ಶನಿವಾರ, ಡಿಸೆಂಬರ್ 7, 2019

ಬಳಿಚಕ್ರ ಗ್ರಾಮದಲ್ಲಿ ಬಾಲ್ಯ ವಿವಾಹ ತಡೆ
ಯಾದಗಿರಿ, ಡಿಸೆಂಬರ್ ೦೬ (ಕರ್ನಾಟಕ ವಾರ್ತೆ): ಯಾದಗಿರಿ ತಾಲ್ಲೂಕಿನ ಬಳಿಚಕ್ರ ಗ್ರಾಮದಲ್ಲಿ ಬಾಲ್ಯವಿವಾಹ ನಡೆಯುತ್ತಿರುವ ಖಚಿತ ಮಾಹಿತಿಯ ಮೇರೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಮಾರ್ಗದರ್ಶನದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಬಾಲ್ಯವಿವಾಹವನ್ನು ತಡೆಹಿಡಿದಿದ್ದಾರೆ.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ.ಮಣ್ಣೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವೆಂಕಟೇಶ ನಾಯಕ್, ಜಿಲ್ಲಾ ಮಕ್ಕಳ ಸಹಾಯವಾಣಿ ೧೦೯೮ನ ಸಂಯೋಜಕ ಶರಬಯ್ಯ ಎಸ್.ಕಲಾಲ್, ಹೆಡ್ ಕಾನ್‌ಸ್ಟೆಬಲ್ ಮೋಹನರೆಡ್ಡಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ದಾಳಿ ನಡೆಸಲಾಗಿದೆ.
ಬಾಲ್ಯವಿವಾಹಕ್ಕೆ ಒಳಗಾಗುತ್ತಿದ್ದ ಮಕ್ಕಳ ಮನೆ ಭೇಟಿ ನೀಡಿದ ಅಧಿಕಾರಿಗಳು, ಬಾಲ್ಯವಿವಾಹದಿಂದ ಆಗುವ ದುಷ್ಪರಿಣಾಮಗಳ ಕುರಿತು ತಿಳುವಳಿಕೆ ಮೂಡಿಸಿದರು. ಹೆಣ್ಣಿಗೆ ೧೮ ವರ್ಷ, ಗಂಡಿಗೆ ೨೧ ವರ್ಷ ಪೂರ್ಣಗೊಳ್ಳುವವರೆಗೆ ಮದುವೆ ಮಾಡಬಾರದು. ಶಾಲಾ ದಾಖಲಾತಿ ಪ್ರಕಾರ ಬಾಲಕಿಗೆ ೧೭ ವರ್ಷ ೬ ತಿಂಗಳು ಆಗಿರುವುದರಿಂದ ಪೋಷಕರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಬಗ್ಗೆ ತಿಳಿಹೇಳಿದರು. ನಂತರ ಬಾಲಕಿಯನ್ನು ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ಕರೆತಂದು ಬಿಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...