ಶುಕ್ರವಾರ, ಡಿಸೆಂಬರ್ 13, 2019

ವಸತಿ ರಹಿತರಿಂದ ಅರ್ಜಿ ಆಹ್ವಾನ
ಯಾದಗಿರಿ, ಡಿಸೆಂಬರ್ ೧೩ (ಕರ್ನಾಟಕ ವಾರ್ತೆ): ಸುರಪೂರ ನಗರಸಭೆ ವ್ಯಾಪ್ತಿಯಲ್ಲಿ ಬರುವ ಬಡತನ ರೇಖೆಗಿಂತ ಕೆಳಗಿರುವ ವಸತಿ ಮತ್ತು ನಿವೇಶನ ರಹಿತ ಸಾರ್ವಜನಿಕರಿಗೆ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಜಿ+೨ ಬಹುಮಹಡಿ ವಸತಿ ಸಂಕೀರ್ಣ ಮಾದರಿಯಲ್ಲಿ ಮನೆಗಳನ್ನು ಕವಡಿಮಟ್ಟಿ ಗ್ರಾಮದ ಸರ್ವೆ ನಂ. ೫೭ ರಲ್ಲಿ ನಿರ್ಮಿಸುವ ಪ್ರಸ್ತಾವನೆ ಇದ್ದು, ಈ ಯೋಜನೆಗೆ ಮಾನದಂಡಗಳ ಮೇಲೆ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿ ವಂತಿಗೆಯ ಮುಂಗಡ ಹಣವಾಗಿ ೧.೨೫ ಲಕ್ಷ ರೂ. ಡಿ.ಡಿ.ಯನ್ನು ಪೌರಾಯುಕ್ತರು, ನಗರಸಭೆ, ಸುರಪೂರ ಇವರ ಹೆಸರಿನಲ್ಲಿ ತೆಗೆದುಕೊಂಡು ಅರ್ಜಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ ೨೮ರೊಳಗೆ ಸಲ್ಲಿಸಬೇಕು. ಬಾಕಿ ವಂತಿಗೆ ಹಣ ಫಲಾನುಭವಿ ಆಯ್ಕೆ ನಂತರ ತುಂಬಬೇಕು. ಒಂದು ವೇಳೆ ಆಯ್ಕೆಯಾಗದಿದ್ದಲ್ಲಿ ತಮ್ಮ ಬ್ಯಾಂಕ್ ಖಾತೆಗೆ ಹಣ ಹಿಂತಿರುಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ವಸತಿ ಶಾಖೆಯನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಿದೆ.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಯಾದಗಿರಿ, ಡಿಸೆಂಬರ್ ೧೩ (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯೆಂದು ಇಲಾಖೆಯ ವತಿಯಿಂದ ಪ್ರತಿ ವರ್ಷ ಕಿತ್ತೂರು ರಾಣಿ ಚೆನ್ನಮ್ಮ ಇವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. ಅದರಂತೆ ೨೦೧೯-೨೦ನೇ ಸಾಲಿಗೆ ಜಿಲ್ಲೆಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡAತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆöÊರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಗಣನೀಯವಾಗಿ ಸೇವೆ ಸಲ್ಲಿಸಿರುವ ಸಂಘ- ಸಂಸ್ಥೆಗಳು ನಿಗದಿತ ನಮೂನೆಯ ಅರ್ಜಿಗಳನ್ನು ಜಿಲ್ಲಾಡಳಿತ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಿಂದ ಪಡೆದು ೨೦೨೦ರ ಜನವರಿ ೧೩ರೊಳಗಾಗಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎರಡು ದಿನ ಹತ್ತಿ ಖರೀದಿ ಬಂದ್
ಯಾದಗಿರಿ, ಡಿಸೆಂಬರ್ ೧೩ (ಕರ್ನಾಟಕ ವಾರ್ತೆ): ಶಹಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವ್ಯಾಪ್ತಿಯ ಮದ್ದರಕಿ ಕ್ರಾಸ್‌ನಲ್ಲಿರುವ ಆರ್.ಎಸ್.ಫೈಬರ್ ಕಾಟನ್ ಜಿನ್ನಿಂಗ್ ಮಿಲ್‌ನಲ್ಲಿ ಸ್ಥಳದ ಕೊರತೆಯಿಂದ ಡಿಸೆಂಬರ್ ೧೬ರಿಂದ ೧೮ರವರೆಗೆ ಹತ್ತಿ ಖರೀದಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೨೦೧೯-೨೦ನೇ ಸಾಲಿನ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭಾರತೀಯ ಹತ್ತಿ ನಿಗಮ ವತಿಯಿಂದ ಹತ್ತಿಯನ್ನು ರೈತರಿಂದ ನೇರವಾಗಿ ಖರೀದಿ ಮಾಡಲಾಗುತ್ತಿದೆ. ಹತ್ತಿಯನ್ನು ಖಾಲಿ ಮಾಡುವÀ ಸಂಬAಧ ಆರ್.ಎಸ್.ಫೈಬರ್ ಕಾಟನ್ ಜಿನ್ನಿಂಗ್ ಮಿಲ್‌ನಲ್ಲಿ ಎರಡು ದಿನ ಖರೀದಿ ಇರುವುದಿಲ್ಲ. ಡಿಸೆಂಬರ್ ೧೯ರಂದು ಪುನಃ ಪ್ರಾರಂಭಿಸಲಾಗುವುದು. ಪ್ರತಿ ದಿನಕ್ಕೆ ೫೦ ವಾಹನಗಳಲ್ಲಿನ ಹತ್ತಿಯನ್ನು ಮಧ್ಯಾಹ್ನ ೧ ಗಂಟೆಯವರೆಗೆ ಖರೀದಿಸಲಾಗುವುದು. ತದನಂತರ ಬಂದ ವಾಹನಗಳನ್ನು ಸ್ವೀಕರಿಸುವುದಿಲ್ಲ. ೨ ಗಂಟೆ ನಂತರ ಹತ್ತಿ ಖರೀದಿಸಿದ ವಾಹನಗಳ ಬಿಲ್ಲಗಳನ್ನು ತಯಾರಿಸಲಾಗುವುದು ಎಂದು ಭಾರತೀಯ ಹತ್ತಿ ನಿಗಮದ ವ್ಯವಸ್ಥಾಪಕರು ತಿಳಿಸಿರುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಪುಸ್ತಕ-ವಾಣಿಜ್ಯ ಮಳಿಗೆ ತೆರೆಯಲು ನೋಂದಣಿಗೆ ಸೂಚನೆ
ಯಾದಗಿರಿ, ಡಿಸೆಂಬರ್ ೧೩ (ಕರ್ನಾಟಕ ವಾರ್ತೆ): ಕಲಬುರಗಿಯಲ್ಲಿ ೨೦೨೦ರ ಫೆಬ್ರುವರಿ ೫, ೬ ಮತ್ತು ೭ರಂದು ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನದಲ್ಲಿ ಪುಸ್ತಕ, ವಾಣಿಜ್ಯ ಮಳಿಗೆಗಳನ್ನು ತೆರೆಯಲು ಹೆಸರು ನೋಂದಾಯಿಸಿಕೊಳ್ಳಬೇಕೆAದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷರಾದ ಪಿ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಮೂರು ದಿವಸಗಳಿಗೆ ಒಂದು ಹಾಗೂ ಒಂದಕ್ಕಿAತ ಹೆಚ್ಚು ಪುಸ್ತಕ ಮಳಿಗೆ ಬೇಕಾದಲ್ಲಿ ತಲಾ ೨೫೦೦ ರೂ. ಹಾಗೂ ವಾಣಿಜ್ಯ ಮಳಿಗೆಗಳಿಗೆ ತಲಾ ೩೦೦೦ ರೂ.ಗಳ ಬಾಡಿಗೆಯನ್ನು ನಿಗದಿಪಡಿಸಲಾಗಿದೆ. ಮಳಿಗೆಗಾಗಿ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಥವಾ ಸ್ವಾಗತ ಸಮಿತಿ, ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ೨೦೨೦ರ ಜನವರಿ ೧೪ರೊಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಮಳಿಗೆ ಕಾಯ್ದಿರಿಸಲು ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಅಥವಾ ಪ್ರಧಾನ ಕಾರ್ಯದರ್ಶಿ, ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ ಕಲಬುರಗಿ ಇವರಿಗೆ ಡಿ.ಡಿ. ತೆಗೆದು ಕಳುಹಿಸಬೇಕು ಅಥವಾ ಖುದ್ದಾಗಿ ನಗದು ಪಾವತಿಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಭವನ, ಸರದಾರ ವಲ್ಲಭಭಾಯಿ ಪಟೇಲ್ ವೃತ್ತ ಕಲಬುರಗಿ-೫೮೫೧೦೨ ವಿಳಾಸಕ್ಕೆ ಭೇಟಿ ನೀಡಿ ಸಲ್ಲಿಸಬಹುದು. ಪ್ರತಿ ಮಳಿಗೆಯಲ್ಲಿ ವಿದ್ಯುತ್ ಸೌಕರ್ಯ, ಎರಡು ಕುರ್ಚಿಗಳು ಹಾಗೂ ಮೂರು ಬೆಂಚ್‌ಗಳನ್ನು ಒದಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ:೦೮೪೭೨-೨೭೭೪೧೧ ಅಥವಾ ಕನ್ನಡ ಸಾಹಿತ್ಯ ಪರಿಷತ್ತಿನ ಕಲಬುರಗಿ ಜಿಲ್ಲಾಧ್ಯಕ್ಷರಾದ ವೀರಭದ್ರ ಸಿಂಪಿ ಇವರ ಮೊ:೯೪೪೮೫೭೭೪೧೧, ೯೯೦೦೮೩೮೦೦೩ ಸಂಪರ್ಕಿಸಲು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಸಮ್ಮೇಳನದ ಪ್ರತಿನಿಧಿಯಾಗಿ ನೋಂದಣಿಗೆ ಸೂಚನೆ
ಯಾದಗಿರಿ, ಡಿಸೆಂಬರ್ ೧೩ (ಕರ್ನಾಟಕ ವಾರ್ತೆ): ಕಲಬುರಗಿಯಲ್ಲಿ ೨೦೨೦ರ ಫೆಬ್ರುವರಿ ೫, ೬ ಮತ್ತು ೭ರಂದು ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ನುಡಿ ಜಾತ್ರೆಯಲ್ಲಿ ಭಾಗವಹಿಸಲಿಚ್ಛಿಸುವ ಅಭಿಮಾನಿಗಳು ಪ್ರತಿನಿಧಿಯಾಗಿ ತಮ್ಮ ಆಯಾ ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಅಥವಾ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
ಪ್ರತಿನಿಧಿ ಶುಲ್ಕ ೨೫೦ ರೂ.ಗಳನ್ನು ೨೦೨೦ರ ಜನವರಿ ೧೪ರೊಳಗಾಗಿ ಪಾವತಿಸಿ ತಮ್ಮ ಹೆಸರು ನೋಂದಾಯಹಿಸಿಕೊಳ್ಳಬೇಕು. ಅವಧಿ ಮೀರಿ ಬಂದ ಕೋರಿಕೆಗಳಿಗೆ ಹಾಗೂ ಸಮ್ಮೇಳನ ನಡೆಯುವ ಸ್ಥಳದಲ್ಲಿ ಪ್ರತಿನಿಧಿಗಳ ನೋಂದಣಿಗೆ ಅವಕಾಶವಿರುವುದಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷರಾದ ಪಿ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...