ಠಾಣಗುಂದಿ: ಕರುಗಳ ಪ್ರದರ್ಶನ
ಯಾದಗಿರಿ, ಡಿಸೆಂಬರ್ ೨೪ (ಕರ್ನಾಟಕ ವಾರ್ತೆ): ಯಾದಗಿರಿ ತಾಲ್ಲೂಕಿನ ಠಾಣಗುಂದಿ ಗ್ರಾಮದಲ್ಲಿ ಸೋಮವಾರ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ
ವತಿಯಿಂದ “ಕರುಗಳ ಪ್ರದರ್ಶನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
೧೧೦ ಕರುಗಳು ಪ್ರದರ್ಶನ ಮಾಡಲಾಯಿತು. ಆರೋಗ್ಯಕರ, ಒಳ್ಳೆಯ ಆರೈಕೆ, ಉತ್ತಮ ಬೆಳವಣಿಗೆಯಿಂದ ಕೂಡಿದ ಮೂರು ಕರುಗಳ ಮಾಲೀಕರಿಗೆ ಬಹುಮಾನ ನೀಡಲಾಯಿತು. ಉಳಿದ ಕರುಗಳ ಮಾಲೀಕರಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.
ಶಹಾಪೂರ ಪಶುಆಸ್ಪತ್ರೆ ಸಹಾಯಕ ನಿರ್ದೇಶಕರಾದ ಡಾ.ಷಣ್ಮುಖ ಅವರು ಮಾತನಾಡಿ, ಕರುಗಳ ಪಾಲನೆ, ಪೋಷಣೆ, ಅವುಗಳ ಪ್ರಾತ್ಯಕ್ಷತೆಯನ್ನು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯರಾದ ಲಲಿತಾ ಮಾರೆಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾರದಾ ರಾಚಯ್ಯ ಸ್ವಾಮಿ, ಪಶುವೈಧಿಕಾರಿಗಳಾದ ಡಾ.ಶುಶೃತ್, ಡಾ.ಸಂಗೀತಾ, ಡಾ.ವಿವೇಕ, ಡಾ.ಶಿವಮಂಗಲಾ, ಡಾ.ಜಯಶ್ರೀ, ಡಾ.ಗೀತಾ ಹಾಗೂ ಸಂಜೀವದ್ಯಾರೆಡ್ಡಿ, ಶರಣಪ್ಪ, ವೀರಭದ್ರ ಕೋರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಾಳೆ ಜಿಲ್ಲಾ ಮಟ್ಟದ ಯುವಜನೋತ್ಸವ
ಯಾದಗಿರಿ, ಡಿಸೆಂಬರ್ ೨೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಯುವಜನೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ ೨೬ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ್, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ