ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸುವುದು ಕಡ್ಡಾಯ
-:ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಡಿಸೆಂಬರ್ ೦೩ (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಎಲ್ಲಾ ಸದಸ್ಯರು ತಮ್ಮ ನ್ಯಾಯಬೆಲೆ ಅಂಗಡಿಗಳಿಗೆ ಹಾಜರಾಗಿ ಕಡ್ಡಾಯವಾಗಿ ಆಧಾರ್ ದೃಢೀಕರಣ (ಇ-ಕೆವೈಸಿ)ವನ್ನು ಮಾಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ-ಕೆವೈಸಿ ಸಂಗ್ರಹಣಾ ಕಾರ್ಯವನ್ನು ತಿಂಗಳ ಮೊದಲ ಹತ್ತು ದಿನಗಳ ಅಂದರೆ ಡಿಸೆಂಬರ್ ೧ರಿಂದ ೧೦ರವರೆಗೆ ಮತ್ತು ೨೦೨೦ರ ಜನವರಿ ೧ರಿಂದ ಜ.೧೦ರ ವರೆಗೆ ಮಾಡಲಾಗುತ್ತದೆ. ಈ ಹತ್ತು ದಿನಗಳಲ್ಲಿ ಆನ್‌ಲೈನ್ ಮೂಲಕ ಪಡಿತರ ವಿತರಣೆ ಇರುವುದಿಲ್ಲ. ಇ-ಕೆವೈಸಿ ಮಾಡದೆ ಇರುವ ಫಲಾನುಭವಿಗಳಿಗೆ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ೨೬,೫೩೪ ಅಂತ್ಯೋದಯ ಪಡಿತರ ಚೀಟಿಯ ೧,೦೩,೯೫೯ ಸದಸ್ಯರು ಹಾಗೂ ೨,೨೯,೪೨೩ ಆದ್ಯತಾ ಕುಟುಂಬ (ಬಿಪಿಎಲ್) ಪಡಿತರ ಚೀಟಿಯ ೮,೧೪,೮೫೭ ಸದಸ್ಯರು ಒಟ್ಟು ೯,೧೮,೮೧೬ ಫಲಾನುಭವಿಗಳಿದ್ದು, ಶೇಕಡಾ ೧೦೦ರಷ್ಟು ಆಧಾರ್ ಅನ್ನು ಸಂಗ್ರಹಿಸಲಾಗಿದೆ. ಇದರಲ್ಲಿ ಪ್ರತಿ ಪಡಿತರ ಚೀಟಿಗಳನ್ನು ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ರದ್ದು ಪಡಿಸಲು ಹಾಗೂ ಅರ್ಹ ಪಡಿತರ ಚೀಟಿದಾರರನ್ನು ಗುರುತಿಸಿ ಪಡಿತರ ಚೀಟಿಯನ್ನು ನೀಡಲು ತಿಳಿಸಲಾಗಿದೆ. ಈ ಹಿಂದೆ ಯಾದಗಿರಿ ಜಿಲ್ಲೆಯಲ್ಲಿ ೨೬,೫೩೪ ಅಂತ್ಯೋದಯ ಪಡಿತರ ಚೀಟಿಯಲ್ಲಿ ೪,೩೦೦ ಪಡಿತರ ಚೀಟಿಯ ೨೩,೪೭೫ ಸದಸ್ಯರು ಹಾಗೂ ೨,೨೯,೪೨೩ ಆದ್ಯತಾ ಕುಟುಂಬ (ಬಿಪಿಎಲ್) ಪಡಿತರ ಚೀಟಿಯಲ್ಲಿ ೮೯,೦೭೬ ಪಡಿತರ ಚೀಟಿಯ ೩,೩೭,೬೧೫ ಸದಸ್ಯರ ಇ-ಕೆವೈಸಿ ಪಡೆದಿದ್ದು, ಮತ್ತೊಮ್ಮೆ ಇವರ ಇ-ಕೆವೈಸಿ ಸಂಗ್ರಹಿಸುವ ಅವಶ್ಯಕತೆ ಇರುವುದಿಲ್ಲ.
ಜಿಲ್ಲೆಯ ಎಲ್ಲಾ ಫಲಾನುಭವಿಗಳ ಮಾಹಿತಿಯೊಂದಿಗೆ ಆಧಾರ್ ಜೋಡಣೆಯಾಗಿರುವುದರಿಂದ ಚಾಲ್ತಿಯಲ್ಲಿರದ, ಕುಟುಂಬದೊAದಿಗೆ ವಾಸವಿಲ್ಲದ, ಮೃತರಾದ ಫಲಾನುಭವಿಗಳಿಗೆ ಮಾಹಿತಿಗಳನ್ನು ಗುರುತಿಸಿ ಅಂತಹ ಫಲನುಭವಿಗಳ ಮಾಹಿತಿಗಳನ್ನು ಆಹಾರ ದತ್ತಾಂಶದಿAದ ಕಡಿತಗೊಳಿಸಿ ಪಡಿತರ ದಾಸ್ತಾನು ಉಳಿಕೆಯಾಗಲು ಕ್ರಮವಹಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎನ್.ಐ.ಸಿ ರವರು ಈಗಾಗಲೇ ಸಿದ್ಧಪಡಿಸಿರುವ ತಂತ್ರಾAಶದಿAದ ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಜಾರಿಗೊಳಿಸಲಾಗಿದೆ. ಇದರಲ್ಲಿ ನ್ಯಾಯಬೆಲೆ ಅಂಗಡಿ ಹಂತದಲ್ಲಿ ಮಾತ್ರ ಇ-ಕೆವೈಸಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಾತಿ ಪ್ರಮಾಣಪತ್ರ ಸಲ್ಲಿಸಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪಡಿತರ ಚೀಟಿಯ ಫಲಾನುಭವಿಗಳು ತಮ್ಮ ಪಡಿತರ ಚೀಟಿಯ ಯಾವುದಾದರೂ ಒಬ್ಬ ಸದಸ್ಯರ ಜಾತಿ ಪ್ರಮಾಣ ಪತ್ರವನ್ನು ಇ-ಕೆವೈಸಿ ಮಾಡುವ ಸಂದರ್ಭದಲ್ಲಿ ಮಾಹಿತಿ ನೀಡಬೇಕು. ಅನಿಲ ಸಂಪರ್ಕ ಹೊಂದಿದರೆ, ಅಂತಹ ಪಡಿತರ ಚೀಟಿದಾರರ ಯಾವ ಯೋಜನೆಯ ಫಲಾನುಭವಿಗಳು ಅಥವಾ ನೇರವಾಗಿ ಖರೀದಿ ಮಾಡಿರುವ ಕುರಿತು ಮಾಹಿತಿ ನೀಡಲು ಸೂಚಿಸಲಾಗಿದೆ.
ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ಫಲಾನುಭವಿಯ ಇ-ಕೆವೈಸಿ ಮಾಡುವ ಸಲುವಾಗಿ ಪ್ರತಿ ಫಲಾನುಭವಿಗೆ ೫ ರೂ.ನಂತೆ ಒಂದು ಕುಟುಂಬಕ್ಕೆ ಗರಿಷ್ಠ ಮೊತ್ತ ೨೦ ರೂ. ಮಾತ್ರ ಇಲಾಖೆ ವತಿಯಿಂದ ನೇರವಾಗಿ ಅಂಗಡಿಯವರಿಗೆ ಪಾವತಿಸಲಾಗುತ್ತದೆ. ಫಲಾನುಭವಿಯಿಂದ ಯಾವುದೇ ಮೊತ್ತವನ್ನು ನ್ಯಾಯಬೆಲೆ ಅಂಗಡಿಯವರು ಸಂಗ್ರಹಿಸಿದAತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಒಂದು ವೇಳೆ ಪಡಿತರ ಚೀಟಿದಾರರಿಂದ ಹಣ ಪಡೆದ ಬಗ್ಗೆ ದೂರುಗಳು ಬಂದರೆ ಅಂತಹ ನ್ಯಾಯಬೆಲೆ ಅಂಗಡಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಪಡಿತರ ಚೀಟಿದಾರರ ಆಧಾರ್ ದೃಢೀಕರಣ (ಇ-ಕೆವೈಸಿ)ವನ್ನು ಪಡೆಯುವ ಸಂದರ್ಭದಲ್ಲಿ ಯಾವುದಾದರು ಸಮಸ್ಯೆಗಳು ಮತ್ತು ದೂರುಗಳು ಇದ್ದರೆ ದೂರವಾಣಿ ಸಂಖ್ಯೆ:೦೮೪೭೩-೨೫೩೭೦೭ ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ