ಸೋಮವಾರ, ಡಿಸೆಂಬರ್ 30, 2019

ಶ್ರಮಯೋಗಿ ಪಿಂಚಣಿ ಪಡೆಯಲು ಹೆಸರು ನೋಂದಾಯಿಸಿ
-ರಘುವೀರ ಸಿಂಗ್ ಠಾಕೂರ್
ಯಾದಗಿರಿ, ಡಿಸೆಂಬರ್ ೩೦ (ಕರ್ನಾಟಕ ವಾರ್ತೆ): ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಭಾರತ ಸರ್ಕಾರವು “ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್” ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಕಾರ್ಮಿಕರು ಈ ಯೋಜನೆಯಡಿ ಹೆಸರು ನೋಂದಾಯಿಸಿಕೊAಡು ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಹೇಳಿದರು.
ಜಿಲ್ಲೆಯ ಮುದ್ನಾಳ ಗ್ರಾಮದಲ್ಲಿ ಇತ್ತೀಚೆಗೆ ಕಾರ್ಮಿಕ ಇಲಾಖೆ, ಕೇಂದ್ರಿಯ ಸರ್ಕಾರಿ ಬೀಡಿ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಂ.ಎಸ್.ವೈ.ಎ0)ಯೋಜನೆಯಡಿ ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಮಾಹಿತಿ ನೀಡುವ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಅವರ ಮುಖಾಂತರ ಅಸಂಘಟಿತ ವಲಯದಲ್ಲಿ ಬರುವ ಇತರೆ ಕಾರ್ಮಿಕರನ್ನು ಈ ಯೋಜನೆಯಡಿ ಪಿಂಚಣಿ ಪಡೆಯುವಂತೆ ತಿಳಿವಳಿಕೆ ಮೂಡಿಸುವ ಉದ್ದೇಶದಿಂದ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಾದ್ಯಂತ ಇಲ್ಲಿಯವರೆಗೆ ೧,೬೪೧ಕ್ಕಿಂತ ಹೆಚ್ಚಿನ ಫಲಾನುಭವಿಗಳು ಈ ಯೋಜನೆಯಡಿ ನೋಂದÀಣಿಯಾಗಿರುತ್ತಾರೆ. ಗ್ರಾಮೀಣ ಪ್ರದೇಶದಲ್ಲಿ ವಿವಿಧ ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡಲು ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.ಕಾರ್ಮಿಕ ನಿರೀಕ್ಷಕರಾದ ಶಿವಶಂಕರ ಬಿ.ತಳವಾರ ಅವರು ಮಾತನಾಡಿ, ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ ೪೨ ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ನಮ್ಮ ದೈನಂದಿನ ಜೀವನದಲ್ಲಿ ಗೃಹ ಆಧಾರಿತ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ
 ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇದೇ ರೀತಿ ಇತರೆ ವಿವಿಧ ವಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಅವರ ವಯೋವೃದ್ಧದ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಎಂಬ ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಕೂಡಲೇ ಸಂಬAಧಿಸಿದ ವಲಯಗಳ ಕಾರ್ಮಿಕರು ತಪ್ಪದೇ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.
೬ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ, ಅಪಾಯಕಾರಿ ಅಲ್ಲದ ಉದ್ದಿಮೆಗಳಲ್ಲಿ ತೊಡಗಿಸಿಕೊಳ್ಳದೆ ಅವರಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಕೇಂದ್ರಿಯ ಬೀಡಿ ಆಸ್ಪತ್ರೆಯ ಆರೋಗ್ಯಧಿಕಾರಿ ಡಾ.ಕೆ.ವಿಕ್ರಾಂತ್ ಮತ್ತು ವೆಂಕಟೇಶ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಾರದಾ ಸಜ್ಜನ ಮತ್ತು ಪ್ರೀಯಾ ಸಜ್ಜನ, ಅಂಗನವಾಡಿ ಮೇಲ್ವಿಚಾರಕಿ ಶರಣಮ್ಮ, ಮುದ್ನಾಳ ಗ್ರಾಮದ ಅಂಗನವಾಡಿ ಮೇಲ್ವಿಚಾರಕಿ ರುಸೀಯಾ ಖಾಸಿಂ, ಕಾರ್ಮಿಕ ಇಲಾಖೆ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೊತ್ವಾಲ್,  ಕಾರ್ಮಿಕ ಇಲಾಖೆ ವಿವಿಧ ವಲಯಗಳ ಕಾರ್ಮಿಕರು ಕಾರ್ಯಕ್ರಮದಲ್ಲಿ ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...