ಶುಕ್ರವಾರ, ಡಿಸೆಂಬರ್ 6, 2019

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಂಬಾಕು ನಿಯಂತ್ರಣ ಘಟಕದ ತ್ರೆಮಾಸಿಕ ಸಭೆ
ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ಸೂಚನೆ
ಯಾದಗಿರಿ, ಡಿಸೆಂಬರ್ ೦೬ (ಕರ್ನಾಟಕ ವಾರ್ತೆ): ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ-೨೦೦೩(ಕೊಟ್ಪಾ-೨೦೦೩) ಕಾಯ್ದೆಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಯಂತ್ರಣಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲು ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಸಹ ವಶಪಡಿಸಿಕೊಂಡು ದಂಡ ವಿಧಿಸಬೇಕು. ಜೊತೆಗೆ ಅಂಗಡಿ, ಶಾಪ್‌ಗಳಲ್ಲಿ ಬಾಲಕಾರ್ಮಿಕರು ಕಂಡುಬAದರೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಶಿಕ್ಷಕರ ಸಭೆ, ಗ್ರಾಮ ಪಂಚಾಯಿತಿ ಹಾಗೂ ನಗರಸಭೆಗಳ ಸಭೆಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವಂತೆ ಅವರು ನಿರ್ದೇಶಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಅಡಿ ಬರುವ ಸರ್ಕಾರಿ ಮತ್ತು ಸರ್ಕಾರೇತರ ಶಾಲೆಗಳಲ್ಲಿ ಕಡ್ಡಾಯವಾಗಿ ಸೆಕ್ಷನ್-೪ ಮತ್ತು ೬(ಬಿ) ಅಡಿಯಲ್ಲಿ ನಾಮಫಲಕ ಅಳವಡಿಸಬೇಕು. ಸೆಕ್ಷನ್ ೬(ಎ) ಪ್ರಕಾರ ೧೮ ವರ್ಷದೊಳಗಿನ ಮಕ್ಕಳು ತಂಬಾಕು ಉತ್ಪನ್ನದ ವಸ್ತುಗಳನ್ನು ಸೇವನೆ ಮಾಡುವಂತಿಲ್ಲ ಹಾಗೂ ೬(೨)ಎ ಪ್ರಕಾರ ಮಕ್ಕಳಿಗೆ ತಂಬಾಕು ಉತ್ಪನ್ನಗಳು ಕಾಣುವಂತೆ ಪ್ರದರ್ಶಿಸಬಾರದು ಎಂದು ಸೂಚಿಸುವ ಜಾಹೀರಾತು ನಾಮಫಲಕ ಅಳವಡಿಸಬೇಕು. ಸೆಕ್ಷನ್ ೬ರ ಪ್ರಕಾರ ಯಾವುದೇ ಸರ್ಕಾರಿ ಹಾಗೂ ಸರ್ಕಾರೇತರ ಶಾಲೆಗಳ ೧೦೦ ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಬಾರದು ಮತ್ತು ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದನೆ ನೀಡುವ ಜಾಹೀರಾತು ಫಲಕಗಳನ್ನು ಪ್ರದರ್ಶಿಸುವಂತಿಲ್ಲ ಎಂದು ಅವರು ತಿಳಿಸಿದರು.
ಎಲ್ಲಾ ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳಲ್ಲಿ ಸೆಕ್ಷನ್-೪ರ ಪ್ರಕಾರ ಬೋರ್ಡ್ ಅಳವಡಿಸಬೇಕು. ನಗರಸಭೆಯ ಅಧೀನದಲ್ಲಿ ಬರುವ ಎಲ್ಲಾ ಅಂಗಡಿ, ಹೋಟೆಲ್, ಪಾನ್‌ಶಾಪ್‌ಗಳಲ್ಲಿ ಸೆಕ್ಷನ್-೪ರ ಪ್ರಕಾರ ಸಾರ್ವಜನಿಕರಿಗೆ ಕಾಣುವಂತೆ ಬೋರ್ಡ್ ಅಳವಡಿಸಬೇಕು. ಬಿಡಿಬಿಡಿಯಾಗಿ ಮಾರಾಟವಾಗುವ ತಂಬಾಕು ಪದಾರ್ಥಗಳನ್ನು ವಶಕ್ಕೆ ಪಡೆದು ಮಾರಾಟಗಾರರಿಂದ ದಂಡ ವಸೂಲಿ ಮಾಡಬೇಕು ಎಂದು ಅವರು ನಿರ್ದೇಶಿಸಿದರು.
ಸೆಕ್ಷನ್ ೫ರ ಪ್ರಕಾರ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿಗಳು, ಹೋಟೆಲ್, ಪಾನ್‌ಶಾಪ್‌ಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡಲು ಪ್ರೋತ್ಸಾಹಿಸುವಂಥ ಜಾಹೀರಾತು ಫಲಕಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವಂತಿಲ್ಲ ಎಂದು ಅವರು ಹೇಳಿದರು.
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವನೆ ಮಾಡುವ ವ್ಯಕ್ತಿಗಳ ವಿರುದ್ಧ ಸೆಕ್ಷನ್ ೨೧ರ ಪ್ರಕಾರ ೨೦೦ ರೂ. ದಂಡ ವಿಧಿಸಲು ಅವಕಾಶ ಇದೆ. ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಯ ಮುಕ್ತ ಪ್ರದೇಶವೆಂದು ನಿರ್ಮಾಣ ಮಾಡುವಲ್ಲಿ ಅಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಮನಸ್ಸು ಮಾಡಿದಾಗ ಮಾತ್ರ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ.ವಿವೇಕಾನಂದ ಟೆಂಗೆ, ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ನಾರಾಯಣಪ್ಪ, ನಗರಸಭೆ ಪೌರಾಯುಕ್ತರಾದ ರಮೇಶ ಸುಣಗಾರ, ಆಹಾರ ಸುರಕ್ಷತಾ ಅಧಿಕಾರಿ ಆಂಜನೇಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷಿö್ಮÃ ಸಜ್ಜನ್, ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ್, ಆಪ್ತ ಸಮಾಲೋಚಕರಾದ ನಟರಾಜ್ ಸೇರಿದಂತೆ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...