ಸೋಮವಾರ, ಡಿಸೆಂಬರ್ 30, 2019

ಕರಡು ಮತದಾರರ ಪಟ್ಟಿ ಕುರಿತು ರಾಜಕೀಯ ಪಕ್ಷಗಳ ಮುಖಂಡರೊAದಿಗೆ ಸಭೆ
ಜ.೧೫ರ ವರೆಗೆ ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
-ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಡಿಸೆಂಬರ್ ೩೦ (ಕರ್ನಾಟಕ ವಾರ್ತೆ): ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಯ ೩೬-ಸುರಪೂರ, ೩೭-ಶಹಾಪೂರ, ೩೮-ಯಾದಗಿರಿ ಹಾಗೂ ೩೯-ಗುರುಮಿಠಕಲ್ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಅರ್ಹತಾ ದಿನಾಂಕ: ೦೧-೦೧-೨೦೨೦ರಂತೆ ಪ್ರಕಟಿಸಿದ್ದು, ಕರಡು ಮತದಾರರ ಪಟ್ಟಿಯ ಬಗ್ಗೆ ಯಾವುದೇ ದೂರು, ಆಕ್ಷೇಪಣೆಗಳಿದ್ದಲ್ಲಿ ಜನವರಿ ೧೫ರ ವರೆಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರಡು ಮತದಾರರ ಪಟ್ಟಿಯ ಕುರಿತು ರಾಜಕೀಯ ಪಕ್ಷಗಳ ಮುಖಂಡರೊAದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ, ಯಾದಗಿರಿ ಸಹಾಯಕ ಆಯುಕ್ತರ ಕಾರ್ಯಾಲಯ, ಸುರಪುರ, ಶಹಾಪುರ, ಯಾದಗಿರಿ ತಹಶೀಲ್ದಾರರ ಕಾರ್ಯಾಲಯಗಳು ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯಾಲಯಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಅಲ್ಲದೇ, ಕರಡು ಮತದಾರರ ಪಟ್ಟಿಯನ್ನು http://ceokarnataka.kar.nic.in ಹಾಗೂ ಜಿಲ್ಲೆಯ yadgir.nic.in  ಅಂತರ್ಜಾಲದಲ್ಲಿಯು ಸಹ ಪರಿಶೀಲಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಕರಡು ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅರ್ಹತಾ ದಿನಾಂಕದAತೆ ಯುವಕರು, ಯುವತಿಯರು ಅಥವಾ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-೬ರಲ್ಲಿ ಅರ್ಜಿ ಸಲ್ಲಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಅವರು ಸ್ಥಳಾಂತರ ಹೊಂದಿದಲ್ಲಿ, ಮೃತ ಹೊಂದಿದಲ್ಲಿ, ಹೆಸರು ಪುನರಾವರ್ತನೆಯಾಗಿದ್ದಲ್ಲಿ ಹೆಸರನ್ನು ತೆಗೆದು ಹಾಕಲು ನಮೂನೆ-೭ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಬಯಸಿದಲ್ಲಿ ನಮೂನೆ-೮ರಲ್ಲಿ ಮತ್ತು ಹೆಸರು ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-೮ಎ ರಲ್ಲಿ ಸೂಕ್ತ ದಾಖಲೆಯೊಂದಿಗೆ ಅರ್ಜಿಗಳನ್ನು ಸಂಬAಧಪಟ್ಟ ಮತಗಟ್ಟೆ ಮಟ್ಟ ಅಧಿಕಾರಿ (ಬಿ.ಎಲ್.ಓ)ರವರಿಗೆ ಜನವರಿ ೧೫ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ೨೦೨೦ರ ಜನವರಿ ೨೭ರಂದು ಕಾಲೋಚಿತಗೊಳಿಸಲಾಗುವುದು. ನಂತರ ಪುರವಣಿ ಪಟ್ಟಿಯನ್ನು ೨೦೨೦ರ ಫೆಬ್ರುವರಿ ೪ರಂದು ತಯಾರಿಸಿ, ಅಂತಿಮ ಮತದಾರರ ಪಟ್ಟಿಯನ್ನು ೨೦೨೦ರ ಫೆಬ್ರುವರಿ ೭ರಂದು ಪ್ರಕಟಿಸಲಾಗುವುದು ಎಂದು ಅವರು ವಿವರಿಸಿದರು.

ಲೋಕಸಭಾ, ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ ಸೇರಿದಂತೆ ಎಲ್ಲಾ ಚುನಾವಣೆಗಳಿಗೂ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯೇ ಅನ್ವಯವಾಗುತ್ತದೆ. ಮತದಾರರ ಪಟ್ಟಿ ದೋಷರಹಿತವಾಗಿದ್ದಷ್ಟು ಚುನಾವಣೆಗಳು ಸುಸೂತ್ರವಾಗಿ ನಡೆಯುತ್ತವೆ. ಹಾಗಾಗಿ, ನಕಲಿ ಮತದಾರರು ಸೇರಿದಂತೆ ಯಾವುದೇ ದೂರು, ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಂಬಧಿಸಿದ ಮತದಾರರ ನೋಂದಣಾಧಿಕಾರಿ/ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ರಾಜಕೀಯ ಪಕ್ಷಗಳ ಮುಖಂಡರನ್ನು ಅವರು ಕೋರಿದರು.
೯.೮೫ ಲಕ್ಷ ಮತದಾರರು: ಕರಡು ಮತದಾರರ ಪಟ್ಟಿಯಲ್ಲಿ ಜಿಲ್ಲೆಯಲ್ಲಿ ಒಟ್ಟು ೯,೮೫,೨೭೧ ಮತದಾರರಿದ್ದು, ಈ ಪೈಕಿ ೪,೯೨,೪೦೧ ಪುರುಷ ಮತದಾರರು ಮತ್ತು ೪,೯೨,೮೭೦ ಮಹಿಳಾ ಮತದಾರರಿದ್ದಾರೆ. ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨,೭೦,೫೫೫, ಶಹಾಪುರ ೨,೩೦,೨೮೨, ಯಾದಗಿರಿ ೨,೩೯,೩೯೫ ಮತದಾರರಿದ್ದು, ಈ ಪಟ್ಟಿಯು ಶೇ.೧೦೦ರಷ್ಟು ಮತದಾರರ ಭಾವಚಿತ್ರ ಒಳಗೊಂಡಿದೆ. ಗುರುಮಠಕಲ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨,೪೫,೦೩೯ ಮತದಾರರಿದ್ದು, ಈ ಪಟ್ಟಿಯಲ್ಲಿ ಭಾವಚಿತ್ರವಿಲ್ಲದ ೧೩ ಜನ ಮತದಾರರಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಸುರಪುರ ಕ್ಷೇತ್ರದಲ್ಲಿ ೫೪, ಶಹಾಪುರ ೨೮, ಯಾದಗಿರಿ ೧೦, ಗುರುಮಠಕಲ್ ೧೧ ಸೇರಿ ಒಟ್ಟು ೧೦೩ ಜನ ಸೇವಾ ಮತದಾರರಿದ್ದಾರೆ. ಈ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು ೭,೧೪೧ ಯುವ ಮತದಾರು ಸೇರ್ಪಡೆಯಾಗಿದ್ದಾರೆ. ಹೊಸದಾಗಿ ನೋಂದಣಿಯಾದ ಯುವ ಮತದಾರರು ಜನವರಿ ೨೫ರಂದು ನಡೆಯುವ ರಾಷ್ಟಿçÃಯ ಮತದಾರರ ದಿನಾಚರಣೆಯಂದು ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಪಡೆದುಕೊಳ್ಳಲು ಅವರು ತಿಳಿಸಿದರು.
ಮೂರು ದಿನ ಮಿಂಚಿನ  ನೋಂದಣಿ: ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಜನವರಿ ೬, ೭ ಮತ್ತು ೮ರಂದು ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೆ ಇರುವ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ನಮೂನೆ-೬ರಲ್ಲಿ ಸಂಬAಧಪಟ್ಟ ಬಿ.ಎಲ್.ಒ ರವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳÄವಂತೆ ಅವರು ಕೋರಿದರು.
ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಮತದಾರರ ವಿವರ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಮತದಾರರ ಕರಡು ಪಟ್ಟಿಯನ್ನು ಡಿಸೆಂಬರ್ ೭ರಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ಹಾಗೂ ತಹಶೀಲ್ದಾರರ ಕಚೇರಿ ಮತ್ತು ಸಂಬAಧಿಸಿದ ಮತಗಟ್ಟೆ ಕೇಂದ್ರಗಳಲ್ಲಿ ಪ್ರಚುರಪಡಿಸಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು ೧,೩೯೪ ಮತದಾರರು ತಮ್ಮ ಹೆಸರು ಸೇರ್ಪಡೆ ಮಾಡಿಕೊಂಡಿದ್ದರು. ಹಕ್ಕು ಮತ್ತು ಆಕ್ಷೇಪಣೆ ಸಂದರ್ಭದಲ್ಲಿ ಡಿಸೆಂಬರ್ ೭ರಿಂದ ೨೩ರವರೆಗೆ ಹೆಸರು ಸೇರ್ಪಡೆಗಾಗಿ ೨೫೦ ಅರ್ಜಿಗಳು ಸ್ವೀಕೃತವಾಗಿವೆ. ಇವುಗಳಲ್ಲಿ ೨೪೧ ಅರ್ಜಿಗಳು ಕ್ರಮಬದ್ಧವಾಗಿದ್ದು, ೯ ಅರ್ಜಿಗಳು ತಿರಸ್ಕೃತವಾಗಿವೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಡಿಸೆಂಬರ್ ೧೬ರಂದು ಪ್ರಕಟಿಸಿರುವ ಜಿಲ್ಲೆಯ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳು ರಾಜಕೀಯ ಪಕ್ಷಗಳ ಮುಖಂಡರಿಗೆ ವಿತರಿಸಿದರು.
ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ತಹಶೀಲ್ದಾರರಾದ ಜಗನ್ನಾಥರೆಡ್ಡಿ, ನಿಂಗಣ್ಣ ಎಸ್.ಬಿರಾದಾರ, ಚುನಾವಣೆ ಶಾಖೆಯ ಶಿರಸ್ತೇದಾರ್ ಪರಶುರಾಮ, ಖಲೀಲ್‌ಸಾಬ್, ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷರಾದ ತಜಮುಲ್ ಹುಸೇನ್, ಜೆಡಿಎಸ್ ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾದ ಶಾಂತಪ್ಪ ಡಿ.ಜಾಧವ್, ಬಿಜೆಪಿ ಯುವ ಘಟಕದ ಅಧ್ಯಕ್ಷ ಸೂಗೂರೇಶ ಮಾಲಿಪಾಟೀಲ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶಿವರಾಜ ದಾಸನಕೇರಿ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...