ಸಂವಿಧಾನ ಓದು ಕಾರ್ಯಾಗಾರ ನಾಳೆ
ಯಾದಗಿರಿ, ಡಿಸೆಂಬರ್ ೦೭ (ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ವಕೀಲರ ಸಂಘ, ಸಮುದಾಯ ಕರ್ನಾಟಕ ಮತ್ತು ಸಹಯಾನ ಕೆರೆಕೋಣ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಓದು ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮವನ್ನು ಡಿಸೆಂಬರ್ ೯ರಂದು ಬೆಳಿಗ್ಗೆ ೧೦ ಗಂಟೆಗೆ ಯಾದಗಿರಿ ನಗರದ ಮಿನಿವಿಧಾನಸೌಧ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ನಿವೃತ್ತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್.ನಾಗಮೋಹನದಾಸ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ, ವಿಷಯ ಮಂಡನೆ ಮಾಡುವರು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಶಿವನಗೌಡ ಅಧ್ಯಕ್ಷತೆ ವಹಿಸುವರು.
ಸಂವಿಧಾನ ಓದು ಸಮಿತಿ ರಾಜ್ಯ ನೋಡಲ್ ಅಧಿಕಾರಿ ಡಾ.ವಿಠ್ಠಲ ಭಂಡಾರಿ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು. ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ್ ಭಗವಾನ್ ಸೋನವಣೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಭಾಕರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಚನ್ನಬಸವ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ದೊಡ್ಡಪ್ಪ ಎಂ.ಹೊಸಮನಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್. ಮಾಲಿಪಾಟೀಲ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಯಲ್ಹೇರಿ: ಇಂದು ಅಡಿಗಲ್ಲು ಸಮಾರಂಭ
ಯಾದಗಿರಿ, ಡಿಸೆಂಬರ್ ೦೭ (ಕರ್ನಾಟಕ ವಾರ್ತೆ): ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ೨೦೧೮-೧೯ನೇ ಸಾಲಿನ ಎಸ್.ಎಚ್.ಡಿ.ಪಿ ಯೋಜನೆಯಡಿಯಲ್ಲಿ ಗುರುಮಠಕಲ್ ತಾಲ್ಲೂಕಿನ ಕೊಂಕಲ್ ಕ್ರಾಸ್‌ದಿಂದ ಅರಕೇರಾ(ಕೆ) ರಸ್ತೆ ೦.೦೦ ಕಿ.ಮೀ ದಿಂದ ೧೩.೬೦ ಕಿ.ಮೀ ವರೆಗೆ ೧೪೦ ಲಕ್ಷ ರೂ. ವೆಚ್ಚದ ರಸ್ತೆ ಸುಧಾರಣಾ ಕಾಮಗಾರಿಯ ಅಡಿಗಲ್ಲು ಸಮಾರಂಭವನ್ನು ಡಿಸೆಂಬರ್ ೮ರಂದು ಬೆಳಿಗ್ಗೆ ೧೧ ಗಂಟೆಗೆ ಯಲ್ಹೇರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಶಿಲಾನ್ಯಾಸ ನೆರವೇರಿಸುವರು. ಶಾಸಕರಾದ ನಾಗನಗೌಡ ಕಂದಕೂರ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಬಿ.ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ಡಾ.ಉಮೇಶ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಂತಾ ಚಂದ್ರಕಾAತ ರೆಡ್ಡಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರಸ್ವತಿ ಸುಭಾಷಚಂದ್ರ ಕಟಕಟಿ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಚಂದು ಮೇಗು ಜಾಧವ್ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.
ಅನಪೂರ: ಇಂದು ಅಡಿಗಲ್ಲು ಸಮಾರಂಭ
ಯಾದಗಿರಿ, ಡಿಸೆಂಬರ್ ೦೭ (ಕರ್ನಾಟಕ ವಾರ್ತೆ): ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ೨೦೧೮-೧೯ನೇ ಸಾಲಿನ ಎಸ್.ಎಚ್.ಡಿ.ಪಿ ಯೋಜನೆಯಡಿಯಲ್ಲಿ ಗುರುಮಠಕಲ್ ತಾಲ್ಲೂಕಿನ ಮುಧೋಳ ಯಲಗೇರಾ ದಿಂದ ಆಂಧ್ರ ಗಡಿಯವರೆಗೆ (ಗುಂಜನೂರ ಕ್ರಾಸ್‌ದಿಂದ ಜಲಾಲಪೂರ ಚೆಕ್ ಪೋಸ್ಟ್) ರಸ್ತೆ ೩೫.೫೩ ಕಿ.ಮೀ ದಿಂದ ೪೬.೯೦ ಕಿ.ಮೀ ವರೆಗೆ ೧೦೫೪.೦೦ ಲಕ್ಷ ರೂ. ವೆಚ್ಚದ ರಸ್ತೆ ಸುಧಾರಣಾ ಕಾಮಗಾರಿಯ ಅಡಿಗಲ್ಲು ಸಮಾರಂಭವನ್ನು ಡಿಸೆಂಬರ್ ೮ರಂದು ಮಧ್ಯಾಹ್ನ ೧೨.೩೦ ಗಂಟೆಗೆ ಅನಪೂರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಶಿಲಾನ್ಯಾಸ ನೆರವೇರಿಸುವರು. ಶಾಸಕರಾದ ನಾಗನಗೌಡ ಕಂದಕೂರ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಬಿ.ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ಡಾ.ಉಮೇಶ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೋವರ್ಧನರೆಡ್ಡಿ ವೆಂಕಟರೆಡ್ಡಿ ಮಾಲಿಪಾಟೀಲ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ರಾಜಶ್ರೀ ರಘುನಾಥರೆಡ್ಡಿ ನಜರಾಪುರ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಕೃಷ್ಣಯ್ಯ ಹಣಮಂತ ಹಂದರಕಿ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.
ಅಜಲಾಪೂರ: ಇಂದು ಅಡಿಗಲ್ಲು ಸಮಾರಂಭ
ಯಾದಗಿರಿ, ಡಿಸೆಂಬರ್ ೦೭ (ಕರ್ನಾಟಕ ವಾರ್ತೆ): ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ೨೦೧೮-೧೯ನೇ ಸಾಲಿನ ಎಸ್.ಎಚ್.ಡಿ.ಪಿ ಯೋಜನೆಯಡಿಯಲ್ಲಿ ಗುರುಮಠಕಲ್ ತಾಲ್ಲೂಕಿನ ಅಜಲಾಪೂರ-ನಂದೆಪಲ್ಲಿ ರಸ್ತೆ ೦.೦೦ ಕಿ.ಮೀ ರಿಂದ ೧೫ ಕಿ.ಮೀ ವರೆಗೆ ೧೪೮೦ ಲಕ್ಷ ರೂ. ವೆಚ್ಚದ ರಸ್ತೆ ಸುಧಾರಣಾ ಕಾಮಗಾರಿಯ ಅಡಿಗಲ್ಲು ಸಮಾರಂಭವನ್ನು ಡಿಸೆಂಬರ್ ೮ರಂದು ಮಧ್ಯಾಹ್ನ ೩ ಗಂಟೆಗೆ ಅಜಲಾಪೂರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಶಿಲಾನ್ಯಾಸ ನೆರವೇರಿಸುವರು. ಶಾಸಕರಾದ ನಾಗನಗೌಡ ಕಂದಕೂರ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಬಿ.ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ಡಾ.ಉಮೇಶ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರತ್ನಮ್ಮ ದೊಡ್ಡ ತಿಪ್ಪಣ್ಣ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರಾದ ರಾಮಲಿಂಗಮ್ಮ ಬಾಲಕೃಷ್ಣಪ್ಪ ಹಾಗೂ ಸೈದಾಪುರ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಶಿಕಲಾ ಭೀಮಣ್ಣಗೌಡ ಕ್ಯಾತನಾಳ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ