ಸೋಮವಾರ, ಡಿಸೆಂಬರ್ 23, 2019

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಪ್ರವಾಸ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖಾ ಸಚಿವರಾದ ಶಶಿಕಲಾ ಅ. ಜೊಲ್ಲೆ ಅವರು ಕಲಬುರಗಿ ಜಿಲ್ಲೆಯಿಂದ ರಸ್ತೆ ಮಾರ್ಗವಾಗಿ ಡಿಸೆಂಬರ್ 24 ರಂದು ಮಧ್ಯಾಹ್ನ 3 ಗಂಟೆಗೆ ಯಾದಗಿರಿಗೆ ಆಗಮಿಸುವರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ ೫.೩೦ ಗಂಟೆಗೆ ಯಾದಗಿರಿ ನಗರದ ಡಾ.ಸಿ.ಎಂ.ಪಾಟೀಲ್ ಆಸ್ಪತ್ರೆ ಹಿಂಭಾಗದಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡುವರು. ನಂತರ ೬.೩೦ ಗಂಟೆಗೆ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡುವರು. ರಾತ್ರಿ ೮ ಗಂಟೆಗೆ ರಸ್ತೆ ಮೂಲಕ ಯಕ್ಸಂಬಾಗೆ ಪ್ರಯಾಣ ಬೆಳೆಸುವರು.
ಎಸಿಬಿ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ಯಾದಗಿರಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಶಹಾಪೂರ ತಾಲ್ಲೂಕಿನ ದೋರನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಡಿಸೆಂಬರ್ ೨೪ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಸಿ ಅರ್ಜಿ ಅಹವಾಲು ಸ್ವೀಕಾರ ಮಾಡಲಿದ್ದು, ಸಾರ್ವಜನಿಕರು ಭ್ರಷ್ಟಾಚಾರಕ್ಕೆ ಸಂಬAಧಿಸಿದ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಭ್ರಷ್ಟಾಚಾರ ನಿಗ್ರಹ ದಳದ ಡಿ.ಎಸ್.ಪಿ ಸಂತೋಷ ಕೆ.ಎಂ (ಮೊ:೯೪೮೦೮೦೬೨೪೨), ಪೊಲೀಸ್ ಇನ್‌ಸ್ಪೆಕ್ಟರ್ ಬಾಬಾಸಾಹೇಬ ಪಾಟೀಲ್ (ಮೊ:೯೪೮೦೮೦೬೩೧೩), ಪೊಲೀಸ್ ಇನ್‌ಸ್ಪೆಕ್ಟರ್ ಗುರುಪಾದ ಎಸ್.ಬಿರಾದಾರ (ಮೊ:೯೪೮೦೮೦೬೩೧೪) ಅವರು ಅಹವಾಲು ಸ್ವೀಕರಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಂದಿನಿAದ ಸರ್ಕಾರದ ಸಾಧನೆಗಳ ಛಾಯಾಚಿತ್ರ ಪ್ರದರ್ಶನ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ಪ್ರಸಕ್ತ ರಾಜ್ಯ ಸರಕಾರವು ನೂರು ದಿನಗಳನ್ನು ಪೂರೈಸಿ ಮುನ್ನೆಡೆದಿದ್ದು, ಈ ಅವಧಿಯಲ್ಲಿ ಕೈಗೊಂಡ ಅಭಿವೃದ್ದಿ ಕಾರ್ಯಕ್ರಮಗಳು ಹಾಗೂ ನೆರೆ ಪ್ರವಾಹದ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಛಾಯಾಚಿತ್ರ ಪ್ರದರ್ಶನವನ್ನು ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ.
ಈ ದಿಸೆಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಛಾಯಾಚಿತ್ರ ಪ್ರದರ್ಶನವನ್ನು ಡಿಸೆಂಬರ್ ೨೪ ಮಂಗಳವಾರದಿAದ ೨೬ರ ಗುರುವಾರದ ವರೆಗೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದೆ. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಈ ಛಾಯಾಚಿತ್ರ ಪ್ರದರ್ಶನವನ್ನು ಡಿ.೨೪ರಂದು ಬೆಳಿಗ್ಗೆ ೧೦ ಗಂಟೆಗೆ ಉದ್ಘಾಟಿಸುವರು.
ರಾಜ್ಯದಲ್ಲಿ ಇತ್ತೀಚಿಗೆ ಸಂಭವಿಸಿದ್ದ ನೆರೆಹಾವಳಿ ಸಂದರ್ಭದಲ್ಲಿ ಸರ್ಕಾರ ಕೈಗೊಂಡ ಹಲವು ಕ್ರಮಗಳು ಸೇರಿದಂತೆ ಸಾಧನೆಗಳ ಅನಾವರಣಗೊಳಿಸುವ ಈ ಛಾಯಾಚಿತ್ರ ಪ್ರದರ್ಶನವನ್ನು ಇಂದಿನಿAದ ಡಿ.೨೬ ರವರೆಗೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಉಚಿತವಾಗಿ ವೀಕ್ಷಿಸಬಹುದು ಎಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.
ಡಿ.೨೯ರಂದು ರಾಷ್ಟçಕವಿ ಕುವೆಂಪು ಜಯಂತಿ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಷ್ಟçಕವಿ ಕುವೆಂಪು ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಡಿಸೆಂಬರ್ ೨೯ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ್ ಅವರು ಅತಿಥಿಗಳಾಗಿ ಭಾಗವಹಿಸುವರು. ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ , ನರಸಿಂಹ ನಾಯಕ(ರಾಜುಗೌಡ), ನಾಗನಗೌಡ ಕಂದಕೂರ, ವಿಧಾನಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊದರ್ಶನಾಪೂರಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಲಿಂಗೇರಿ ಕೋನಪ್ಪ ಮಹಿಳಾ ವಿಶ್ವವಿದ್ಯಾಲಯದ ಡಾ.ಜ್ಯೋತಿಲತಾ ತಡಬಿಡಿಮಠ ಅವರು ವಿಶೇಷ ಉಪನ್ಯಾಸ ನೀಡುವರು.
ವಾಹನ ಫಲಕಗಳ ಮೇಲಿನ ಹೆಸರು, ಚಿಹ್ನೆಗಳ ತೆರವಿಗೆ ಸೂಚನೆ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ವಾಹನಗಳ ನೋಂದಣಿ ಫಲಕಗಳ ಮೇಲೆ ಹೆಸರು, ಚಿಹ್ನೆಗಳನ್ನು ಹಾಕಿಸುವುದು ಅಪರಾಧವಾಗಿದ್ದು, ವಾಹನಗಳ ಮಾಲೀಕರು ೭ ದಿನಗಳಲ್ಲಿ ತೆರವುಗೊಳಿಸದಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ವಸಂತ ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಹನಗಳ ನೋಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗ ಹೆಸರನ್ನು ಹೋಲುವಂತಹ ರಾಷ್ಟಿçÃಯ, ರಾಜ್ಯ ಮಾನವ ಹಕ್ಕುಗಳ ಸಂಸ್ಥೆ, ಒಕ್ಕೂಟ ಇತ್ಯಾದಿ ಹೆಸರುಗಳನ್ನು ಚಿಹ್ನೆ, ಲಾಂಛನಗಳನ್ನು ಹಾಗೂ ಇತರೆ ಸಂಘ ಸಂಸ್ಥೆಗಳ ಹೆಸರುಗಳನ್ನು ಹಾಕಿಸಿಕೊಳ್ಳುವುದು ಕೇಂದ್ರ ಮೋಟಾರು ವಾಹನ ನಿಯಮಗಳ ೧೯೮೯ ರ ನಿಯಮ ೫೦ ಮತ್ತು ೫೧ ರ ಹಾಗೂ ೧೯೫೦ ಕಲಂ ೩, ೪ ಮತ್ತು ೫ ರಲ್ಲಿ ಉಲ್ಲಂಘನೆಯಾಗುತ್ತದೆ. ಅಂತಹ ವಾಹನ ಮಾಲೀಕರು ಈ ಕಾಯ್ದೆಗಳ ಹಾಗೂ ನಿಯಮಗಳನ್ವಯ ದಂಡನೆಗೆ ಒಳಗಾಗಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...