ಸೋಮವಾರ, ಡಿಸೆಂಬರ್ 16, 2019

೭೭೭ ಪ್ರಕರಣಗಳ ಇತ್ಯರ್ಥ

ಯಾದಗಿರಿ, ಡಿಸೆಂಬರ್ ೧೬ (ಕರ್ನಾಟಕ ವಾರ್ತೆ): ಜಿಲ್ಲೆ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಬಾಕಿ ಇದ್ದ ಒಟ್ಟು ೬೬೩ ಪ್ರಕರಣ ಮತ್ತು ೧೧೪ ವಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದ್ದು, ಒಟ್ಟು ೧,೨೮,೭೭,೮೧೭ ರೂ. ಮೊತ್ತವನ್ನು ಸಂದಾಯ ಮಾಡಲಾಗಿದೆ.


ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಬೆಂಗಳೂರಿನ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಗೌರವಾನ್ವಿತ ಶ್ರೀ ಅಶೋಕ ಎಸ್.ಕಿಣಗಿ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಶಿವನಗೌಡ ಅವರು ಜಿಲ್ಲಾ ನ್ಯಾಯಾಲಯದಲ್ಲಿ ಜಂಟಿಯಾಗಿ ಪ್ರಕರಣಗಳನ್ನು ಇತ್ಯರ್ಥ ಮಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಪ್ರಕಾಶ ಅರ್ಜುನ ಬನಸೊಡೆ ಅವರು ಉಪಸ್ಥಿತರಿದ್ದರು.


ನಾಳೆ ಪೂರ್ವಸಿದ್ಧತಾ ಸಭೆ
ಯಾದಗಿರಿ, ಡಿಸೆಂಬರ್ ೧೬ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವ ಮಾನವ ದಿನಾಚರಣೆಯನ್ನು ಡಿಸೆಂಬರ್ ೨೯ರಂದು ಆಚರಿಸಲು ಪೂರ್ವಸಿದ್ಧತಾ ಸಭೆಯನ್ನು ಡಿಸೆಂಬರ್ ೧೮ರಂದು ಮಧ್ಯಾಹ್ನ ೩.೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಮಪೂರ- ಕಡೇಚೂರು ವಿದ್ಯುತ್ ಮಾರ್ಗ ಚಾಲನೆ
ಯಾದಗಿರಿ, ಡಿಸೆಂಬರ್ ೧೬ (ಕರ್ನಾಟಕ ವಾರ್ತೆ): ಯಾದಗಿರಿ ತಾಲ್ಲೂಕಿನ ರಾಮಪೂರ ಕ್ರಾಸ್‌ನಿಂದ ಕಡೇಚೂರು ೩೩ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ವರೆಗೆ ಹೊಸದಾಗಿ ನಿರ್ಮಾಣಗೊಂಡಿರುವ ೩೩ ಕೆ.ವಿ ವಿದ್ಯುತ್ ಮಾರ್ಗವು ಡಿಸೆಂಬರ್ ೧೭ರಿಂದ ಚಾಲನೆಯಾಗಲಿದ್ದು, ವಿದ್ಯುತ್ ಮಾರ್ಗವು ಹಾದು ಹೋಗಿರುವ ವಿದ್ಯುತ್ ಕಂಬಗಳಿಗೆ, ಗೈತಂತಿಗಳಿಗೆ ದನ ಕರುಗಳನ್ನು ಕಟ್ಟುವುದಾಗಲಿ ಹಾಗೂ ವಿದ್ಯುತ್ ಕಂಬಕ್ಕೆ ಹತ್ತುವುದಾಗಲಿ ಮತ್ತು ವಿದ್ಯುತ್ ಮಾರ್ಗವನ್ನು ಮುಟ್ಟುವುದಾಗಲಿ, ವಿದ್ಯುತ್ ಮಾರ್ಗದ ತಂತಿಗೆ ಬಟ್ಟೆ ಒಣಗಿಸುವುದಾಗಲಿ ಸಾರ್ವಜನಿಕರು ಮಾಡಬಾರದೆಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಡೆಂಗ್ಯೂ, ಚಿಕನ್‌ಗುನ್ಯಾ ಜ್ವರ ಮುಂಜಾಗ್ರತೆಗೆ ಸಲಹೆ
ಯಾದಗಿರಿ, ಡಿಸೆಂಬರ್ ೧೬ (ಕರ್ನಾಟಕ ವಾರ್ತೆ): ಜಿಲ್ಲೆಯ ಸಾರ್ವಜನಿಕರು ಡೆಂಗ್ಯೂ, ಚಿಕನ್‌ಗುನ್ಯಾ ಜ್ವರ ಬರದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡೆಂಗ್ಯೂ ರೋಗವು ಇಡೀಸ್ ಈಜೀಪ್ಟಿ ಎಂಬ ಸೊಳ್ಳೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸ್ವಚ್ಛವಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿಯನ್ನು ಬೆಳೆಸುವ ಈ ಸೊಳ್ಳೆಯು ದಿನದಲ್ಲಿ ಮಾತ್ರ ಕಚ್ಚುತ್ತದೆ. ೭ ದಿನಗಳಲ್ಲಿ ಮೊಟ್ಟೆಯಿಂದ ಮರಿ ಸೊಳ್ಳೆಯಾಗಿ ಪರಿವರ್ತನೆಗೊಳ್ಳುತ್ತದೆ. ಕಾರಣ ನೀರು ಸಂಗ್ರಹಿಸುವ ತೊಟ್ಟಿ, ಬ್ಯಾರಲ್, ಪಾತ್ರೆಗಳನ್ನು ಪ್ರತಿ ೩-೪ ದಿನಗಳಿಗೊಮ್ಮೆ ಸ್ವಚ್ಛವಾಗಿ ತಿಕ್ಕಿ ತೊಳೆದು ಬಿಸಿಲಿನಲ್ಲಿ ಒಣಗಿಸಿದ ನಂತರ ನೀರನ್ನು ತುಂಬಬೇಕು. ಏರ್‌ಕೂಲರ್‌ನಲ್ಲಿ ಸಂಗ್ರಹವಾದ ನೀರು ಮತ್ತು ಹೂವಿನ ಕುಂಡಲಿಗಳಲ್ಲಿ ಸಂಗ್ರಹಿಸಿದ ನೀರನ್ನು ಕೂಡ ಪ್ರತಿ ೩-೪ ದಿನಗಳಿಗೊಮ್ಮೆ ಬದಲಾಯಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ತೀವ್ರ ತಲೆನೋವು, ಕಣ್ಣು ನೋವು, ಕೀಲು ಮತ್ತು ಸ್ನಾಯು ನೋವು, ಹಸಿವಾಗದೇ ಇರುವುದು, ತುರಿಕೆ ಹಾಗೂ ತೀವ್ರ ಜ್ವರ ಡೆಂಗ್ಯೂ ರೋಗದ ಲಕ್ಷಣಗಳಾಗಿವೆ. ರೋಗದ ಲಕ್ಷಣ ಕಂಡುಬAದಲ್ಲಿ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರನ್ನು ಸಂಪರ್ಕಿಸಬೇಕು. ಹೆಚ್ಚಿನ ವಿಶ್ರಾಂತಿ ಪಡೆಯಬೇಕು. ನೀರಿನ ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ದ್ರವ ಪದಾರ್ಥಗಳನ್ನು ಸೇವಿಸಬೇಕು. ಸೊಳ್ಳೆಯು ಕಚ್ಚದಂತೆ ಉದ್ದನೆಯ ತೋಳಿನ ಅಂಗಿ ಮತ್ತು ಪ್ಯಾಂಟ್‌ಗಳನ್ನು ಧರಿಸಬೇಕು ಹಾಗೂ ಸೊಳ್ಳೆ ಬತ್ತಿ, ಸೊಳ್ಳೆ ಪರದೆಯನ್ನು ಬಳಸಬೇಕು. ಕುಡಿಯುವ ನೀರಿನ ಮೂಲಗಳಾದ ಬಾವಿ, ಬೋರ್‌ವೆಲ್ ಹಾಗೂ ಕೈ ಪಂಪ್‌ಗಳ ಕನಿಷ್ಠ ೧೦೦ ಅಡಿ ಸುತ್ತಮುತ್ತಲು ತಿಪ್ಪೆಗುಂಡಿ, ಕಸ-ಕಡ್ಡಿ ಹಾಗೂ ಮಲ ವಿಸರ್ಜನೆ ಮಾಡದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಮೂಲಗಳಿಗೆ ಮೇಲ್ಮಟ್ಟದ ಸಂಗ್ರಹಗಾರಗಳಲ್ಲಿ ಪ್ರತಿದಿನ ಹಾಗೂ ತೆರೆದ ಬಾವಿಗಳಲ್ಲಿ ವಾರಕ್ಕೊಮ್ಮೆ ಕ್ಲೋರಿನೇಷನ್ ಮಾಡಬೇಕು. ಕ್ಲೋರಿನೇಷನ್ ಮಾಡಿದ ನೀರನ್ನೆ ಬಳಸಬೇಕು ಎಂದು ಅವರು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...