ಸೋಮವಾರ, ಡಿಸೆಂಬರ್ 16, 2019

ಮಾತೃಭಾಷೆ ಶಿಕ್ಷಣದಿಂದ ಮಕ್ಕಳು ಪರಿಪೂರ್ಣ
-:ನ್ಯಾಯಾಧೀಶರಾದ ಶ್ರೀ ನಾಮದೇವ ಕೆ.ಸಾಲಮಂಟಪಿ
ಯಾದಗಿರಿ, ಡಿಸೆಂಬರ್ ೧೬ (ಕರ್ನಾಟಕ ವಾರ್ತೆ): ಕನ್ನಡ ಭಾಷೆಗೆ ನಾವೆಲ್ಲರೂ ಮೊದಲ ಆದ್ಯತೆ ನೀಡಬೇಕು. ಮಾತೃಭಾಷೆಯಲ್ಲಿ ಎಲ್ಲ ಮಕ್ಕಳು ಶಿಕ್ಷಣ ಪಡೆಯಬೇಕು. ಮಾತೃಭಾಷೆ ಶಿಕ್ಷಣದಿಂದ ಮಕ್ಕಳು ಪರಿಪೂರ್ಣವಾಗುತ್ತಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಬಾಲ ನ್ಯಾಯ ಮಂಡಳಿ ಅಧ್ಯಕ್ಷರಾದ ಶ್ರೀ ನಾಮದೇವ ಕೆ.ಸಾಲಮಂಟಪಿ ಅವರು ಹೇಳಿದರು.

ನಗರದ ಲುಂಬಿನಿ ಉದ್ಯಾನವನದಲ್ಲಿ ಭಾನುವಾರ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಡಾ.ಹಣಮಂತ್ರಾಯ ಕರಡಿ ಅವರು ಮಾತನಾಡಿ, ಜಿಲ್ಲಾ ಬಾಲ ಭವನ ವತಿಯಿಂದ ಮಕ್ಕಳಿಗಾಗಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರಂತೆ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ದೇಶಭಕ್ತಿಗೀತೆಗಳು ಮತ್ತು ಹಲವಾರು ಸ್ಪಧೆೆðಯಲ್ಲಿ ಮಕ್ಕಳು ಭಾಗವಹಿಸಿದಾಗ ಭಾಷೆ ಅಭಿವೃದ್ಧಿ ಜೊತೆಗೆ ಸರಕಾರಿ ಶಾಲೆಗಳು ಅಭಿವೃದ್ಧಿಯಾಗುತ್ತವೆ. ಇದರಿಂದ ಕನ್ನಡ ಸರಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎಂದು ಹೇಳಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಬಸವರಾಜ ಪಾಟೀಲ್ ಅವರು ಮಾತನಾಡಿ, ಬಾಲ ಭವನ ವತಿಯಿಂದ ಮಕ್ಕಳಿಗಾಗಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಕ್ಕೆ ಶ್ಲಾಘಿಸಿದರು.
ಸಾಹಿತಿ ಶೋಭಾ ಸಾಲಮಂಟಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗೌರಮ್ಮ, ನಾಗಮ್ಮ ಹಿರೇಮಠ ಹಾಗೂ ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕ ಅನಿಲಕುಮಾರ ಪಾಟೀಲ್, ಪ್ರಶಾಂತಕುಮಾರ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...