ಡಿ.3ರಂದು ಜಿಲ್ಲೆಗೆ ಇಸಿಹೆಚ್‍ಎಸ್ ಅಧಿಕಾರಿಗಳು ಭೇಟಿ
ಯಾದಗಿರಿ, ಡಿಸೆಂಬರ್ 02 (ಕರ್ನಾಟಕ ವಾರ್ತೆ): ಇಸಿಹೆಚ್‍ಎಸ್ ಅಧಿಕಾರಿಗಳು ಒಂದು ಆಸ್ಪತ್ರೆಯನ್ನು ಎಂಪಾಲ್‍ಮೆಂಟ್ ಮಾಡಿಕೊಳ್ಳಲು ಸೈನಿಕ ಕಲ್ಯಾಣಧಿಕಾರಿಗಳ ಜೊತೆ ಡಿಸೆಂಬರ್ 3ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಾರೆ. ಆದ್ದರಿಂದ ಯಾದಗಿರಿ ಜಿಲ್ಲೆಯ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕುಂದು ಕೊರತೆಗಳೆನಾದರೂ ಇದ್ದಲ್ಲಿ ಪರಿಹರಿಸಿಕೊಳ್ಳಬಹುದು ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ: ಹೆಸರು ನೋಂದಣಿಗೆ ಸೂಚನೆ
ಯಾದಗಿರಿ, ಡಿಸೆಂಬರ್ 02 (ಕರ್ನಾಟಕ ವಾರ್ತೆ): ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದಿಂದ ಐ.ಬಿ.ಪಿ.ಎಸ್. ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಡಿಸೆಂಬರ್ 10ರೊಳಗಾಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂ:0821-2515944 ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ. ಬಿ. ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ