ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹ
ಯಾದಗಿರಿ, ಡಿಸೆಂಬರ್ ೦೪ (ಕರ್ನಾಟಕ ವಾರ್ತೆ): “ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಸಪ್ತಾಹ” ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಭಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ಬಿ.ಪಿ.ಎಲ್., ಎ.ಪಿ.ಎಲ್ ಕುಟುಂಬದ ಮೊದಲ ಪ್ರಸವದ ಗರ್ಭಿಣಿ/ಬಾಣಂತಿಯರಿಗೆ ೫೦೦೦ ರೂ.ಗಳ ಸಹಾಯಧನ ನೀಡುವ ಸೌಲಭ್ಯವಾಗಿದ್ದು, ಮೂರು ಕಂತುಗಳಲ್ಲಿ ಫಲಾನುಭವಿಗಳ ಆಧಾರ್ ಲಿಂಕ್ಡ್ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಅರ್ಜಿದಾರರು ಫಲಾನುಭವಿಯ ಹಾಗೂ ಪತಿಯ ಆಧಾರ್ ಕಾರ್ಡ್ ಪ್ರತಿ, ತಾಯಿ ಮತ್ತು ಶಿಶುವಿನ ರಕ್ಷಣಾ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿಗಳೊಂದಿಗೆ ಅಂಗನವಾಡಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ಅರ್ಹ ಗರ್ಭಿಣಿ, ಬಾಣಂತಿಯರು ಸ್ಥಳೀಯ ಅಂಗನವಾಡಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಂಡು ಸೌಲಭ್ಯ ಪಡೆಯುವಂತೆ ಅವರು ಕೋರಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ