ಬುಧವಾರ, ಡಿಸೆಂಬರ್ 18, 2019

ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ
ಡಿ.೨೯ರಂದು ವಿಶ್ವ ಮಾನವ ಕುವೆಂಪು ಜಯಂತ್ಯೋತ್ಸವ
ಯಾದಗಿರಿ, ಡಿಸೆಂಬರ್ ೧೮ (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ವಿಶ್ವ ಮಾನವ ರಾಷ್ಟçಕವಿ ಕುವೆಂಪು ರವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ ೨೯ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ವಿಶ್ವ ಮಾನವ (ರಾಷ್ಟçಕವಿ ಕುವೆಂಪು ರವರ ಜಯಂತ್ಯೋತ್ಸವ) ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ವಿಶ್ವ ಮಾನವ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಂದು ಬೆಳಿಗ್ಗೆ ೧೦ ಗಂಟೆಗೆ ರಾಷ್ಟçಕವಿ ಕುವೆಂಪು ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ವಿಶ್ವ ಮಾನವ ದಿನವನ್ನು ಕಡ್ಡಾಯವಾಗಿ ಆಚರಿಸಬೇಕು. ತಹಶೀಲ್ದಾರರು ತಾಲ್ಲೂಕು ಮಟ್ಟದಲ್ಲಿ ಸದರಿ ಜಯಂತಿಯನ್ನು ವಿಜೃಂಭಣೆಯಿAದ ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು.
ಯಾದಗಿರಿ ನಗರದ ರಸ್ತೆಗಳ ಸ್ವಚ್ಛತೆಗೆ ನಗರಸಭೆ ಕ್ರಮ ಕೈಗೊಳ್ಳಬೇಕು. ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಗಣ್ಯ ವ್ಯಕ್ತಿಗಳು ಹಾಗೂ ಅಧಿಕಾರಿಗಳಿಗೆ ಉಪಾಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಲಾಯಿತು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರಾದ ದತ್ತಪ್ಪ ಕಲ್ಲೂರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...