಿ ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಹಾಗೂ ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿಗಳು ರೈತರಿಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಉಪಸ್ಥಿತರಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ದಿನೇಶ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಂಟಿ ಕೃಷಿ ನಿರ್ದೇಶಕರಾದ ದೇವಿಕಾ ಆರ್. ಅವರು ಸ್ವಾಗತಿಸಿದರು. ತಾಂತ್ರಿಕ ಅಧಿಕಾರಿ ಸುರೇಶ ಬಿ. ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...