ಶುಕ್ರವಾರ, ಅಕ್ಟೋಬರ್ 23, 2020

 ಆಸ್ಪತ್ರೆಗಳಲ್ಲಿಯೇ ಅರ್ಹರಿಗೆ ಆಯುಷ್ಮಾನ್ ಕಾರ್ಡ್ ಒದಗಿಸಲು ಜಿಲ್ಲಾಧಿಕಾರಿ ಸೂಚನೆ 

ಯಾದಗಿರಿ, ಅಕ್ಟೋಬರ್.23 (ಕರ್ನಾಟಕ ವಾರ್ತೆ):- ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗಾಗಿ ಬರುವ ಅರ್ಹರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಒದಗಿಸಿಕೊಡುವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಆರ್ ಅವರು ನಿರ್ದೇಶನ ನೀಡಿದರು. 

ಅವರು ಅ.23ರ ಶುಕ್ರವಾರ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಇ-ಆಸ್ಪತ್ರೆ ಹಾಗೂ ಇ-ಸಂಜೀವಿನಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪ್ರತಿದಿನ ಸಾಕಷ್ಟು ಸಂಖ್ಯೆಯ ರೋಗಿಗಳು ಚಿಕಿತ್ಸೆಗೆಂದು ಬರುತ್ತಾರೆ, ಅವರಲ್ಲಿ ಅರ್ಹರಿಗೆ ಸಂಬಂಧಿಸಿದ ಆಸ್ಪತ್ರೆಗಳಲ್ಲಿಯೇ ಆಯುಷ್ಮಾನ್ ಕಾರ್ಡ್ ಮುದ್ರಿಸಿ ನೀಡುವ ವ್ಯವಸ್ಥೆ ಮಾಡಬೇಕು, ಸಂಬಂಧಿಸಿದ ಆಸ್ಪತ್ರೆಗಳಲ್ಲಿಯೇ ಆಯುಷ್ಮಾನ್ ಕಾರ್ಡ್ ನೀಡಿದ್ದಲ್ಲೀ, ಮುಂಬರುವ ಎರಡು ತಿಂಗಳಲ್ಲಿ ಅರ್ಹರೆಲ್ಲರಿಗೂ ಆಯುಷ್ಮಾನ್ ಕಾರ್ಡ್ ತಲುಪಿಸಬಹುದು ಎಂದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ಅಧಿಕಾರಿಗಳಿಗೆ ಸೂಚಿಸಿದರು. 

 ಜಿಲ್ಲೆಯ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಸ್ಥಳೀಯ ಗ್ರಾಮ ಪಂಚಾಯತಗಳಲ್ಲಿ ಹಾಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ  ಬರುವ ಅರ್ಹರಿಗೆ ಈ ಕಾರ್ಡ್ ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಭಗವಂತ ಅನ್ವರ್, ಡಾ. ಸಂಜೀವ ಕುಮಾರ್ ಸೇರಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ಅಧಿಕಾರಿಗಳು ಉಪಸ್ಥಿತರಿದ್ದರು. 


ಗುರುವಾರ, ಅಕ್ಟೋಬರ್ 22, 2020

ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಶ್ಲಾಘನೆ
 ಕೋವಿಡ್ ಸಂದರ್ಭದಲ್ಲಿ ಪೊಲೀಸರ ಕರ್ತವ್ಯ ಸ್ಮರಣಿಯ

ಯಾದಗಿರಿ, ಅಕ್ಟೋಬರ್ 21 (ಕರ್ನಾಟಕ ವಾರ್ತೆ): ಕೋವಿಡ್, ಪ್ರವಾಹ ಸಂದರ್ಭಲ್ಲಿ ಪೊಲೀಸರು ಸಲ್ಲಿಸಿದ ಕರ್ತವ್ಯ ಸೇವೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ರಾಗಪ್ರಿಯಾ ಆರ್ ಅವರು ಪೊಲೀಸರ ಕಾರ್ಯವನ್ನು ಶ್ಲಾಘನೆ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಅಕ್ಟೋಬರ್ 21ರಂದು ಬುಧವಾರ ಪೊಲೀಸ್ ಇಲಾಖೆ ವತಿಯಿಂದ ಕರ್ತವ್ಯದ ಪಾಲನೆಯಲ್ಲಿ ಪ್ರಾಣ ಸಮರ್ಪಿಸಿದ ಪೊಲೀಸರ ಸ್ಮರಣೆಗಾಗಿ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೋವಿಡ್ ಹಾಗೂ ನೆರೆÀ ಪ್ರವಾಹ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಯಾವ ರೀತಿಯಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು? ಯಾವ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಬೇಕು? ಎಂಬುದಾಗಿ ಪೊಲೀಸರು ಯೋಚನೆ ಮಾಡುತ್ತಾರೆ. ಆದ್ದರಿಂದ ಸಾರ್ವಜನಿಕರು ಕೂಡ ಕಾನೂನು ಪಾಲನೆ ಮಾಡುತ್ತಾ ಪೊಲೀಸರಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.
1959ರ ಅಕ್ಟೋಬರ್ 21ರಂದು ಲಡಾಕ್‍ನಲ್ಲಿ ಕರ್ತವ್ಯ ಪಾಲನೆಯ ಸಂದರ್ಭದಲ್ಲಿ 10ಜನ ಪೊಲೀಸ್‍ರು ಹುತಾತ್ಮರಾದ ದಿನದ ಸ್ಮರಣಾರ್ಥವಾಗಿ ಪೊಲೀಸ್ ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದ ವಿವಿಧ ರಾಜ್ಯಗಳ ಹಾಗೂ ಕೇಂದ್ರ ಪೊಲೀಸ್ ದಳದಲ್ಲಿ ಒಟ್ಟು 264 ಹಾಗೂ ಕರ್ನಾಟಕದಲ್ಲಿ 17 ಜನ ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ಹೇಳಿದ ಅವರು, ಕರ್ತವ್ಯ ಪಾಲನೆಯಲ್ಲಿ ಹುತಾತ್ಮರಾದ ಪೊಲೀಸರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದವರಿಗೆ ಆಯುಷ್ಯ, ಆರೋಗ್ಯ ನೀಡಲೆಂದು ಅವರು ದೇವರಲ್ಲಿ ಪ್ರಾರ್ಥಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಭಗವಾನ್ ಸೋನವಣೆ ಅವರು ಮಾತನಾಡಿ, 1959ರ ಅಕ್ಟೋಬರ್ 21ರಂದು ಚೀನಾ-ಭಾರತ ಗಡಿ ಭಾಗದ ಹಾಟ್ ಸ್ಟ್ರೀಗ್ ಪೋಸ್ಟ್ ಹತ್ತಿರ ಸಿಆರ್‍ಪಿಎಫ್ ಡಿಎಸ್‍ಪಿ ಕರಣಸಿಂಗ್ ಅವರ ನೇತೃತ್ವದಲ್ಲಿ ಪೊಲೀಸ್ ದಳವು ಪಹರೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಚೀನಾ ಸೈನಿಕರಿಂದ ಏಕಾಏಕಿ ದಾಳಿ ನಡೆಸಲಾಗುತ್ತದೆ. ಆ ಸಂದರ್ಭದಲ್ಲಿ ವೈರಿಗಳ ದಾಳಿಗೆ ವಿಚಲಿತರಾಗದೆ ತಮ್ಮ ಪ್ರಾಣದ ಹಂಗನ್ನು ತೊರೆದು ಕೊನೆಯುಸಿರಿನವರೆಗೂ ಧೈರ್ಯದಿಂದ ಹೋರಾಡಿ ಪ್ರಾಣ ತೆತ್ತ 10 ಜನ ಭಾರತೀಯ ಪೊಲೀಸ್ ಯೋಧರ ಬಲಿದಾನದ ಸ್ಮರಣೆಯ ಪ್ರತೀಕವಾಗಿ ಪ್ರತಿ ವರ್ಷ ಅಕ್ಟೋಬರ್ 21ರಂದು ದೇಶದಾದ್ಯಂತ ಎಲ್ಲಾ ಜಿಲ್ಲಾ ಪೊಲೀಸ್ ಕೇಂದ್ರ ಸ್ಥಾನಗಳಲ್ಲಿ ಪೊಲೀಸ್ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ದೇಶದಲ್ಲಿ ಆಂತರಿಕ ಶತ್ರುಗಳು ಹಾಗೂ ದೇಶ ವಿರೋಧಿ ಕೃತ್ಯಗಳನ್ನೆಸಗುವ ದುಷ್ಟರ ವಿರುದ್ಧ ಧೀರತನದಿಂದ ಹೋರಾಡಿ ಪ್ರಾಣವನ್ನು ಸಮರ್ಪಿಸಿದ ಪೊಲೀಸ್ ಯೋಧರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸುವುದರ ಮೂಲಕ ಈ ದಿನ ಪೊಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದ ವಿವಿಧ ರಾಜ್ಯಗಳ ಹಾಗೂ ಕೇಂದ್ರ ಪೊಲೀಸ್ ದಳದ ಒಟ್ಟು 264 ಜನ ಪೊಲೀಸರು ಸೇವೆಯಲ್ಲಿ ಪ್ರಾಣಾರ್ಪಣೆ ಮಾಡಿದ್ದಾರೆ. ಇವರಲ್ಲಿ ಕರ್ನಾಟಕದ 17 ಜನ ಧೀರ ಪೊಲೀಸ್ ಯೋಧರಾದ ಮನೋಹರ ಎಸ್. ಗಣಾಚಾರಿ, ಚನ್ನಕೇಶವ ಬಿ.ಸಿ, ಸಿ ಮಲ್ಲೇಶಾಹ, ಚಂದ್ರಹಾಸ, ಯಲ್ಲಪ್ಪ ರಾಮಪ್ಪ ತಳವಾರ, ಶ್ರೀನಿವಾಸ ಎಂ, ಮಂಜುನಾಥ ಕೆ, ಕುಮಾರ ಕೆ.ಆರ್, ಧನಂಜಯ ವಾಯ್, ಮರಿಸ್ವಾಮಿ, ವೆಂಕಟೆ ಗೌಡ ಬಿ.ಎನ್, ಕೇಶವ್, ಚನ್ನಗಂಗಯ್ಯ, ರಾಮನಾಯ್ಕ ದುಂಡಪ್ಪ ನಾಯ್ಕ, ಮೋಹನ್ ಟಿ.ಪಿ, ಕರಿಯಪ್ಪ ಎಸ್. ಕರಿಗಾರ, ಎಸ್.ಎನ್ ಕೊಲಿ ಅವರು ಸೇರಿದ್ದಾರೆ ಎಂದು ವಿವರಿಸಿದರು.
ಪುಷ್ಪಗುಚ್ಛ ಅರ್ಪಣೆ: ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿಗಳಾದ ಡಾ. ರಾಗಪ್ರಿಯಾ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಪ್ರೊಬೆಷನರಿ ಐಎಎಸ್ ಅಧಿಕಾರಿ ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಪುಷ್ಪಗುಚ್ಛ ಅರ್ಪಿಸಿದರು.ಯಾದಗಿರಿ ಸುರಪುರ ವಿಭಾಗದ ಡಿವೈಎಸ್‍ಪಿ ವೆಂಕಟೆಶ ಉಗಿಬಂಡಿ,ಯವರು ಸೇರಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಇಂದುಧರ ಸಿನ್ನೂರ, ಟಿ.ವಿ 9 ಜಿಲ್ಲಾ ವರದಿಗಾರರಾದ ಅಮೀನ್ ಹೊಸೂರು, ಪ್ರಜಾವಾಣಿ ಜಿಲ್ಲಾ ವರದಿಗಾರ ಬಿ.ಜಿ ಪ್ರವೀಣಕುಮಾರ, ಕ್ರಾಂತಿ ಕನ್ನಡ ದಿನ ಪತ್ರಕೆಯ ಜಿಲ್ಲಾ ವರದಿಗಾರರಾದ ಸಾಗರಕುಮಾರ ದೇಸಾಯಿ, ಸಗರನಾಡು ಪತ್ರಿಕೆಯ ಸಂಪಾದಕರಾದ ಸಿದ್ದಪ್ಪ ಲಿಂಗೇರಿ ಸೇರಿದಂತೆ ಮಾಧ್ಯಮ ಮಿತ್ರರು, ಹುತಾತ್ಮ ಪೊಲೀಸರ ಕುಟುಂಬ ಸದಸ್ಯರು, ಪೊಲೀಸ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪೊಲೀಸ್ ಹುತಾತ್ಮರ ಗೌರವ ಸೂಚಕವಾಗಿ ಪರೇಡ್ ಕಮಾಂಡರ್ ಆರ್‍ಎಸ್‍ಐ ಚಂದ್ರಶೇಖರ ಅವರ ನೇತೃತ್ವದಲ್ಲಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದ ನಂತರ ಮೌನಾಚರಣೆ ಮಾಡಲಾಯಿತು. ಕಾನ್‍ಸ್ಟೆಬಲ್ ಸಂತೋಷ ಎಂ. ಜಯಕರ್ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು.

ಭಾನುವಾರ, ಮಾರ್ಚ್ 29, 2020

2 ಕುಟುಂಬಗಳ ವಿರುದ್ಧ ಪ್ರಕರಣ ದಾಖಲು
ಮನೆಯಲ್ಲಿದ್ದು ಕೊರೊನಾ ಹರಡುವುದನ್ನು ತಡೆಗಟ್ಟಿ
-:ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಮಾರ್ಚ್ 29 (ಕರ್ನಾಟಕ ವಾರ್ತೆ): ನೋವೆಲ್ ಕೊರೊನಾ ವೈರಸ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರದ ಆದೇಶದಂತೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮನೆಯಲ್ಲಿದ್ದು ಸೋಂಕು ಹರಡುವುದನ್ನು ತಡೆಗಟ್ಟಬೇಕು. ಅನವಶ್ಯಕವಾಗಿ ಮನೆಯಿಂದ ಹೊರಬಂದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್‍ನಿಂದ ತಪ್ಪಿಸಿಕೊಳ್ಳಲು ಅಂತರ ಕಾಯ್ದುಕೊಳ್ಳುವುದು ಮತ್ತು ಮನೆಯಲ್ಲಿರುವುದೊಂದೇ ಸದ್ಯದ ಪರಿಹಾರವಾಗಿದೆ. ಸರ್ಕಾರದ ನಿರ್ಬಂಧಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ, ಸಂಸ್ಥೆ, ಸಂಘಟನೆಯ ವಿರುದ್ಧ ಸಾಂಕ್ರಾಮಿಕ ರೋಗಗಳ ಅಧಿನಿಯಮ, ವಿಕೋಪ ನಿರ್ವಹಣಾ ಅಧಿನಿಯಮ, ಭಾರತೀಯ ದಂಡ ಸಂಹಿತೆ 188ನೇ ಪ್ರಕರಣ ಮತ್ತು ಇತರ ಸಂಬಂಧಪಟ್ಟ ಸಂಹಿತೆಗಳು, ಅಧಿನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
2 ಕುಟುಂಬಗಳ ವಿರುದ್ಧ ಪ್ರಕರಣ ದಾಖಲು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 2 ಕುಟುಂಬಗಳು ಖಾಸಗಿ ವಾಹನದಲ್ಲಿ ಜಿಲ್ಲೆಗೆ ಬಂದಿದ್ದು, ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಯಾದಗಿರಿ ಮತ್ತು ಗುರುಮಠಕಲ್ ತಾಲ್ಲೂಕಿನವರಾದ ಇವರನ್ನು ಸದ್ಯ ಅರಕೇರಾ (ಕೆ) ವಸತಿ ಶಾಲೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಯಾದಗಿರಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ ಅನುಸಾರ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
3 ವ್ಯಕ್ತಿಗಳ ಮಾದರಿ ನೆಗೆಟಿವ್: ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿರುವುದಿಲ್ಲ. ಪರೀಕ್ಷೆ ಮಾಡಲು ಸಂಗ್ರಹಿಸಿದ ಒಟ್ಟು 5 ವ್ಯಕ್ತಿಗಳ ಮಾದರಿಗಳಲ್ಲಿ 3 ನೆಗೆಟಿವ್ ಫಲಿತಾಂಶ ಬಂದಿವೆ. 2 ವ್ಯಕ್ತಿಗಳ ಮಾದರಿ ಪರೀಕ್ಷೆಯ ವರದಿ ಬರಬೇಕಿದೆ ಎಂದು ಅವರು ಮಾಹಿತಿ ನೀಡಿದರು.
ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ: ಜಿಲ್ಲೆಯಲ್ಲಿ ಕೋವಿಡ್-19 ಕೊರೊನಾ ವೈರಾಣುವಿನ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಯಾದಗಿರಿ ಆಯುμï ಆಸ್ಪತ್ರೆ, ಭೀಮರಾಯನಗುಡಿ ಯು.ಕೆ.ಪಿ ಆಸ್ಪತ್ರೆ ಮತ್ತು ಸುರಪುರದ ನಗರ ಆರೋಗ್ಯ ಕೇಂದ್ರದಲ್ಲಿ ಜ್ವರ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಹೊರ ಜಿಲ್ಲೆ, ಹೊರ ರಾಜ್ಯ ಮತ್ತು ಹೊರ ದೇಶಗಳಿಂದ ಬರುವ ಪ್ರಯಾಣಿಕರು ಮತ್ತು ಹೆಚ್ಚಿನ ಜ್ವರ ಹೊಂದಿರುವ ಸಾರ್ವಜನಿಕರು ಈ ಕೇಂದ್ರಗಳಲ್ಲಿ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.
ಅಗತ್ಯವಸ್ತುಗಳ ದಾನ ಮಾಡಲು ಸಂಪರ್ಕಿಸಿ: ಜಿಲ್ಲೆಯಲ್ಲಿ ಲಾಕ್‍ಡೌನ್ ಘೋಷಣೆಯಾದ ಪ್ರಯುಕ್ತ ಸಾರ್ವಜನಿಕರಿಗೆ ಅವಶ್ಯಕ ಸಾಮಗ್ರಿಗಳನ್ನು ಅಥವಾ ಚೆಕ್ ಮೂಲಕ ದೇಣಿಗೆಗಳನ್ನು (ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿ-ಕೋವಿಡ್-19ಗೆ) ಸ್ವಇಚ್ಛೆಯಿಂದ ನೀಡಲು ಮುಂದೆ ಬರುವ ಎನ್‍ಜಿಓ, ಸಂಘ- ಸಂಸ್ಥೆಗಳು, ಜನಪ್ರತಿನಿಧಿಗಳು, ಇಚ್ಛಿತ ವ್ಯಕ್ತಿಗಳು ಹಾಗೂ ಸಾರ್ವಜನಿಕರು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಶರಣಪ್ಪ ಪಾಟೀಲ್ ಮೊ:9902193325 ಮತ್ತು ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ್‍ಸಿಂಗ್ ಅವರ ಮೊ:9448911558 ಸಂಪರ್ಕಿಸಬಹುದು ಎಂದು ಅವರು ಕೋರಿದರು.
ಸಾರ್ವಜನಿಕರು ಕಿರಾಣಿ ಅಂಗಡಿ, ಔಷಧಿ, ಹಾಲಿನ ಅಂಗಡಿ, ದಿನಸಿ ಅಂಗಡಿಗಳು ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳನ್ನು ಖರೀದಿಸಲು ಹೋದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಹಾಗೂ ಸರ್ಕಾರದ ಎಲ್ಲಾ ನಿರ್ಬಂಧಗಳನ್ನು ತಪ್ಪದೇ ಪಾಲಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ:08473-253950 ಗೆ ಕರೆ ಮಾಡಿ ಸಹಾಯ ಪಡೆಯಬಹುದು. ಕೊರೊನಾ ವೈರಸ್‍ಗೆ ಸಂಬಂಧಪಟ್ಟಂತಹ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಡಳಿತದಿಂದ ವಾಟ್ಸ್‍ಆ್ಯಪ್ ಸಂಖ್ಯೆ ಆರಂಭಿಸಲಾಗಿದ್ದು, ಸಾರ್ವಜನಿಕರು ಫೋಟೊ ಅಥವಾ ಮೆಸೇಜ್‍ಗಳನ್ನು 9449933946 ಈ ಸಂಖ್ಯೆಗೆ ಕಳುಹಿಸುವ ಮೂಲಕ ನಿವೇದಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
ವಿದೇಶದಿಂದ ಜಿಲ್ಲೆಗೆ ಬಂದವರ ಮನೆಗೆ ಸ್ಟಿಕ್ಕರ್ ಅಂಟಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಇವರನ್ನು ದಿನಕ್ಕೆ 2 ಬಾರಿಯಂತೆ 14 ದಿನಗಳ ಕಾಲ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸುತ್ತಿದೆ. ವಿದೇಶದಿಂದ ಬಂದವರೆಲ್ಲರೂ ಅವರ ಮನೆಯಲ್ಲಿಯೆ ಪ್ರತ್ಯೇಕವಾಗಿರಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಎಲ್ಲಾ ಪ್ರಯಾಣಿಕ ಸಾರಿಗೆ ಸೇವೆಗಳನ್ನು ನಿಲ್ಲಿಸಲಾಗಿದೆ. ಸರಕು ಸಾಗಣೆ ಮತ್ತು ಅಗತ್ಯ ಸೇವೆಗಳಿಗೆ ವಿನಾಯಿತಿ ಇದ್ದು ಅಗತ್ಯ ವಸ್ತುಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡುಬಂದರೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಾರಾಯಣಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿವೇಕಾನಂದ ಟೆಂಗೆ ಅವರು ಉಪಸ್ಥಿತರಿದ್ದರು.

ಶುಕ್ರವಾರ, ಮಾರ್ಚ್ 27, 2020

ಲಾಕ್‍ಡೌನ್‍ಗೆ ಸಹಕರಿಸಲು ಜಿಲ್ಲಾ ಉಸ್ತುವಾರಿ ಸಚಿವರ ಮನವಿ
ಯಾದಗಿರಿ, ಮಾರ್ಚ್ 27 (ಕರ್ನಾಟಕ ವಾರ್ತೆ): ಕೊರೊನಾ ವೈರಸ್ ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರಕಾರ ವಿಧಿಸಿರುವ ಲಾಕ್‍ಡೌನ್ ಅನ್ನು ಯಾದಗಿರಿ ಮಹಾಜನತೆ ಪಾಲಿಸಬೇಕೆಂದು ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಮನವಿ ಮಾಡಿದ್ದಾರೆ.
ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಅವರು, ಜನರು ಅನಗತ್ಯವಾಗಿ ರಸ್ತೆ ಮೇಲೆ ಓಡಾಡುತ್ತಿರುವ ಪ್ರಕರಣಗಳು ಅಲ್ಲಲ್ಲಿ ಕಂಡುಬರುತ್ತಿರುವುದು ಬೇಸರದ ಸಂಗತಿ. ಪ್ರತಿಯೊಬ್ಬರೂ ಮನೆಯಲ್ಲಿದ್ದು, ಪೊಲೀಸ್ ಇಲಾಖೆಗೆ ಸಹಕರಿಸಬೇಕು. ನಾನು ಸಹ ಮನೆಯಲ್ಲಿಯೇ ಇದ್ದು, ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದೇನೆ. ಎಲ್ಲ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕಾಲಕಾಲಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡುತ್ತಿದ್ದೇನೆ. ಯಾದಿಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗಳು ರೋಗ ತಡೆಗಟ್ಟುವ ನಿಟ್ಟಿನಲ್ಲಿ ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿವೆ. ಆದರೂ ಜನರ ಸಹಕಾರ ಅತ್ಯಗತ್ಯ. ನಿಷ್ಕಾಳಜಿಯೇ ನಮ್ಮ ಹಾಗೂ ನಮ್ಮ ಕುಟುಂಬದವರ ಜೀವಕ್ಕೆ ಅಪಾಯ ತರಲಿದೆ ಎಂದು ಎಚ್ಚರಿಸಿದ್ದಾರೆ.
ಜನರು ಪ್ರತಿನಿತ್ಯ ಐದಾರು ಬಾರಿ ಕೈ ಸ್ವಚ್ಛಗೊಳಿಸಿಕೊಳ್ಳಬೇಕು. ಅನಾರೋಗ್ಯ ಎನಿಸಿದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು. ಬೇರೆಡೆಯಿಂದ ಬರುವ ವ್ಯಕ್ತಿಗಳು ಸ್ವಯಂ ವೈದ್ಯಕೀಯ ಪರೀಕ್ಷೆಗೆ ಒಳಪಡಬೇಕು. ಒಬ್ಬರಿಗೊಬ್ಬರು ಅಂತರ ಕಾಯ್ದುಕೊಳ್ಳಬೇಕು. ಹಸ್ತಲಾಘವ ಮಾಡಬಾರದು ಎಂದು ಅವರು ಸಲಹೆ ನೀಡಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ. ಆದರೆ ದೇಶದಲ್ಲಿ ಉಲ್ಬಣಿಸುತ್ತಿರುವ ಕೊರೊನಾ ಸೋಂಕುಗಳ ಸಂಖ್ಯೆ ಗಮನಿಸಿದರೆ ಯಾದಗಿರಿ ಜನತೆ ಎಚ್ಚರದಿಂದಿರುವ ಅವಶ್ಯಕತೆ ಇದೆ. ನಾವು ಮನೆಯಲ್ಲಿರುವುದೇ ಕೊರೊನಾ ವೈರಸ್‍ದಿಂದ ಪಾರಾಗುವ ಏಕೈಕ ಉಪಾಯವಾಗಿದೆ. ಯಾದಗಿರಿ ಜಿಲ್ಲೆಗೆ ಹೊರರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಯಾರನ್ನೂ ಜಿಲ್ಲೆಯ ಒಳಗಡೆ ಪ್ರವೇಶಿಸದಂತೆ ಗಡಿಗಳನ್ನು ಬಂದ್ ಮಾಡಲಾಗಿದೆ. ಜಿಲ್ಲೆಯ ಜನರಿಗೆ ದಿನನಿತ್ಯದ ದಿನಸಿ, ತರಕಾರಿ ಮತ್ತು ಔಷಧ ಅಂಗಡಿಗಳನ್ನು ತೆರೆದಿಡುವ ಮೂಲಕ ದಿನನಿತ್ಯದ ಜೀವನಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಇಡೀ ವಿಶ್ವದಲ್ಲೇ ಇಂತಹ ಕಠಿಣ ಪರಿಸ್ಥಿತಿ ತಲೆದೋರಿರುವುದರಿಂದ ಜನತೆ ಸಹಕರಿಸಬೇಕೆಂದು ಅವರು ಕೋರಿದ್ದಾರೆ.
ಅಬಕಾರಿ ಅಕ್ರಮ ಚಟುವಟಿಕೆ ಕಂಡುಬಂದರೆ ದೂರು ನೀಡಿ
ಯಾದಗಿರಿ, ಮಾರ್ಚ್ 27 (ಕರ್ನಾಟಕ ವಾರ್ತೆ): ರಾಜ್ಯದಾದ್ಯಂತ ಕೊರೊನಾ ವೈರಸ್ (ಕೋವಿಡ್-19) ನಿಯಂತ್ರಿಸಲು ಅನುಕೂಲವಾಗುವಂತೆ ರಾಜ್ಯದಲ್ಲಿ ಸಂಪೂರ್ಣ ಲಾಕ್‍ಡೌನ್ ಪರಿಸ್ಥಿತಿ ಘೋಷಿಸಿದ್ದು, ಅದರ ಅಂಗವಾಗಿ ಯಾದಗಿರಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಪರಿಸ್ಥಿತಿಯ ದುರುಪಯೋಗಪಡಿಸಿಕೊಂಡು ಕೆಲ ದುಷ್ಕರ್ಮಿಗಳು ಹಣ ಮಾಡುವ ದಂಧೆಯಲ್ಲಿ ತೊಡಗುವ ಸಾಧ್ಯತೆಗಳು ಇರುವುದರಿಂದ ಜಿಲ್ಲೆಯಲ್ಲಿನ ಯಾವುದೇ ಗ್ರಾಮಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಬಕಾರಿ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಈ ಕೆಳಕಂಡ ಅಧಿಕಾರಿಗಳ ದೂರವಾಣಿ ಅಥವಾ ಕಂಟ್ರೋಲ್ ರೂಮಿಗೆ ದೂರು ನೀಡಲು ತಿಳಿಸಲಾಗಿದೆ.
ಯಾದಗಿರಿ ವಲಯ ಅಬಕಾರಿ ನಿರೀಕ್ಷಕರಾದ ಪ್ರಕಾಶ ಮಾಕೊಂಡ ಮೊ:9902747011, ಶಹಾಪೂರ ವಲಯ ಭೀಮಣ್ಣ ರಾಠೋಡ ಮೊ:9449690873, ಸುರಪೂರ ವಲಯ ಶ್ರೀಶೈಲ್ ಒಡೆಯರ್ ಮೊ:9480289919 ಇವರನ್ನು ಸಾರ್ವಜನಿಕರು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಹಾಗೂ ದೂರುಗಳನ್ನು ನೀಡಬಹುದು.
ಇದಲ್ಲದೇ ಜಿಲ್ಲಾ ವ್ಯಾಪ್ತಿಯ ಮಾಹಿತಿ ಮತ್ತು ದೂರುಗಳಿಗೆ ಸಂಬಂಧಿಸಿದಂತೆ, ಶಹಾಪುರ ಉಪ ವಿಭಾಗದ ಅಬಕಾರಿ ನಿರೀಕ್ಷಕರಾದ ಭಾರತಿ ಮೊ:9449597151 ಹಾಗೂ ಶಹಾಪೂರ ಉಪ ವಿಭಾಗ ಅಬಕಾರಿ ಉಪ ಅಧೀಕ್ಷಕರಾದ ಮಹ್ಮದ್ ಇಸ್ಮಾಯಿಲ್ ಇನಾಮದಾರ ಮೊ:9449597160 ಹಾಗೂ ಜಿಲ್ಲಾ ಅಬಕಾರಿ ಸ್ಕ್ವಾಡ್ ಇನ್‍ಸ್ಪೆಕ್ಟರ್ ಕೇದಾರನಾಥ ಮೊ:9449597171 ಇವರನ್ನು ಸಂಪರ್ಕಿಸಬಹುದು.
ಕಂಟ್ರೋಲ್ ರೂಮ್ ಸಂಖ್ಯೆಗಳು: ಯಾದಗಿರಿ ಅಬಕಾರಿ ಉಪ ಆಯುಕ್ತರ ಕಚೇರಿ ದೂ: 08473-250479, ಯಾದಗಿರಿ ವಲಯ ಅಬಕಾರಿ ನಿರೀಕ್ಷಕರ ಕಚೇರಿ 08473-253709, ಶಹಾಪೂರ ವಲಯ ಅಬಕಾರಿ ನಿರೀಕ್ಷಕರ ಕಚೇರಿ 9591312374, ಸುರಪೂರ ವಲಯ ಅಬಕಾರಿ ನಿರೀಕ್ಷಕರ ಕಚೇರಿ 9449942987, ಶಹಾಪೂರ ಉಪ ವಿಭಾಗ ಅಬಕಾರಿ ಉಪ ಅಧೀಕ್ಷಕರ ಕಚೇರಿ 8792389759 ಸಂಪರ್ಕಿಸಿ ದೂರು ಅಥವಾ ಮಾಹಿತಿ ನೀಡಿ ಅಬಕಾರಿ ಅಕ್ರಮ ತಡೆಯುವಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕಾಗಿ ಜಿಲ್ಲೆಯ ಪ್ರಭಾರಿ ಅಬಕಾರಿ ಉಪ ಆಯುಕ್ತರಾದ ಶಶಿಕಲಾ ಒಡೆಯರ್ (ಮೊ:9449597150) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುರುವಾರ, ಮಾರ್ಚ್ 26, 2020

ವೈದ್ಯಾಧಿಕಾರಿಗಳ ಸಭೆ
ಯಾದಗಿರಿ, ಮಾರ್ಚ್ 26 (ಕರ್ನಾಟಕ ವಾರ್ತೆ): ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ವೈದ್ಯಾಧಿಕಾರಿಗಳ ಸಭೆ ನಡೆಸಿದರು. ಡಾ.ಭಗವಂತ ಅನವಾರ ಹಾಗೂ ವೈದ್ಯರು ಹಾಜರಿದ್ದರು.

ಅಗತ್ಯವಸ್ತುಗಳ ದಾನ ಮಾಡಲು ಸಂಪರ್ಕಿ
ಯಾದಗಿರಿ, ಮಾರ್ಚ್ 26 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಲಾಕ್‍ಡೌನ್ ಘೋಷಣೆಯಾದ ಪ್ರಯುಕ್ತ ಸಾರ್ವಜನಿಕರಿಗೆ ದಿನಬಳಕೆಯ ಅಗತ್ಯ ವಸ್ತುಗಳಾದ ಆಹಾರ ಧಾನ್ಯಗಳು, ಔಷಧೋಪಕರಣಗಳು ಮತ್ತು ಇನ್ನಿತರ ಅಗತ್ಯ ವಸ್ತುಗಳನ್ನು ನೀಡಲು ಇಚ್ಛಿಸುವ ಸರ್ಕಾರೇತರ ಸಂಸ್ಥೆಗಳು (ಎನ್‍ಜಿಓ), ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಈ ಕೆಳಗಿನ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲಾಡಳಿತದಿಂದ ವಿವಿಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ. ಸದ್ಯ ಭಾರತ ಸರ್ಕಾರದ ಹಾಗೂ ಕರ್ನಾಟಕ ಸರ್ಕಾರದ ನಿರ್ದೇಶನಗಳನ್ವಯ ಏಪ್ರಿಲ್ 15ರ ವರೆಗೆ ಜಿಲ್ಲೆಯಲ್ಲಿ ಲಾಕ್‍ಡೌನ್ ಘೋಷಣೆಯಾಗಿರುವ ಪ್ರಯುಕ್ತ, ಈ ಅವಧಿಯಲ್ಲಿ ಸಾರ್ವಜನಿಕರಿಗೆ ದಿನಬಳಕೆಯ ಅಗತ್ಯ ವಸ್ತುಗಳ ಹಾಗೂ ಮೂಲ ಸೌಲಭ್ಯಗಳ ಅತೀ ಅವಶ್ಯಕತೆ ಇರುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ನೀಡಲು ಇಚ್ಛಿಸುವವರು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಶರಣಪ್ಪ ಪಾಟೀಲ್ ಮೊ:9902193325 ಮತ್ತು ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ್‍ಸಿಂಗ್ ಅವರ ಮೊ:9448911558, 7892055353 ಸಂಪರ್ಕಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಕನಿಷ್ಠ 1 ಮೀಟರ್ ಅಂತರ ಕಾಯ್ದುಕೊಳ್ಳಲು ಮನವಿ
ಯಾದಗಿರಿ, ಮಾರ್ಚ್ 26 (ಕರ್ನಾಟಕ ವಾರ್ತೆ): ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಜಿಲ್ಲೆಯಾದ್ಯಂತ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯ ಸಮಸ್ತ ನಾಗರಿಕರು ತಪ್ಪದೇ ಪಾಲನೆ ಮಾಡಿ ಸಹಕರಿಸಲು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಕಿರಾಣಿ ಅಂಗಡಿ, ಔಷಧಿ, ಹಾಲಿನ ಅಂಗಡಿ, ದಿನಸಿ ಅಂಗಡಿ, ಶುದ್ಧ ಕುಡಿಯುವ ನೀರಿನ ಘಟಕಗಳು ಹಾಗೂ ಬ್ಯಾಂಕ್‍ಗಳಲ್ಲಿ ಕನಿಷ್ಠ 1 ಮೀಟರ್ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೆಮ್ಮು, ನೆಗಡಿ, ಜ್ವರ ಇನ್ನಿತರ ರೋಗಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಾಗಿ ಪರೀಕ್ಷೆ ಮಾಡಿಕೊಳ್ಳಬೇಕು. ಅಥವಾ ಉಚಿತ ಆರೋಗ್ಯ ಸಹಾಯವಾಣಿ 104 ಅಥವಾ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಗೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಹೋಮ್ ಐಸೊಲೇಷನ್‍ನಲ್ಲಿ 64 ಜನ
3 ವ್ಯಕ್ತಿಗಳ ಮಾದರಿಗಳಲ್ಲಿ 2 ನೆಗೆಟಿವ್
ಯಾದಗಿರಿ, ಮಾರ್ಚ್ 26 (ಕರ್ನಾಟಕ ವಾರ್ತೆ): ನೋವೆಲ್ ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪರೀಕ್ಷೆ ಮಾಡಲು ಸಂಗ್ರಹಿಸಿದ ಒಟ್ಟು 3 ವ್ಯಕ್ತಿಗಳ ಮಾದರಿಗಳಲ್ಲಿ 2 ನೆಗೆಟಿವ್ ಫಲಿತಾಂಶ ಬಂದಿವೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಗುರುವಾರ ಸಂಜೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಆಸ್ಪತ್ರೆಯಲ್ಲಿ ಒಬ್ಬರನ್ನು ಮತ್ತು ಸುರಪುರ ಆಸ್ಪತ್ರೆಯಲ್ಲಿ ಒಬ್ಬರನ್ನು ಪ್ರತ್ಯೇಕವಾಗಿರಿಸಿ, ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಮನವಿ ಮಾಡಿದ್ದಾರೆ.
ಯಾದಗಿರಿ ತಾಲ್ಲೂಕಿನಲ್ಲಿ 27, ಶಹಾಪೂರ ತಾಲ್ಲೂಕಿನಲ್ಲಿ 16 ಹಾಗೂ ಸುರಪುರ ತಾಲ್ಲೂಕಿನಲ್ಲಿ 21 ಸೇರಿದಂತೆ ಮಾರ್ಚ್ 26ರವರೆಗೆ ಜಿಲ್ಲೆಯಲ್ಲಿ ಒಟ್ಟು 64 ಜನ ದುಬೈ, ಕತಾರ, ಸೌದಿ, ಮದಿನಾ ಪ್ರವಾಸದಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಕಾರಣ ಇವರಿಗೆ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ವಿದೇಶಗಳಿಂದ ಬಂದವರನ್ನು ದಿನಕ್ಕೆ 2 ಬಾರಿಯಂತೆ 14 ದಿನಗಳ ಕಾಲ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸುತ್ತಿದೆ. ಇವರ ಕುಟುಂಬದ ಸದಸ್ಯರ ಮೇಲೆಯೂ ನಿಗಾವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಯಾದಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 15, ಶಹಾಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 2 ಹಾಗೂ ಸುರಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ಸೇರಿದಂತೆ ಒಟ್ಟು 27 ಐಸೊಲೇಷನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಸಹಾಯವಾಣಿ-104 ಕ್ಕೆ ಬರುವ ಕರೆಗಳಿಗಾಗಿ 3 ಸಿಬ್ಬಂದಿಗಳನ್ನು ಮೀಸಲಿರಿಸಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಗೆ 11 ಕರೆಗಳು ಸ್ವೀಕೃತವಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರಿಗೆ ಮನವಿ: ಕೋವಿಡ್-19 ಪೀಡಿತ ದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರು ಭಾರತಕ್ಕೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಅಥವಾ 24*7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಿ. ಕೈ ಸ್ವಚ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಿ ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವುದನ್ನು ಮಾಡಬಾರದು ಎಂದು ಅವರು ಸಲಹೆ ನೀಡಿದ್ದಾರೆ.

ಕೊರೊನಾ ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತಕ್ಕೆ ವಾಟ್ಸ್‍ಆ್ಯಪ್ ಮಾಡಿ
ಯಾದಗಿರಿ, ಮಾರ್ಚ್ 26 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಡಳಿತದಿಂದ ವಾಟ್ಸ್‍ಆ್ಯಪ್ ಸಂಖ್ಯೆ 9449933946 ಆರಂಭಿಸಲಾಗಿದೆ. ಕಾರಣ ಜಿಲ್ಲೆಯ ಸಾರ್ವಜನಿಕರು ಕೊರೊನಾ ವೈರಸ್ ಸಮಸ್ಯೆಗೆ ಸಂಬಂಧಪಟ್ಟಂತಹ ಫೋಟೊ, ಟೆಕ್ಸ್ಟ್‍ಮೆಸೆಜ್, ವಾಯ್ಸ್ ಮೆಸೆಜ್ ಅಥವಾ ವೀಡಿಯೊಗಳನ್ನು ಈ ವಾಟ್ಸ್‍ಆ್ಯಪ್ ಸಂಖ್ಯೆಗೆ ಕಳುಹಿಸುವ ಮೂಲಕ ನಿವೇದಿಸಿಕೊಳ್ಳಲು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮಂಗಳವಾರ, ಮಾರ್ಚ್ 24, 2020

ಮಳಿಗೆ ಹರಾಜು ಪ್ರಕ್ರಿಯೆ ಮುಂದೂಡಿಕೆ
ಯಾದಗಿರಿ, ಮಾರ್ಚ್ 24 (ಕರ್ನಾಟಕ ವಾರ್ತೆ): ಯಾದಗಿರಿ ನಗರಸಭೆಯ ವಿವಿಧ ಯೋಜನೆಗಳ ಅಡಿಯಲ್ಲಿ ನಿರ್ಮಿಸಿದ ವಾಣಿಜ್ಯ ಮಳಿಗೆಗಳ ಮಾರ್ಚ್ 27ರಂದು ನಡೆಯಬೇಕಿದ್ದ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳ ಅನ್ವಯ ಜಿಲ್ಲಾಧಿಕಾರಿಗಳ ಆದೇಶದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚೆಕ್‍ಪೋಸ್ಟ್‍ನಲ್ಲಿ 26,754 ಪ್ರಯಾಣಿಕರ ತಪಾಸಣೆ
ಹೋಮ್ ಐಸೊಲೇಷನ್‍ನಲ್ಲಿ 61 ಜನ
ಯಾದಗಿರಿ, ಮಾರ್ಚ್ 24 (ಕರ್ನಾಟಕ ವಾರ್ತೆ): ಯಾದಗಿರಿ ತಾಲ್ಲೂಕಿನಲ್ಲಿ 25, ಶಹಾಪೂರ ತಾಲ್ಲೂಕಿನಲ್ಲಿ 16 ಹಾಗೂ ಸುರಪುರ ತಾಲ್ಲೂಕಿನಲ್ಲಿ 20 ಸೇರಿದಂತೆ ಮಾರ್ಚ್ 24ರವರೆಗೆ ಜಿಲ್ಲೆಯಲ್ಲಿ ಒಟ್ಟು 61 ಜನ ದುಬೈ, ಕತಾರ, ಸೌದಿ, ಮದಿನಾ ಪ್ರವಾಸದಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಕಾರಣ ಇವರಿಗೆ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ವಿದೇಶಗಳಿಂದ ಬಂದವರನ್ನು ದಿನಕ್ಕೆ 2 ಬಾರಿಯಂತೆ 14 ದಿನಗಳ ಕಾಲ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸುತ್ತಿದೆ. ಇವರ ಕುಟುಂಬದ ಸದಸ್ಯರ ಮೇಲೆಯೂ ನಿಗಾವಹಿಸಲಾಗಿದೆ. ಶಹಾಪುರ ಆಸ್ಪತ್ರೆಯಲ್ಲಿ ಒಬ್ಬರನ್ನು ಮತ್ತು ಸುರಪುರ ಆಸ್ಪತ್ರೆಯಲ್ಲಿ ಒಬ್ಬರನ್ನು ಪ್ರತ್ಯೇಕವಾಗಿರಿಸಿ, ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಅವರು ಮನವಿ ಮಾಡಿದ್ದಾರೆ.
ಏಪ್ರಿಲ್ 1ರವರೆಗೆ ನಿರ್ಬಂಧ: ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶದಂತೆ ಜಿಲ್ಲೆಯೂ ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಮಾರ್ಚ್ 23ರ ಮಧ್ಯರಾತ್ರಿಯಿಂದ ಏಪ್ರಿಲ್ 1ರ ಮಧ್ಯರಾತ್ರಿಯವರೆಗೆ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕರು ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರಬಾರದು ಎಂದು ಅವರು ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಯಾದಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 15, ಶಹಾಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 2 ಹಾಗೂ ಸುರಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ಸೇರಿದಂತೆ ಒಟ್ಟು 27 ಐಸೊಲೇಷನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಹೊಸ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ವ್ಯವಸ್ತೆ ಮಾಡಲಾಗಿದೆ. ಆರೋಗ್ಯ ಸಹಾಯವಾಣಿ-104 ಕ್ಕೆ ಬರುವ ಕರೆಗಳಿಗಾಗಿ 3 ಸಿಬ್ಬಂದಿಗಳನ್ನು ಮೀಸಲಿರಿಸಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಗೆ 6 ಕರೆಗಳು ಸ್ವೀಕೃತವಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
26,754 ಪ್ರಯಾಣಿಕರ ತಪಾಸಣೆ: ಜಿಲ್ಲಾಡಳಿತದ ವತಿಯಿಂದ ನೋವೆಲ್ ಕೊರೊನಾ ವೈರಸ್ ತಡೆಗೆ ಜಿಲ್ಲೆಯಲ್ಲಿ ಸ್ಥಾಪಿಸಿರುವ 6 ಚೆಕ್‍ಪೋಸ್ಟ್/ ಸ್ಕ್ರೀನಿಂಗ್ ಸೆಂಟರ್/ ಮಾಹಿತಿ ಡೆಸ್ಕ್‍ಗಳಲ್ಲಿ ಇಲ್ಲಿಯವರೆಗೆ 26,754 ಜನರನ್ನು ತಪಾಸಣೆ ಮಾಡಲಾಗಿದೆ. ಯಾದಗಿರಿ ನಗರದ ರೈಲ್ವೆ ನಿಲ್ದಾಣ, ಜಿಲ್ಲಾ ನ್ಯಾಯಾಲಯ, ಹೊಸ ಬಸ್ ನಿಲ್ದಾಣ ಹಾಗೂ ಯರಗೋಳ, ಗುರುಮಠಕಲ್ ಸಮೀಪದ ಇಟಗಾಲ್ ಕ್ರಾಸ್, ಮುಡಬೂಳ ಗ್ರಾಮಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದ್ದು, ಜನರನ್ನು ತಪಾಸಣೆ ಮಾಡಲಾಗುತ್ತಿದೆ.
ಸಾರ್ವಜನಿಕರಿಗೆ ಮನವಿ: ಕೋವಿಡ್-19 ಪೀಡಿತ ದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರು ಭಾರತಕ್ಕೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಅಥವಾ 24*7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಿ. ಕೈ ಸ್ವಚ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಿ ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವುದನ್ನು ಮಾಡಬಾರದು ಎಂದು ಅವರು ಸಲಹೆ ನೀಡಿದ್ದಾರೆ.
ಅನವಶ್ಯಕವಾಗಿ ಮನೆಯಿಂದ ಹೊರಬಂದರೆ ಕ್ರಮ
-:ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಮಾರ್ಚ್ ೨೪ (ಕರ್ನಾಟಕ ವಾರ್ತೆ): ನೋವೆಲ್ ಕೊರೊನಾ ವೈರಸ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರದ ಆದೇಶದಂತೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಅನವಶ್ಯಕವಾಗಿ ಮನೆಯಿಂದ ಹೊರಬಂದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದುಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್‌ನಿಂದ ತಪ್ಪಿಸಿಕೊಳ್ಳಲು ಅಂತರ ಕಾಯ್ದುಕೊಳ್ಳುವುದು ಮತ್ತು ಮನೆಯಲ್ಲಿರುವುದೊಂದೇ ಸದ್ಯದ ಪರಿಹಾರವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್-೧೯ರ ಶುಶ್ರೂಷಾ ಉದ್ದೇಶಗಳನ್ನು ಮತ್ತು ಶಾಸನಬದ್ಧ ಹಾಗೂ ನಿಯಂತ್ರಣ ಪ್ರಕಾರ್ಯಗಳನ್ನು ಹೊರತುಪಡಿಸಿ ಐದು ವ್ಯಕ್ತಿಗಳಿಗಿಂತ ಹೆಚ್ಚಿನ ಜನ ಸೇರುವುದನ್ನು ನಿಷೇಧಿಸಲಾಗಿದೆ. ಅದೇ ರೀತಿ ಎಲ್ಲಾ ಧರ್ಮದವರು ಪ್ರಾರ್ಥನೆ ಅಥವಾ ಹಬ್ಬಗಳ ಹೆಸರಿನಲ್ಲಿ ಗುಂಪು ಸೇರುವಂತಿಲ್ಲ. ಸುರಕ್ಷತಾ ಕ್ರಮಗಳೊಂದಿಗೆ ಮನೆಯಲ್ಲಿಯೇ ಆಚರಣೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೋನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ಶಹಾಪುರ ಆಸ್ಪತ್ರೆಯಲ್ಲಿ ಒಬ್ಬರನ್ನು ಪ್ರತ್ಯೇಕವಾಗಿರಿಸಿ, ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಇವರ ರಕ್ತ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಯಾದಗಿರಿ ೧೫, ಶಹಾಪುರ ೨ ಹಾಗೂ ಸುರಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ೧೦ ಸೇರಿದಂತೆ ಒಟ್ಟು ೨೭ ಐಸೊಲೇಷನ್ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಪ್ರಕರಣಗಳು ಕಂಡುಬAದರೆ ಹೊಸ ಜಿಲ್ಲಾಸ್ಪತ್ರೆಯಲ್ಲಿ ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ವಿದೇಶದಿಂದ ಜಿಲ್ಲೆಗೆ ಬಂದ ಒಟ್ಟು ೫೮ ಜನ ಹೋಮ್ ಐಸೊಲೇಷನ್‌ನಲ್ಲಿದ್ದಾರೆ. ಇವರ ಮನೆಗೆ ಸ್ಟಿಕ್ಕರ್ ಅಂಟಿಸಲಾಗುವುದು. ಮುಂಜಾಗ್ರತಾ ಕ್ರಮವಾಗಿ ಇವರನ್ನು ದಿನಕ್ಕೆ ೨ ಬಾರಿಯಂತೆ ೧೪ ದಿನಗಳ ಕಾಲ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸುತ್ತಿದೆ. ವಿದೇಶದಿಂದ ಜಿಲ್ಲೆಗೆ ಬಂದವರೆಲ್ಲರೂ ಅವರ ಮನೆಯಲ್ಲಿಯೆ ಏಕಾಂತವನ್ನು ಕಡ್ಡಾಯವಾಗಿ ಅನುಸರಿಸಬೇಕು. ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಸರಕಾರಿ ಏಕಾಂತವಾಸಕ್ಕೆ ಅವರನ್ನು ವರ್ಗಾಹಿಸಲಾಗುವುದು. ಈಗಾಗಲೇ ಒಂದು ಪ್ರಕರಣ ಕೂಡ ದಾಖಲಿಸಲಾಗಿದೆ. ನಿಯಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ, ಸಂಸ್ಥೆ, ಸಂಘಟನೆಯ ವಿರುದ್ಧ ಸಾಂಕ್ರಾಮಿಕ ರೋಗಗಳ ಅಧಿನಿಯಮ, ವಿಕೋಪ ನಿರ್ವಹಣಾ ಅಧಿನಿಯಮ, ಭಾರತೀಯ ದಂಡ ಸಂಹಿತೆ ೧೮೮ನೇ ಪ್ರಕರಣ ಮತ್ತು ಇತರ ಸಂಬAಧಪಟ್ಟ ಸಂಹಿತೆಗಳು, ಅಧಿನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಕಾರ್ಮಿಕರಿಗೆ ವೇತನಸಹಿತ ರಜೆ: ಜಿಲ್ಲೆಯ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಚೇರಿಗಳು, ಕಾರ್ಯಾಗಾರಗಳು, ಉಗ್ರಾಣಗಳು, ಅವುಗಳ ವ್ಯವಹಾರವನ್ನು ಸ್ಥಗಿತಗೊಳಿಸಬೇಕು. ಅಗತ್ಯ ಸರಕು ಮತ್ತು ಸೇವೆಗಳೊಂದಿಗೆ ವ್ಯವಹರಿಸುವ, ಆಹಾರ, ವೈದ್ಯಕೀಯ ಉಪಕರಣ ಔಷಧಿಗಳು, ಇಂಧನ, ಕೃಷಿ ಉಪಕರಣಗಳು, ಇತ್ಯಾದಿ, ಅಂತಹುಗಳನ್ನು ಹೊರತುಪಡಿಸಿ ಎಲ್ಲಾ ಕೈಗಾರಿಕೆಗಳು ಮತ್ತು ಕಾರ್ಖಾನೆಗಳು ತಮ್ಮ ಕಾರ್ಯನಿರ್ವಹಣೆಗಳನ್ನು ಸ್ಥಗಿತಗೊಳಿಸತಕ್ಕದ್ದು. ಈ ಕಾರಣಕ್ಕಾಗಿ ಯಾವೊಬ್ಬ ಕೆಲಸಗಾರನನ್ನು ತೆಗೆದುಹಾಕುವಂತಿಲ್ಲ ಹಾಗೂ ಉಳಿದೆಲ್ಲಾ ಕೆಲಸಗಾರರಿಗೆ ಈ ದಿನಗಳಲ್ಲಿ ವೇತನಸಹಿತ ರಜೆಯನ್ನು ಮಂಜೂರು ಮಾಡುವಂತೆ ನಿರ್ದೇಶಿಸಲಾಗಿದೆ ಎಂದು ಹೇಳಿದರು.
ಮನೆಯಿಂದಲೇ ಕೆಲಸ ನಿರ್ವಹಿಸಿ: ಯಾವುದು ಕಾರ್ಯಸಾಧುವಲ್ಲವೋ ಹಾಗೂ ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಘಟಕಗಳನ್ನು ಹೊರತುಪಡಿಸಿ ಎಲ್ಲಾ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಘಟಕಗಳಲ್ಲಿನ ಕೆಲಸ ಕಾರ್ಯಗಳನ್ನು ಆಯಾ ನೌಕರರ ಮನೆಯಿಂದಲೇ ಕೆಲಸ ನಿರ್ವಹಿಸುವುದನ್ನು (ವರ್ಕ್ ಫ್ರಮ್ ಹೋಮ್) ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಜನರ ಸಾಗಣೆ ನಿಷೇಧ: ಅಂತರರಾಜ್ಯ, ಅಂತರ ಜಿಲ್ಲಾ ಮತ್ತು ಜಿಲ್ಲೆಯೊಳಗಿನ ಎಲ್ಲಾ ಪ್ರಯಾಣಿಕ ಸಾರಿಗೆ ಸೇವೆಗಳನ್ನು, ರಸ್ತೆ ಸಾರಿಗೆ ನಿಗಮಗಳ ಮತ್ತು ಖಾಸಗಿ ಸಾರಿಗೆ ಕಾರ್ಯಾಚರಣೆಗಳನ್ನು ನಿಲ್ಲಿಸಲಾಗಿದೆ. ಈ ಆದೇಶದಲ್ಲಿ ಅನುಮತಿಸಿದ ಅಗತ್ಯ ಸರಕುಗಳನ್ನು ಸಂಗ್ರಹಿಸುವುದಕ್ಕಾಗಿ ಹಾಗೂ ಈ ಆದೇಶದಲ್ಲಿ ಅನುಮತಿಸಿದ ವಿನಾಯಿತಿಗಳಲ್ಲಿನ ಖಾಸಗಿ ವಾಹನಗಳನ್ನು ಮಾತ್ರ ಚಲಾಯಿಸಬೇಕು. ಅಗತ್ಯ ಸರಕುಗಳನ್ನು ಸಂಗ್ರಹಿಸಲು ಮತ್ತು ವೈದ್ಯಕೀಯ ತುರ್ತುಗಳಿಗೆ ಹಾಜರಾಗುತ್ತಿರುವ ವಾಹನಗಳನ್ನು ಹೊರತುಪಡಿಸಿ, ಪ್ರಯಾಣಿಕರಿಗೆ ಎಲ್ಲಾ ಓಲಾ, ಉಬರ್, ಟ್ಯಾಕ್ಸಿಗಳು, ಆಟೊರಿಕ್ಷಾಗಳು ಮತ್ತು ಇತರ ಬಾಡಿಗೆ ಪ್ರಯಾಣ ಸೇವೆಗಳಿಗೆ ಅನುಮತಿ ಇಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸರ್ಕಾರವು ಅಧಿಸೂಚಿಸಿದ ಅಗತ್ಯೇತರ(non essential) ಸೇವೆಗಳನ್ನು ವ್ಯವಹರಿಸುವ ಎಲ್ಲಾ ಸರ್ಕಾರಿ ಕಚೇರಿಗಳನ್ನು ಸ್ಥಗಿತಗೊಳಿಸಲಾಗಿದೆ. ವೈದ್ಯಕೀಯ ತುರ್ತುಗಳು ಮತ್ತು ಅನಿವಾರ್ಯ ಸನ್ನಿವೇಶಗಳನ್ನು ಹೊರತುಪಡಿಸಿ, ಇತರ ನೆರೆ ರಾಜ್ಯಗಳೊಂದಿಗಿನ ರಾಜ್ಯದ ಗಡಿಗಳನ್ನು, ಪ್ರಯಾಣಿಕ ವಾಹನಗಳಲ್ಲಿ, ಪ್ರಯಾಣಿಕರ ಚಲನವಲನಕ್ಕಾಗಿ, ಭಾರಿ ಮತ್ತು ಲಘು ವಾಹನಗಳ ಸಂಚಾರವನ್ನು ಕೂಡ ನಿಲ್ಲಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಅಗತ್ಯ ಸೇವೆಗಳಿಗೆ ವಿನಾಯಿತಿ: ಮೇಲಿನ ನಿರ್ಬಂಧಗಳ ಕಾರ್ಯಾಚರಣೆಯಿಂದ, ಈ ಮುಂದಿನ ಸರಕುಗಳು ಮತ್ತು ಸೇವೆಗಳನ್ನು ಒದಗಿಸುವ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ಆಹಾರ, ದಿನಸಿ ಅಂಗಡಿಗಳು, ಹಾಲು, ತರಕಾರಿಗಳು, ದಿನಬಳಕೆ ವಸ್ತುಗಳು, ಮಾಂಸ, ಮೀನು, ಹಣ್ಣು, ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಗಳು ಮತ್ತು ಅಂಗಡಿಗಳು. ಪೆಟ್ರೋಲ್ ಬಂಕುಗಳು, ಗ್ಯಾಸ್, ಎಲ್‌ಪಿಜಿ, ಶೈಲ ಏಜೆನ್ಸಿಗಳು ಮತ್ತು ಅದಕ್ಕೆ ಸಂಬAಧಿಸಿದ ಉಗ್ರಾಣಗಳು. ಎಲ್ಲಾ ಸರಕುಗಳ ಸಾಗಣೆ. ಆಸ್ಪತ್ರೆಗಳು, ಚಿಕಿತ್ಸಾಲಯಗಳು, ಔಷಧಾಲಯಗಳು, ಆಪ್ಟಿಕಲ್ ಅಂಗಡಿಗಳು, ರೋಗಪತ್ತೆ ಕೇಂದ್ರಗಳು ಮತ್ತು ಆರೋಗ್ಯ ಮತ್ತು ವೈದ್ಯಕೀಯಕ್ಕೆ ಸಂಬAಧಿಸಿದ ಇತರೆ ಅಂಗಡಿಗಳು, ಸ್ಥಾಪನೆಗಳು, ಕಾರ್ಖಾನೆಗಳು ತೆರೆದಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪೊಲೀಸ್ ಮತ್ತು ಅಗ್ನಿಶಾಮಕ ಸೇವೆಗಳು. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಕಚೇರಿಗಳು, ಅಂಚೆ ಸೇವೆಗಳು. ಸರ್ಕಾರವು ಅಧಿಸೂಚಿಸಿದಂತೆ, ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಸರ್ಕಾರಿ ಕಚೇರಿಗಳು. ವಿದ್ಯುಚ್ಛಕ್ತಿ, ನೀರು ಪೂರೈಕೆ ಮತ್ತು ಪೌರ ಸೇವೆಗಳು. ಬ್ಯಾಂಕ್ ಟೆಲ್ಲರ್ ಸೇವೆಗಳು, ಎಟಿಎಂಗಳು, ಟೆಲಿಕಾಂ, ಅಂತರ್ಜಾಲ ಮತ್ತು ಕೇಬಲ್ ಸೇವೆಗಳು. ಸರಕು ಮತ್ತು ಸೇವೆಗಳು ಇ-ಕಾಮರ್ಸ್, ಹೋಮ್ ಡೆಲಿವರಿ. ರೆಸ್ಟೋರೆಂಟ್‌ಗಳಿAದ ಕೊಂಡೊಯ್ಯುವ, ಹೋಮ್ ಡೆಲಿವೆರಿ. ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳು ಒದಗಿಸುವ ಕ್ಯಾಂಟೀನ್ ಸೇವೆಗಳು. ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ. ಖಾಸಗಿ ಭದ್ರತಾ ಸೇವೆಗಳನ್ನು ಒಳಗೊಂಡ, ಭದ್ರತಾ ಸೇವೆಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದರು.
ವ್ಯಾಪಕವಾಗಿ ಮತ್ತು ಕಂಟೈನರುಗಳಲ್ಲಿ ಕುಡಿಯುವ ನೀರಿನ ತಯಾರಿಕೆ, ಸರಬರಾಜು ಮತ್ತು ವಿತರಣೆ. ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು, ವಿಮಾನ ನಿಲ್ದಾಣಗಳು ಮತ್ತು ಸಂಬAಧಿತ ಸೇವೆಗಳು. ಪ್ರಯಾಣಿಕರನ್ನು ಆಸ್ಪತ್ರೆಯಿಂದ ಮನೆಗೆ ಮತ್ತು ಮನೆಯಿಂದ ಆಸತ್ರೆಗೆ ಸಂಚರಿಸಲು ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು, ವಿಮಾನ ನಿಲ್ದಾಣಗಳು. ಔಷಧಿಗಳು, ಮುಖಗವಸುಗಳು, ಪಿ.ಪಿ.ಇ ಗಳು ಇತ್ಯಾದಿಗಳ ಉತ್ಪಾದನೆಯನ್ನು ಒಳಗೊಂಡು, ಕೊವಿಡ್-೧೯ರ ಶುಶ್ರೂಷೆಗೆ ಅಗತ್ಯ ಪ್ರಯತ್ನ ಪಡುತ್ತಿರುವ ಖಾಸಗಿ ವ್ಯವಸ್ಥಾಪನೆಗಳು. ಸತತ ಪ್ರಕ್ರಿಯೆ ವಿಧಾನದಲ್ಲಿನ ಉತ್ಪಾದನಾ ಮತ್ತು ತಯಾರಿಕಾ ಘಟಕಗಳು ತೆರೆದಿರುತ್ತವೆ ಎಂದು ಅವರು ತಿಳಿಸಿದರು.
ಹೆಚ್ಚಿನ ದರಕ್ಕೆ ಮಾರಿದರೆ ಕೇಸ್: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಭಗವಾನ್ ಸೋನವಣೆ ಅವರು ಮಾತನಾಡಿ, ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಐದು ಅಥವಾ ಅದಕ್ಕಿಂತ ಹೆಚ್ಚಿನ ಜನರು ಗುಂಪಾಗಿ ಕಂಡುಬ0ದರೆ ಪ್ರಕರಣ ದಾಖಲಿಸಲಾಗುವುದು. ಜಿಲ್ಲೆಯ ಎಲ್ಲಾ ಚೆಕ್‌ಪೋಸ್ಟ್ಗಳಲ್ಲಿ ಪೊಲೀಸ್ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಿಂದ ಯಾರು ಹೊರಹೋಗುವಂತಿಲ್ಲ ಮತ್ತು ಹೊರ ಜಿಲ್ಲೆಗಳಿಂದ ಯಾರು ಒಳಗೆ ಬರುವಂತಿಲ್ಲ. ಇನ್ನು ಅಗತ್ಯ ವಸ್ತುಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡುಬAದರೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ನಾರಾಯಣಪ್ಪ ಅವರು ಉಪಸ್ಥಿತರಿದ್ದರು.

ಸೋಮವಾರ, ಮಾರ್ಚ್ 23, 2020

ಕೊರೊನಾ ತಡೆಗೆ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಭೆ
ಹೆಚ್ಚಿನ ದರಕ್ಕೆ ಮಾಸ್ಕ್ ಮಾರಾಟ ಮಾಡಿದರೆ ಕ್ರಮ
-ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಮಾರ್ಚ್ 23 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಸರ್ಜಿಕಲ್ 3 ಲೇಯರ್ ಮಾಸ್ಕ್‍ಗಳನ್ನು 10 ರೂ.ಗಿಂತ ಮತ್ತು 2 ಲೇಯರ್ ಮಾಸ್ಕ್‍ಗಳನ್ನು 8 ರೂ.ಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡುಬಂದರೆ ಕಾನೂನು ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಕುರಿತು ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.200 ಎಂ.ಎಲ್ ಸ್ಯಾನಿಟೈಸರ್ ಅನ್ನು 100 ರೂ.ಗೆ ಮಾರಾಟ ಮಾಡಬೇಕು. ಅಗತ್ಯ ವಸ್ತುಗಳ ಹೊರತುಪಡಿಸಿ ಇತರೆ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಆದೇಶಿಸಲಾಗಿದೆ. ಅದೇ ರೀತಿ ಜ್ಯೂಸ್ ಅಂಗಡಿ, ಐಸ್‍ಕ್ರೀಮ್ ಅಂಗಡಿ ಮತ್ತು ಚಹಾ ಅಂಗಡಿಗಳನ್ನು ಕೂಡ ಬಂದ್ ಮಾಡಿಸುವಂತೆ ಸೂಚಿಸಿದ ಅವರು, ಕೊರೊನಾ ವೈರಸ್ ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶಿಸಿದರು.ವಿವಿಧ ರೀತಿಯ ವ್ಯಾಪಾರ ವಾಣಿಜ್ಯ ಮಳಿಗೆಗಳಿಗೆ ಸಂಘಟನೆಗಳಿರುತ್ತವೆ. ಅಂತಹ ಸಂಘಟನೆಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಮೂಲಕ ಅತಿ ಅವಶ್ಯಕವಲ್ಲದ ಮಳಿಗೆಗಳನ್ನು ಬಂದ್ ಮಾಡಿಸಬೇಕು. ಈ ಸಂದರ್ಭದಲ್ಲಿ ಸಾರ್ವಜನಿಕ ಜೀವನಕ್ಕೆ ಬೇಕಾಗುವ ಅಗತ್ಯ ವಸ್ತುಗಳ ಖರೀದಿಗೆ ತೊಂದರೆಯಾಗಬಾರದು. ಆದರೆ, ಅಂಗಡಿಗಳ ಮಾಲೀಕರಿಗೆ ಮನವರಿಕೆ ಮಾಡಿ ಮುಂಜಾಗ್ರತಾ ಕ್ರಮಗಳೊಂದಿಗೆ ವಹಿವಾಟು ನಡೆಸುವಂತೆ ಸೂಚನೆ ನೀಡಿ. ಅಲ್ಲದೇ, ಇಂತಹ ಪರಿಸ್ಥಿತಿಯ ದುರುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ವಸ್ತುಗಳನ್ನು ಎಂಆರ್‍ಪಿ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವಂತಿಲ್ಲ ಎಂದು ಅವರು ತಿಳಿಸಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಂದ ನಗರ ಅಥವಾ ಪಟ್ಟಣಗಳಿಗೆ ಅನವಶ್ಯಕವಾಗಿ ಬರುವುದನ್ನು ತಡೆಗಟ್ಟಬೇಕು. ಭಾರತ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 133, 144 (3)ರ ಪ್ರಕಾರ ಹಾಗೂThe Karnataka Epidemic Disease, COVID-19 Regulations, 2020 2020 ರ ನಿಯಮ 12ರ ಮೇರೆಗೆ ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕಿನಿಂದಾಗಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮಾರ್ಚ್ 31ರವರೆಗೆ ಸಾರ್ವಜನಿಕರು ಅನುಸರಣ ಕ್ರಮಗಳನ್ನು ಕೈಗೊಳ್ಳಲು ಪರಿಷ್ಕøತ ಆದೇಶ ಹೊರಡಿಸಲಾಗಿದೆ. ಅದರಂತೆ ಸಾರ್ವಜನಿಕರು ನಡೆದುಕೊಳ್ಳಬೇಕು ಎಂದು ಅವರು ಹೇಳಿದರು.ಇನ್ನು ವಿದೇಶಗಳಿಂದ ಬಂದು ಹೋಮ್ ಐಸೊಲೇಷನ್‍ನಲ್ಲಿರುವ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಮನೆಬಿಟ್ಟು ಹೊರಬರುವಂತಿಲ್ಲ. ಸಾರ್ವಜನಿಕರು ಕೂಡ ಅನವಶ್ಯಕವಾಗಿ ಮನೆಯಿಂದ ಹೊರಬರುವುದು ಅಥವಾ ಗುಂಪುಗುಂಪಾಗಿ ಸೇರುವುದು ಮಾಡಬಾರದು. ಅಗತ್ಯ ವಸ್ತುಗಳ ಖರೀದಿಗಷ್ಟೇ ಯಾರಾದರು ಒಬ್ಬರು ಹೊರಬಂದರೆ ಸಾಕು. ಈ ಕುರಿತು ಡಂಗೂರ ಸಾರಬೇಕು ಎಂದು ಅವರು ನಿರ್ದೇಶನ ನೀಡಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಷ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಲ್ಲನಗೌಡ ಎಸ್.ಪಾಟೀಲ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ
ಯಾದಗಿರಿ, ಮಾರ್ಚ್ 23 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮಾರ್ಚ್ 23ರ ಮಧ್ಯರಾತ್ರಿಯಿಂದ ಮಾರ್ಚ್ 31ರ ಮಧ್ಯರಾತ್ರಿಯವರೆಗೆ ಮುಂದಿನ ಆದೇಶದವರೆಗೆ ಮದ್ಯಪಾನ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಸೋಂಕಿಗೀಡಾಗಿದ್ದ ವೃದ್ಧರೊಬ್ಬರು ಮೃತಪಟ್ಟು ಮತ್ತೆ ಇನ್ನಿಬ್ಬರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿರುತ್ತದೆ. ಪ್ರಯುಕ್ತ ಕಲಬುರಗಿಯಿಂದ ಯಾದಗಿರಿ ಜಿಲ್ಲೆಗೆ ಸಾಕಷ್ಟು ಜನ ಬರುವುದು-ಹೋಗುವುದು ಮಾಡುತ್ತಿರುವ ಹಿನ್ನಲೆಯಲ್ಲಿ ಗುಂಪು-ಗುಂಪಾಗಿ ಜನರು ಸೇರುವ ಸ್ಥಳಗಳಲ್ಲಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಜರುಗಿಸುವ ಸಂಬಂಧ ಸರ್ಕಾರದ ಆದೇಶದಂತೆ ಹಲವು ಅನುಸರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಮಾರ್ಚ್ 18ರಿಂದ ಮುಂದಿನ ಆದೇಶದ ವರೆಗೆ ಕ್ಲಬ್, ಬಾರ್ ಮತ್ತು ರೆಸ್ಟೋರೆಂಟ್ (ಸಿಎಲ್-7 ಮತ್ತು ಸಿಎಲ್-9) ಮದ್ಯದಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವುದನ್ನು ಈಗಾಗಲೇ ನಿಷೇಧಿಸಿ ಆದೇಶಿಸಲಾಗಿತ್ತು. ಆದರೆ, ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮ ಜರುಗಿಸುವ ನಿಟ್ಟಿನಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಎಲ್ಲಾ ತರಹದ ಮದ್ಯಪಾನ ಹಾಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜಿಲ್ಲೆಯ ಎಲ್ಲಾ ವೈನ್‍ಶಾಪ್, ಬಾರ್‍ಗಳು ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಚೆಕ್‍ಪೋಸ್ಟ್‍ನಲ್ಲಿ 25,789 ಪ್ರಯಾಣಿಕರ ತಪಾಸಣೆ
ಹೋಮ್ ಐಸೊಲೇಷನ್‍ನಲ್ಲಿ 58 ಜನ
ಯಾದಗಿರಿ, ಮಾರ್ಚ್ 23 (ಕರ್ನಾಟಕ ವಾರ್ತೆ): ಯಾದಗಿರಿ ತಾಲ್ಲೂಕಿನಲ್ಲಿ 23, ಶಹಾಪೂರ ತಾಲ್ಲೂಕಿನಲ್ಲಿ 16 ಹಾಗೂ ಸುರಪುರ ತಾಲ್ಲೂಕಿನಲ್ಲಿ 19 ಸೇರಿದಂತೆ ಮಾರ್ಚ್ 23ರವರೆಗೆ ಜಿಲ್ಲೆಯಲ್ಲಿ ಒಟ್ಟು 58 ಜನ ದುಬೈ, ಕತಾರ, ಸೌದಿ, ಮದಿನಾ ಪ್ರವಾಸದಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಕಾರಣ ಇವರಿಗೆ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ವಿದೇಶಗಳಿಂದ ಬಂದವರನ್ನು ದಿನಕ್ಕೆ 2 ಬಾರಿಯಂತೆ 14 ದಿನಗಳ ಕಾಲ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸುತ್ತಿದೆ. ಇವರ ಕುಟುಂಬದ ಸದಸ್ಯರ ಮೇಲೆಯೂ ನಿಗಾವಹಿಸಲಾಗಿದೆ. ಶಹಾಪುರ ಆಸ್ಪತ್ರೆಯಲ್ಲಿ ಒಬ್ಬರನ್ನು ಪ್ರತ್ಯೇಕವಾಗಿರಿಸಿ, ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೋನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಅವರು ಮನವಿ ಮಾಡಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಯಾದಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 15, ಶಹಾಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 2 ಹಾಗೂ ಸುರಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ಸೇರಿದಂತೆ ಒಟ್ಟು 27 ಐಸೊಲೇಷನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಆರೋಗ್ಯ ಸಹಾಯವಾಣಿ-104 ಕ್ಕೆ ಬರುವ ಕರೆಗಳಿಗಾಗಿ 3 ಸಿಬ್ಬಂದಿಗಳನ್ನು ಮೀಸಲಿರಿಸಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಗೆ 3 ಕರೆಗಳು ಸ್ವೀಕೃತವಾಗಿವೆ ಎಂದು ಅವರು ತಿಳಿಸಿದ್ದಾರೆ.
25,789 ಪ್ರಯಾಣಿಕರ ತಪಾಸಣೆ: ಜಿಲ್ಲಾಡಳಿತದ ವತಿಯಿಂದ ನೋವೆಲ್ ಕೊರೊನಾ ವೈರಸ್ ತಡೆಗೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸ್ಥಾಪಿಸಿರುವ 6 ಚೆಕ್‍ಪೋಸ್ಟ್/ ಸ್ಕ್ರೀನಿಂಗ್ ಸೆಂಟರ್/ ಮಾಹಿತಿ ಡೆಸ್ಕ್‍ಗಳಲ್ಲಿ ಇಲ್ಲಿಯವರೆಗೆ 25,789 ಜನರನ್ನು ತಪಾಸಣೆ ಮಾಡಲಾಗಿದೆ. ಯಾದಗಿರಿ ನಗರದ ರೈಲ್ವೆ ನಿಲ್ದಾಣ, ಜಿಲ್ಲಾ ನ್ಯಾಯಾಲಯ, ಹೊಸ ಬಸ್ ನಿಲ್ದಾಣ ಹಾಗೂ ಯರಗೋಳ, ಗುರುಮಠಕಲ್ ಸಮೀಪದ ಇಟಗಾಲ್ ಕ್ರಾಸ್, ಮುಡಬೂಳ ಗ್ರಾಮಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದ್ದು, ಜನರನ್ನು ತಪಾಸಣೆ ಮಾಡಲಾಗುತ್ತಿದೆ.
ಸಾರ್ವಜನಿಕರಿಗೆ ಮನವಿ: ಕೋವಿಡ್-19 ಪೀಡಿತ ದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರು ಭಾರತಕ್ಕೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಅಥವಾ 24*7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಿ. ಕೈ ಸ್ವಚ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಿ ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವುದನ್ನು ಮಾಡಬಾರದು ಎಂದು ಅವರು ಸಲಹೆ ನೀಡಿದ್ದಾರೆ.

ಆಶನಾಳ: ಬಾಲ್ಯ ವಿವಾಹ ತಡೆ
ಯಾದಗಿರಿ, ಮಾರ್ಚ್ 23 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದ ಮೇರೆಗೆ ಮಕ್ಕಳ ಸಹಾಯವಾಣಿ ಸಿಬ್ಬಂದಿಯೊಂದಿಗೆ ಯಾದಗಿರಿ ತಾಲ್ಲೂಕಿನ ಆಶನಾಳ ಗ್ರಾಮದಲ್ಲಿ 19 ವರ್ಷದ ಬಾಲಕನ ವಿವಾಹವನ್ನು ಸೋಮವಾರ ತಡೆಗಟ್ಟಲಾಯಿತು.ಬಾಲಕನ ಪೋಷಕರಿಗೆ ತಿಳುವಳಿಕೆ ನೀಡಿ 21 ವರ್ಷದವರೆಗೆ ವಿವಾಹ ಮಾಡಬಾರದೆಂದು ಮತ್ತು ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತಾಗಿ ವಿವರಿಸಲಾಯಿತು. ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಮೇಲ್ವಿಚಾರಕಿ ಕವಿತಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ವೆಂಕಟೇಶಕುಮಾರ ರಾಠೋಡ, ಸಾಬಯ್ಯ ನಾಯಕ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿ ರೇಣುಕಾ, ಪೊಲೀಸ್ ಇಲಾಖೆ ಸಿಬ್ಬಂದಿ ಮಂಜುಳಾ ಅವರು ಉಪಸ್ಥಿತರಿದ್ದರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರ್ಕನಳ್ಳಿ: ಬಾಲ್ಯ ವಿವಾಹ ತಡೆ
ಯಾದಗಿರಿ, ಮಾರ್ಚ್ 23 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದ ಮೇರೆಗೆ ಮಕ್ಕಳ ಸಹಾಯವಾಣಿ ಸಿಬ್ಬಂದಿಯೊಂದಿಗೆ ಯಾದಗಿರಿ ತಾಲ್ಲೂಕಿನ ವರ್ಕನಳ್ಳಿ ಗ್ರಾಮದಲ್ಲಿ 16 ವರ್ಷದ ಬಾಲಕಿಯ ವಿವಾಹವನ್ನು ಸೋಮವಾರ ತಡೆಗಟ್ಟಲಾಯಿತು.ಬಾಲಕಿಯ ಪೋಷಕರಿಗೆ ತಿಳುವಳಿಕೆ ಹೇಳಿ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತಾಗಿ ವಿವರಿಸಲಾಯಿತು. ಮಗುವನ್ನು ಪುನರ್ವಸತಿಗಾಗಿ ಮತ್ತು ಮುಂದಿನ ಕ್ರಮಕ್ಕಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ.ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರಾಧಾ ಜಿ.ಮಣ್ಣೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ವೆಂಕಟೇಶಕುಮಾರ ರಾಠೋಡ, ಸಾಬಯ್ಯ ನಾಯಕ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿ ಮಲ್ಲಪ್ಪ ಮಾನೇಗಾರ, ಎ.ಎಸ್.ಐ ಶಂಕರ್ ಅವರು ಉಪಸ್ಥಿತರಿದ್ದರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಯಾದಗಿರಿ, ಮಾರ್ಚ್ 23 (ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2020-21ನೇ ಸಾಲಿನಲ್ಲಿ ಆಯೋಜಿಸಲಾಗುತ್ತಿರುವ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಯಾದಗಿರಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಂದ್ರಂಪಳ್ಳಿಯ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2020ರ ಮೇ 2ರಿಂದ 2021ರ ಫೆಬ್ರುವರಿ 28ರವರೆಗೆ ತರಬೇತಿ ಇರುತ್ತದೆ. ಅರ್ಜಿಗಳನ್ನು ತೋಟಗಾರಿಕೆ ಇಲಾಖೆಯ ವೆಬ್‍ಸೈಟ್www.horticulture.kar.nic.in ನಿಂದ ಮಾರ್ಚ್ 30ರಿಂದ ಏಪ್ರಿಲ್ 24ರ ಸಂಜೆ 5 ಗಂಟೆಯವರೆಗೆ ಡೌನ್‍ಲೋಡ್ ಮಾಡಿಕೊಂಡು ಅಥವಾ ಯಾದಗಿರಿ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ರಾಜ್ಯವಲಯ) ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ತೋಟಗಾರಿಕೆ ಉಪನಿರ್ದೇಶಕರ (ಜಿ.ಪಂ) ಕಚೇರಿಗೆ ಏಪ್ರಿಲ್ 24ರೊಳಗೆ ಸಲ್ಲಿಸಬೇಕು. ತೋಟಗಾರಿಕೆ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ತಂದೆ, ತಾಯಿ, ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:8618344266, 9008637618 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
                      ಟ್ಯಾಂಕರ್ ನೀರು ಪೂರೈಕೆಗೆ ಅರ್ಜಿ ಆಹ್ವಾನ
ಯಾದಗಿರಿ, ಮಾರ್ಚ್ 23 (ಕರ್ನಾಟಕ ವಾರ್ತೆ): 2020ನೇ ಸಾಲಿನ ಬೇಸಿಗೆ ಕಾಲದಲ್ಲಿ ಯಾದಗಿರಿ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಗ್ರಾಮ, ಜನವಸತಿ ಪ್ರದೇಶಗಳಲ್ಲಿ ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೂಚಿಸುವ ಗ್ರಾಮ, ಜನವಸತಿ ಪ್ರದೇಶಗಳಿಗೆ ಮೊಬೈಲ್ ಆ್ಯಪ್ ಆಧಾರಿತ ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರು ಪೊರೈಸುವ ಅರ್ಹ ಸರಬರಾಜುದಾರರಿಂದ ಅಲ್ಪಾವಧಿ ಟೆಂಡರ್ ಆಹ್ವಾನಿಸಲಾಗಿದೆ.2020ನೇ ಸಾಲಿನ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವವರೆಗೆ ಸರಬರಾಜು ಮಾಡಲು ಪೂರ್ವ ಸಿದ್ಧತೆಗಾಗಿ ಹಾಗೂ ಮುಂಜಾಗ್ರತೆಗಾಗಿ ನೀರಿನ ಟ್ಯಾಂಕರ್‍ಗಳನ್ನು ಕಾಯ್ದಿರಿಸಲು ಕೆ.ಟಿ.ಪಿ.ಪಿ ಕಾಯ್ದೆ ಪ್ರಕಾರ ಅರ್ಹ ಸರಬರಾಜುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 26ರ ಸಾಯಂಕಾಲ 5.30 ಗಂಟೆಯವರೆಗೆ ಟೆಂಡರ್ ಅರ್ಜಿ ಪಡೆಯಬಹುದು. ಮಾರ್ಚ್ 30ರಂದು ಸಂಜೆ 4 ಗಂಟೆಯವರೆಗೆ ಭರ್ತಿ ಮಾಡಿದ ಟೆಂಡರ್‍ಗಳನ್ನು ಸಲ್ಲಿಸಬಹುದು. ಮಾರ್ಚ್ 31ರ ಸಾಯಂಕಾಲ 4 ಗಂಟೆಗೆ ಸೀಲ್ಡ್ ಟೆಂಡರ್‍ಗಳನ್ನು ತೆರೆಯಲಾಗುವುದು. 3000, 4000, 5000 ಲೀಟರ್ ಸಾಮಥ್ರ್ಯದ ಟ್ರಿಪ್ ಆಧಾರಿತ ಟ್ಯಾಂಕರ್ ಮೂಲಕ ಕುಡಿಯಲು ಯೋಗ್ಯವಾದ ನೀರನ್ನು ಬೇಸಿಗೆ ಅವಧಿಯಲ್ಲಿ ಅಥವಾ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವವರೆಗೆ ಸರಬರಾಜು ಮಾಡಬೇಕು ಎಂದು ಯಾದಗಿರಿ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶನಿವಾರ, ಮಾರ್ಚ್ 21, 2020

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ
ಯಾದಗಿರಿ, ಮಾರ್ಚ್ 21 (ಕರ್ನಾಟಕ ವಾರ್ತೆ): ಪ್ರಸ್ತುತ ವರ್ಷದ ಬೇಸಿಗೆ ಕಾಲದಲ್ಲಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಈ ಕೆಳಕಂಡ ಸಹಾಯವಾಣಿಗಳಿಗೆ ಕರೆ ಮಾಡಿ, ದೂರುಗಳನ್ನು ದಾಖಲಿಸುವುದರ ಮೂಲಕ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಕಾರ್ಯಾಲಯ ದೂರವಾಣಿ ಸಂಖ್ಯೆ: 08473-253758, ಸುರಪೂರ ತಾಲ್ಲೂಕು ಪಂಚಾಯಿತಿ ದೂ:08443-256052, ಶಹಾಪೂರ ತಾಲ್ಲೂಕು ಪಂಚಾಯಿತಿ ಮೊಬೈಲ್ ಸಂಖ್ಯೆ:8971267195, ಯಾದಗಿರಿ ತಾಲ್ಲೂಕು ಪಂಚಾಯಿತಿ ದೂ:08473-250152, ಯಾದಗಿರಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಕಚೇರಿ ದೂ:08473-253805, ಸುರಪೂರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪವಿಭಾಗ ಕಚೇರಿ ದೂ:08443-257344, ಶಹಾಪೂರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪವಿಭಾಗ ಕಚೇರಿ ಮೊ:9945210079, ಯಾದಗಿರಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪವಿಭಾಗ ಕಚೇರಿ ದೂ:08473-250271 ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮಾ.30ರವರೆಗೆ ಕಾಲುವೆಗೆ ನೀರು
ಯಾದಗಿರಿ, ಮಾರ್ಚ್ 21 (ಕರ್ನಾಟಕ ವಾರ್ತೆ): 2019-20ನೇ ಸಾಲಿನ ಹಿಂಗಾರು ಹಂಗಾಮಿಗಾಗಿ ನಾರಾಯಣಪುರ ಎಡದಂಡೆ ಕಾಲುವೆಯ ವಿತರಣಾ ಕಾಲುವೆ 1ರಿಂದ 25 ಹಾಗೂ ನಾರಾಯಣಪುರ ಬಲದಂಡೆ ಕಾಲುವೆಯ ವಿತರಣಾ ಕಾಲುವೆ 1ರಿಂದ 14ರ ವರೆಗೆ ಮತ್ತು ರಾಂಪೂರ ಏತ ನೀರಾವರಿ ಕಾಲುವೆಗಳಲ್ಲಿ ಮಾರ್ಚ್ 30ರವರೆಗೆ ನೀರು ಹರಿಸಲಾಗುವುದು ಎಂದು ಕೃಷ್ಣ ಭಾಗ್ಯ ಜಲನಿಗಮ ನಿಯಮಿತ ನಾರಾಯಣಪುರ ಅಧೀಕ್ಷಕ ಇಂಜಿನಿಯರ್ ಎಸ್.ರಂಗರಾಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಲಮಟ್ಟಿಯಲ್ಲಿ 2019ರ ನವೆಂಬರ್ 17ರಂದು ಜರುಗಿದ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಿದಂತೆ, ನಾರಾಯಣಪುರ ಎಡದಂಡೆ ಕಾಲುವೆ ಕಿ.ಮೀ. 0.00 ರಿಂದ 77.00 ವರೆಗೆ, ವಿತರಣಾ ಕಾಲುವೆ ಸಂ. 1ರಿಂದ 25ರ ವರೆಗೆ, ನಾರಾಯಣಪುರ ಬಲದಂಡೆ ಕಾಲುವೆ ಕಿ.ಮೀ.0.00 ರಿಂದ 82.00 ವರೆಗೆ, ವಿತರಣಾ ಕಾಲುವೆ ಸಂಖ್ಯೆ: 1ರಿಂದ 14ರ ವರೆಗೆ ಮತ್ತು ರಾಂಪೂರ ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ಮಾರ್ಚ್ 20ರವರೆಗೆ ಚಾಲು-ಬಂದ್ ಪದ್ಧತಿಯಂತೆ ನೀರನ್ನು ಹರಿಸಲಾಗಿರುತ್ತದೆ.
ಮುಂದುವರೆದು ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದ ರೈತರು, ಶಾಸಕರು, ಲೋಕಸಭೆ ಸದಸ್ಯರು ಹಾಗೂ ಜನಪ್ರತಿನಿಧಿಗಳ ಕೋರಿಕೆ ಮೇರೆಗೆ ಅಚ್ಚುಕಟ್ಟು ಪ್ರದೇಶದ ಹಾಗೂ ಹಾಲಿ ಬೆಳೆದು ನಿಂತ ಬೆಳೆಗಳಿಗೆ ಮಾರ್ಚ್ 19ರಂದು ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಆಲಮಟ್ಟಿ ಹಾಗೂ ನಾರಾಯಣಪೂರ ಜಲಾಶಯಗಳಲ್ಲಿ ನೀರಿನ ಲಭ್ಯತೆಗನುಗುಣವಾಗಿ ಮಾರ್ಚ್ 21ರಿಂದ 30ರವರೆಗೆ ಮೇಲಿನ ಕಾಲುವೆ ಜಾಲದಲ್ಲಿ ನೀರಾವರಿಗಾಗಿ ನೀರು ಹರಿಸಲು ಸೂಚಿಸಲಾಗಿರುತ್ತದೆ. ಅದರಂತೆ ನೀರನ್ನು ಹರಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಸ್ಥಗಿತ
ಯಾದಗಿರಿ, ಮಾರ್ಚ್ 21 (ಕರ್ನಾಟಕ ವಾರ್ತೆ): ಕೊರೊನಾ ವೈರಸ್ (ಕೋವಿಡ್-19)ನ್ನು ಸರ್ಕಾರವು ಸಾಂಕ್ರಾಮಿಕ ರೋಗವೆಂದು ಘೋಷಿಸಿರುವ ಹಿನ್ನಲೆಯಲ್ಲಿ ಕೊರೊನಾ ವೈರಾಣುವಿನಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಜನ ಒಟ್ಟಿಗೆ ಸೇರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿರುವುದರಿಂದ ಮಾರ್ಚ್ 31ರವರೆಗೆ ಯಾದಗಿರಿ ಮುಖ್ಯ ಮಾರುಕಟ್ಟೆ, ಗುರುಮಠಕಲ್ ಉಪ ಮಾರುಕಟ್ಟೆ ಮತ್ತು ಸೈದಾಪೂರ ಉಪ ಮಾರುಕಟ್ಟೆ ಪ್ರಾಂಗಣಗಳಲ್ಲಿ ವ್ಯಾಪಾರ ವಹಿವಾಟು ರದ್ದುಪಡಿಸಲಾಗಿದೆ.
ಅದೇ ರೀತಿ ಗುರುಮಠಕಲ್ ಉಪ ಮಾರುಕಟ್ಟೆಯಲ್ಲಿ ಜರುಗುವ ಜಾನುವಾರು ಸಂತೆ ಮತ್ತು ಯಾದಗಿರಿ ಮುಖ್ಯ ಮಾರುಕಟ್ಟೆಯಲ್ಲಿ ಜರುಗುವ ಜಾನುವಾರು ಸಂತೆಗಳನ್ನು ಕೂಡ ರದ್ದುಗೊಳಿಸಿ ಆದೇಶಿಸಲಾಗಿದೆ. ಪ್ರಯುಕ್ತ ಸಾರ್ವಜನಿಕರು, ಪೇಟೆ ಕಾರ್ಯಕರ್ತರು ಮತ್ತು ರೈತ ಬಾಂಧವರು ಸಹಕರಿಸಬೇಕೆಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

ಪೂರ್ವಸಿದ್ಧತಾ ಸಭೆ ಮುಂದೂಡಿಕೆ
ಯಾದಗಿರಿ, ಮಾರ್ಚ್ 21 (ಕರ್ನಾಟಕ ವಾರ್ತೆ): ಸರ್ಕಾರವು ನೊವೆಲ್ ಕೊರೊನಾ ವೈರಸ್ ಅನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮಾರ್ಚ್ 31ರವರೆಗೆ ಯಾವುದೇ ಸಭೆ-ಸಮಾರಂಭಗಳನ್ನು ಏರ್ಪಡಿಸಬಾರದೆಂಬ ನಿರ್ದೇಶನ ಇರುವ ಪ್ರಯುಕ್ತ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾರ್ಚ್ 26ರಂದು ನಿಗದಿಪಡಿಸಿದ್ದ 2020-21ನೇ ಸಾಲಿನ ಡಾ.ಬಾಬು ಜಗಜೀವನರಾಂ ರವರ 113ನೇ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ 129ನೇ ಜನ್ಮ ದಿನಾಚರಣೆಯ ಪೂರ್ವಸಿದ್ಧತಾ ಸಭೆಯನ್ನು ಮುಂದೂಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಎಸ್.ಎಸ್.ಚನ್ನಬಸಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ನ್ಯಾಯಬೆಲೆ ಅಂಗಡಿಗಳಿಗೆ ರಜೆ
ಯಾದಗಿರಿ, ಮಾರ್ಚ್ ೨೧ (ಕರ್ನಾಟಕ ವಾರ್ತೆ): ದೇಶಾದ್ಯಂತ ಮಾರ್ಚ್ ೨೨ರಂದು ಭಾನುವಾರ ಬೆಳಿಗ್ಗೆ ೭ ಗಂಟೆಯಿAದ ರಾತ್ರಿ ೯ ಗಂಟೆಯವರೆಗೆ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಎಲ್ಲಾ ಸಾರ್ವಜನಿಕರು “ಜನತಾ ಕರ್ಫ್ಯೂ”ವನ್ನು ಸ್ವ-ಇಚ್ಛೆಯಿಂದ ವಿಧಿಸಿಕೊಂಡು ಮನೆಯಲ್ಲೇ ಇರುವುದರಿಂದ ಪಡಿತರ ಚೀಟಿದಾರರು ನ್ಯಾಯ ಬೆಲೆ ಅಂಗಡಿಗಳಿಗೆ ಪಡಿತರ ಪಡೆಯಲು ಆಗಮಿಸುವ ಸಾಧ್ಯತೆ ಕಡಿಮೆ ಇರುತ್ತದೆ. ಆದ ಕಾರಣ ಮಾರ್ಚ್ ೨೨ರಂದು ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಿಗೆ ರಜೆ ನೀಡಲಾಗಿದೆ. ಈ ದಿನದ ವಿತರಣೆಯನ್ನು ಮಾರ್ಚ್ ೨೪ರ ಮಂಗಳವಾರ ನಿರ್ವಹಿಸುವಂತೆ ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂದರ್ಶನ ಮುಂದೂಡಿಕೆ
ಯಾದಗಿರಿ, ಮಾರ್ಚ್ ೨೧ (ಕರ್ನಾಟಕ ವಾರ್ತೆ): ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಮತ್ತು ಜಿಲ್ಲಾ ಲೆಕ್ಕ ಪತ್ರ ವ್ಯವಸ್ಥಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ ೨೪ರಂದು ನಿಗದಿಪಡಿಸಲಾಗಿದ್ದ ಸಂದರ್ಶನದ ದಿನಾಂಕವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ನಂತರ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಲಾಪೂರ ಮೈಲಾರಲಿಂಗೇಶ್ವರ ದರ್ಶನ ರದ್ದು
ಯಾದಗಿರಿ, ಮಾರ್ಚ್ ೨೧ (ಕರ್ನಾಟಕ ವಾರ್ತೆ): ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ  ಆಯುಕ್ತರ ಆದೇಶದಂತೆ ಯಾದಗಿರಿ ತಾಲ್ಲೂಕಿನ ಮೈಲಾಪೂರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ  ಎಲ್ಲಾ ಸೇವೆಗಳು, ಜಾತ್ರೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಉತ್ಸವ, ಪ್ರಸಾದ, ದಾಸೋಹ, ತೀರ್ಥ ವಿತರಣೆ ಮತ್ತು ದೇವರ ದರ್ಶನ ಹಾಗೂ ಇತರೆ ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ಸಾರ್ವಜನಿಕರು/ಭಕ್ತಾಧಿಗಳ ಹಿತದೃಷ್ಟಿಯಿಂದ ಮಾರ್ಚ್ ೨೦ರಿಂದ  ಮುಂದಿನ  ಆದೇಶದವರೆಗೆ  ರದ್ದುಪಡಿಸಲಾಗಿದೆ ಎಂದು ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯಾದಗಿರಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರು ಸುತ್ತೋಲೆ ಮೂಲಕ ರಾಜ್ಯದಲ್ಲಿ ಕೋವಿಡ್-೧೯ (ಕೊರೊನಾ ವೈರಸ್) ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಕ್ತಾಧಿಗಳು ಹಾಗೂ ಸಾರ್ವಜನಿಕರ  ಹಿತದೃಷ್ಟಿಯಿಂದ ಧಾರ್ಮಿಕ ದತ್ತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳು, ಸಂಸ್ಥೆಗಳಲ್ಲಿ ದಿನನಿತ್ಯ ಶಾಸ್ತç ಸಂಪ್ರದಾಯದAತೆ ನಡೆಯುವ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ಮತ್ತು ಪೂಜಾ ಕೈಂಕರ್ಯಗಳನ್ನು ದೇವಾಲಯದ ಒಳಾಂಗಣ ಮತ್ತು ಹೊರಾಂಗಣ ಆಗಮಿಕರು/ ತಂತ್ರಿಗಳು/ ಅರ್ಚಕರು ಹಾಗೂ ದೇವಾಲಯದ ಸಿಬ್ಬಂದಿ ವರ್ಗದವರು ನಡೆಸುವ ಷರತ್ತಿಗೊಳಪಟ್ಟು ಉಳಿದಂತೆ ದೇವಾಲಯಗಳಲ್ಲಿ ನಡೆಯುವ ಎಲ್ಲಾ ಸೇವೆಗಳು, ಜಾತ್ರೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಉತ್ಸವ, ಪ್ರಸಾದ, ದಾಸೋಹ, ತೀರ್ಥ ವಿತರಣೆ ಮತ್ತು ದೇವರ ದರ್ಶನ ಹಾಗೂ ಇತರೆ ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಿರುತ್ತಾರೆ. ಕಾರಣ ಸಾರ್ವಜನಿಕರು, ಭಕ್ತಾಧಿಗಳು ಸಹಕರಿಸುವಂತೆ ಅವರು ಕೋರಿದ್ದಾರೆ.

ವೈದ್ಯಾಧಿಕಾರಿಗಳ ಕಾರ್ಯಾಗಾರ
ಯಾದಗಿರಿ, ಮಾರ್ಚ್ 20 (ಕರ್ನಾಟಕ ವಾರ್ತೆ): ಕೊರೊನಾ ವೈರಸ್ ತಡೆಗೆ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ವೈದ್ಯಾಧಿಕಾರಿಗಳ ಕಾರ್ಯಾಗಾರ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ವಿಶ್ವ ಆರೋಗ್ಯ ಸಂಸ್ಥೆಯ ಕಲಬುರಗಿ ವಿಭಾಗಮಟ್ಟದ ವೈದ್ಯಕೀಯ ಸರ್ವೇಕ್ಷಣಾಧಿಕಾರಿ ಡಾ.ಅನಿಲ್‍ಕುಮಾರ್ ಎಸ್.ತಾಳಿಕೋಟಿ, ತಾಲ್ಲೂಕು ವೈದ್ಯಾಧಿಕಾರಿಗಳು, ಜಿಲ್ಲೆಯ ಎಲ್ಲಾ ಆರೋಗ್ಯ ಸಂಸ್ಥೆಯ ವೈದ್ಯರು ಹಾಗೂ ಭಾರತೀಯ ವೈದ್ಯಕೀಯ ಸಂಘದ ಸ
ದಸ್ಯರು ಪಾಲ್ಗೊಂಡಿದ್ದರು.

ಶುಕ್ರವಾರ, ಮಾರ್ಚ್ 20, 2020

ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ಸಭೆ
ಜಿಲ್ಲೆಯಾದ್ಯಂತ ಸಂತೆ, ಜಾತ್ರೆ ಸಂಪೂರ್ಣ ನಿಷೇಧಿಸಿ
                                                                  *******
                                       -ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಮಾರ್ಚ್ 20 (ಕರ್ನಾಟಕ ವಾರ್ತೆ): ಸಂತೆ ಹಾಗೂ ಜಾತ್ರೆಗಳಲ್ಲಿ ಹೆಚ್ಚಿನ ಜನ ಸೇರುತ್ತಾರೆ. ಕೊರೊನಾ ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ನಡೆಯುವ ಸಂತೆ, ಜಾತ್ರೆ ಹಾಗೂ ಉರುಸ್‍ಗಳನ್ನು ಪಟ್ಟಿ ಮಾಡಿ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೊರೊನಾ COVID-19 ವೈರಸ್ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 133, 144 (3)ರ ಪ್ರಕಾರ ಹಾಗೂThe Karnataka Epidemic Disease, COVID-19 Regulations, 2020 ರ ನಿಯಮ 12ರ ಮೇರೆಗೆ ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕಿನಿಂದಾಗಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮಾರ್ಚ್ 14ರಿಂದ ಮಾರ್ಚ್ 31ರವರೆಗೆ ಸಾರ್ವಜನಿಕರು ಅನುಸರಣ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಆದೇಶ ಹೊರಡಿಸಲಾಗಿದೆ. ತಹಶೀಲ್ದಾರರು, ನಗರಸಭೆ ಆಯುಕ್ತರು, ಪುರಸಭೆ ಮುಖ್ಯಾಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯೊಂದಿಗೆ ಈ ನಿಯಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲಾಡಳಿತದ ಮನವಿಗೆ ಸ್ಪಂದಿಸದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಅವರು ಸೂಚಿಸಿದರು.ಕಲ್ಯಾಣ ಮಂಟಪ ಪಟ್ಟಿ ಮಾಡಿ: ಮದುವೆಯಂತಹ ವೈಯಕ್ತಿಕ ಸಭೆ-ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚಿನ ಜನ ಸೇರಬಾರದು. ಮದುವೆ ಸಮಾರಂಭಗಳನ್ನು ಆದಷ್ಟು ಮಟ್ಟಿಗೆ ಮುಂದೂಡಿದರೆ ಒಳ್ಳೆಯದು. ಕಲ್ಯಾಣ ಮಂಟಪಗಳನ್ನು ಪಟ್ಟಿ ಮಾಡಿ, ಅವುಗಳ ಮಾಲೀಕರಿಗೆ ಸೂಚನೆ ಕೊಡಬೇಕು. ಇನ್ನು ನಾಟಕಗಳು, ಉತ್ಸವಗಳು, ವಸ್ತು ಪ್ರದರ್ಶನಗಳು, ಸಂಗೀತ ಹಬ್ಬಗಳು, ವಿವಿಧ ರೀತಿಯ ಪಂದ್ಯಾವಳಿಗಳನ್ನು ಕೂಡ ನಿಷೇಧಿಸಲಾಗಿದೆ ಎಂದು ತಿಳಿಸಿದರು.ದಿನನಿತ್ಯದ ವಸ್ತುಗಳಿಗೆ ತೊಂದರೆ ಇಲ್ಲ: ದಿನನಿತ್ಯ ಸಾರ್ವಜನಿಕ ಜೀವನಕ್ಕೆ ಬೇಕಾಗುವ ಅವಶ್ಯಕ ಸಾಮಗ್ರಿಗಳ ವಹಿವಾಟಿಗೆ ಯಾವುದೇ ನಿರ್ಬಂಧ ಇಲ್ಲ. ರೇಷನ್, ಹಾಲು, ತರಕಾರಿ, ಹಣ್ಣಿನ ಅಂಗಡಿ ಹಾಗೂ ಔಷಧ ಅಂಗಡಿಗಳು ತೆರೆದಿರುತ್ತವೆ. ಆದರೆ, ಹೆಚ್ಚು ಜನ ಸೇರುವಂತಹ ಸಿನಿಮಾ ಮಂದಿರಗಳು, ಶಾಪಿಂಗ್ ಮಾಲ್ ಬಂದ್ ಮಾಡಬೇಕು. ಕ್ಲಬ್, ಬಾರ್ ಮತ್ತು ರೆಸ್ಟೋರೆಂಟ್ (ಸಿಎಲ್-7 ಮತ್ತು ಸಿಎಲ್-9) ಮದ್ಯದಂಗಡಿಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವಂತೆ ಅವರು ಸೂಚಿಸಿದರು.ಮುಂಜಾಗ್ರತಾ ಕ್ರಮವಾಗಿ ಎಪಿಎಂಸಿ ವಹಿವಾಟು ಸ್ಥಗಿತಗೊಳಿಸಲಾಗಿದೆ. ಅದರಂತೆ ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ನೋಂದಣಿ ಕೂಡ ರದ್ದುಪಡಿಸಲಾಗಿದೆ. ಆಧಾರ್ ನೋಂದಣಿ ಕೇಂದ್ರಗಳು ಮತ್ತು ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆಯನ್ನು ರದ್ದುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಡಿವೈಎಸ್‍ಪಿ ಯು.ಶರಣಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಯಾದಗಿರಿ, ಮಾರ್ಚ್ 20 (ಕರ್ನಾಟಕ ವಾರ್ತೆ): ಯಾದಗಿರಿ ನಗರಸಭೆಯ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಶೇ.24.10, ಶೇ.7.25ರ ನಗರಸಭೆಯ ಅನುದಾನದಲ್ಲಿ ಐಎಎಸ್, ಕೆಎಎಸ್, ಎಫ್‍ಡಿಎ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ 20, ಪರಿಶಿಷ್ಟ ಪಂಗಡ 20, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ 20 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದ್ದು, ಮಾರ್ಚ್ 30ರೊಳಗೆ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಯು ಯಾದಗಿರಿ ನಗರ ವ್ಯಾಪ್ತಿಯ ನಿವಾಸಿಯಾಗಿದ್ದು, ಬಡತನ ರೇಖೆಗಿಂತ ಕೆಳಗಿರಬೇಕು. ಕನಿಷ್ಠ 22ರಿಂದ 35 ವರ್ಷದವರು ಇರಬೇಕು. ವಿದ್ಯಾರ್ಹತೆಯು ಯಾವುದೇ ಪದವಿ, ತತ್ಸಮಾನ ಪದವಿ ಕಡ್ಡಾಯವಾಗಿ ಪಾಸಾಗಿರಬೇಕು. ಹತ್ತನೇ ತರಗತಿ ಹಾಗೂ ಪದವಿಯ ಅಂತಿಮ ವರ್ಷದ ಝರಾಕ್ಸ್ ಅಂಕಪಟ್ಟಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಚುನಾವಣೆ ಗುರುತಿನ ಚೀಟಿ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ನಗರಸಭೆಯ ಪೌರಾಯುಕ್ತರಾದ ರಮೇಶ ಸುಣಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾ ಮಟ್ಟದಲ್ಲಿ ಕ್ರಮ

ಜನಸ್ನೇಹಿ ಪೊಲೀಸ್ ವ್ಯವಸ್ಥೆ ಸುಧಾರಿಸಲು ಫೋನ್ ಇನ್ ಕಾರ್ಯಕ್ರ-ಋಷಿಕೇಷ್ ಭಗವಾನ್ ಸೋನವಣೆ


ಯಾದಗಿರಿ, ಮಾರ್ಚ್ 20 (ಕರ್ನಾಟಕ ವಾರ್ತೆ): ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾರ್ವಜನಿಕರ ಅಹವಾಲುಗಳ ಅನುಸಾರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟ ವ್ಯಾಪ್ತಿಯ ಪೆÇಲೀಸ್ ಠಾಣೆಯ ಪಿಎಸ್‍ಐ ರವರಿಗೆ ಸೂಚನೆ ನೀಡಲಾಗುವುದು. ಅಲ್ಲದೇ, ಜಿಲ್ಲಾ ಮಟ್ಟದಲ್ಲಿ ಖುದ್ದಾಗಿ ಕ್ರಮ ಜರುಗಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಷ್ ಭಗವಾನ್ ಸೋನವಣೆ ಅವರು ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ ಮಧ್ಯೆ ಉತ್ತಮ ಸಂಪರ್ಕ ಬೆಳೆಯುವ ನಿಟ್ಟಿನಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಹಮ್ಮಿಕೊಂಡಿದ್ದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರು ಮಾತನಾಡಿದರು.
ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 5 ಕರೆಗಳು ಬಂದಿದ್ದು, ಈ ಪೈಕಿ 2 ಕರೆಗಳು ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿದ್ದವು. ಶಹಾಪೂರ ನಗರದ ಬಸವೇಶ್ವರ ವೃತ್ತದಲ್ಲಿ ಸಂಚಾರ ಸುವ್ಯವಸ್ಥೆ ತೊಂದರೆಯಾಗುತ್ತಿರುವ ಬಗ್ಗೆ ಹಾಗೂ ಯಾದಗಿರಿ ನಗರದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ಸ್ಥಳೀಯರು ಮನವಿ ಮಾಡಿದರು. ಈ ಬಗ್ಗೆ ಸೂಕ್ತ ಕ್ರಮ ಕೈಕೊಳ್ಳಲು ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ ಸೂಚಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭರವಸೆ ನೀಡಿದರು. ಯಾದಗಿರಿ ಗ್ರಾಮೀಣ ಠಾಣೆ ಹಾಗೂ ಸೈದಾಪೂರ ಠಾಣೆ ವ್ಯಾಪ್ತಿಯ ಶಾಲೆಗಳಲ್ಲಿ ರಾತ್ರಿ ವೇಳೆಯಲ್ಲಿ ಮದ್ಯಪಾನ ಮಾಡಿ ಶಾಲೆಯ ಆವರಣದಲ್ಲಿ ಮದ್ಯದ ಬಾಟಲಿಗಳನ್ನು ಎಸೆದು ಹೋಗುತ್ತಿದ್ದಾರೆ ಎಂಬುದಾಗಿ ದೂರು ಸಲ್ಲಿಸಿದ 2 ಕರೆಗಳ ಬಗ್ಗೆ ಸಂಬಂಧಪಟ್ಟ ಪಿಎಸ್‍ಐ ಹಾಗೂ ಸಿಪಿಐ ಅವರುಗಳು ರಾತ್ರಿ ಗಸ್ತು ಕರ್ತವ್ಯದ ವೇಳೆಯಲ್ಲಿ ಅಥವಾ ಬೀಟ್ ಸಿಬ್ಬಂದಿಯವರನ್ನು ಕಳುಹಿಸಿ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.
ಸುರಪೂರ ಪಟ್ಟಣದಲ್ಲಿ ಲೌಡ್‍ಸ್ಪೀಕರ್ ಹಾಕಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಸ್ಪೀಕರ್ ಹಚ್ಚುತ್ತಿರುವ ಕುರಿತು ಸಲ್ಲಿಸಿದ ದೂರಿನ ಅನುಸಾರ ಪರಿಶೀಲಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸುರಪೂರ ಠಾಣೆ ಪೊಲೀಸ್ ಇನ್‍ಸ್ಪೆಕ್ಟರ್ ಅವರಿಗೆ ಸೂಚನೆ ನೀಡುವುದಾಗಿ ಹೇಳಿದರು.
ಡಿವೈಎಸ್‍ಪಿ ಯು.ಶರಣಪ್ಪ, ಸಿಪಿಐ ಶರಣಗೌಡ ನ್ಯಾಮಣ್ಣವರ್, ನಿಸ್ತಂತು ಘಟಕದ ಪೊಲೀಸ್ ಇನ್‍ಸ್ಪೆಕ್ಟರ್ ಬಸಪ್ಪ, ಟ್ರಾಫಿಕ್ ಪಿಎಸ್‍ಐ ಪ್ರದೀಪ್ ಬೀಸೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಗುರುವಾರ, ಮಾರ್ಚ್ 19, 2020

ಮೊಬೈಲ್, ವಾಹನ ಹರಾಜು ಮುಂದೂಡಿಕೆ
ಯಾದಗಿರಿ, ಮಾರ್ಚ್ 19 (ಕರ್ನಾಟಕ ವಾರ್ತೆ): ಸುರಪುರದ ಸಿವಿಲ್ ನ್ಯಾಯಾಧೀಶರ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳವರ ನ್ಯಾಯಾಲಯದ ವಿವಿಧ ಪ್ರಕರಣಗಳಲ್ಲಿನ ಮೊಬೈಲ್ ಮತ್ತು ವಾಹನಗಳ ಸಾರ್ವಜನಿಕ ಹರಾಜು ಪ್ರಕ್ರಿಯೆಯನ್ನು ಮಾರ್ಚ್ 21ರಂದು ಕೋರ್ಟ್ ಆವರಣದಲ್ಲಿ ನಿಗದಿಪಡಿಸಲಾಗಿತ್ತು. ಕೋವಿಡ್-19 (ಕೊರೊನಾ) ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನಸಂದಣಿ ನಿರ್ಬಂಧಿಸಿದ ಪ್ರಯುಕ್ತ ಹರಾಜು ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಿವಿಲ್ ನ್ಯಾಯಾಧೀಶರಾದ ಶ್ರೀ ಚಿದಾನಂದ ಬಡಿಗೇರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟ್ಯಾಂಕರ್ ನೀರು ಪೂರೈಕೆಗೆ ಅರ್ಜಿ ಆಹ್ವಾನ
ಯಾದಗಿರಿ, ಮಾರ್ಚ್ 19 (ಕರ್ನಾಟಕ ವಾರ್ತೆ): 2020ನೇ ಸಾಲಿನ ಬೇಸಿಗೆ ಕಾಲದಲ್ಲಿ ಶಹಾಪುರ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಗ್ರಾಮ, ಜನವಸತಿ ಪ್ರದೇಶಗಳಲ್ಲಿ ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೂಚಿಸುವ ಗ್ರಾಮ, ಜನವಸತಿ ಪ್ರದೇಶಗಳಿಗೆ ಮೊಬೈಲ್ ಆ್ಯಪ್ ಆಧಾರಿತ ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರು ಪೊರೈಸುವ ಅರ್ಹ ಸರಬರಾಜುದಾರರಿಂದ ಅಲ್ಪಾವಧಿ ಟೆಂಡರ್ ಆಹ್ವಾನಿಸಲಾಗಿದೆ.
2020ನೇ ಸಾಲಿನ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವವರೆಗೆ ಸರಬರಾಜು ಮಾಡಲು ಪೂರ್ವ ಸಿದ್ಧತೆಗಾಗಿ ಹಾಗೂ ಮುಂಜಾಗ್ರತೆಗಾಗಿ ನೀರಿನ ಟ್ಯಾಂಕರ್‍ಗಳನ್ನು ಕಾಯ್ದಿರಿಸಲು ಕೆ.ಟಿ.ಪಿ.ಪಿ ಕಾಯ್ದೆ ಪ್ರಕಾರ ಅರ್ಹ ಸರಬರಾಜುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 21ರ ಸಾಯಂಕಾಲ 5.30 ಗಂಟೆಯವರೆಗೆ ಟೆಂಡರ್ ಅರ್ಜಿ ಪಡೆಯಬಹುದು. ಮಾರ್ಚ್ 23ರಂದು ಸಂಜೆ 4 ಗಂಟೆಯವರೆಗೆ ಭರ್ತಿ ಮಾಡಿದ ಟೆಂಡರ್‍ಗಳನ್ನು ಸಲ್ಲಿಸಬಹುದು. ಮಾರ್ಚ್ 27ರ ಸಾಯಂಕಾಲ 4 ಗಂಟೆಗೆ ಸೀಲ್ಡ್ ಟೆಂಡರ್‍ಗಳನ್ನು ತೆರೆಯಲಾಗುವುದು. 3000, 4000, 5000 ಲೀಟರ್ ಸಾಮಥ್ರ್ಯದ ಟ್ರಿಪ್ ಆಧಾರಿತ ಟ್ಯಾಂಕರ್ ಮೂಲಕ ಕುಡಿಯಲು ಯೋಗ್ಯವಾದ ನೀರನ್ನು ಬೇಸಿಗೆ ಅವಧಿಯಲ್ಲಿ ಅಥವಾ ಕುಡಿಯುವ ನೀರಿನ ಸಮಸ್ಯೆ ಬಗೆಹರೆಯುವವರೆಗೆ ಸರಬರಾಜು ಮಾಡಬೇಕು ಎಂದು ಶಹಾಪುರ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊರೊನಾ ವೈರಸ್ ಕುರಿತು ಮಾಧ್ಯಮದವರಿಗೆ ಕಾರ್ಯಾಗಾರ
ನಿಖರ ವರದಿ ಪ್ರಸಾರಕ್ಕೆ ಜಿಲ್ಲಾಧಿಕಾರಿ ಮನವಿ
ಯಾದಗಿರಿ, ಮಾರ್ಚ್ 19 (ಕರ್ನಾಟಕ ವಾರ್ತೆ): ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಮಾಧ್ಯಮದವರು ಸಂಬಂಧಪಟ್ಟ ಅಧಿಕಾರಿಗಳಿಂದ ನಿಖರ ಮಾಹಿತಿ ಪಡೆದು ಸುದ್ದಿ ಪ್ರಸಾರ ಮಾಡುವಂತೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ವರು ತಿಳಿಸಿದರು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾಧ್ಯಮದವರಿಗೆ ಹಮ್ಮಿಕೊಂಡಿದ್ದ ಕೊರೊನಾ ವೈರಸ್ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ದೊಡ್ಡ ಸಭೆ-ಸಮಾರಂಭಗಳಲ್ಲಿ ಸಾರ್ವಜನಿಕರು ಭಾಗವಹಿಸದಂತೆ ಮನವಿ ಮಾಡಲಾಗಿದೆ. ಸಂತೆ ಮತ್ತು ಜಾತ್ರೆಯಲ್ಲಿ ಹೆಚ್ಚಿನ ಜನ ಸೇರುವುದರಿಂದ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಿಳಿವಳಿಕೆ ನೀಡಿ ಸಂತೆ, ಜಾತ್ರೆಗಳನ್ನು ನಿಷೇಧಿಸಲಾಗುತ್ತಿದೆ. ದಿನನಿತ್ಯದ ಸಣ್ಣಪುಟ್ಟ ವಹಿವಾಟುಗಳಿಗೆ ಯಾವುದೇ ತೊಂದರೆ ಇಲ್ಲ. ಇದುವರೆಗೆ ವಿದೇಶದಿಂದ ಬಂದ 48 ಜನರಲ್ಲಿ ಸೋಂಕು ಇಲ್ಲ. ಮುಂಜಾಗ್ರತಾ ಕ್ರಮವಾಗಿ ಯಾದಗಿರಿ, ಶಹಾಪುರ ಹಾಗೂ ಸುರಪುರ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಒಟ್ಟು 27 ಐಸೊಲೇಷನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಯಾದಗಿರಿ ನಗರದ ರೈಲ್ವೆ ನಿಲ್ದಾಣ, ಜಿಲ್ಲಾ ನ್ಯಾಯಾಲಯ, ಹೊಸ ಬಸ್ ನಿಲ್ದಾಣ ಹಾಗೂ ಯರಗೋಳ, ಗುರುಮಠಕಲ್ ಸಮೀಪದ ಇಟಗಾಲ್ ಕ್ರಾಸ್, ಮುಡಬೂಳ ಗ್ರಾಮಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ, ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಅಲ್ಲದೇ, ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಕೊರೋನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಡಂಗೂರ ಸಾರಲಾಗುತ್ತಿದೆ. ರೋಗಲಕ್ಷಣಗಳು ಕಂಡುಬಂದಲ್ಲಿ 24*7 ಉಚಿತ ಆರೋಗ್ಯ ಸಹಾಯವಾಣಿ 104 ಅಥವಾ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ 08473-253950 ಕರೆ ಮಾಡಲು ಅವರು ಮನವಿ ಮಾಡಿದರು.ದೀರ್ಘ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರ ಗಂಟಲು ದ್ರವ್ಯ ಮಾದರಿಯನ್ನು ಜಿಲ್ಲೆಯಿಂದ ಕೊರೊನಾ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಆದರೆ, ಇವರು ವಿದೇಶದಿಂದ ಬಂದವರಲ್ಲ. ಇವರಿಗೆ ಜಿಲ್ಲಾಸ್ಪತ್ರೆಯ ಐಸೊಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಭಗವಾನ್ ಸೋನವಣೆ ಅವರು ಮಾತನಾಡಿ, ಸಾರ್ವಜನಿಕರಲ್ಲಿ ಕೊರೊನಾ ವೈರಸ್ ಕುರಿತಂತೆ ಸುಳ್ಳು ವದಂತಿಗಳನ್ನು ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ: ವಿಶ್ವ ಆರೋಗ್ಯ ಸಂಸ್ಥೆಯ ಕಲಬುರಗಿ ವಿಭಾಗಮಟ್ಟದ ವೈದ್ಯಕೀಯ ಸರ್ವೇಕ್ಷಣಾಧಿಕಾರಿ ಡಾ.ಅನಿಲ್‍ಕುಮಾರ್ ಎಸ್.ತಾಳಿಕೋಟಿ ಅವರು ಮಾತನಾಡಿ, ಕೆಮ್ಮು, ನೆಗಡಿ, ಜ್ವರ, ಉಸಿರಾಟದ ತೊಂದರೆ ಇರುವವರೆಲ್ಲರೂ ಕೊರೊನಾ ವೈರಸ್ ಶಂಕಿತ ಅಥವಾ ವೈರಸ್ ತಗುಲಿದ ರೋಗಿಗಳಲ್ಲ. ಪ್ರತಿಯೊಬ್ಬರೂ ತಮ್ಮ ಕೈಗಳನ್ನು ಸ್ವಚ್ಛವಾಗಿಟ್ಟುಕೊಂಡು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದರೆ ರೋಗ ಹರಡುವುದಿಲ್ಲ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ ಎಂದು ಹೇಳಿದರು.ಪ್ರತಿಯೊಬ್ಬರೂ ಮಾಸ್ಕ್ ಬಳಸುವ ಅಗತ್ಯವಿಲ್ಲ. ಒಂದು ಮಾಸ್ಕ್ ಕೇವಲ 8 ಗಂಟೆ ಉಪಯೋಗಿಸಬಹುದು. ಮಾಸ್ಕ್ ರೋಗ ಹರಡುವುದನ್ನು ತಡೆಗಟ್ಟುತ್ತದೆ ಎನ್ನುವುದು ಸುಳ್ಳು. ಸೋಂಕಿತ ವ್ಯಕ್ತಿಯು ಸೀನಿದಾಗ, ಕೆಮ್ಮಿದಾಗ, ಅವರ ಜೊತೆ ನಿಕಟ ಸಂಪರ್ಕದಲ್ಲಿರುವಾಗ, ಹಸ್ತಲಾಘವ ಅಥವಾ ಮುಟ್ಟಿದಾಗ, ಸೋಂಕಿತ ವ್ಯಕ್ತಿಯು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೆ ಬಳಸಿದಾಗ, ಸ್ವಚ್ಛಗೊಳಿಸದ ಕೈಗಳಿಂದ ಕಣ್ಣು, ಮೂಗು, ಬಾಯಿಯನ್ನು ಮುಟ್ಟಿಕೊಳ್ಳುವುದರಿಂದ ಕೊರೊನಾ ಹರಡುತ್ತದೆ ಎಂದು ಅವರು ತಿಳಿಸಿದರು.
ಕೆಮ್ಮು, ನೆಗಡಿ, ಜ್ವರ, ಉಸಿರಾಟದ ತೊಂದರೆ ಇರುವ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡುವುದಿಲ್ಲ. ಸರ್ಕಾರದ ನಿರ್ದೇಶನದನ್ವಯ ಶಿಷ್ಟಾಚಾರ ಪ್ರಕಾರ ಪರೀಕ್ಷೆ ನಡೆಸಲಾಗುವುದು. ಮುಖ್ಯವಾಗಿ ವಿದೇಶದಿಂದ ಬಂದವರನ್ನು 14 ದಿನಗಳವರೆಗೆ ಹೋಮ್ ಐಸೊಲೇಷನ್‍ನಲ್ಲಿಟ್ಟು ನಿಗಾವಹಿಸಲಾಗುವುದು. ಈ ಸಂದರ್ಭದಲ್ಲಿ ಅವರಲ್ಲಿ ರೋಗಲಕ್ಷಣಗಳು ಕಂಡುಬಂದಲ್ಲಿ ಕೊರೊನಾ ಟೆಸ್ಟ್‍ಗೆ ಕಳುಹಿಸಲಾಗುವುದು. ಸೋಂಕಿತ ವ್ಯಕ್ತಿಯಿಂದ ಮತ್ತೊಬ್ಬ ವ್ಯಕ್ತಿಯ ಶರೀರದಲ್ಲಿ ವೈರಸ್ ಸೇರಿದಾಗ ರೋಗಲಕ್ಷಣ ಕಂಡುಬರಲು 2ರಿಂದ 14 ದಿನ ಬೇಕು ಎಂದು ಅವರು ಮಾಹಿತಿ ನೀಡಿದರು.ಜಿಲ್ಲೆಯಲ್ಲಿ ಇಲ್ಲಿಯವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿರುವುದಿಲ್ಲ. ಕೊರೊನಾ ವೈರಸ್ ಹೊರಗಡೆ 12ರಿಂದ 48 ಗಂಟೆ ಬದುಕುತ್ತದೆ. ಮಾತನಾಡುವಾಗ, ಕೆಮ್ಮುವಾಗ ಅಂತರ ಕಾಯ್ದುಕೊಳ್ಳಬೇಕು. ಆಗಾಗ ಸೋಪು ಮತ್ತು ನೀರಿನಿಂದ ಕೈ ತೊಳೆದುಕೊಳ್ಳಬೇಕು. ವಿದೇಶದಿಂದ ಬಂದವರ ಬಗ್ಗೆ ಆತಂಕ ಪಡುವ ಬದಲು ಸಮೀಪದ ಅಂಗನವಾಡಿ ಅಥವಾ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಲು ಅವರು ಸಲಹೆ ನೀಡಿದರು.27 ಡಿಗ್ರಿ ಸೆಲ್ಸಿಯಸ್‍ಗಿಂತ ಹೆಚ್ಚಿನ ತಾಪಮಾನದಲ್ಲಿ ಕೊರೊನಾ ವೈರಸ್ ಬದುಕುವುದಿಲ್ಲ ಎನ್ನುವುದಕ್ಕೆ ಯಾವುದೇ ಆಧಾರವಿಲ್ಲ. ಕಳೆದ ಜನವರಿ 7ರಂದು ನೊವೆಲ್ ಕೊರೊನಾ ವೈರಸ್ ಜನ್ಮ ತಾಳಿದ್ದು, ಅದರ ವರ್ತನೆ ಬಗ್ಗೆ ನಿಖರ ಮಾಹಿತಿ ಇಲ್ಲ. ಈ ಬಗ್ಗೆ ಸಂಶೋಧನೆಗಳು ನಡೆಯುತ್ತಿದ್ದು, ಜನರು ವದಂತಿಗಳಿಗೆ ಕಿವಿಗೊಡಬಾರದು. ಈ ರೋಗಕ್ಕೆ ನಿಖರವಾದ ಚಿಕಿತ್ಸೆ ಇರುವುದಿಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿವೇಕಾನಂದ ಟೆಂಗೆ, ಶಹಾಪುರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮೇಶ್ ಅವರು ಉಪಸ್ಥಿತರಿದ್ದರು

ಬುಧವಾರ, ಮಾರ್ಚ್ 18, 2020

ಯರಗೋಳ ಚೆಕ್‍ಪೋಸ್ಟ್‍ಗೆ ಜಿಲ್ಲಾಧಿಕಾರಿ ಭೇಟಿ
ಯಾದಗಿರಿ, ಮಾರ್ಚ್ 18 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ರಸ್ತೆ ಮಾರ್ಗದ ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮದಲ್ಲಿ ಸ್ಥಾಪಿಸಿರುವ ಸ್ಕ್ರೀನಿಂಗ್ ಚೆಕ್‍ಪೋಸ್ಟ್‍ಗೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಬುಧವಾರ ಭೇಟಿ ನೀಡಿ, ಪರಿಶೀಲಿಸಿದರು.

ಚೆಕ್‍ಪೋಸ್ಟ್‍ಗಳಲ್ಲಿ 2,468 ಜನರ ತಪಾಸಣೆ

ಯಾದಗಿರಿ, ಮಾರ್ಚ್ 18 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಕೊರೋನಾ ವೈರಸ್ ಕುರಿತು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸ್ಥಾಪಿಸಿರುವ 6 ಚೆಕ್‍ಪೋಸ್ಟ್‍ಗಳಲ್ಲಿ ಬುಧವಾರ 2,468 ಜನರನ್ನು ತಪಾಸಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾದಗಿರಿ ನಗರದ ರೈಲ್ವೆ ನಿಲ್ದಾಣ, ಜಿಲ್ಲಾ ನ್ಯಾಯಾಲಯ, ಹೊಸ ಬಸ್ ನಿಲ್ದಾಣ ಹಾಗೂ ಯರಗೋಳ, ಇಟಗಾಲ್ ಕ್ರಾಸ್, ಮುಡಬೂಳ ಗ್ರಾಮಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದ್ದು, ಜನರನ್ನು ತಪಾಸಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿರುವುದಿಲ್ಲ. ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ್ಡಿದ್ದು, ಸಾರ್ವಜನಿಕರು ಆತಂಕ ಪಡಬಾರದು. ರೋಗಲಕ್ಷಣಗಳು ಕಂಡುಬಂದಲ್ಲಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಅಥವಾ 24*7 ಉಚಿತ ಆರೋಗ್ಯ ಸಹಾಯವಾಣಿ 104 ಕರೆ ಮಾಡಬಹುದು ಎಂದು ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಮಾರ್ಚ್ 18ರವರೆಗೆ ಯಾದಗಿರಿ ತಾಲ್ಲೂಕಿನಲ್ಲಿ 18, ಶಹಾಪೂರ ತಾಲ್ಲೂಕಿನಲ್ಲಿ 14 ಹಾಗೂ ಸುರಪುರ ತಾಲ್ಲೂಕಿನಲ್ಲಿ 16 ಸೇರಿದಂತೆ ಒಟ್ಟು 48 ಜನ ದುಬೈ, ಕತಾರ, ಸೌದಿ, ಮದಿನಾ ಪ್ರವಾಸದಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಕಾರಣ ಇವರಿಗೆ ಹೋಮ್ ಐಸೊಲೇಷನ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಿನಕ್ಕೆ 2 ಬಾರಿಯಂತೆ ಇವರನ್ನು 14 ದಿನಗಳ ಕಾಲ  ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.

ಮಾ.26ರಂದು ಪೂರ್ವಸಿದ್ಧತಾ ಸಭೆ

ಯಾದಗಿರಿ, ಮಾರ್ಚ್ 18 (ಕರ್ನಾಟಕ ವಾರ್ತೆ): 2020-21ನೇ ಸಾಲಿನ ಡಾ.ಬಾಬು ಜಗಜೀವನರಾಂ ರವರ 113ನೇ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ 129ನೇ ಜನ್ಮ ದಿನಾಚರಣೆಯ ಪೂರ್ವಸಿದ್ಧತಾ ಸಭೆಯನ್ನು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 26ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಎಸ್.ಎಸ್.ಚನ್ನಬಸಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ
ಯಾದಗಿರಿ, ಮಾರ್ಚ್ 18 (ಕರ್ನಾಟಕ ವಾರ್ತೆ): ಆಯುಷ್ಮಾನ್ ಭಾರತ್ ಯೋಜನೆಯಡಿ ಮೇಲ್ದರ್ಜೆಗೇರಿಸಲಾದ ಆಯುಷ್ ಆಯುರ್ವೇದ ಚಿಕಿತ್ಸಾಲಯಗಳಿಗೆ ಮಂಜೂರಾಗಿರುವ ಗುತ್ತಿಗೆ ಆಧಾರದ ಅರೆಕಾಲಿಕ ಯೋಗ ತರಬೇತುದಾರರು ಮತ್ತು ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತ ಹುದ್ದ್ದೆಗಳಿಗೆ ನಡೆದ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದ್ದು, ಪ್ರಕಟಿಸಲಾದ ಆಯ್ಕೆಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾ ಆಯುಷ್ ಕಚೇರಿಗೆ ಮಾರ್ಚ್ 31ರೊಳಗಾಗಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯುವ ಬರಹಗಾರರಿಂದ ಅರ್ಜಿ ಆಹ್ವಾನ
ಯಾದಗಿರಿ, ಮಾರ್ಚ್ 18 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದಿಂದ 2019ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪೆÇ್ರೀತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿದಾರರು ವಯೋಮಿತಿ 18ರಿಂದ 35 ವರ್ಷದೊಳಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾμÉ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ / ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.
ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 15ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 080-22484516, 22017704 ಸಂಪರ್ಕಿಸಲು ಕೋರಲಾಗಿದೆ.

ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಂದ ವೀಡಿಯೊ ಸಂವಾದ           

ಕೊರೋನಾ ವೈರಸ್ ಹರಡದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

ಯಾದಗಿರಿ, ಮಾರ್ಚ್ 18 (ಕರ್ನಾಟಕ ವಾರ್ತೆ): ಕೊರೋನಾ ವೈರಸ್ (ಕೋವಿಡ್-19) ಹರಡುವಿಕೆಯನ್ನು ತಡೆಯಲು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಕಪಿಲ್ ಮೋಹನ್ ಅವರು ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ವೀಡಿಯೊ ಕಾನ್ಫ್‍ರೆನ್ಸ್ ಸಭಾಂಗಣದಲ್ಲಿ ಬುಧವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬೀದರ್ ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವೀಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.
ವೈರಸ್ ಹರಡುವಿಕೆ ತಡೆಯಲ್ಲಿ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಹಾಗಾಗಿ, ಸರ್ಕಾರದ ಆದೇಶದಂತೆ ಸಾರ್ವಜನಿಕರಲ್ಲಿ ವೈರಸ್ ಹರಡುವಿಕೆ ವಿಧಾನ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಸಭೆ- ಸಮಾರಂಭಗಳಲ್ಲಿ ಹೆಚ್ಚಿನ ಜನರು ಸೇರದಿರುವಂತೆ ಮನವಿ ಮಾಡಿ. ಜನರಿಗೆ ನಿಖರ ಮಾಹಿತಿ ನೀಡುವ ಮೂಲಕ ವದಂತಿಗಳಿಗೆ ತೆರೆ ಎಳೆಯಬೇಕು. ಖಾಸಗಿ ಆಸ್ಪತ್ರೆಗಳ ಮಾಹಿತಿ ಸಂಗ್ರಹಿಸುವ ಜೊತೆಗೆ ರೋಗಲಕ್ಷಣಗಳಿರುವ ವ್ಯಕ್ತಿಗಳು ದಾಖಲಾದಲ್ಲಿ ಮಾಹಿತಿ ನೀಡಲು ಸೂಚಿಸಿ. ಚೆಕ್‍ಪೋಸ್ಟ್‍ಗಳಲ್ಲಿ ಸ್ಕ್ರೀನಿಂಗ್ ಮಾಡಲು ಅವರು ನಿರ್ದೇಶಿಸಿದರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಇಲ್ಲಿಯವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿರುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಯಾದಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 15, ಶಹಾಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 2 ಹಾಗೂ ಸುರಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ಸೇರಿದಂತೆ ಒಟ್ಟು 27 ಐಸೊಲೇಷನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಇದುವರೆಗೆ ಯಾದಗಿರಿ ತಾಲ್ಲೂಕಿನಲ್ಲಿ 9, ಶಹಾಪೂರ ತಾಲ್ಲೂಕಿನಲ್ಲಿ 13 ಹಾಗೂ ಸುರಪುರ ತಾಲ್ಲೂಕಿನಲ್ಲಿ 16 ಸೇರಿದಂತೆ ಒಟ್ಟು 38 ಜನ ದುಬೈ, ಕತಾರ, ಸೌದಿ, ಮದಿನಾ ಪ್ರವಾಸದಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ. ಮುಂಜಾಗ್ರತಾ ಕ್ರಮವಾಗಿ ಇವರನ್ನು 14 ದಿನಗಳ ಕಾಲ ಅವರ ಮನೆಯಲ್ಲಿ ಪ್ರತ್ಯೇಕವಾಗಿರಲು ತಿಳಿಸಿದ್ದು, ದಿನಕ್ಕೆ 2 ಬಾರಿ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸಲಿದೆ. ಅಲ್ಲದೇ, ಇವರ ಕುಟುಂಬದ ಸದಸ್ಯರ ಮೇಲೆಯೂ ಕೂಡಾ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.
ಚೆಕ್‍ಪೋಸ್ಟ್‍ಗಳ ಸ್ಥಾಪನೆ: ಯಾದಗಿರಿ ನಗರದ ರೈಲ್ವೆ ನಿಲ್ದಾಣ, ಜಿಲ್ಲಾ ನ್ಯಾಯಾಲಯ, ಹೊಸ ಬಸ್ ನಿಲ್ದಾಣ ಹಾಗೂ ಯರಗೋಳ, ಇಟಗಾಲ್ ಕ್ರಾಸ್, ಮುಡಬೂಳ ಗ್ರಾಮಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ, ಸ್ಕ್ರೀನಿಂಗ್ ಮಾಡಲು ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಹೆಚ್ಚಿನ ಜನರು ಸೇರುವ ಸಭೆ-ಸಮಾರಂಭಗಳನ್ನು ನಿಷೇಧಿಸಲಾಗಿದೆ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ವಿವರಿಸಿದರು.
ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಕೊರೋನಾ ವೈರಸ್ ಬಗ್ಗೆ ಡಂಗೂರ ಸಾರಬೇಕು. “ದೊಡ್ಡ ಸಭೆ- ಸಮಾರಂಭಗಳಿಗೆ ಭಾಗವಹಿಸಬಾರದು. ಜ್ವರ, ಉಸಿರಾಟದ ತೊಂದರೆ, ನೆಗಡಿ, ಕೆಮ್ಮು ರೋಗಲಕ್ಷಣಗಳು ಕಂಡುಬಂದಲ್ಲಿ 24*7 ಉಚಿತ ಆರೋಗ್ಯ ಸಹಾಯವಾಣಿ 104 ಅಥವಾ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ 08473-253950 ಕರೆ ಮಾಡಿ. ವೈಯಕ್ತಿಕವಾಗಿ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕರು ಆಗಾಗ್ಗೆ ಕೈತೊಳೆದುಕೊಳ್ಳಬೇಕು” ಎಂಬ ಅಂಶಗಳ ಡಂಗೂರ ಸಾರುವಂತೆ ಸೂಚಿಸಿದರು.
ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಸಂಖ್ಯೆ, ಅವುಗಳಲ್ಲಿನ ಸೌಕರ್ಯ ಮತ್ತು ವೈದ್ಯಕೀಯ ಸಲಕರಣೆಗಳ ಮಾಹಿತಿ, ವೈದ್ಯರು ಹಾಗೂ ಶುಶ್ರೂಷಕರ ವಿವರವಾದ ಮಾಹಿತಿ ಪಡೆಯುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿವೇಕಾನಂದ ಟೆಂಗೆ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಬಿ.ಪಾಟೀಲ್ ಅವರಿಗೆ ತಿಳಿಸಿದರು. ಹೆಚ್ಚುವರಿ ಬೆಡ್, ಕಾಟ್‍ಗಳು, ವೆಂಟಿಲೇಟರ್ ಹಾಗೂ ವೈಯಕ್ತಿಕ ಸಂರಕ್ಷಣೆ ಸಲಕರಣೆಗಳನ್ನು ಖರೀದಿಸುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಾರಾಯಣಪ್ಪ ಅವರಿಗೆ ನಿರ್ದೇಶಿಸಿದರು.
ಕೊರೋನಾ ವೈರಸ್ ಕುರಿತಂತೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತೀಯ ವೈದ್ಯಕೀಯ ಸಂಸ್ಥೆ ಹಾಗೂ ಸಮುದಾಯಗಳ ಮುಖಂಡರು ಮತ್ತು ಮಾಧ್ಯಮದವರಿಗೆ ಕಾರ್ಯಾಗಾರ ಆಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್ ಅವರಿಗೆ ಸೂಚಿಸಿದರು. ಇನ್ನು ಜಿಲ್ಲಾಡಳಿತದ ಕಂಟ್ರೋಲ್ ರೂಮ್ ನಿರ್ವಹಣೆ ಹಾಗೂ ಅದಕ್ಕೆ ಬರುವ ಕರೆಗಳ ಮಾಹಿತಿ ಸಂಗ್ರಹಿಸುವ ಜವಾಬ್ದಾರಿಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಕೋಶದ ವಿಪತ್ತು ನಿರ್ವಹಣಾ ಪರಿಣಿತರಾದ ಶೃತಿ ದೇಸಾಯಿ ಅವರಿಗೆ ಜಿಲ್ಲಾಧಿಕಾರಿಗಳು ವಹಿಸಿದರು.
ವೀಡಿಯೊ ಸಂವಾದದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ ಅವರು ಉಪಸ್ಥಿತರಿದ್ದರು.
ನ್ಯಾಯಾಲಯ ಪ್ರಕರಣಗಳ ವಿಚಾರಣೆ ಮುಂದೂಡಿಕೆ
ಯಾದಗಿರಿ, ಮಾರ್ಚ್ 18 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ವಕೀಲರ ಸಂಘವು ನ್ಯಾಯಾಲಯ ಪ್ರಕರಣಗಳ ವಿಚಾರಣೆಗಳನ್ನು ಮುಂದೂಡಲು ಕೋರಿದೆ. ಜಿಲ್ಲೆಯಲ್ಲಿ ಈಗಾಗಲೇ ಕೊರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 133 ಜಾರಿ ಮಾಡಿ ಹೆಚ್ಚಿನ ಜನ ಸೇರದಂತೆ ನಿರ್ಬಂಧಿಸಲಾಗಿರುತ್ತದೆ. ಕಾರಣ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯ ಪ್ರಕರಣಗಳ ವಿಚಾರಣೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೊನಾ ಎಫೆಕ್ಟ್‍ಗೆ ಒಂದು ವಾರ ಶಹಾಪುರ ಬಂದ್
ಯಾದಗಿರಿ, ಮಾರ್ಚ್ 17 (ಕರ್ನಾಟಕ ವಾರ್ತೆ): ಜಿಲ್ಲೆಯ ಶಹಾಪುರದಲ್ಲಿ ಕೊರೊನಾ ಹರಡುವುದನ್ನು ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮಗಳು ಕೈಗೊಳ್ಳಲಾಗಿದ್ದು, ಒಂದು ವಾರದವರೆಗೆ ಪಟ್ಟಣದಲ್ಲಿ ವ್ಯಾಪ್ತಿಯಲ್ಲಿ ಬರುವ ಚಿತ್ರಮಂದಿರಗಳ ಪ್ರದರ್ಶನ, ಬಾರ್ ಮತ್ತು ಪಬ್‍ಗಳನ್ನು ಬಂದ್ ಮಾಡುವಂತೆ ಶಹಾಪುರ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಇನ್ನು ಸಾರ್ವಜನಿಕರು ಸೇರಿವ ಸ್ಥಳಗಳಾದ ಸಂತೆ, ಜಾತ್ರೆ, ಉದ್ಯಾನವನಗಳು, ಸಭೆ-ಸಮಾರಂಭಗಳ, ವಸ್ತು ಪ್ರದರ್ಶನ ಸೇರಿದಂತೆ ಇತ್ಯಾದಿಗಳನ್ನು ಬಂದ್ ಮಾಡಬೇಕು. ಅಲ್ಲದೇ ಕೋಳಿ ಮತ್ತು ಮಾಂಸ ಮಾರಾಟವನ್ನು ರಸ್ತೆಗಳ ಬದಿಯಲ್ಲಿ, ತೆರೆದ ಹಣ್ಣುಗಳು ಮಾರಾಟ, ಆಹಾರ ಮಾರಾಟವನ್ನು ಸಹ ಒಂದು ವಾರದ ಅವಧಿಗೆ ನಿಷೇಧಿಸಬೇಕೆಂದು ತಿಳಿಸಿದ್ದಾರೆ.
ಶಹಾಪುರ ಪಟ್ಟಣದ ಸಾರ್ವಜನಿಕರು, ವ್ಯಾಪರಸ್ಥರು ಪಟ್ಟಣದ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವು ನಿಟ್ಟಿನಲ್ಲಿ ಬಂದ್ ಮಾಡಲಾಗಿದ್ದು, ಈ ಎಲ್ಲಾ ಸೂಚನೆಗಳನ್ನು ತಪ್ಪದೆ ಪಾಲಿಸಬೇಕು. ಇದನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 
ಭೂಮಿ ಯೋಜನೆಯಡಿ ಜಿಲ್ಲೆಗೆ 2ನೇ ಸ್ಥಾನ 
ಯಾದಗಿರಿ, ಮಾರ್ಚ್ 17 (ಕರ್ನಾಟಕ ವಾರ್ತೆ) ಭೂಮಿ ಯೋಜನೆಯಡಿಯಲ್ಲಿ ಸಾರ್ವಜನಿಕರಿಂದ ಜಿಲ್ಲೆಯಲ್ಲಿ ಫೆಬ್ರುವರಿ-2020ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ 7066ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ 3.16 ಸಿಗ್ಮಾ ಮೌಲ್ಯವನ್ನು ಪಡೆದಿರುವುದರಿಂದ ವಿಲೇವಾರಿ ಸೂಚ್ಯಂಕದ ಪ್ರಕಾರ ಯಾದಗಿರಿ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ಫೆಬ್ರುವರಿ ಮಾಹೆಯಲ್ಲಿ ದ್ವೀತಿಯ ಸ್ಥಾನ ಪಡೆದಿರುವುದಕ್ಕೆ ಭೂಮಿ ಮತ್ತು ಯುಪಿಓಆರ್ ಪದನಿಮಿತ್ತ ನಿರ್ದೇಶಕರು ಹಾಗೂ ಭೂಮಾಪನ ಇಲಾಖೆಯ ಆಯುಕ್ತರು ಯಾದಗಿರಿ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾರಾವ್ ಅವರಿಗೆ ಶ್ಲಾಘಿಸಿ ಅಭಿನಂದನಾ ಪತ್ರವನ್ನು ನೀಡಿದ್ದಾರೆ.
ಜಿಲ್ಲೆಯ ಎಲ್ಲಾ ತಹಶೀಲ್ದಾರ ಕಚೇರಿಗಳನ್ನು ಒಳಗೊಂಡು ವಿವಿಧ ಭೂಮಿ ಸೇವೆಗಳನ್ನು ಸೇರಿ ಒಟ್ಟು 7066 ಅರ್ಜಿಗಳನ್ನು ನಿಗಧಿತ ಕಾಲಾವಧಿಯಲ್ಲಿ ವಿಲೇಗೊಳಿಸಿ ರಾಜ್ಯ ಮಟ್ಟದಲ್ಲಿ 3.16 ಸಿಗ್ಮಾ ಮೌಲ್ಯವನ್ನು ಪಡೆದಿದ್ದು, 3.01702 ಅರ್ಜಿಗಳ ವಿಲೇವಾರಿ ಸೂಚ್ಯಂಕದ ಪ್ರಕಾರ ಸ್ವೀಕೃತವಾದ ಅರ್ಜಿಗಳನ್ನು ಶೀಘ್ರ ವಿಲೇ ಮಾಡಿ ಫೆಬ್ರುವರಿ 2020 ಮಾಹೆಯಲ್ಲಿ ಯಾದಗಿರಿ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ದ್ವೀತಿಯ ಸ್ಥಾನ ಪಡೆದಿರುವುದಕ್ಕೆ ಜಿಲ್ಲಾಧಿಕಾರಿಗಳು ಸಂತಸಗೊಂಡಿದ್ದಾರೆ.
 ಇನ್ನು ಜಿಲ್ಲೆಯ ತಹಶೀಲ್ದಾರರು, ತಾಲ್ಲೂಕು ಕಚೇರಿಯ ಅಧಿಕಾರಿ, ಸಿಬ್ಬಂದಿ ಕಾರ್ಯಸಾಧನೆ ಕಾರಣವಾಗಿರುತ್ತದೆ. ಅಲ್ಲದೇ  ಜಿಲ್ಲಾಡಳಿತದ ಪರವಾಗಿ ಸಹಾಯಕ ಆಯುಕ್ತರು, ಜಿಲ್ಲೆಯ ಆಯಾ ತಾಲ್ಲೂಕಿನ ಭೂಮಿ ಕೋಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ಬಗ್ಗೆ ಜಿಲ್ಲಾಧಿಕಾರಿಗಳು ಅಭಿನಂದನೆ ವ್ಯಕ್ತಪಡಿಸಿದ್ದಾರೆ. 
ಮುಂದಿನ ದಿನಗಳಲ್ಲಿಯೂ ಕೂಡ ಇದೇ ರೀತಿ ಪ್ರಗತಿಯನ್ನು ಸಾಧಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಬರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಅವರು ತಿಳಿಸಿದ್ದಾರೆ.

ಅರ್ಜಿ ಆಹ್ವಾನ
ಯಾದಗಿರಿ, ಮಾರ್ಚ್ 17 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ 2019 ರಿಂದ ಡಿಸೆಂಬರ್ 2019ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ಆಯ್ಕೆಯಾದ ಕೃತಿಗಳ ಪ್ರಕಾಶಕರು, ಮುದ್ರಕರು, ಕಲಾವಿದರಿಗೆ ಕನ್ನಡ ಪುಸ್ತಕ ಸೊಗಸು 2019 ಬಹುಮಾನವನ್ನು ನೀಡಲಾಗುವುದು. ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಆಹ್ವಾನಿಸಲಾಗಿದ್ದು, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ  ರಚನೆಯ ಕಲಾವಿದರ ಹೆಸರು, ಚಿತ್ರಕಲಾವಿದರ ಪೂರ್ಣ ವಿಳಾಸ ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಏಪ್ರಿಲ್ 4 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ ಜೆಸಿ ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಬಹದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್: www.kannadapustakapradhikara.com  ದೂರವಾಣಿ ಸಂಖ್ಯೆ-080-22484516/22107704ಗೆ ಸಂಪರ್ಕಿಸಬಹುದಾಗಿದೆ.

ಇಂದಿನಿಂದ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಸ್ಥಗಿತ
ಯಾದಗಿರಿ, ಮಾರ್ಚ್ 17 (ಕರ್ನಾಟಕ ವಾರ್ತೆ): ಕೊರೊನಾ ವೈರಸ್ (ಕೋವಿಡ್-19)ನ್ನು ಸರ್ಕಾರವು ಸಾಂಕ್ರಾಮಿಕ ರೋಗವೆಂದು ಘೋಷಿಸಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಮಾರ್ಚ್ 21ರವರೆಗೆ ಯಾದಗಿರಿ ಮುಖ್ಯ ಮಾರುಕಟ್ಟೆ, ಗುರುಮಿಠಕಲ್ ಉಪ-ಮಾರುಕಟ್ಟೆ ಮತ್ತು ಸೈದಾಪೂರು ಉಪ-ಮಾರುಕಟ್ಟೆ ಪ್ರಾಂಗಣಗಳಲ್ಲಿ ಯಾವುದೇ ವ್ಯಾಪಾರ ವಹಿವಾಟು ನಡೆಯುವುದಿಲ್ಲ. 
  ಗುರುಮಿಠಕಲ್ ಉಪ-ಮಾರುಕಟ್ಟೆಯಲ್ಲಿ ಜರುಗುವ ಜಾನುವಾರು ಸಂತೆ ಮತ್ತು ಯಾದಗಿರಿ ಮುಖ್ಯ-ಮಾರುಕಟ್ಟೆಯಲ್ಲಿ ಜರುಗುವ ಜಾನುವಾರು ಸಂತೆಗಳನ್ನು ರದ್ದುಪಡಿಸಲಾಗಿದೆ. ಆದ್ದರಿಂದ ಸಾರ್ವಜನಿಕರು, ಪೇಟೆ ಕಾರ್ಯಕರ್ತರು ಮತ್ತು ರೈತ ಭಾಂದವರು ಸಹಕರಿಸಬೇಕೆಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 ಮಾ.20ರಂದು ಜೋಳ, ಕುರಿ ಸಂತೆ ಬಂದ್
ಯಾದಗಿರಿ, ಮಾರ್ಚ್ 17 (ಕರ್ನಾಟಕ ವಾರ್ತೆ): ಜಿಲ್ಲೆಯ ಶಹಾಪುರ ತಾಲೂಕಿನ ಸುತ್ತಮುತ್ತಲಿನ ಸಮಸ್ತ ರೈತ ಭಾಂಧವರು, ವ್ಯಾಪರಸ್ಥರು ಹಾಗೂ ಸಾರ್ವಜನಿಕರು ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 20ರಂದು ನಡೆಯುವ  ಜೋಳದ ಸಂತೆ, ಜಾನುವಾರು ಹಾಗೂ ಕುರಿ ಸಂತೆಯನ್ನು ಬಂದ್ ಮಾಡುವ ಬಗ್ಗೆ ಶಹಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೊಂಕು ಹರಡದಂತೆ ಸಾರ್ವಜನಿಕ ಆರೊಗ್ಯ ಕಾಪಾಡುವ ಹಿತದೃಷ್ಠಿಯಿಂಧ ಸುರಕ್ಷತೆಗಾಗಿ   ಅನಾಹತಗಳನ್ನು ತಡೆಗಟ್ಟಲು ಒಂದು ವಾರದ ಮಟ್ಟಿಗೆ ಹೆಚ್ಚು ಜನರು ಸೇರದಂತಹ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುªವುದು ಎಂದರು.
ಜೋಳದ ಸಂತೆ, ಜಾನುವಾರು ಹಾಗೂ ಕುರಿ ಸಂತೆಯನ್ನು  ರದ್ದುಗೋಳಿಸಲಾಗಿದ್ದು, ರೈತರು, ವ್ಯಾಪರಸ್ಥರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.  

ಮಂಗಳವಾರ, ಮಾರ್ಚ್ 17, 2020

ಕೃಷಿ ವಿಜ್ಞಾನಿಗಳಿಂದ ಪಪ್ಪಾಯ ಬೆಳೆ ವೀಕ್ಷಣೆ
ಯಾದಗಿರಿ, ಮಾರ್ಚ್ 17 (ಕರ್ನಾಟಕ ವಾರ್ತೆ): ಶಹಾಪೂರ ತಾಲ್ಲೂಕಿನ ಮರಮಕಲ್ ಗ್ರಾಮದ ತಿಪ್ಪಣ್ಣ ಗುಂಡಳ್ಳಿ ತಾಂಡಾದ ಅನೀಲ್ ಚಿನ್ನಾ ರಾಠೋಡ್‍ರವರ ಜಮೀನಿನಲ್ಲಿ ಬೆಳೆದ ಪಪ್ಪಾಯ ಗಿಡದ ಹೂವುಗಳು ಉದರುತ್ತಿರುವುದನ್ನು ಭೀಮರಾಯನಗುಡಿಯ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಕೃಷಿ ವಿಜ್ಞಾನಿಗಳು ಭೇಟಿ ನೀಡಿ ವಿಕ್ಷಿಸಿದರು.
ರೈತರ ಜಮೀನಿನಲ್ಲಿ ಪಪ್ಪಾಯ ಗಿಡದ ಹೂವುಗಳು ಉದರುತ್ತಿವುದು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿದ್ದು, ರೈತರು ಪಪ್ಪಾಯ ಗಿಡಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವುದು, ರಾಸಾಯನಿಕಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಉಪಯೋಗಿಸುವುದರಿಂದ ಹಾಗೂ ಬಿಸಲು ಸಹ ಹೆಚ್ಚಾಗಿರುವದರಿಂದ ಹೂವುಗಳು ಉದುರುತ್ತವೆ ಎಂದು ಅವರು ಹೇಳಿದರು.
ಪಪ್ಪಾಯ ಬೆಳೆಗೆ ನೀರಿನ ಅವಶ್ಯಕತೆ ಇರುವಷ್ಟು ಮಾತ್ರ ನೀರು ಬಿಡಬೇಕು, ಗಿಡದ ಬೆಳೆವಣಿಗೆ ಕುಂಠಿತಗೊಳಿಸಲು ಅನಿಯಂತ್ರಿತ ಸಸ್ಯ ಪ್ರಚೋದಕ ಔಷದಿಗಳ ಬಳಸುವುದನ್ನು ನಿಲ್ಲಿಸಬೇಕು. ಇದರ ಬದಲಾಗಿ ಪಪಾಯ ಕ್ಷೇತ್ರದ ಸುತ್ತಲೂ ಗಾಳಿ ತಡೆಯುವ ಗಿಡಗಳನ್ನು ಬೆಳೆವುದರಿಂದ ಪಪ್ಪಾಯ ಗಿಡಗಳನ್ನು ಬಿಳದಂತೆ ರಕ್ಷಿಸಬಹುದು ಎಂದು ಸಲಹೆ ನಿಡಿದರು.
ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಯಾದಗಿರಿ, ಮಾರ್ಚ್ 17 (ಕರ್ನಾಟಕ ವಾರ್ತೆ): ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ||ಬಿ.ಆರ್ ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2020-21ನೇ ಸಾಲಿನ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವೇಶ ಪರೀಕ್ಷೆ ಮತ್ತು ಆನ್‍ಲೈನ್ ಕೌನ್ಸಿಲಿಂಗ್‍ನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು ಮಾರ್ಚ್ 12ರಿಂದ ಏಪ್ರಿಲ್ 3ರವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆದಾಯ ಮೀತಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ 2.50 ಲಕ್ಷ ರೂ. ಹಿಂದುಳಿದ ವರ್ಗದ ಪ್ರವರ್ಗ-1 2.50 ಲಕ್ಷ ರೂ.ಹಾಗೂ ಹಿಂದುಳಿದ ವರ್ಗ, 2ಎ, 2ಬಿ, 3ಎ, 3ಬಿ 1ಲಕ್ಷ ರೂ.ಗಳನ್ನು ಕುಟುಂಬದ ವಾರ್ಷಿಕ ಆದಾಯ ಮಿತಿ ಹೊಂದಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಮಾಹಿತಿ ಪುಸ್ತಕ-2020ರ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ನಲ್ಲಿ ಹಾಗೂ ವಸತಿ ಶಿಕ್ಷಣ ಸಂಸ್ಥೆಗಳ ವೆಬ್‍ಸೈಟ್ http://kreis.kar.nic.xn--in-2vh3ba2fue/ನಲ್ಲಿ ಪ್ರಚುರ ಪಡಿಸಲಾಗಿದೆ.
 ಏಪ್ರಿಲ್ 20ರಿಂದ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವಸತಿ ಶಿಕ್ಷಣ ಸಂಸ್ಥೆಗಳ ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬೇಕು. ಮೇ 6ರಂದು ಬೆಳಿಗ್ಗೆ 11ರಿಂದ 1 ಗಂಟೆಯವರೆಗೆ 100 ಅಂಕಗಳ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಸೂಚನೆ: SಂಖಿS ಸಂಖ್ಯೆಯನ್ನು ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ ಪಡೆದು ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆಯ ಮುಖ್ಯಸ್ಥರನ್ನು ಸಂಪರ್ಕಿಸಬೇಕು.
ವಸತಿ ಶಾಲೆಗಳನ್ನು ನಮೂದಿಸುವ ಕ್ರಮ: ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳು/ಪೋಷಕರು ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ. ಅಂತಹ ಶಾಲೆಗಳನ್ನು ಕ್ರಮದಲ್ಲಿ ಆದ್ಯತೆಯ ಮೇರೆಗೆ ಆಯ್ಕೆ ಮಾಡಿಕೊಳ್ಳಬೇಕು. ಅದರಂತೆ ಮೆರಿಟ್ ಆಧಾರದ ಮೇಲೆ ಶಾಲೆಗಳ Computerised Auto Selection ಮೂಲಕ ಹಂಚಿಕೆಯನ್ನು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕೆಇಎ ಸಹಾಯವಾಣಿ ಸಂಖ್ಯೆ 080-23460460ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಮಾ. 20ರಂದು ನೇರ ಫೋನ್ ಇನ್ ಕಾರ್ಯಕ್ರಮ
ಯಾದಗಿರಿ, ಮಾರ್ಚ್ 17 (ಕರ್ನಾಟಕ ವಾರ್ತೆ): ಜಿಲ್ಲೆಯ ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ ಮಧ್ಯೆ ಉತ್ತಮ ಸಂಪರ್ಕ ಬೆಳೆಯುವ ನಿಟ್ಟಿನಲ್ಲಿ ಉತ್ತಮ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಮಾರ್ಚ್ 20 ರಂದು ಬೆಳಗ್ಗೆ 11ಗಂಟೆಯಿಂದ 12ರವರೆಗೆ ಜಿಲ್ಲಾ ಪೊಲೀಸ್  ಕಾರ್ಯಾಲಯದಲ್ಲಿ ಫೋನ್ ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ಸಾರ್ವಜನಿಕರು, ಫಿರ್ಯಾದಿ, ನೊಂದವರು ಪೊಲೀಸ್  ಇಲಾಖೆಗೆ ಸಂಬಂಧಿಸಿದಂತಹ ಸಮಸ್ಯೆಗಳಿದ್ದಲ್ಲಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಸಂಚಾರ ವ್ಯವಸ್ಥೆ ಇನ್ನಿತರ ಸುಧಾರಣೆಗಳ ಬಗ್ಗೆ ಸಲಹೆಗಳಿದ್ದಲ್ಲಿ ನೇರವಾಗಿ ಮೊ.ನಂ 9480803600 ಹಾಗೂ ದೂರವಾಣಿ ಸಂಖ್ಯೆ 08473-253736ಗೆ ಕರೆ ಮಾಡಿ ತಮ್ಮ ಸಲಹೆ, ಸಮಸ್ಯೆಗಳು, ದೂರುಗಳನ್ನು ಹೇಳಿದ್ದಲ್ಲಿ ಅವುಗಳಿಗೆ ತಕ್ಷಣ ಪರಿಹಾರ ಕ್ರಮ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನಾವಣೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ.27ರಂದು ಬಹಿರಂಗ ಹರಾಜು
ಯಾದಗಿರಿ, ಮಾರ್ಚ್ 17 (ಕರ್ನಾಟಕ ವಾರ್ತೆ): ಶಹಾಪುರ ತಾಲೂಕಿನ ಭೀಮರಾಯನಗುಡಿಯ ಕೃಷಿ ಸಂಶೋಧನಾ ತೋಟಗಾರಿಕೆ ಕ್ಷೇತ್ರದಲ್ಲಿ ಮಾರ್ಚ್ 27ರಂದು ಬೆಳಗ್ಗೆ 11 ಗಂಟೆಗೆ ಚಿಕ್ಕು ಮತ್ತು ಮಾವು ಗಿಡಗಳ ಫಸಲಿನ ಜಾಹೀರ ಲೀಲಾವು ಮಾಡಲಾಗುವುದು ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದರಲ್ಲಿ ಭಾಗವಹಿಸುವ ಸಾರ್ವಜನಿಕರು ಚಿಕ್ಕು ಮತ್ತು ಮಾವು ಫಸಲಿನ ಅವಧಿ ಹರಾಜು ಮಾಡಿದ ದಿನಾಂಕದಿಂದ ಮೂರು ತಿಂಗಳವರೆಗೆ ಮಾತ್ರ ಇರುತ್ತದೆ. 
ಹರಾಜಿನ ಕರಾರುಗಳು: ಹರಾಜಿನಲ್ಲಿ ಭಾಗವಹಿಸುವವರು 5 ಸಾವಿರ ರೂ. ಹಣವನ್ನು ಠೇವಣಿ ಇಡಬೇಕು, ಅತೀ ಹೆಚ್ಚಿನ ಹರಾಜು ಬೆಲೆ ಕೂಗಿದವರಿಗೆ ಅರ್ಧ ಹಣವನ್ನು 24 ಗಂಟೆಯೊಳಗೆ ಹಾಗೂ ಉಳಿದ ಹಣವನ್ನು 15 ದಿನಗಳೊಳಗೆ ನೀಡಬೇಕು, ಹರಾಜಿನ ಅವಧಿಯಲ್ಲಿ ಗಿಡಗಳಿಗೆ ಗೊಬ್ಬರ, ಔಷಧಿಗಳನ್ನು ಕೃಷಿ ಮಹಾವಿದ್ಯಾಲಯ ಒದಗಿಸುತ್ತೆದೆ. ಹೆಚ್ಚಿನ ಮಾಹಿತಿಗಾಗಿ ಆವರಣದ ಮುಖ್ಯಸ್ಥರು ಕೃಷಿ ಮಹಾವಿದ್ಯಾಲಯ ಭೀಮರಾಯನಗುಡಿ ಇವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. 
ಮಾರ್ಚ್ 27ರಂದು ಬಹಿರಂಗ ಹರಾಜು
ಯಾದಗಿರಿ, ಮಾರ್ಚ್ 17 (ಕರ್ನಾಟಕ ವಾರ್ತೆ): ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ 2020-21ನೇ ಸಾಲಿನ ತರಕಾರಿ ಮಾರ್ಕೆಟ್ ಬಹಿರಂಗ ಹರಾಜು ಮಾರ್ಚ್ 27ರಂದು ಬೆಳಗ್ಗೆ 11 ಗಂಟೆಗೆ ಪುರಸಭೆ ಕಾರ್ಯಾಲಯದಲ್ಲಿ ನಡೆಯಲಿದೆ ಎಂದು ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತಿ  ಉಳ್ಳವರು ಹರಾಜಿನಲ್ಲಿ 1 ಲಕ್ಷ ರೂ. ಮುಂಗಡವಾಗಿ ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಮುಖ್ಯಾಧಿಕಾರಿಗಳ ಹೆಸರಿನಲ್ಲಿ ಡಿಡಿ ತೆಗೆದುಕೊಂಡು, ಠೇವಣಿ ಕಟ್ಟಿ ಹರಾಜಿನಲ್ಲಿ ಭಾಗವಹಿಸಬೇಕೆಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪುರಸಭೆ ಕಾರ್ಯಾಲಯ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...