ಶನಿವಾರ, ಡಿಸೆಂಬರ್ 7, 2019

ಜಿಲ್ಲಾಧಿಕಾರಿಗಳಿಂದ ಆಯುಷ್ಮಾನ್ ಕಾರ್ಡ್ ವಿತರಣೆ
ಯಾದಗಿರಿ, ಡಿಸೆಂಬರ್ ೦೬ (ಕರ್ನಾಟಕ ವಾರ್ತೆ): ಆಯುಷ್ಮಾನ್ ಭಾರತ– ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ಗಳನ್ನು ಡಿಸೆಂಬರ್ ೨ರಿಂದ ನಿಗದಿತ ದಿನಾಂಕಗಳAದು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಿತರಿಸಲಾಗುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮನವಿ ಮಾಡಿದರು.

ತಾಲ್ಲೂಕಿನ ಠಾಣಗುಂದಿಯಲ್ಲಿ ಸಾರ್ವಜನಿಕರಿಗೆ ಆಯುಷ್ಮಾನ್ ಭಾರತ– ಆರೋಗ್ಯ ಕರ್ನಾಟಕ ಕಾರ್ಡ್ಗಳನ್ನು ವಿತರಿಸಿ, ಅವರು ಮಾತನಾಡಿದರು.
ಈ ಯೋಜನೆಯಡಿಯಲ್ಲಿ ಬಿಪಿಎಲ್ ಕುಟುಂಬಗಳಿಗೆ ಒಂದು ವರ್ಷಕ್ಕೆ ೫ ಲಕ್ಷ ರೂಪಾಯಿಗಳ ವರೆಗೆ ಉಚಿತ ಚಿಕಿತ್ಸೆ ಲಭ್ಯವಿದೆ. ಎಪಿಎಲ್ ಕುಟುಂಬಗಳಿಗೆ ಸರ್ಕಾರಿ ಪ್ಯಾಕೇಜ್ ದರದ ಶೇ.೩೦ರಷ್ಟು ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ೧.೫೦ ಲಕ್ಷ ರೂಪಾಯಿ ಇರುತ್ತದೆ. ಈ ಯೋಜನೆಯಲ್ಲಿ ೧೬೫೦ ಚಿಕಿತ್ಸಾ ವಿಧಾನಗಳಿಗೆ ಚಿಕಿತ್ಸೆ ಲಭ್ಯವಿದೆ. ಸಾರ್ವಜನಿಕರು ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಹಾಜರುಪಡಿಸಿ ಈ ಯೋಜನೆಯಡಿ ನೋಂದಾಯಿಸಿ ಲಾಭ ಪಡೆಯಬೇಕು ಎಂದು ಅವರು ತಿಳಿಸಿದರು.
ಯಾದಗಿರಿ ಜಿಲ್ಲಾ ಆಸ್ಪತ್ರೆ, ಶಹಾಪೂರ ಮತ್ತು ಸುರಪೂರ ತಾಲ್ಲೂಕು ಆಸ್ಪತ್ರೆಗಳು ಹಾಗೂ ವಡಿಗೇರಾ, ಸೈದಾಪೂರ, ಗುರುಮಠಕಲ್, ಅರಕೇರಾ ಬಿ., ಹುಣಸಗಿ, ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಯಾದಗಿರಿ, ಶಹಾಪೂರ, ಸುರಪೂರ ನಗರ ಆರೋಗ್ಯ ಕೇಂದ್ರಗಳಲ್ಲಿ ೧೦ ರೂಪಾಯಿ ಶುಲ್ಕ ನೀಡಿ ಪಡೆಯಬಹುದು. ಅಲ್ಲದೆ, ನಿಮ್ಮ ಹತ್ತಿರದಲ್ಲಿರುವ ಸೇವಾಸಿಂಧು ಕೇಂದ್ರಗಳಲ್ಲಿ ಕಾಗದದ ಕಾರ್ಡ್ಗೆ ೧೦ ರೂಪಾಯಿ ಹಾಗೂ ಪ್ಲಾಸ್ಟಿಕ್ ಕಾರ್ಡ್ಗೆ ೩೫ ರೂಪಾಯಿ ನೀಡಿ ಪಡೆದುಕೊಳ್ಳಬಹುದು. ಯಾದಗಿರಿ ತಹಸೀಲ್ ಕಚೇರಿ ಆವರಣದಲ್ಲಿರುವ ಕರ್ನಾಟಕ ಒನ್ ಕೇಂದ್ರದಲ್ಲಿ ಕೂಡ ಆರೋಗ್ಯ ಕಾರ್ಡ್ ಪಡೆದುಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದರು.
ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಜಿಲ್ಲಾ ನೋಡಲ್ ಅಧಿಕಾರಿ ಡಾ.ಭಗವಂತ ಅನವಾರ ಅವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...