ಶುಕ್ರವಾರ, ಜನವರಿ 31, 2020


ಶಿಕ್ಷಕರ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಅವಕಾಶ
ಯಾದಗಿರಿ, ಜನವರಿ ೩೧ (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಜನವರಿ ೧೬ರಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಇನ್ನೂ ಅವಕಾಶ ಇರುತ್ತದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಮತದಾರರ ಪಟ್ಟಿಗಳ ನಿರಂತರ ಕಾಲೋಚಿತಗೊಳಿಸಲು ಪ್ರಜಾ ಪ್ರಾತಿನಿಧ್ಯ ಕಾಯ್ದೆ ೧೯೫೦ರ ಕಲಂ ೨೨ ಮತ್ತು ೨೩ರಡಿ ನಾಮಪತ್ರಗಳ ಸ್ವೀಕೃತಿಯ ಕೊನೆಯ ದಿನಾಂಕದವರೆಗೆ ಹೆಸರು ಸೇರ್ಪಡೆಗೆ ಅವಕಾಶಗಳಿದ್ದು, ಮತದಾರರ ಯಾದಿಯಲ್ಲಿ ಹೆಸರು ಸೇರಿಸಲು ಶಿಕ್ಷಕರ ಮತಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ನಮೂನೆ- ೧೯ರಲ್ಲಿ ದ್ವೀಪ್ರತಿಯಲ್ಲಿ ಸಂಬAಧಿಸಿದ ನೋಂದಣಾಧಿಕಾರಿಗಳಿಗೆ, ನಿರ್ದಿಷ್ಟ ಅಧಿಕಾರಿಗಳಿಗೆ ಅವಶ್ಯಕ ದಾಖಲಾತಿಗಳೊಂದಿಗೆ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

ಗರ್ಭಿಣಿ, ಬಾಣಂತಿಯರು ಸೌಲಭ್ಯ ಪಡೆಯಲು ಸಲಹೆ
ಯಾದಗಿರಿ, ಜನವರಿ ೩೧ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ “ಮುಖ್ಯಮಂತ್ರಿ ಮಾತೃಶ್ರೀ” ಯೋಜನೆ ಮತ್ತು “ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ” ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯ ನಾಲ್ಕೂ ಶಿಶು ಅಭಿವೃದ್ಧಿ ಯೋಜನೆಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಅರ್ಹ ಫಲಾನುಭವಿಗಳು ಸೌಲಭ್ಯ ಪಡೆದುಕೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಭಾಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಬಿ.ಪಿ.ಎಲ್./ಎ.ಪಿ.ಎಲ್ ಕುಟುಂಬದ ಮೊದಲ ಪ್ರಸವದ ಗರ್ಭಿಣಿ/ಬಾಣಂತಿ ಮಹಿಳೆಯರಿಗೆ ನೀಡುವ ಸೌಲಭ್ಯವಾಗಿದ್ದು ೫,೦೦೦ ರೂ.ಗಳನ್ನು ಮೂರು ಕಂತುಗಳಲ್ಲಿ ಫಲಾನುಭವಿಗಳ ಆಧಾರ್ ಲಿಂಕ್ಡ್ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
ರಾಜ್ಯ ಸರ್ಕಾರವು ೨೦೧೮-೧೯ನೇ ಸಾಲಿನ ಆಯ-ವ್ಯಯದಲ್ಲಿ ಘೋಷಿಸಿರುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಟಿಕ ಮತ್ತು ಆರೋಗ್ಯದ ಮಟ್ಟವನ್ನು ಸುಧಾರಿಸಲು “ಮುಖ್ಯಮಂತ್ರಿ ಮಾತೃಶ್ರೀ” ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ (ಬಿ.ಪಿ.ಎಲ್. ಕುಟುಂಬ) ಗರ್ಭಿಣಿ ಹಾಗೂ ಬಾಣಂತಿ (ಮೊದಲ ಎರಡು ಜೀವಂತ ಹೆರಿಗೆಗೆ ಮಾತ್ರ) ಮಹಿಳೆಯರಿಗೆ ೬,೦೦೦ ರೂ.ಗಳ ನೇರ ನಗದು ವರ್ಗಾವಣೆ ಸೌಲಭ್ಯ ಒದಗಿಸಲಿದೆ. ಹೆರಿಗೆ ಪೂರ್ವದ ಕಡೆಯ ೩ ತಿಂಗಳು ಹಾಗೂ ಬಾಣಂತಿಯರಿಗೆ ಹೆರಿಗೆ ನಂತರದ ೩ ತಿಂಗಳ ಕಾಲ ಮಾಸಿಕ ೧,೦೦೦ ರೂ.ಗಳನ್ನು ಅವರ ಆಧಾರ್ ಲಿಂಕ್ಡ್ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಸದರಿ ಯೋಜನೆಯು ಮೊದಲ ಎರಡು ಮಕ್ಕಳಿಗೆ ಅನ್ವಯವಾಗುತ್ತದೆ. ಎಲ್.ಎಂ.ಪಿ. ದಿನಾಂಕ:೦೧-೦೫-೨೦೧೮ರ ನಂತರದ ಹಾಗೂ ಹೆರಿಗೆ ದಿನಾಂಕ:೦೧-೧೧-೨೦೧೮ರ ನಂತರದ ಗರ್ಭಿಣಿ ಹಾಗೂ ಬಾಣಂತಿಯರು ಈ ಯೋಜನೆ ಸೌಲಭ್ಯ ಪಡೆಯಬಹುದಾಗಿದೆ.
ಸೌಲಭ್ಯಗಳನ್ನು ಪಡೆಯಲಿಚ್ಛಿಸುವ ಅರ್ಹರು ನಿಗದಿತ ನಮೂನೆಯನ್ನು ಸಮೀಪದ ಅಂಗನವಾಡಿ ಕೇಂದ್ರಗಳಿAದ ಉಚಿತವಾಗಿ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲ್ಲಿಸಲು ಅವರು ಕೋರಿದ್ದಾರೆ.

ಜಿಲ್ಲೆಯಲ್ಲಿ ೩೫ ತೊಗರಿ ಖರೀದಿ ಕೇಂದ್ರಗಳ ಸ್ಥಾಪನೆ
ತೊಗರಿ ಖರೀದಿಗೆ ರೈತರ ನೋಂದಣಿ ಅವಧಿ ವಿಸ್ತರಣೆ
ಯಾದಗಿರಿ, ಜನವರಿ ೩೧ (ಕರ್ನಾಟಕ ವಾರ್ತೆ): ೨೦೧೯-೨೦ನೇ ಸಾಲಿನ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಕಾಳನ್ನು ಖರೀದಿಸಲು ಜಿಲ್ಲೆಯಲ್ಲಿ ಒಟ್ಟು ೩೫ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರ ನೋಂದಣಿ ಅವಧಿಯನ್ನು ಫೆಬ್ರುವರಿ ೮ರ ವರೆಗೆ ವಿಸ್ತರಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರಾದ ಭೀಮರಾಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೋಂದಣಿ ಮಾಡಿದ ರೈತರ ತೊಗರಿಯನ್ನು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಎಫ್.ಪಿ.ಓ.ಗಳ ಮುಖಾಂತರ ತೊಗರಿ ಖರೀದಿಸಲಾಗುವುದು. ಪ್ರತಿ ಕ್ವಿಂಟಲ್ ತೊಗರಿಗೆ ಸರ್ಕಾರದ ಬೆಂಬಲ ಬೆಲೆ ೬,೧೦೦ ರೂ. ಇದ್ದು, ಪ್ರತಿಯೊಬ್ಬ ರೈತರಿಂದ ಎಕೆರೆಗೆ ೫ ಕ್ವಿಂಟಲ್‌ನAತೆ ಗರಿಷ್ಠ ೧೦ ಕ್ವಿಂಟಲ್ ಖರೀದಿಸಲಾಗುವುದು. ಜಿಲ್ಲೆಯಲ್ಲಿ ಯಾದಗಿರಿ, ರಾಮಸಮುದ್ರ, ಸೈದಾಪೂರ, ಗುರುಮಠಕಲ್, ಕೊಂಕಲ್, ಚಪೇಟ್ಲಾ, ಗಣಪೂರ, ಹತ್ತಿಕುಣಿ, ಅಲ್ಲಿಪುರ, ಯಲ್ಹೇರಿ, ಅನಪೂರ, ಯರಗೋಳ, ಪುಟಪಾಕ್, ಶಹಾಪೂರ, ರಸ್ತಾಪುರ, ಬೆಂಡೆಬೆAಬಳಿ, ಗಂಗನಾಳ, ಚಾಮನಾಳ, ಹೈಯಾಳ್, ದೋರನಹಳ್ಳಿ, ಶಿರವಾಳ, ಟೊಕಾಪೂರ, ಹೊಸಕೇರಾ, ಮದ್ರಿಕಿ, ಸುರಪುರ, ಏವೂರು, ಯಾಳಗಿ, ಕಕ್ಕೇರಾ, ಕೊಡೇಕಲ್, ನಗನೂರು, ಮಾಲಗತ್ತಿ, ರಾಜನಕೋಳೂರು, ಹುಣಸಗಿ, ಕೆಂಭಾವಿ-೧ ಮತ್ತು ಕೆಂಭಾವಿ-೨ರಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ರೈತ ಬಾಂಧವರು ಕೊನೆಯ ದಿನಾಂಕದವರೆಗೆ ಕಾಯದೆ ಹತ್ತಿರದ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಒಬ್ಬ ರೈತ ಒಂದೇ ಅರ್ಜಿಯನ್ನು ಖರೀದಿ ಕೇಂದ್ರಕ್ಕೆ ತರಬೇಕು ಮತ್ತು ಸರತಿ ಸಾಲಿನಲ್ಲಿ ಬಂದು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅವರು ಕೋರಿದ್ದಾರೆ.

ಶಿಕ್ಷಕರ ಬಡ್ತಿಗೆ ಪ್ರಸ್ತಾವನೆ ಆಹ್ವಾನ
ಯಾದಗಿರಿ, ಜನವರಿ ೩೧ (ಕರ್ನಾಟಕ ವಾರ್ತೆ): ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತರಬೇತಿ ಹೊಂದಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-೧ ಇವರಿಗೆ ಕ್ರಮವಾಗಿ ಪ್ರೌಢ ಶಾಲಾ ಸಹ ಶಿಕ್ಷಕರು ಗ್ರೇಡ್-೨ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-೧ ಹುದ್ದೆಗೆ ೨೦೧೫ನೇ ಬ್ಲಾಕ್ ಅವಧಿಯಿಂದ ೨೦೧೯ನೇ ಬ್ಲಾಕ್ ಅವಧಿಗೆ ಆಯಾ ವರ್ಷದ ಅಂದರೆ ಜನವರಿಯಿಂದ ಡಿಸೆಂಬರ್ ಅಂತ್ಯದಲ್ಲಿ ಬಿ.ಇಡಿ/ಬಿ.ಪಿ.ಇಡಿ ಉತ್ತೀರ್ಣರಾವ ಜೇಷ್ಠತಾ ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು, ಅರ್ಹ ಶಿಕ್ಷಕರಿಂದ ಫೆಬ್ರುವರಿ ೧೦ರೊಳಗೆ ಪ್ರಸ್ತಾವನೆ ಆಹ್ವಾನಿಸಲಾಗಿದೆ.
ಆಯಾ ಬ್ಲಾಕ್ ಅವಧಿಗೆ ಅಂದರೆ ದಿನಾಂಕ ೧-೧-೨೦೧೫ರಿಂದ ೩೧-೧೨-೨೦೧೫ರ ವರೆಗೆ ೨೦೧೫ನೇ ಬ್ಲಾಕ್ ಅವಧಿ, ಅದರಂತೆ ೨೦೧೬ನೇ, ೨೦೧೭ನೇ, ೨೦೧೮ನೇ ಮತ್ತು ೨೦೧೯ನೇ ಬ್ಲಾಕ್ ಅವಧಿಯ ಮಧ್ಯದಲ್ಲಿ ಬಿ.ಇಡಿ/ಬಿ.ಪಿ.ಇಡಿ ವಿದ್ಯಾರ್ಹತೆಯನ್ನು ಹೊಂದಿರುವ ಶಿಕ್ಷಕರು ಮಾತ್ರ ಪ್ರಸ್ತಾವನೆಯನ್ನು ಸಲ್ಲಿಸಬಹುದು. ನೇಮಕಾತಿ ನಿಯಮ ೨೦೧೬ರನ್ವಯ ಸಂಬAಧಪಟ್ಟ ಬೋಧನಾ ವಿಷಯದನÀ್ವಯ ಜೇಷ್ಠತಾ ಪಟ್ಟಿಗೆ ತಮ್ಮ ಹೆಸರು ಸೇರಿಸಲು ನಿಗಧಿತ ನಮೂನೆ ಹಾಗೂ ಸಲ್ಲಿಸಬೇಕಾದ ದಾಖಲೆಗಳ ಚೆಕ್ ಲಿಸ್ಟ್ ಅನ್ನು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು. (೧.ಪ್ರಸ್ತಾವನೆ ನಮೂನೆ ೨.ನೇಮಕಾತಿ ಆದೇಶ ಪ್ರತಿ. ೩.ಪರಿವೀಕ್ಷಣಾ ಅವಧಿ ಘೋಷಣೆಯಾದ ಜ್ಞಾಪನ ಪತ್ರದ ಪ್ರತಿ. ೪.ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ. ೫.ಪಿ.ಯು.ಸಿ ದ್ವಿತೀಯ ವರ್ಷದ ಅಂಕಪಟ್ಟಿ ಪ್ರತಿ. ೬.ಪದವಿ ವಿದ್ಯಾರ್ಹತೆ ದೃಢೀಕೃತ ಪ್ರತಿಗಳು ಪಾಸಿಂಗ್ ಪ್ರಮಾಣ ಪತ್ರ ಪ್ರತಿಯೊಂದಿಗೆ. ೭.ಬಿ.ಇ.ಡಿ/ ಬಿ.ಪಿ.ಇಡಿ ವಿದ್ಯಾರ್ಹತೆ ದೃಢೀಕೃತ ಪ್ರತಿಗಳು ಪಾಸಿಂಗ್ ಪ್ರಮಾಣ ಪತ್ರ ಪ್ರತಿಯೊಂದಿಗೆ. ೮.ಬಿ.ಎ ಅಥವಾ ಬಿ.ಇಡಿ ರೆಗ್ಯುಲರ್ ಅಭ್ಯರ್ಥಿಯಾಗಿ ವ್ಯಾಸಂಗ ಮಾಡಿದ್ದಲ್ಲಿ ಇಲಾಖೆಯಿಂದ ನೀಡಿದ ಅನುಮತಿ ಪತ್ರ. ೯.ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಯಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದ ಪ್ರತಿ. ೧೦.ಕಲ್ಯಾಣ-ಕರ್ನಾಟಕ ಪ್ರದೇಶದ ಸ್ಥಳೀಯ ಅಭ್ಯರ್ಥಿಗಳಿಗೆ ನೀಡಿದ ಸ್ವಗ್ರಾಮ ಪ್ರಮಾಣ ಪತ್ರದ ಪ್ರತಿ ಅನುಬಂಧ-ಎ ಮತ್ತು ಶಿಕ್ಷಕರು ಸಲ್ಲಿಸಿದ ಇಚ್ಛಾ ಪತ್ರ “ಸಿ” ೧೧.ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಆಯ್ಕೆಯಾದ ಅಂತಿಮ ಆಯ್ಕೆ ಪಟ್ಟಿಯಲ್ಲಿ ಹೆಸರು ಶಿಕ್ಷಕರ ಇರುವ ಸಂಬAಧಿಸಿದ ಪುಟದ ದೃಢೀಕೃತ ಪ್ರತಿ) ನಂತರ ಸಲ್ಲಿಸಲಾಗುವ ಪ್ರಸ್ತಾವನೆ ಸ್ವೀಕರಿಸುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರ ಪ್ರಕರಣಗಳ ಇತ್ಯರ್ಥಕ್ಕೆ ಸುವರ್ಣಾವಕಾಶ
ಫೆ.8ರಂದು ರಾಷ್ಟ್ರೀಯ ಲೋಕ್ ಅದಾಲತ್
-ನ್ಯಾ. ಶ್ರೀ ಶಿವನ ಗೌಡ
ಯಾದಗಿರಿ, ಜನವರಿ 31 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಫೆಬ್ರುವರಿ 8ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಯಾದಗಿರಿ, ಸುರಪುರ ಮತ್ತು ಶಹಾಪುರ ನ್ಯಾಯಾಲಯಗಳ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಶಿವನ ಗೌಡ ಅವರು ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದಲ್ಲಿ ಫೆಬ್ರುವರಿ 8, ಏಪ್ರಿಲ್ 11, ಜುಲೈ 11, ಸೆಪ್ಟೆಂಬರ್ 12 ಹಾಗೂ ಡಿಸೆಂಬರ್ 12ರಂದು ಸೇರಿದಂತೆ ಒಟ್ಟು 5 ರಾಷ್ಟ್ರೀಯ ಲೋಕ್ ಅದಾಲತ್‍ಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಅತಿ ಶೀಘ್ರದಲ್ಲಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ. ಫೆಬ್ರುವರಿ 8ರ ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ 1,207 ಪ್ರಕರಣಗಳನ್ನು ರಾಜಿ ಮೂಲಕ ಪರಿಹರಿಸಲು ಗುರುತಿಸಲಾಗಿದೆ. ಫೆಬ್ರುವರಿ 8ರವರೆಗೆ ಪ್ರಕರಣಗಳನ್ನು ಗುರುತಿಸುವ ಕಾರ್ಯ ಚಾಲ್ತಿಯಲ್ಲಿರುತ್ತದೆ. ಸಾರ್ವಜನಿಕರು ಅದಾಲತ್‍ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಲೋಕ್ ಅದಾಲತ್‍ನ ಪ್ರಯೋಜನಗಳು: ಸಾರ್ವಜನಿಕರ ಕೇಸನ್ನು ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸಿಕೊಳ್ಳಬಹುದು. ಲೋಕ್ ಅದಾಲತ್ ಜನತಾ ನ್ಯಾಯಾಲಯದಲ್ಲಿ ಜನರೇ ನೇರವಾಗಿ ಅಥವಾ ವಕೀಲರ ಮುಖಾಂತರ ಭಾಗವಹಿಸಬಹುದು. ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಪ್ರಕರಣಗಳನ್ನು (ವ್ಯಾಜ್ಯಪೂರ್ವ ಪ್ರಕರಣಗಳು) ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ನ್ಯಾಯಾಲಯ ಶುಲ್ಕ (ಕೋರ್ಟ್ ಫೀ) ಕೊಡಬೇಕಾಗಿಲ್ಲ. ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶ ಎಂದು ಅವರು ವಿವರಿಸಿದರು. ವ್ಯಾಜ್ಯಪೂರ್ವ ಪ್ರಕರಣ ಯಾವವು?: ಚೆಕ್ ಅಮಾನ್ಯ ಯು/ಎಸ್ 138, ಆರ್ಥಿಕ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು (non compoundable ಹೊರತುಪಡಿಸಿ), ಮೆಂಟೆನೆನ್ಸ್ ಪ್ರಕರಣಗಳು (maintenance cases), ಇತರ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ) ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳು). ಬಾಕಿ ಇರುವ ಪ್ರಕರಣ ಯಾವವು?: ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು ಯು/ಎಸ್ 138, ಆರ್ಥಿಕ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು (non compoundable ಹೊರತುಪಡಿಸಿ), ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು (ಜಿಲ್ಲಾ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ), ಸಿವಿಲ್ ಪ್ರಕರಣ(ಬಾಡಿಗೆ, ಅನುಭೋಗದ ಹಕ್ಕುಗಳು ನಿರ್ಬಂಧಾಜ್ಞೆ ಮೊಕದ್ದಮೆ)ಗಳನ್ನು ಲೋಕ ಅದಾಲತ್‍ನಲ್ಲಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದರು. ಹೆಚ್ಚಿನ ಮಾಹಿತಿಗಾಗಿ ನ್ಯಾಯ ಸಂಯೋಗ, ಕಾನೂನು ನೆರವು ಘಟಕ ‘ನ್ಯಾಯ ದೇಗುಲ’ ಮೊದಲನೆ ಮಹಡಿ, ಹೆಚ್.ಸಿದ್ಧಯ್ಯ ರಸ್ತೆ, ಬೆಂಗಳೂರು-560027, ದೂರವಾಣಿ ಸಂಖ್ಯೆ:080-22111730 ಹಾಗೂ ವೆಬ್‍ಸೈಟ್ www.kslsa.kar.nic.in ಸಂಪರ್ಕಿಸಬಹುದು. ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಶಹಾಪುರ/ ಸುರಪುರ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದೂ:08473 252325 ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ನಾಮದೇವ ಕೆ.ಸಾಲಮಂಟಪಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಗುರುವಾರ, ಜನವರಿ 30, 2020

ವಿವಿಧ ಗ್ರಾಮದ ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ
ನಿಷೇಧಿತ ಪ್ಲಾಸ್ಟಿಕ್, ತಂಬಾಕು ಉತ್ಪನ್ನಗಳ ವಶ
ಯಾದಗಿರಿ, ಜನವರಿ ೩೦ (ಕರ್ನಾಟಕ ವಾರ್ತೆ): ಶಹಾಪುರ ಮತ್ತು ವಡಗೇರಾ ತಾಲ್ಲೂಕಿನ ನಾಯ್ಕಲ್, ಕುರಕುಂದ ಹಾಗೂ ಇನ್ನಿತರ ಗ್ರಾಮಗಳ ಸುಮಾರು ೨೫ಕ್ಕೂ ಹೆಚ್ಚು ಸ್ಟಾಲ್, ಮಳಿಗೆ, ಅಂಗಡಿಗಳ ಮೇಲೆ ಇತ್ತೀಚೆಗೆ ದಾಳಿ ನಡೆಸಿದ ಅಧಿಕಾರಿಗಳು ಪ್ಲಾಸ್ಟಿಕ್, ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು, ೬೦೦೦ ರೂ.ಗಿಂತ ಹೆಚ್ಚು ದಂಡ ವಿಧಿಸಿದ್ದಾರೆ. ಸೆಕ್ಷೆನ್ ೫ರಲ್ಲಿ ೬ ನೋಟಿಸ್ ಹಾಗೂ ಸೆಕ್ಷೆನ್ ೭ರಲ್ಲಿ ೩ ನೋಟಿಸ್ ನೀಡಿದ್ದಾರೆ. ೬ರಿಂದ ೧೮ ವರ್ಷದೊಳಗೆ ಬರುವ ಮಕ್ಕಳನ್ನು ಸರಕು ಸಾಗಾಣೆ ವಾಹನಗಳಲ್ಲಿ ಹೊಲಗದ್ದೆ, ಕೂಲಿ, ಕೃಷಿ ಆಧಾರಿತ ಹಾಗೂ ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಗ್ಯಾರೇಜ್, ಬಾರ್ ಅಂಗಡಿ ಹಾಗೂ ಇನ್ನಿತರ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಕಂಡುಬAದಲ್ಲಿ ದಂಡದ ಜೊತೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳು ಎಚ್ಚರಿಕೆ ನೀಡಿದರು. ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ದಾಳಿ ನಡೆಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದು ನಿಷೇಧಿಸಲಾಗಿದ್ದು, ಉಲ್ಲಂಘಿಸಿದಲ್ಲಿ ೨೫೦೦೦ ರೂ.ಗಳವರೆಗೆ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ಹೇಳಿದರು.
ಬಾಲಕಾರ್ಮಿಕ ಪದ್ಧತಿ ೧೯೮೬ರ ಕಾಯ್ದೆಯಡಿಯಲ್ಲಿ ೬ ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಅನಿರೀಕ್ಷಿತ ತಪಾಸಣೆ ವೇಳೆ ಪತ್ತೆಯಾದ ಮಕ್ಕಳ ದಾಖಲೆಗಳನ್ನು ವೀಕ್ಷಿಸಿ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಲು ಸೂಚಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದಲ್ಲಿ ಮಾಲೀಕರಿಗೆ ೫೦,೦೦೦ ರೂ. ಗಳ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲು ವಾಸ ಕೂಡ ವಿಧಿಸಬಹುದು ತಿಳಿಸಿದರು. ಕಾರ್ಮಿಕ ನಿರೀಕ್ಷಕರಾದ ಶಿವಶಂಕರ ಬಿ.ತಳವಾರ ಅವರು ಮಾತನಾಡಿ, ಸಾಕಷ್ಟು ಬಾರಿ ಜಾಥಾ ಮೂಲಕ, ಆಟೊ ಪ್ರಚಾರ, ಕರಪತ್ರಗಳ ವಿತರಣೆ, ಕಾನೂನು ಅರಿವು- ನೆರವು ಕಾರ್ಯಕ್ರಮಗಳು ಮತ್ತು ಹಲವಾರು ಬಾರಿ ಅನಿರೀಕ್ಷಿತ ತಪಾಸಣೆ, ದಾಳಿ ಮಾಡಿ ಸಾರ್ವಜನಿಕರಿಗೆ ಹಾಗೂ ಸಬಂಧಿಸಿದ ಅಂಗಡಿ ಮಾಲೀಕರುಗಳಿಗೆ ಮಾಹಿತಿ ನೀಡಿದರೂ ಸಹ ಹಲವಾರು ಅಂಗಡಿ ಮಾಲೀಕರು ನಿಯಮಗಳನ್ನು ಉಲ್ಲಂಘಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದು, ಬಹಿರಂಗವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷಿö್ಮÃ ಸಜ್ಜನ್ ಅವರು ಮಾತನಾಡಿ, ಕೋಟ್ಪಾ-೨೦೦೩ ಕಾಯ್ದೆಯಡಿಯಲ್ಲಿ ಸೆಕ್ಷನ್ ೪, ೫, ೬, ೬ಎ, ೬ಬಿ ಮತ್ತು ೭ರ ಪ್ರಕಾರ ಸಂಬAಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೊರೆಂಟ್, ಬಾರ್, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ ೧೦೦ ಮೀಟರ್ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬAಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದರು. ಕಾರ್ಮಿಕ ಇಲಾಖೆಯ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೊತ್ವಾಲ್ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೩೦ (ಕರ್ನಾಟಕ ವಾರ್ತೆ): ೨೦೧೭-೧೮ನೇ ಸಾಲಿನ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಲಘು ವಾಹನ ಚಾಲನಾ ತರಬೇತಿ ಸೌಲಭ್ಯ ಪಡೆಯಲು ಶಹಾಪುರ ನಗರಸಭೆ ವ್ಯಾಪ್ತಿಯ ೧೮-೪೦ ವರ್ಷದೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಸಿ-೧೨, ಎಸ್.ಟಿ-೫, ಅಲ್ಪಸಂಖ್ಯಾತರು-೧೦, ಮಹಿಳೆ -೨೩, ಸಾಮಾನ್ಯ-೨೦ ಸೇರಿ ಒಟ್ಟು ೭೦ ಭೌತಿಕ ಗುರಿ ಇದ್ದು, ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ, ಫೆಬ್ರುವರಿ ೧೧ರೊಳಗೆ ನಗರಸಭೆ ಕಾರ್ಯಾಲಯಕ್ಕೆ ದ್ವೀಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರಸಭೆಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟೆಂಡರ್ ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೩೦ (ಕರ್ನಾಟಕ ವಾರ್ತೆ): ೨೦೧೭-೧೮ನೇ ಸಾಲಿನ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಶಹಾಪುರ ನಗರಸಭೆ ವ್ಯಾಪ್ತಿಯ ಅಭ್ಯರ್ಥಿಗಳಿಗೆ ಲಘು ವಾಹನ ಚಾಲನಾ ತರಬೇತಿ ನೀಡಲು ಅರ್ಹ ಸಂಸ್ಥೆಗಳಿAದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಗೆ ನಿಗದಿಪಡಿಸಿದ ಮೊತ್ತ ೩.೩೨ ಲಕ್ಷ ರೂ. ಇದ್ದು, ಇಎಂಡಿ ಮೊತ್ತ ೧೬,೬೨೫ ರೂ. ಇರುತ್ತದೆ. ಅಗತ್ಯ ದಾಖಲೆಗಳನ್ನು ಫೆಬ್ರುವರಿ ೧೧ರೊಳಗೆ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಫೆಬ್ರುವರಿ ೧೨ರಂದು ಸಂಜೆ ೪ ಗಂಟೆಯೊಳಗೆ ಟೆಂಡರ್ ತೆರೆಯಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರಸಭೆಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಬರಹಗಾರರಿಂದ ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೩೦ (ಕರ್ನಾಟಕ ವಾರ್ತೆ): ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಹಾಗೂ ಹೊರ ರಾಜ್ಯಗಳ ಕನ್ನಡ ಬರಹಗಾರರಿಗಾಗಿ ೨೦೨೦ರ ಮಾರ್ಚ್ ತಿಂಗಳಲ್ಲಿ ಮೂರು ದಿನಗಳ “ದಕ್ಷಿಣ ಭಾರತ ಮಟ್ಟದ ಕನ್ನಡ ಕಾವ್ಯ ಕಮ್ಮಟ”ವನ್ನು ಕಾಸರಗೋಡಿನಲ್ಲಿ ಆಯೋಜಿಸಲಾಗಿದೆ. ಆಸಕ್ತ ೨೦ರಿಂದ ೪೦ ವಯೋಮಿತಿಯ ಹಾಗೂ ಕನ್ನಡ ಕಾವ್ಯ ರಚನೆಯಲ್ಲಿ ತೊಡಗಿರುವ ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳ ಭಾಗದ ಅಭ್ಯರ್ಥಿಗಳು ಫೆಬ್ರುವರಿ ೧೫ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳನ್ನು ಅಕಾಡೆಮಿಯ ವೆಬ್‌ಸೈಟ್: http://karnatakasahithyaacademy.org ನಲ್ಲಿ ಪಡೆದುಕೊಳ್ಳಬಹುದು ಎಂದು ರಿಜಿಸ್ಟಾçರ್ ಎನ್.ಕರಿಯಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.೩೦ರಿಂದ ಫೆ.೧೩ರವರೆಗೆ ಸ್ಪರ್ಶ್ ಕುಷ್ಠ ಅರಿವು ಆಂದೋಲನ
ಜಿಲ್ಲೆಯನ್ನು ಕುಷ್ಠರೋಗದಿಂದ ಮುಕ್ತಗೊಳಿಸಲು ಪಣ
-ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಜನವರಿ ೩೦ (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಜನವರಿ ೩೦ರಿಂದ ಫೆಬ್ರುವರಿ ೧೩ರವರೆಗೆ ಸ್ಪರ್ಶ್ ಕುಷ್ಠ ಅರಿವು ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಮಹಾತ್ಮ ಗಾಂಧೀಜಿಯವರ ಸ್ಮರಣೆಯಲ್ಲಿ ನಮ್ಮ ಜಿಲ್ಲೆಯನ್ನು ಕುಷ್ಠರೋಗದಿಂದ ಮುಕ್ತಗೊಳಿಸಲು ಪಣ ತೊಟ್ಟು ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಕುಷ್ಠ ವಿಭಾಗ) ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಸ್ಪರ್ಶ್ ಕುಷ್ಠ ಅರಿವು ಆಂದೋಲನಕ್ಕೆ ಚಾಲನೆ ನೀಡಿದ ನಂತರ ಪ್ರತಿಜ್ಞಾವಿಧಿ ಬೋಧಿಸಿ, ಅವರು ಮಾತನಾಡಿದರು. ಕುಷ್ಠರೋಗಿಗಳಿಗೆ ಸಮಾಜದಲ್ಲಿ ಯಾವುದೇ ರೀತಿಯಾದ ತಾರತಮ್ಯಗಳಾಗದಂತೆ ಎಚ್ಚರವಹಿಸಬೇಕು. ಇತರರಿಂದಲೂ ಶೋಷಣೆಗಳಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಜಿಲ್ಲೆಯಲ್ಲಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು “ಕುಷ್ಠರೋಗ ಮುಕ್ತ ಜಿಲ್ಲೆ” ಎಂಬ ಹೆಗ್ಗಳಿಕೆ ತರಲು ನಾವೆಲ್ಲರೂ ಬದ್ಧರಾಗಬೇಕು. ಸಾಮಾಜಿಕ ಕಳಂಕ-ಪಿಡುಗುಗಳನ್ನು ಒಗ್ಗಟ್ಟಿನಿಂದ ಹೋಗಲಾಡಿಸಿ, ದೌರ್ಜನ್ಯಕ್ಕೊಳಗಾದ ಕುಷ್ಠರೋಗಿಗಳನ್ನು ಮುಖ್ಯವಾಹಿನಿಗೆ ತರಬೇಕಿದೆ. ಕುಷ್ಠರೋಗವನ್ನು ಸುಲಭವಾಗಿ ಪತ್ತೆ ಹಚ್ಚಿ, ಸಂಪೂರ್ಣವಾಗಿ ಗುಣಪಡಿಸಬಹುದು. ಈ ನಿಟ್ಟಿನಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆಗೊಳಪಡಿಸಿ ಬಾಪೂಜಿಯವರ ನಂಬಿಕೆ ಮತ್ತು ಸದುದ್ದೇಶಗಳನ್ನು ಸಾಕಾರಗೊಳಿಸಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಅವರು ಕರೆ ನೀಡಿದರು.

ಕುಷ್ಠರೋಗವು ದೇವರ ಶಾಪ ಅಥವಾ ಯಾವುದೋ ಪಾಪದ ಕರ್ಮದ ಫಲವಲ್ಲ. ಈ ಕಾಯಿಲೆಯು “ಮೈಕೊಬ್ಯಾಕ್ಟೀರಿಯಂ ಲೆಪ್ರೆ” ಎಂಬ ರೋಗಾಣುವಿನಿಂದ ಬರುತ್ತದೆ. ಚರ್ಮದ ಮೇಲಿನ ತಿಳಿ, ಬಿಳಿ, ತಾಮ್ರ ಬಣ್ಣದ ಮಚ್ಚೆಗಳಿದ್ದರೆ ಗುಪ್ತವಾಗಿರಿಸದೆ ವೈದ್ಯರಿಗೆ ತೋರಿಸಬೇಕು. ಈ ಮಚ್ಚೆಗಳ ಮೇಲೆ ಸ್ಪರ್ಶ ಜ್ಞಾನ ಇರುವುದಿಲ್ಲ. ರೋಗದ ಔಷಧಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯುತ್ತದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮನೋಭಾವದಿಂದ ಕುಷ್ಠರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆಶಾ ಕಾರ್ಯಕರ್ತೆಯರು, ಎಎನ್‌ಎಮ್ ಮತ್ತು ಆರೋಗ್ಯ ಸಿಬ್ಬಂದಿಗಳು ಮನೆ-ಮನೆಗೆ ಭೇಟಿ ನೀಡಿ ಜಿಲ್ಲೆಯಲ್ಲಿ ೧೭ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಈ ೧೭ ಜನರಿಗೆ ಸೂಕ್ತ ರೀತಿಯ ಚಿಕಿತ್ಸೆ ನೀಡಿ, ಗುಣಪಡಿಸಲು ವೈದ್ಯರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಕುಷ್ಠರೋಗದ ಬಗ್ಗೆ ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. ಪ್ರತಿಶತ ಗುಣಪಡಿಸಬಹುದಾದ ರೋಗವಾಗಿದ್ದು, ರೋಗಿಗಳೊಂದಿಗೆ ಯಾರೂ ತಾರತಮ್ಯ ಮಾಡಬಾರದು. ವೈದ್ಯರ ಸಲಹೆ ಮೇರೆಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ ಅವರು ಮಾತನಾಡಿ, ಕುಷ್ಠರೋಗ ನಿವಾರಣೆಗೆ ಸರ್ಕಾರದಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಇಲಾಖೆಯಿಂದ ಮನೆಮನೆಗೆ ಭೇಟಿ ನೀಡಿ ಕೂಡ ಪತ್ತೆ ಹಚ್ಚಲಾಗುತ್ತಿದೆ. ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಭಾಗಿತ್ವ ಮುಖ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಭಗವಂತ ಅನವಾರ ಅವರು ಮಾತನಾಡಿ, ಕುಷ್ಠರೋಗವು ವಂಶಪಾರAಪರಿಕವಾಗಿ ಹರಡುವುದಿಲ್ಲ. ಬಡವ-ಶ್ರೀಮಂತ ಎಂಬ ಭೇದವಿಲ್ಲ. ಇಂಜಿನಿಯರ್‌ಗೂ ಈ ರೋಗ ಬಂದ ಉದಾಹರಣೆ ಇದೆ. ಚಿಕಿತ್ಸೆ ಹೊಂದದ ಕುಷ್ಠರೋಗಿ ಸೀನಿದಾಗ ಅಥವಾ ಕೆಮ್ಮಿದಾಗ ಹೊರಬರುವ ಬ್ಯಾಕ್ಟೀರಿಯಾದಿಂದ ಕುಟುಂಬದಲ್ಲಿ ಅಥವಾ ಯಾರಿಗೆ ಬೇಕಾದರೂ ಈ ರೋಗ ಹರಡಬಹುದು. ಕುಷ್ಠರೋಗ ಕಾಣಿಸಿಕೊಳ್ಳಲು ೩ ವರ್ಷದಿಂದ ೨೫ ವರ್ಷ ಬೇಕು ಎಂದು ತಿಳಿಸಿದರು.

ಕಾಯಿಲೆ ಹೊಂದಿದವರನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಶೇ.೧೦೦ರಷ್ಟು ಗುಣಮುಖವಾಗುತ್ತಾರೆ. ಮೈಕೊಬ್ಯಾಕ್ಟೀರಿಯಂ ಲೆಪ್ರೆ ರೋಗಾಣು ಹರಡಿದ ವ್ಯಕ್ತಿಯು ಪ್ರಾರಂಭಿಕ ಹಂತ (ಪಿಬಿ-ಪಾಸಿಬೆಸಿಲ್ಲರಿ ಹಂತ)ದಲ್ಲಿ ಚಿಕಿತ್ಸೆ ಪಡೆಯದಿದ್ದರೆ ೧೮ ತಿಂಗಳ ನಂತರ ಅದು ಕುಷ್ಠರೋಗ (ಎಂಬಿ-ಮಲ್ಟಿಬೆಸಿಲ್ಲರಿ)ವಾಗಿ ಪರಿವರ್ತನೆಗೊಳ್ಳುತ್ತದೆ. ತದನಂತರ ವ್ಯಕ್ತಿಯಲ್ಲಿ ೧೫ ದಿನದಿಂದ ೧ ತಿಂಗಳಲ್ಲಿ ಅಂಗವಿಕಲತೆ ಉಂಟಾಗಬಹುದು ಎಂದು ಅವರು ಮಾಹಿತಿ ನೀಡಿದರು. ಆಂದೋನದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕುಷ್ಠರೋಗದ ಜಾಗೃತಿ ಬಗೆಗಿನ ಜಿಲ್ಲಾಡಳಿತದ ಸಂದೇಶ ಓದಲಾಗುವುದು. ಸುಮಾರು ೨೫ ಪ್ರಶ್ನಾವಳಿಗಳ ಜೊತೆಗೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉತ್ತರಗಳನ್ನು ಹೇಳುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವರು ಎಂದು ಹೇಳಿದರು. ಖ್ಯಾತ ಹಾಸ್ಯ ಕಲಾವಿದರಾದ ಬಸವರಾಜ ಮಹಾಮನಿ ಅವರು ಹಾಸ್ಯದ ಮೂಲಕ ಕುಷ್ಠರೋಗದ ಕುರಿತು ಜಾಗೃತಿ ಮೂಡಿಸಿದರು. ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನಾಚರಣೆ ಅಂಗವಾಗಿ ಮೌನಾಚರಣೆ ಮಾಡಲಾಯಿತು. ಕುಷ್ಠರೋಗದಿಂದ ಗುಣಮುಖ ಹೊಂದಿದ ರಾಯಪ್ಪ ಅವರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಆಂದೋಲನ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಮಹಾತ್ಮ ಗಾಂಧೀಜಿಯವರು ಕುಷ್ಠ ರೋಗ ವಿರುದ್ಧದ ಕೊಡುಗೆಯ ಬಗ್ಗೆ ಯರಗೋಳದ ಭೀಮಜ್ಯೋತಿ ಕಲಾತಂಡ ಪ್ರದರ್ಶಿಸಿದ ನಾಟಕ ಗಮನ ಸೆಳೆಯಿತು. ಡಿವೈಎಸ್‌ಪಿ ಯು.ಶರಣಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ನಾರಾಯಣಪ್ಪ ಹಾಗೂ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಅನಿತಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಹಿರಿಯ ಆರೋಗ್ಯ ಸಹಾಯಕರಾದ ಮಹಿಪಾಲರೆಡ್ಡಿ ಮಾಲಿಪಾಟೀಲ್ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ ನಿರೂಪಿಸಿದರು.

ಬುಧವಾರ, ಜನವರಿ 29, 2020

ಇಂದು ಸ್ಪರ್ಶ್ ಕುಷ್ಠ ಅರಿವು ಆಂದೋಲನ
ಯಾದಗಿರಿ, ಜನವರಿ 29 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಕುಷ್ಠ ವಿಭಾಗ) ಸಂಯುಕ್ತಾಶ್ರಯದಲ್ಲಿ ಸ್ಪರ್ಶ್ ಕುಷ್ಠ ಅರಿವು ಆಂದೋಲನ ಉದ್ಘಾಟನೆ ಕಾರ್ಯಕ್ರಮವನ್ನು ಜನವರಿ 30ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನಾಗನಗೌಡ ಕಂದಕೂರ, ನರಸಿಂಹ ನಾಯಕ (ರಾಜುಗೌಡ), ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಬಿ.ಜಿ.ಪಾಟೀಲ್, ಶರಣಪ್ಪ ಮಟ್ಟೂರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಖ್ಯಾತ ಹಾಸ್ಯ ಕಲಾವಿದರಾದ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಫೆ.1ರಂದು ಮಡಿವಾಳ ಮಾಚಿದೇವರ ಜಯಂತಿ
ಯಾದಗಿರಿ, ಜನವರಿ 29 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು ಫೆಬ್ರುವರಿ 1ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಯಾಮರೆಡ್ಡಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಭೀಮರಾಯ ಲಿಂಗೇರಿ ಅವರು ವಿಶೇಷ ಉಪನ್ಯಾಸ ನೀಡುವರು.

ಆರ್ಯ ವೈಶ್ಯ ಜನಾಂಗದ ಸೌಲಭ್ಯಗಳಿಗಾಗಿ ಜಾತಿ ಪ್ರಮಾಣ ಪತ್ರ
ಯಾದಗಿರಿ, ಜನವರಿ 29 (ಕರ್ನಾಟಕ ವಾರ್ತೆ): ಆರ್ಯ ವೈಶ್ಯ ಜನಾಂಗದವರಿಗೆ ಈ ಹಿಂದೆ ಜಾತಿ ಪ್ರಮಾಣ ಪತ್ರವನ್ನು ವಿದ್ಯಾಭ್ಯಾಸದ ಸಲುವಾಗಿ 18 ವರ್ಷ ಒಳಪಟ್ಟವರಿಗೆ ಮಾತ್ರ ನೀಡಲಾಗುತ್ತಿತ್ತು. ಕರ್ನಾಟಕ ರಾಜ್ಯ ಸರ್ಕಾರವು ಇನ್ಮುಂದೆ ಆರ್ಯ ವೈಶ್ಯ ಜನಾಂಗದವರಿಗೆ ಶಾಲಾ ಪ್ರವೇಶಕ್ಕೆ ಮಾತ್ರವಲ್ಲದೆ ಸರ್ಕಾರಿ ಸಂಸ್ಥೆಗಳಿಂದ ಸಾಲ, ಸಹಾಯಧನ ಮತ್ತು ತರಬೇತಿ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನಮೂನೆ-ಜಿ ಯಲ್ಲಿ ಪಡೆಯಲು 2019ರ ಡಿಸೆಂಬರ್ 16ರಂದು ಆದೇಶಿಸಲಾಗಿದೆ.
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು/ ಶೈಕ್ಷಣಿಕ ಸಾಲ ಯೋಜನೆ ಮತ್ತು ಇತರೆ ಸರ್ಕಾರಿ ಸಂಸ್ಥೆಗಳಿಂದ ಸಾಲ-ಸೌಲಭ್ಯಗಳನ್ನು ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರವು ಕಡ್ಡಾಯವಾಗಿರುತ್ತದೆ. ಆದ್ದರಿಂದ ಆರ್ಯ ವೈಶ್ಯ ಸಮುದಾಯದವರು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನಮೂನೆ-ಜಿ ಯಲ್ಲಿ ಪಡೆಯಲು ನಾಡಕಚೇರಿ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ನಾಡಕಚೇರಿಯ ಅಂತರ್ಜಾಲ www.nadakacheri.karnataka.gov.in  ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 9448451111, ಇ-ಮೇಲ್ support.kacdc@karnataka.gov.in ಅಥವಾ ನಾಡಕಚೇರಿಯ ಉಚಿತ ಸಹಾಯವಾಣಿ: 18005990044 ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಗರ, ತಿಂಥಣಿ ಜಾತ್ರೆಗೆ 70 ವಿಶೇಷ ಬಸ್ ವ್ಯವಸ್ಥೆ
ಯಾದಗಿರಿ, ಜನವರಿ 29 (ಕರ್ನಾಟಕ ವಾರ್ತೆ): ಶಹಾಪುರ ತಾಲ್ಲೂಕಿನ ಸಗರದ ಶ್ರೀ ಯಲ್ಲಮ್ಮ ಮತ್ತು ಸುರಪುರ ತಾಲ್ಲೂಕಿನ ತಿಂಥಣಿ ಶ್ರೀ ಮೌನೇಶ್ವರ ದೇವರ ಜಾತ್ರೆಗೆ ಬರುವ ಭಕ್ತಾದಿ ಪ್ರಯಾಣಿಕರ ಸಾರಿಗೆ ಅನುಕೂಲಕ್ಕಾಗಿ ಫೆಬ್ರುವರಿ 3ರಿಂದ 10ರ ವರೆಗೆ ಯಾದಗಿರಿ ವಿಭಾಗದಿಂದ 70 ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ.
ಈ ವಿಶೇಷ ಬಸ್‍ಗಳು ಯಾದಗಿರಿ, ಶಹಾಪುರ, ಸುರಪುರ, ಗುರುಮಠಕಲ್, ಕಲಬುರಗಿ, ತಾಳಿಕೋಟಿ, ವಿಜಯಪುರ, ಮುದ್ದೇಬಿಹಾಳ, ನಾರಾಯಣಪುರ, ಹುಣಸಗಿ, ಕೆಂಭಾವಿ, ಸಿಂಧಗಿ ಮುಂತಾದ ಸ್ಥಳಗಳಿಗೆ ಕಾರ್ಯಾಚರಣೆ ಮಾಡುತ್ತವೆ. ಸಾರ್ವಜನಿಕ ಪ್ರಯಾಣಿಕರು ವಿಶೇಷ ಬಸ್‍ಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೊಗೇರಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ

-ನ್ಯಾ. ನಾಮದೇವ ಕೆ.ಸಾಲಮಂಟಪಿ

ಯಾದಗಿರಿ, ಜನವರಿ 29 (ಕರ್ನಾಟಕ ವಾರ್ತೆ): ಗಂಡುಮಕ್ಕಳಂತೆ ಹೆಣ್ಣುಮಕ್ಕಳಿಗೂ ಪೋಷಕರು ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಬೇಧ-ಭಾವ ಮಾಡಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ನಾಮದೇವ ಕೆ.ಸಾಲಮಂಟಪಿ ಅವರು ಸಲಹೆ ನೀಡಿದರು.
ನಗರದ ಸ್ಟೇಷನ್ ಬಜಾರ ಸರಕಾರಿ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಶಕ್ತಿ ಕೇಂದ್ರ ಯೋಜನೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ “ಬೇಟಿ ಬಚಾವೋ ಬೇಟಿ ಪಡಾವೋ” ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ ಅವರು ಮಹಿಳೆಯರಿಗೆ ಇರುವ ಸ್ಥಾನಮಾನಗಳ ಬಗ್ಗೆ ಹಾಗೂ ಸಂವಿಧಾನದಲ್ಲಿ ಮಹಿಳೆಯರಿಗೆ ಕಾನೂನು ಶಿಕ್ಷಣದ ಬಗ್ಗೆ ವಿವರಿಸಿದರು.

ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಅವರು ಅತಿಥಿಗಳಾಗಿ ಆಗಮಿಸಿದ್ದರು. ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ.ಮಣ್ಣೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಿಎಸ್‍ಐ ಕೃಷ್ಣಪ್ಪ ಸುಬೇದಾರ, ಸಿಆರ್‍ಪಿ ಶಿವರಾಜ ಪಾಟೀಲ್, ಸರಕಾರಿ ಪ್ರೌಢ ಶಾಲೆಯ ಮುಖ್ಯಗುರು ಬಸ್ಸಪ್ಪ ಅವರು ಉಪಸ್ಥಿತರಿದ್ದರು.
ಎಂ.ಎಸ್.ಕೆ ಯೋಜನೆಯ ಜಿಲ್ಲಾ ಸಂಯೋಜಕರಾದ ಸಂಗೀತಾ ಪೂಜಾರಿ ಅವರು ಬೇಟಿ ಬಚಾವೋ ಬೇಟಿ ಪಡಾವೋ ಪ್ರತಿಜ್ಞಾ ವಿಧಿ ಬೋಧಿಸಿದರು. ಅಂಗನವಾಡಿ ಮೇಲ್ವಿಚಾರಕಿಯರು ಮತ್ತು ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಮಹಿಳಾ ಶಕ್ತಿ ಕೇಂದ್ರ ಯೋಜನೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಶಿವಮಂಗಳ ಎಂ.ಪ್ರಸನ್ನ ಅವರು ಸ್ವಾಗತಿಸಿದರು. ಅಂಗನವಾಡಿ ಮೇಲ್ವಿಚಾರಕಿ ಶರಣಮ್ಮ ಎಸ್.ಸಜ್ಜನ್ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮೊದಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಸ್ಟೇಷನ್ ಬಜಾರ ಶಾಲೆಯಿಂದ ಜಾಗೃತಿ ಜಾಥಾ ಹಾಗೂ ವಿದ್ಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಿಸಲಾಯಿತು.

ಮಂಗಳವಾರ, ಜನವರಿ 28, 2020


ಜ.೩೦ ರಿಂದ ಸ್ಪರ್ಶ ಕುಷ್ಠ ಅರಿವು ಆಂದೋಲನ ಕಾರ್ಯಕ್ರಮ
-ಶಂಕರಗೌಡ ಎಸ್.ಸೋಮನಾಳ
ಯಾದಗಿರಿ, ಜನವರಿ ೨೮ (ಕರ್ನಾಟಕ ವಾರ್ತೆ): ಸ್ಪರ್ಶ ಕುಷ್ಠ ಅರಿವು ಆಂದೋಲನ-೨೦೨೦ ರ ಕಾರ್ಯಕ್ರಮವನ್ನು ಜನವರಿ ೩೦ರಿಂದ ಫೆಬ್ರುವರಿ ೧೩ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿಗಳಾದ ಶಂಕರಗೌಡ ಎಸ್.ಸೋಮನಾಳ ಅವರು ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಸ್ಪರ್ಶ ಕುಷ್ಠ ಅರಿವು ಆಂದೋಲನ -೨೦೨೦ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಸ್ಪರ್ಶ ಕುಷ್ಠ ಅರಿವು ಆಂದೋಲನ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಜನವರಿ ೩೦ರಂದು ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಉದ್ಘಾಟಿಸಿ ಸಂದೇಶ ನೀಡುವರು ಎಂದು ಅವರು ಹೇಳಿದರು. ಅಲ್ಲದೆ ಜಿಲ್ಲೆಯ ೧೨೩ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಗ್ರಾಮಸಭೆಗಳನ್ನು ನಡೆಸಿ, ಆಯಾ ಗ್ರಾಮ ಪಂಚಾಯತಿ ಅಧ್ಯಕರು ಕುಷ್ಠರೋಗ ನಿರ್ಮೂಲನೆ ಬಗ್ಗೆ ಸಾರ್ವಜನಿಕರಲ್ಲಿ ಮನವಿ ಮಾಡುವರು. ಮಹಾತ್ಮ ಗಾಂಧೀಜಿಯವರ ಕುಷ್ಠ ವಿರೋಧಿ ಕೊಡುಗೆ ಬಗ್ಗೆ ಪಾತ್ರಾಭಿನಯ ಕಾರ್ಯಕ್ರಮ ಮಾಡಲಾಗುವುದು. ಸಪ್ನಾ-ರೋಲ್ ಪ್ಲೇ, ಕುಷ್ಠರೋಗದ ಬಗ್ಗೆ ಪ್ರಶ್ನೋತ್ತರ ಕಾರ್ಯಕ್ರಮ ಜಿಲ್ಲೆಯಾದ್ಯಂತ ಐಇಸಿ ಕಾರ್ಯಕ್ರಮ ಸೇರಿದಂತೆ ಜಿಲ್ಲೆಯಾದ್ಯಂತ ಐಇಸಿ ಕಾರ್ಯಕ್ರಮ ನಡೆಸಲಾಗುವುದು ಎಂದು ಅವರು ಹೇಳಿದರು.
ಈ ಅವಧಿಯಲ್ಲಿ ಆಶಾ ಮತ್ತು ಕಿರಿಯ ಆರೋಗ್ಯ ಸಹಾಯಕರು ಸಮೀಕ್ಷೆ ನಡೆಸಿ ಕುಷ್ಠ ರೋಗಿಗಳನ್ನು ಗುರುತಿಸಲಿದ್ದು,  ಬಳಿಕ ಇವರಿಗೆ ಚಿಕಿತ್ಸೆ ಕೊಡಲಾಗುವುದು ಎಂದು ಅವರು ಹೇಳಿದರು. ಕುಷ್ಠರೋಗವು ಮೈಕ್ರೋಬ್ಯಾಕ್ಟೀರಿಯಂ ಲೆಪ್ರೆಯಿಂದ ಉಂಟಾಗುವ ರೋಗ. ಇದು ಅನುವಂಶಿಕ ರೋಗವಲ್ಲ. ಕುಷ್ಠ ರೋಗವು ಶಾಪಗ್ರಸ್ತವೂ ಅಲ್ಲ. ಪಾಪದ ಫಲವೂ ಅಲ್ಲ ಎಂದು ಹೇಳಿದ ಅವರು,  ಚರ್ಮದ ಮೇಲೆ ತಿಳಿ-ಬಿಳಿ ತಾಮ್ರವರ್ಣದ ಮಚ್ಚೆಗಳಿಗೆ ಸ್ಪರ್ಶ ಜ್ಞಾನವಿರುವುದಿಲ್ಲ. ಈ ರೋಗದ ಲಕ್ಷಣಗಳು ಕಂಡು ಬಂದಾಗ ಗ್ರಾಮದಲ್ಲಿನ ಆಶಾ ಕಾರ್ಯಕರ್ತೆಯರು, ಎಎನ್‌ಎಮ್ ಹಾಗೂ ಆರೋಗ್ಯ ಕಾರ್ಯಕರ್ತೆಯರಿಗೆ ತಿಳಿಸಿ ಮಾರ್ಗದರ್ಶನ ಪಡೆಯಬಹುದು ಎಂದರು. ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಎಮ್‌ಡಿಟಿ ಚಿಕಿತ್ಸೆ ಉಚಿತವಾಗಿ ಲಭ್ಯವಿರುತ್ತದೆ. ಈ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು. ಶೀಘ್ರರೋಗ ಪತ್ತೆ ಮಾಡಿ ಗುಣಪಡಿಸುವುದರಿಂದ ಅಂಗವಿಕಲತೆ ತಡೆಗಟ್ಟಬಹುದು, ಅಲ್ಲದೆ ಕುಷ್ಠರೋಗ ಮುಕ್ತರನ್ನಾಗಿಸಬಹುದು ಎಂದು ಅವರು ಹೇಳಿದರು.
ನಮ್ಮ ಜಿಲ್ಲೆಯಲ್ಲಿ ಏಪ್ರಿಲ್-೨೦೧೯ ರಿಂದ ಇಲ್ಲಿಯವರೆಗೆ ೬೬ ರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗಿದೆ. ೨೦೧೯-೨೦ನೇ ಸಾಲಿನಲ್ಲಿ ಎರಡು ಜನರಿಗೆ ಆರ್‌ಸಿಎಸ್(ಶಸ್ತçಚಿಕಿತ್ಸೆ) ಮಾಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಒಬ್ಬರಿಗೆ ಆರ್‌ಸಿಎಸ್(ಶಸ್ತçಚಿಕಿತ್ಸೆ) ಮಾಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಭಗವಂತ ಅನವಾರ ಅವರು ಮಾತನಾಡಿ, ಕುಷ್ಠರೋಗದ ನಿರ್ಮೂಲನೆಗೆ ಎರಡು ವಿಧದ ಚಿಕಿತ್ಸೆಗಳಿದ್ದು ಒಂದು ಮತ್ತು ಎರಡು ವರ್ಷ ಅವಧಿಯ ಚಿಕಿತ್ಸೆ ಇರುತ್ತದೆ. ೨೦೧೮-೧೯ನೇ ಸಾಲಿನಲ್ಲಿ ೫೨ ಜನ ಕುಷ್ಠರೋಗ ಹೊಂದಿದವರನ್ನು ಗುರುತಿಸಿ ಅದರಲ್ಲಿ ೪೦ಜನರಿಗೆ ಯಶಸ್ವಿ ಚಿಕಿತ್ಸೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ಆಂದೋಲನದಲ್ಲಿ ಕುಷ್ಠರೋಗ ಹೊಂದಿದವರನ್ನು ಸನ್ಮಾನಿಸಲಾಗುವುದು, ಅಲ್ಲದೆ ಜನಪ್ರಿಯ ವ್ಯಕ್ತಿಯಿಂದ ಕಾರ್ಯಕ್ರಮದ ಕುರಿತು ಪ್ರಚಾರ ಮಾಡಲಾಗುವುದು ಎಂದು ಅವರು ಹೇಳಿದರು. ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ದೇಹದ ಮೇಲೆ ಸ್ಪರ್ಶಜ್ಞಾನವಿಲ್ಲದ ಮಚ್ಚೆಗಳು, ತ್ವಚೆಯ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು ಇವುಗಳಲ್ಲಿ ಯಾವುದೇ ಚಿಹ್ನೆಗಳು ಕಂಡುಬAದಲ್ಲಿ ತಕ್ಷಣವೇ ಸಮೀಪದ ಸರಕಾರಿ ಆಸ್ಪತ್ರೆÀಯಲ್ಲಿ ಪರೀಕ್ಷಿಸಿಕೊಳ್ಳಿ, ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತವಾಗಿ ಲಭ್ಯವಿದೆ ಎಂದು ಅವರು ಮಾಹಿತಿ ನೀಡಿದರು. ಕುಷ್ಠರೋಗ ಜಾಗೃತಿ ಅಭಿಯಾನದ ಮತ್ತು ಪ್ರತಿಜ್ಞಾವಿಧಿಯನ್ನು ಒಳಗೊಂಡ ಭಿತ್ತಿಪತ್ರಗಳನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಿರಿಯ ಆರೋಗ್ಯ ಸಹಾಯಕರಾದ ಶರಣಯ್ಯ ಸ್ವಾಮಿ, ಶರಣಬಸವ ಹೊಸಮನಿ ಅವರು ಇದ್ದರು.

ಸೋಮವಾರ, ಜನವರಿ 27, 2020

ಫೆ.೩ರಿಂದ ತಿಂಥಣಿ ಮೌನೇಶ್ವರ ಜಾತ್ರೆ
ಯಾದಗಿರಿ, ಜನವರಿ ೨೭ (ಕರ್ನಾಟಕ ವಾರ್ತೆ): ಜಿಲ್ಲೆಯ ಸುರಪುರ ತಾಲ್ಲೂಕಿನ ತಿಂಥಣಿ ಗ್ರಾಮದ ಜಗದ್ಗುರು ಶ್ರೀ ಮೌನೇಶ್ವರ ಜಾತ್ರಾ ಮಹೋತ್ಸವ ಫೆಬ್ರುವರಿ ೩ರಿಂದ ೮ರವರೆಗೆ ನಡೆಯಲಿದೆ. ಜಾತ್ರೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ.
ಫೆಬ್ರುವರಿ ೩ರಂದು ದಶಮಿ ಆಚರಣೆ ಅಂಗವಾಗಿ ಸುರಪುರದಿಂದ ತಿಂಥಣಿಗೆ ಪಲ್ಲಕ್ಕಿ ಉತ್ಸವ ನಡೆಯಲಿದೆ. ಫೆ.೪ರಂದು ಏಕಾದಶಿ ಆಚರಣೆ ಇದ್ದು, ಸಾಯಂಕಾಲ ಮಹಾಪ್ರಸಾದ ವ್ಯವಸ್ಥೆ ಇರುತ್ತದೆ. ಫೆ.೫ರಂದು ದ್ವಾದಶಿ ಪಲ್ಲಕ್ಕಿ ಪ್ರಥಮ ಸೇವಾ ನಡೆಯಲಿದೆ. ಫೆ.೬ರಂದು ತ್ರಯೋದಶಿ ಧಾರ್ಮಿಕ ಕಾರ್ಯಕ್ರಮಗಳು ಜಾವಳ, ಸಾಮೂಹಿಕ ಉಪನಯನಗಳು ನಡೆಯಲಿದ್ದು, ರಾತ್ರಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ಫೆ.೭ರಂದು ಚತುದರ್ಶಿ ಸಾಯಂಕಾಲ ೫ ಗಂಟೆಗೆ ರಥೋತ್ಸವ, ಪಲ್ಲಕ್ಕಿಯ ಮಹಾಸೇವಾ ನಡೆಯಲಿದೆ. ಫೆ.೮ರಂದು ಭಾರತ ಹುಣ್ಣಿಮೆ ಆಚರಣೆ ಧೂಳಗಾಯಿ, ಸಾಯಂಕಾಲ ಗುಹಾ ಪ್ರವೇಶ ಕಾರ್ಯಕ್ರಮಗಳು ಜರುಗಲಿವೆ.

ಹೆಚ್೧ಎನ್೧ ಜ್ವರ: ಮುಂಜಾಗ್ರತೆಗೆ ಮನವಿ
ಯಾದಗಿರಿ, ಜನವರಿ ೨೭ (ಕರ್ನಾಟಕ ವಾರ್ತೆ): ತೀವ್ರ ಸ್ವರೂಪದ ಜ್ವರ, ಅತೀ ಭೇದಿ/ವಾಂತಿ, ಅತಿಯಾದ ಮೈ-ಕೈ ಮತ್ತು ತಲೆ ನೋವು, ಕೆಮ್ಮು ಮತ್ತು ಹಳದಿ ಕಫ, ನೆಗಡಿ ಮತ್ತು ಗಂಟಲು ಕೆರೆತ, ಉಸಿರಾಟದ ತೊಂದರೆ ಹೆಚ್೧ಎನ್೧ ರೋಗದ ಲಕ್ಷಣಗಳಾಗಿವೆ. ಹೆಚ್೧ಎನ್೧ ರೋಗದ ಬಗ್ಗೆ ಜಿಲ್ಲೆಯ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮುನ್ನೆಚ್ಚರಿಕೆ ಕ್ರಮಗಳು: ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತç ಅಥವಾ ಟಿಶ್ಯೂ ಕಾಗದದಿಂದ ಮುಚ್ಚಿಕೊಳ್ಳಬೇಕು. ಮೂಗು, ಕಣ್ಣು ಅಥವಾ ಬಾಯಿಯನ್ನು ಮುಟ್ಟುವ ಮೊದಲು ಮತ್ತು ನಂತರ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಚೆನ್ನಾಗಿ ತೊಳೆದುಕೊಳ್ಳಬೇಕು. ಚೆನ್ನಾಗಿ ನಿದ್ದೆ ಮಾಡಬೇಕು. ದೈಹಿಕವಾಗಿ ಚಟುವಟಿಕೆಯಿಂದಿರಬೇಕು ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು. ಧಾರಾಳವಾಗಿ ನೀರು/ದ್ರವ ಪದಾರ್ಥಗಳನ್ನು ಕುಡಿಯುವ ಜೊತೆಗೆ ಪೌಷ್ಟಿಕಾಂಶವಿರುವ ಆಹಾರ ಸೇವಿಸಬೇಕು. ಇದರಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಜನಸಂದಣಿಯಿರುವ ಸ್ಥಳಗಳಿಗೆ ಹೋದಾಗ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಉದಾಹರಣೆಗೆ ರೋಗ ಲಕ್ಷಣವಿರುವ ವ್ಯಕ್ತಿಗಳಿಂದ ದೂರವಿರಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಏನು ಮಾಡಬಾರದು: ಹಸ್ತಲಾಘವ, ಆಲಿಂಗನ ಮಾಡಬಾರದು. ವೈದ್ಯರ ಸಲಹೆ ಇಲ್ಲದೆ ಔಷಧಿಯನ್ನು ತೆಗೆದುಕೊಳ್ಳಬಾರದು. ರಸ್ತೆ ಅಥವಾ ಎಲ್ಲೆಂದರಲ್ಲಿ ಉಗಳಬಾರದು. ಅನಾವಶ್ಯಕವಾಗಿ ಜನಸಂದಣಿ ಪ್ರದೇಶಗಳಿಗೆ ಭೇಟಿ ನೀಡಬಾರದು ಹಾಗೂ ಪ್ರಯಾಣಿಸಬಾರದು. ಫ್ಲೂ ತರಹದ ಚಿಹ್ನೆಗಳಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಎಂದು ಅವರು ತಿಳಿಸಿದ್ದಾರೆ.

ಫೆ.೨೩ರಂದು ಪ್ರಬಂಧ, ಚಿತ್ರಕಲೆ ಸ್ಪರ್ಧೆ
ಯಾದಗಿರಿ, ಜನವರಿ ೨೭ (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ಸೂಕ್ಷö್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿ ಸಂಸ್ಥೆ ಕಲಬುರಗಿ, ಜಿಲ್ಲಾ ಕೈಗಾರಿಕಾ ಕೇಂದ್ರ ಯಾದಗಿರಿ ಮತ್ತು ಯಾದಗಿರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಫೆಬ್ರುವರಿ ೨೩ರಂದು ಯಾದಗಿರಿ ನಗರದ ಚಿತ್ತಾಪುರ ರಸ್ತೆ ಮಾರ್ಗದಲ್ಲಿರುವ ಆರ್.ವಿ.ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸ್ಪರ್ಧೆಯಲ್ಲಿ ೯ನೇ, ೧೦ನೇ, ಪಿ.ಯು.ಸಿ. ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಬಹುದು. ಅಂದು ಬೆಳಿಗ್ಗೆ ೧೧ರಿಂದ ೧೨.೩೦ ಗಂಟೆಯವರೆಗೆ ಪ್ರಬಂಧ ಬರೆಯುವ ಸ್ಪರ್ಧೆ ಹಾಗೂ ಮಧ್ಯಾಹ್ನ ೧ರಿಂದ ೨.೩೦ರ ವರೆಗೆ ಚಿತ್ರಕಲಾ ಸ್ಪರ್ಧೆ ನಡೆಯಲಿದೆ. “ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ" (Role of Small Scale Industries in the Development of Indian Economy) ಸ್ಪರ್ಧೆಯ ವಿಷಯವಾಗಿರುತ್ತದೆ. ಯಾದಗಿರಿ ಜಿಲ್ಲೆಯ ಸಾಂಪ್ರದಾಯಿಕ ಕಲೆಯ ಬಗ್ಗೆ ಚಿತ್ರಕಲೆ ಅಥವಾ ಪೇಂಟಿAಗ್ ಇತ್ಯಾದಿ ಸ್ಪರ್ಧೆಯಾಗಿರುತ್ತದೆ. ವಿದ್ಯಾರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರಬಂಧ ಬರೆಯಬಹುದು. ಎರಡು ವಿಭಾಗಗಳಿಗೆ ಪ್ರತ್ಯೇಕ ಸ್ಪರ್ಧೆಗಳನ್ನು ಒಂದೇ ದಿನ ಏರ್ಪಡಿಸಲಾಗುತ್ತದೆ. ಎರಡು ಸ್ಪರ್ಧೆಗಳ ವಿಜೇತರಿಗೆ ಪ್ರಥಮ ಬಹುಮಾನವಾಗಿ ೧೦,೦೦೦, ದ್ವಿತೀಯ ಬಹುಮಾನ ೭,೫೦೦ ಹಾಗೂ ತೃತೀಯ ಬಹುಮಾನ ೫,೦೦೦ ರೂ.ಗಳು ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುತ್ತದೆ. ಈ ವಿಷಯಕ್ಕೆ ಸಂಬAಧಿಸಿದAತೆ ಮತ್ತು ನಿಗದಿತ ಅರ್ಜಿಗಳಿಗಾಗಿ ಸೂಕ್ಷ್ಮ, ಸಣ್ಣ ಮತ್ತು  ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿ ಸಂಸ್ಥೆ ಕಲಬುರಗಿ ಅಥವಾ ಜಿಲ್ಲಾ ಕೈಗಾರಿಕಾ ಕೇಂದ್ರ ಯಾದಗಿರಿ ಮೊ:೯೬೮೬೦೬೦೮೦೩ ಅಥವಾ ೯೯೪೫೨೦೮೪೨೬ ಸಂಪರ್ಕಿಸಬಹುದಾಗಿದೆ ಎಂದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿ ಸಂಸ್ಥೆ ಕಲಬುರಗಿ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಗ್ರಾಮದ ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ
ನಿಷೇಧಿತ ಪ್ಲಾಸ್ಟಿಕ್, ತಂಬಾಕು ಉತ್ಪನ್ನಗಳ ವಶ
ಯಾದಗಿರಿ, ಜನವರಿ ೨೭ (ಕರ್ನಾಟಕ ವಾರ್ತೆ): ತಾಲ್ಲೂಕಿನ ಬಲಕಲ್, ಚಟ್ನಳ್ಳಿ ಹಾಗೂ ತಂಗಡಗಿ ಗ್ರಾಮಗಳ ಸುಮಾರು ೩೦ಕ್ಕೂ ಹೆಚ್ಚು ಸ್ಟಾಲ್, ಮಳಿಗೆ, ಅಂಗಡಿಗಳ ಮೇಲೆ ಇತ್ತೀಚೆಗೆ ದಾಳಿ ನಡೆಸಿದ ಅಧಿಕಾರಿಗಳು ಪ್ಲಾಸ್ಟಿಕ್, ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು, ೮೦೦೦ ರೂ.ಗಿಂತ ಹೆಚ್ಚು ದಂಡ ವಿಧಿಸಿದ್ದಾರೆ. ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ದಾಳಿ ನಡೆಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದು ನಿಷೇಧಿಸಲಾಗಿದ್ದು, ಉಲ್ಲಂಘಿಸಿದಲ್ಲಿ ೨೫೦೦೦ ರೂ.ಗಳವರೆಗೆ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ಹೇಳಿದರು. ಬಾಲಕಾರ್ಮಿಕ ಪದ್ಧತಿ ೧೯೮೬ರ ಕಾಯ್ದೆಯಡಿಯಲ್ಲಿ ೬ ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಅನಿರೀಕ್ಷಿತ ತಪಾಸಣೆ ವೇಳೆ ಪತ್ತೆಯಾದ ಮಕ್ಕಳ ದಾಖಲೆಗಳನ್ನು ವೀಕ್ಷಿಸಿ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಲು ಸೂಚಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದಲ್ಲಿ ಮಾಲೀಕರಿಗೆ ೫೦,೦೦೦ ರೂ. ಗಳ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲು ವಾಸ ಕೂಡ ವಿಧಿಸಬಹುದು ತಿಳಿಸಿದರು.

ಸಾಕಷ್ಟು ಬಾರಿ ಜಾಥಾ ಮೂಲಕ, ಆಟೊ ಪ್ರಚಾರ, ಕರಪತ್ರಗಳ ವಿತರಣೆ, ಕಾನೂನು ಅರಿವು- ನೆರವು ಕಾರ್ಯಕ್ರಮಗಳು ಮತ್ತು ಹಲವಾರು ಬಾರಿ ಅನಿರೀಕ್ಷಿತ ತಪಾಸಣೆ, ದಾಳಿ ಮಾಡಿ ಸಾರ್ವಜನಿಕರಿಗೆ ಹಾಗೂ ಸಬಂಧಿಸಿದ ಅಂಗಡಿ ಮಾಲೀಕರುಗಳಿಗೆ ಮಾಹಿತಿ ನೀಡಿದರೂ ಸಹ ಹಲವಾರು ಅಂಗಡಿ ಮಾಲೀಕರು ನಿಯಮಗಳನ್ನು ಉಲ್ಲಂಘಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದು, ಬಹಿರಂಗವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷಿö್ಮ ಸಜ್ಜನ್ ಅವರು ಮಾತನಾಡಿ, ಕೋಟ್ಪಾ-೨೦೦೩ ಕಾಯ್ದೆಯಡಿಯಲ್ಲಿ ಸೆಕ್ಷನ್ ೪, ೫, ೬, ೬ಎ, ೬ಬಿ ಮತ್ತು ೭ರ ಪ್ರಕಾರ ಸಂಬAಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೊರೆಂಟ್, ಬಾರ್, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ ೧೦೦ ಮೀಟರ್ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬAಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದರು. ಕಾರ್ಮಿಕ ಇಲಾಖೆಯ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೊತ್ವಾಲ್ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.


ಭಾನುವಾರ, ಜನವರಿ 26, 2020

ವಿದ್ಯಾಮಂಗಲ ಕಾರ್ಯಾಲಯದಲ್ಲಿ ಎರಡು ದಿನ ಪ್ರದರ್ಶನ 
ಫಲಪುಷ್ಪ ಪ್ರದರ್ಶನ, ಸಾವಯವ ಸಿರಿಧಾನ್ಯ ಮೇಳಕ್ಕೆ ಚಾಲನೆ
ಯಾದಗಿರಿ, ಜನವರಿ ೨೬ (ಕರ್ನಾಟಕ ವಾರ್ತೆ): ತೋಟಗಾರಿಕೆ, ಕೃಷಿ ಹಾಗೂ ಕೃಷಿ ಸಂಬAಧಿತ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಸ್ಟೇಷನ್ ರಸ್ತೆಯ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಎರಡು ದಿನಗಳವರೆಗೆ ಹಮ್ಮಿಕೊಂಡಿರುವ ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಭಾನುವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಹೆಚ್ಚಿನ ರೈತರು ಪ್ರದರ್ಶನವನ್ನು ವೀಕ್ಷಿಸಬೇಕು. ತುಂತುರು ಮತ್ತು ಸೂಕ್ಷö್ಮ ಹನಿ ನೀರಾವರಿ ಹಾಗೂ ಜಲ ಕೃಷಿ ಅಳವಡಿಕೆ ಪದ್ಧತಿ ಕುರಿತು ತಾಂತ್ರಿಕವಾಗಿ ರೈತರಿಗೆ ಮಾಹಿತಿ ನೀಡಲಾಗುತ್ತಿದೆ. ಮೇಳದಲ್ಲಿ ಪ್ರದರ್ಶನಕ್ಕಿಡಲಾದ ಫಲಪುಷ್ಪಗಳನ್ನು ಬೆಳೆದ ಕ್ರಮಗಳ ಬಗ್ಗೆ ಮಾಹಿತಿ ಪಡೆದು ತಮ್ಮ ಜಮೀನುಗಳಲ್ಲಿ ಪ್ರಯೋಗ ಮಾಡಬೇಕು ಎಂದು ಸಲಹೆ ನೀಡಿದರು. ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಫಲಪುಷ್ಪ ಪ್ರದರ್ಶನ ಮತ್ತು ಸಿರಿಧಾನ್ಯಗಳ ಮೇಳಗಳ ಕಾರ್ಯಕ್ರಮದಡಿ ಇಲಾಖೆ ವತಿಯಿಂದ ರೈತರು ಬೆಳೆದಿರುವ ವಿವಿಧ ನಮೂನೆಯ ಹೂವು, ಹಣ್ಣು ಮತ್ತು ತರಕಾರಿ ಪ್ರದರ್ಶಿಸಲಾಗುತ್ತಿದೆ. ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳದಲ್ಲಿ ಹೂವಿನಿಂದ ನಿರ್ಮಿಸಿದ ಮಿನಿ ವಿಧಾನಸೌಧ ಗಮನ ಸೆಳೆಯುತ್ತಿದೆ. ಜೇನು ಕೃಷಿ ಸೇರಿದಂತೆ ಇತ್ಯಾದಿ ಮಾಹಿತಿಯನ್ನೊಳಗೊಂಡ ಪ್ರದರ್ಶನವನ್ನು ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ವೀಕ್ಷಿಸಲು ತಿಳಿಸಿದರು.

ನರ್ಸರಿಯಲ್ಲಿ ಬೆಳೆದಿರುವ ವಿವಿಧ ಜಾತಿಯ ಹಣ್ಣು ಮತ್ತು ಅಲಂಕಾರಿಕ ಸಸ್ಯಗಳನ್ನು ಪ್ರದರ್ಶನ ಮತ್ತು ಸರ್ಕಾರ ನಿಗಧಿಪಡಿಸಿದ ಅತೀ ಕಡಿಮೆ ದರದಲ್ಲಿ ಮಾರಾಟಕ್ಕಿಡಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ ಬಾಬು ಅವರು ಈ ಸಂದರ್ಭದಲ್ಲಿ ತಿಳಿಸಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ²¯Áà ±ÀªÀiÁð, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಂಟಿ ಕೃಷಿ ನಿರ್ದೇಶಕರಾದ ಆರ್.ದೇವಿಕಾ, ಕೃಷಿ ಇಲಾಖೆಯ ಉಪನಿರ್ದೇಶಕರಾದ ಸಮದ್ ಪಟೇಲ್ ಸೇರಿದಂತೆ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿಗಳಿಂದ ರಾಷ್ಟ್ರ ಧ್ವಜಾರೋಹಣ

ಯಾದಗಿರಿ, ಜನವರಿ ೨೬ (ಕರ್ನಾಟಕ ವಾರ್ತೆ): ೭೧ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಭಾನುವಾರ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ರಾಷ್ಟç ಧ್ವಜಾರೋಹಣ ಮಾಡಿದರು. ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು.

ಗಣರಾಜ್ಯೋತ್ಸವದ ಶುಭಾಶಯ ಕೋರಿ ಮಾತನಾಡಿದ ಜಿಲ್ಲಾಧಿಕಾರಿಗಳು, ನವೆಂಬರ್ ತಿಂಗಳಲ್ಲಿ ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ ಯಾದಗಿರಿ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಇದರಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ಜನವರಿ ತಿಂಗಳಲ್ಲಿ ಐದನೇ ಸ್ಥಾನಕ್ಕೆ ಇಳಿದಿದ್ದು, ರಾಜ್ಯಮಟ್ಟದಲ್ಲಿ ಯಾವಾಗಲೂ ಪ್ರಥಮ ಸ್ಥಾನದಲ್ಲಿರುವಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು. ಮಹತ್ವಾಕಾಂಕ್ಷೆ ಜಿಲ್ಲೆಯಾದ ಯಾದಗಿರಿಯು ನವೆಂಬರ್-೨೦೧೯ರ ಆರೋಗ್ಯ ಮತ್ತು ಪೌಷ್ಟಿಕಾಂಶದಲ್ಲಿ ಡೆಲ್ಟಾ ಸ್ಕೋರ್‌ನಲ್ಲಿ ದೇಶಕ್ಕೆ ೩ನೇ ರ‍್ಯಾಂಕ್ ಪಡೆದಿದೆ. ಈ ಕಾರ್ಯ ಸಾಧನೆಗಾಗಿ ಅಧಿಕಾರಿಗಳನ್ನು ಅಭಿನಂದಿಸಿದರು. ಜಿಲ್ಲೆಯ ಎಲ್ಲಾ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಗಳಿಗೆ ಬರುವ ಸಾರ್ವಜನಿಕರ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಪಾರದರ್ಶಕ ಆಡಳಿತಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು. ಅಲ್ಲದೆ, ಇ-ಕಚೇರಿಯನ್ನು ಬೇರೆ ಬೇರೆ ಇಲಾಖೆಗಳಿಗೂ ಅನುಷ್ಠಾನಗೊಳಿಸಲಾವುದು. ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ಎಲ್ಲ ಇಲಾಖೆಗಳು ವಾರದಲ್ಲಿ ಒಂದು ದಿನ ಸಮಯ ನಿಗಧಿ ಮಾಡಿ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಅಪರ ಜಿಲ್ಲಾಧಿಕಾರಿ ಸೇರಿ ೧೦ ಜನರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ 

ಯಾದಗಿರಿ, ಜನವರಿ ೨೬ (ಕರ್ನಾಟಕ ವಾರ್ತೆ): ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ ಹಾಗೂ ಭಾವೈಕ್ಯತಾ ಸಮಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ೭೧ನೇ ಗಣರಾಜ್ಯೋತ್ಸವದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಸೇರಿದಂತೆ ಅತ್ಯುನ್ನತ ಸೇವೆ/ ಸಾಧನೆಗೈದ ೧೦ ಜನ ಸರ್ಕಾರಿ ನೌಕರರಿಗೆ ಜಿಲ್ಲಾಡಳಿತದಿಂದ ಸರ್ವೋತ್ತಮ ಸೇವಾ ಪ್ರಶಸ್ತಿ ಹಾಗೂ ೧೦,೦೦೦ ರೂ. ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಸುನೀಲ್ ನಿಸ್ವಾಸ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಭಗವಂತ ಅನವಾರ, ಅಂಗನವಾಡಿ ಮೇಲ್ವಿಚಾರಕಿ ಅನಿತಾ, ವನದುರ್ಗ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭೀಮರಾಯ ಬಿರಾದಾರ, ಗ್ರಾಮಲೇಖಾಧಿಕಾರಿ ಇರ್ಫಾನ್, ವಾಹನ ಚಾಲಕ ಅಜಮತ್ ಮಹಮ್ಮದ್ ಅಲಿ, ಪ್ರಥಮ ದರ್ಜೆ ಸಹಾಯಕರಾದ ಶರಣಬಸವ, ಭೀಮಾಶಂಕರ ಹಾಗೂ ಸಿಪಾಯಿ ರಾಯಪ್ಪ ನಾಟೇಕಾರ ಅವರು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದರು. ೯ ಜನ ಸಾಧಕರ ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ೯ ಜನ ಸಾಧಕರಾದ ದೊಡ್ಡಬಸಪ್ಪ ಬಳೂರಿಗಿ (ಸಾಹಿತ್ಯ), ಸುಭಾಸ ದೋರನಹಳ್ಳಿ (ಡೋಲಕ್ ವಾದನ), ಹಳ್ಳೇರಾವ್ ಕುಲಕರ್ಣಿ (ಚಿತ್ರಕಲೆ), ಖಾಜಾ ಫರಿದೋದ್ದೀನ್ (ಸಮಾಜ ಸೇವೆ), ರಾಘವೇಂದ್ರ ಕಲಾಲ್ (ಸಮಾಜ ಸೇವೆ- ರಕ್ತದಾನ) ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ತನು ತಂ.ಮಲ್ಲಿಕಾರ್ಜುನ, ನಿಶದ ಬೇಗಂ, ಮಲ್ಲಿಕಾರ್ಜುನ ತಂ.ನರಸಪ್ಪ, ರಾಮು ಯಂಕಪ್ಪ ಅವರನ್ನು ಸನ್ಮಾನಿಸಲಾಯಿತು. ವಿಶೇಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಉತ್ತಮ ಪೌರಕಾರ್ಮಿಕ ಮರಿಯಪ್ಪ ತಂದೆ ಮುನಿಯಪ್ಪ ಹಾಗೂ ಮಹತ್ವಾಕಾಂಕ್ಷೆ ಜಿಲ್ಲೆಗೆ ಬಿಡುಗಡೆಯಾದ ೩ ಕೋಟಿ ರೂ. ಅನ್‌ಟೈಡ್ ಫಂಡ್ ಬಳಕೆ ಮಾಡಲು ಸಾರ್ವಜನಿಕರಿಂದ ಪ್ರಸ್ತಾವನೆ ಕೇಳಲಾಗಿ ಅದಕ್ಕೆ ಉತ್ತಮವಾಗಿ ಪ್ರಸ್ತಾವನೆ ಸಲ್ಲಿಸಿದ ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ಸುನೀಲ್ ಪಾಟೀಲ್ ಅವರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಾದರಿ ಅಂಗನವಾಡಿ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಕುರಿತು, ಅರಣ್ಯ ಇಲಾಖೆಯಿಂದ ಗಿಡ-ಮರಗಳ ಬಗ್ಗೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯೋಜನೆಗಳ ಕುರಿತು ಸ್ಥಬ್ದ ಚಿತ್ರಗಳ ಆಕರ್ಷಕ ಮೆರವಣಿಗೆ ನಡೆಯಿತು.

ಶಾಸಕರಾದ ವೆಂಕಟರಡ್ಡಿಗೌಡ ಮುದ್ನಾಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಅವರು ಉಪಸ್ಥಿತರಿದ್ದರು.

ಗಮನ ಸೆಳೆದ ಸಂವಿಧಾನ ಮಹತ್ವ ರೂಪಕ

ಯಾದಗಿರಿ, ಜನವರಿ ೨೬ (ಕರ್ನಾಟಕ ವಾರ್ತೆ): ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ೭೧ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ವಿವಿಧ ಶಾಲೆಗಳ ಮಕ್ಕಳು ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕುದುರೆ ಕುಣಿತ ಗಮನ ಸೆಳೆದವು. ಸಭಾ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ ಪ್ರದರ್ಶಿಸಿದ “ಸಂವಿಧಾನದ ಮಹತ್ವ ಸಾರುವ ರೂಪಕ” ವಿಶೇಷವಾಗಿತ್ತು.
ಸ್ಟೇಷನ್ ಏರಿಯಾದ ಮಹಾತ್ಮ ಗಾಂಧಿ ಆಂಗ್ಲ ಮಾಧ್ಯಮ ವಿದ್ಯಾರ್ಥಿನಿಯರು ಪ್ರದರ್ಶಿಸಿದ “ಬಾರಯ್ಯ ಬಾರೋ ನನ್ನ ಸರದಾರ” ಜಾನಪದ ನೃತ್ಯ, ಡಿ.ಡಿ.ಯು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾರಿ ನೃತ್ಯ ಕೂಡ ಗಮನ ಸೆಳೆದವು. ವಿಜಯಪುರದ ಸಂಗಮೇಶ ಮತ್ತು ಶರಣಪ್ಪ ಅವರ ಕುದುರೆ ಕುಣಿತ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಜಿಲ್ಲಾಧಿಕಾರಿಗಳಿಂದ ರಾಷ್ಟç ಧ್ವಜಾರೋಹಣ
ಯಾದಗಿರಿ, ಜನವರಿ ೨೫ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ ಹಾಗೂ ಭಾವೈಕ್ಯತಾ ಸಮಿತಿ ಸಂಯುಕ್ತಾಶ್ರಯದಲ್ಲಿ ೭೧ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜನವರಿ ೨೬ರಂದು ಬೆಳಿಗ್ಗೆ ೯ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ರಾಷ್ಟç ಧ್ವಜಾರೋಹಣ ನೆರವೇರಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ. ಜಾಧವ್ ಅವರು ಅತಿಥಿಗಳಾಗಿ ಭಾಗವಹಿಸುವರು. ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪುರ, ನರಸಿಂಹ ನಾಯಕ(ರಾಜುಗೌಡÀ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ್, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಸಾಂಸ್ಕೃತಿಕ ಕಾರ್ಯಕ್ರಮ: ಸಂಜೆ ೬ರಿಂದ ೮ ಗಂಟೆಯವರೆಗೆ ಯಾದಗಿರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ವಾರ್ತಾ ಇಲಾಖೆಯಿಂದ ಉಚಿತ ಚಲನಚಿತ್ರ ಪ್ರದರ್ಶನ

ಯಾದಗಿರಿ, ಜನವರಿ ೨೫ (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಸ್ವಾತಂತ್ರ÷್ಯ ಹೋರಾಟ ಹಾಗೂ ಭಾರತದ ಸಂವಿಧಾನದ ನಿರ್ಮಾತೃಗಳ ಮಹತ್ವ ತಿಳಿಸುವ ಚಲನಚಿತ್ರಗಳ ಉಚಿತ ಪ್ರದರ್ಶನವನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಶನಿವಾರ ಆಯೋಜಿಸಲಾಗಿತ್ತು. ಡಾ.ಜಬ್ಬಾರ್ ಪಟೇಲ್ ನಿರ್ದೇಶನದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ರಿಚರ್ಡ್ ಅಟೆನ್‌ಬರೊ ನಿರ್ದೇಶನದ ಗಾಂಧಿ ಚಲನಚಿತ್ರಗಳನ್ನು ಪ್ರದರ್ಶಿಸಲಾಯಿತು.
ಚಲನಚಿತ್ರ ವೀಕ್ಷಿಸಿದ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಗಾಂಧಿ ಚಲನಚಿತ್ರಗಳು ಸ್ವಾತಂತ್ರ÷್ಯ ಹೋರಾಟ ಸಾಗಿ ಬಂದ ಹಾದಿ ಮತ್ತು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಮಹತ್ವ ತಿಳಿಸುತ್ತವೆ. ಈ ಚಲನಚಿತ್ರಗಳು ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತವೆ. ಉಚಿತ ಚಲನಚಿತ್ರ ಪ್ರದರ್ಶನ ಆಯೋಜಿಸಿರುವುದು ಶ್ಲಾಘನೀಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಡಿವೈಎಸ್ಪಿ ಯು.ಶರಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಭಾಕರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಸಿದ್ದೇಶ್ವರಪ್ಪ ಜಿ.ಬಿ., ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಸೇರಿದಂತೆ ಅಧಿಕಾರಿಗಳು, ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಚಲನಚಿತ್ರ ವೀಕ್ಷಣೆ ಮಾಡಿದರು


ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮ
ಮತದಾನ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ
-ನ್ಯಾಯಾಧೀಶರಾದ ಶ್ರೀ ಶಿವನಗೌಡ
ಯಾದಗಿರಿ, ಜನವರಿ ೨೫ (ಕರ್ನಾಟಕ ವಾರ್ತೆ): ನಮ್ಮ ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯು ಇತರೆ ದೇಶಗಳಿಂದ ಮಹತ್ವದ ಸ್ಥಾನದಲ್ಲಿದೆ. ಪ್ರಜಾಪ್ರಭುತ್ವದ ಉಳಿವು ಮತ್ತು ರಾಷ್ಟçದ ಭದ್ರತೆಗೆ ೧೮ ವರ್ಷ ತುಂಬಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊAಡು ಕಡ್ಡಾಯವಾಗಿ ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಶಿವನಗೌಡ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಕೆಲವು ದೇಶಗಳಲ್ಲಿ ಸರ್ವಾಧಿಕಾರ ದೋರಣೆಯ ಆಡಳಿತ ಇದೆ. ಅಲ್ಲಿ ಜನಿಸಿದ ಯಾರಿಗೂ ಮತದಾನದ ಸ್ವಾತಂತ್ರö್ಯವಿಲ್ಲ. ಸ್ವತಂತ್ರ ಭಾರತದಲ್ಲಿ ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ ಮತ್ತು ಹಕ್ಕು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಈ ಮೂರು ಅಂಗಗಳು ಸ್ವತಂತ್ರವಾಗಿ ಕಾರ್ಯಾನಿರ್ವಹಿಸಲು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಮತದಾನ ಮಾಡಬೇಕು. ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ನಮ್ಮನ್ನಾಳುವ ನಾಯಕರ ಆಯ್ಕೆಗೆ ಮತದಾನವು ಪ್ರಮುಖ ಅಸ್ತçವಾಗಿದೆ. ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊAಡವರು ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಬೇಕು. ಚುನಾವಣೆಗಳಲ್ಲಿ ಯಾರೊಬ್ಬರು ಮತದಾನದ ಪ್ರಕ್ರಿಯೆಯಿಂದ ಹೊರಗುಳಿಯದೆ ತಪ್ಪದೇ ಮತದಾನ ಮಾಡುವಂತೆ ಸಲಹೆ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ನಾಮದೇವ ಕೆ.ಸಾಲಮಂಟಪಿ ಅವರು ಮಾತನಾಡಿ, ನಮ್ಮ ದೇಶವು ಹಲವು ಸಂಸ್ಕೃತಿ, ವರ್ಗ ಹಾಗೂ ವರ್ಣಗಳಿಂದ ಕೂಡಿದ್ದರೂ ಭಾರತದ ಸಂವಿಧಾನವು ೧೮ ವರ್ಷ ತುಂಬಿದ ನಂತರ ಎಲ್ಲರಿಗೂ ಮತದಾನದ ಹಕ್ಕು ನೀಡಿದೆ. ಇದನ್ನು ಯಾವುದೇ ಪ್ರಭಾವ, ಆಸೆ-ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಬೇಕು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೆ ಪ್ರಭುಗಳು ಎಂದು ಅವರು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ ಅವರು ಮಾತನಾಡಿ, ರಾಷ್ಟಿçÃಯ ಮತದಾರರ ದಿನವು ೧೮ ವರ್ಷ ತುಂಬಿದವರಿಗೆ ಮತದಾನದ ಹಕ್ಕಿನ ಬಗ್ಗೆ ಜಾಗೃತಿ ಮಾಡಲು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ತಿಳಿವಳಿಕೆ ನೀಡಲು ಆಚರಿಸಲಾಗುತ್ತದೆ. ಭವ್ಯ ಭಾರತದ ನಿರ್ಮಾಣಕ್ಕೆ ಮತದಾನದ ಹಕ್ಕು ಪ್ರಮುಖವಾಗಿದೆ. ಪ್ರತಿಯೊಬ್ಬರು ನಿಷ್ಪಕ್ಷಪಾತವಾಗಿ ಮತದಾನ ಮಾಡುವ ಮೂಲಕ ಸುಭದ್ರ ರಾಷ್ಟç ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು. ರಾಷ್ಟಿçÃಯ ಮತದಾರರ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಬಿಎಲ್‌ಒಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹೊಸ ಮತದಾರರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಸಿವಿಲ್ ನ್ಯಾಯಾಧೀಶರಾದ ಲೋಕೇಶ್ ಧನಪಾಲ ಹವಲೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸ್ಮೀತಾ ಮಾಲಗಾಂವೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಡಿವೈಎಸ್‌ಪಿ ಯು.ಶರಣಪ್ಪ ಹಾಗೂ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಅವರು ಉಪಸ್ಥಿತರಿದ್ದರು. ಸರಕಾರಿ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಅಶ್ವಿನಿ ಅವರು ಪ್ರಾರ್ಥನಾ ಗೀತೆ ಹಾಡಿದರು. ಡಾನ್ ಬೊಸ್ಕೋ ಶಾಲೆಯ ವಿದ್ಯಾರ್ಥಿನಿ ಡಯಾನಾ ಹಾಗೂ ಸಂಗಡಿಗರು ರಾಷ್ಟçಗೀತೆ ಮತ್ತು ನಾಡಗೀತೆ ಹಾಡಿದರು. ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ.ರಜಪೂತ ಅವರು ಸ್ವಾಗತಿಸಿದರು. ಶಿಕ್ಷಕರಾದ ಹಫೀಜ್ ಪಟೇಲ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ ಅವರು ವಂದಿಸಿದರು.

ಅಪರ ಜಿಲ್ಲಾಧಿಕಾರಿ ಸೇರಿ 10 ಜನರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ
ಯಾದಗಿರಿ, ಜನವರಿ 26 (ಕರ್ನಾಟಕ ವಾರ್ತೆ): ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ ಹಾಗೂ ಭಾವೈಕ್ಯತಾ ಸಮಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 71ನೇ ಗಣರಾಜ್ಯೋತ್ಸವದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಸೇರಿದಂತೆ ಅತ್ಯುನ್ನತ ಸೇವೆ/ ಸಾಧನೆಗೈದ 10 ಜನ ಸರ್ಕಾರಿ ನೌಕರರಿಗೆ ಜಿಲ್ಲಾಡಳಿತದಿಂದ ಸರ್ವೋತ್ತಮ ಸೇವಾ ಪ್ರಶಸ್ತಿ ಹಾಗೂ 10,000 ರೂ. ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಸುನೀಲ್ ನಿಸ್ವಾಸ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಭಗವಂತ ಅನವಾರ, ಅಂಗನವಾಡಿ ಮೇಲ್ವಿಚಾರಕಿ ಅನಿತಾ, ವನದುರ್ಗ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭೀಮರಾಯ ಬಿರಾದಾರ, ಗ್ರಾಮಲೇಖಾಧಿಕಾರಿ ಇರ್ಫಾನ್, ವಾಹನ ಚಾಲಕ ಅಜಮತ್ ಮಹಮ್ಮದ್ ಅಲಿ, ಪ್ರಥಮ ದರ್ಜೆ ಸಹಾಯಕರಾದ ಶರಣಬಸವ, ಭೀಮಾಶಂಕರ ಹಾಗೂ ಸಿಪಾಯಿ ರಾಯಪ್ಪ ನಾಟೇಕಾರ ಅವರು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದರು.
9 ಜನ ಸಾಧಕರ ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 9 ಜನ ಸಾಧಕರಾದ ದೊಡ್ಡಬಸಪ್ಪ ಬಳೂರಿಗಿ (ಸಾಹಿತ್ಯ), ಸುಭಾಸ ದೋರನಹಳ್ಳಿ (ಡೋಲಕ್ ವಾದನ), ಹಳ್ಳೇರಾವ್ ಕುಲಕರ್ಣಿ (ಚಿತ್ರಕಲೆ), ಖಾಜಾ ಫರಿದೋದ್ದೀನ್ (ಸಮಾಜ ಸೇವೆ), ರಾಘವೇಂದ್ರ ಕಲಾಲ್ (ಸಮಾಜ ಸೇವೆ- ರಕ್ತದಾನ) ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ತನು ತಂ.ಮಲ್ಲಿಕಾರ್ಜುನ, ನಿಶದ ಬೇಗಂ, ಮಲ್ಲಿಕಾರ್ಜುನ ತಂ.ನರಸಪ್ಪ, ರಾಮು ಯಂಕಪ್ಪ ಅವರನ್ನು ಸನ್ಮಾನಿಸಲಾಯಿತು. ವಿಶೇಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಉತ್ತಮ ಪೌರಕಾರ್ಮಿಕ ಮರಿಯಪ್ಪ ತಂದೆ ಮುನಿಯಪ್ಪ ಹಾಗೂ ಮಹತ್ವಾಕಾಂಕ್ಷೆ ಜಿಲ್ಲೆಗೆ ಬಿಡುಗಡೆಯಾದ 3 ಕೋಟಿ ರೂ. ಅನ್‍ಟೈಡ್ ಫಂಡ್ ಬಳಕೆ ಮಾಡಲು ಸಾರ್ವಜನಿಕರಿಂದ ಪ್ರಸ್ತಾವನೆ ಕೇಳಲಾಗಿ ಅದಕ್ಕೆ ಉತ್ತಮವಾಗಿ ಪ್ರಸ್ತಾವನೆ ಸಲ್ಲಿಸಿದ ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ಸುನೀಲ್ ಪಾಟೀಲ್ ಅವರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಾದರಿ ಅಂಗನವಾಡಿ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಕುರಿತು, ಅರಣ್ಯ ಇಲಾಖೆಯಿಂದ ಗಿಡ-ಮರಗಳ ಬಗ್ಗೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯೋಜನೆಗಳ ಕುರಿತು ಸ್ಥಬ್ದ ಚಿತ್ರಗಳ ಆಕರ್ಷಕ ಮೆರವಣಿಗೆ ನಡೆಯಿತು. ಶಾಸಕರಾದ ವೆಂಕಟರಡ್ಡಿಗೌಡ ಮುದ್ನಾಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಅವರು ಉಪಸ್ಥಿತರಿದ್ದರು.


71ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿಗಳು
ನಿರೀಕ್ಷೆ ಮೀರಿ ಬೆಳೆಯುತ್ತಿರುವ ಜಿಲ್ಲೆಗೆ ದಶಕದ ಸಂಭ್ರಮ
-ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಜನವರಿ 26 (ಕರ್ನಾಟಕ ವಾರ್ತೆ):. ಗಣರಾಜ್ಯವಾದ ತರುವಾಯ ಜಿಲ್ಲೆಯು ಅನೇಕ ಬೆಳವಣಿಗೆಯನ್ನು ಕಂಡಿದೆ. ನೂತನ ಜಿಲ್ಲೆಯಾದ ಯಾದಗಿರಿಗೆ ಈಗ ದಶಕದ ಸಂಭ್ರಮ. ನೀತಿ ಆಯೋಗದ ಮಹತ್ವಾಕಾಂಕ್ಷೆ ಜಿಲ್ಲೆಯಾದ ನಂತರ ನಿರೀಕ್ಷೆ ಮೀರಿ ಬೆಳೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಹರ್ಷ ವ್ಯಕ್ತಪಡಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ ಹಾಗೂ ಭಾವೈಕ್ಯತಾ ಸಮಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 71ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಅವರು ಮಾತನಾಡಿದರು.
ವಸತಿ, ಶಾಲಾ ಕಟ್ಟಡ, ಆಸ್ಪತ್ರೆ, ರಸ್ತೆ, ಕುಡಿಯುವ ನೀರು, ಚರಂಡಿ, ವಿದ್ಯುದ್ದೀಪ ಹೀಗೆ ಮುಂತಾದ ಅಭಿವೃದ್ಧಿ ಕಾರ್ಯಗಳಿಂದ ಜಿಲ್ಲೆ ಪ್ರಗತಿ ಪಥದಲ್ಲಿ ಸಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜನಪ್ರತಿನಿಧಿಗಳ ಸಲಹೆ-ಸೂಚನೆಯಂತೆ ಪ್ರಮುಖವಾಗಿ ಶಿಕ್ಷಣ, ಆರೋಗ್ಯ, ಕೃಷಿ, ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತು ನೀಡಲಾಗಿದೆ. ಕಳೆದ ನವೆಂಬರ್‍ನಲ್ಲಿ ಆರೋಗ್ಯ ಮತ್ತು ಪೌಷ್ಟಿಕಾಂಶದ ಡೆಲ್ಟಾ ಸ್ಕೋರ್‍ನಲ್ಲಿ ಜಿಲ್ಲೆಯು ದೇಶಕ್ಕೆ 3ನೇ ರ್ಯಾಂಕ್ ಪಡೆದಿದೆ ಎಂದು ತಿಳಿಸಿದರು. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು, ಅಧಿಕಾರಿಗಳು, ವೈದ್ಯರು, ಸರ್ವರು ಬದ್ಧತೆಯಿಂದ ತನು, ಮನದಿಂದ ದುಡಿಯೋಣ. ಈ ಮೂಲಕ ಯಾದಗಿರಿ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ರೂಪಿಸೋಣ ಎಂದು ಕರೆ ನೀಡಿದರು.
ಗಣರಾಜ್ಯೋತ್ಸವ ಸಾರ್ವಭೌಮತ್ವದ ಸಂಕೇತ: 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಪಡೆಯುವುದರೊಂದಿಗೆ ಮುನ್ನೂರು ವರ್ಷಗಳ ದಾಸ್ಯದ ಸರಪಳಿ ಕಳಚಿಕೊಂಡ ಭಾರತ, 1950ರ ಜನವರಿ 26 ರಂದು ಸಂವಿಧಾನವನ್ನು ಅಧಿಕೃತವಾಗಿ ಜಾರಿಗೊಳಿಸಿ, ವಿಶ್ವದಲ್ಲಿ ತಾನೂ ಒಂದು ಸಾರ್ವಭೌಮ ರಾಷ್ಟ್ರವೆಂದು ಸಾರಿದ ದಿನವೇ ಗಣರಾಜ್ಯೋತ್ಸವ. ದಾಸ್ಯದಿಂದ ಬಿಡುಗಡೆಗೊಂಡ ಸಂದರ್ಭವನ್ನು ಸ್ವಾತಂತ್ರ್ಯೋತ್ಸವವೆಂದು ಆಚರಿಸಿದರೆ, ರಾಷ್ಟ್ರದ ಸಾರ್ವಭೌಮತ್ವದ ಸಂಕೇತವಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿ, ನೆಹರೂ, ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ನೇತಾಜಿ ಸುಭಾಸ್‍ಚಂದ್ರ ಬೋಸ್‍ರಂಥ ನಾಯಕರ ಹೋರಾಟ, ತ್ಯಾಗ ಮತ್ತು ಬಲಿದಾನದ ಫಲವಾಗಿ ಪಡೆದ ಸ್ವಾತಂತ್ರ್ಯ, ಸತ್ಯ-ಶಾಂತಿ ಹಾಗೂ ಅಹಿಂಸೆಯಿಂದ ಪ್ರೇರಿತಗೊಂಡಿದ್ದಾಗಿದೆ ಎಂದು ವಿವರಿಸಿದರು. ಗಣರಾಜ್ಯದ ಇಂದಿನ ಅಸ್ತಿತ್ವಕ್ಕೆ ಸಂವಿಧಾನವೇ ತಳಹದಿ. ಸಂವಿಧಾನ ಕರಡು ಸಮಿತಿಯಲ್ಲಿ ಮತ್ತು ರಚನಾ ಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪಾತ್ರ ವಿಶೇಷವಾಗಿತ್ತು. ತಮ್ಮ ಪಾತ್ರವನ್ನು ಸಂಪೂರ್ಣವಾಗಿ ನಿರ್ವಹಿಸುವಲ್ಲಿ ಡಾ.ಅಂಬೇಡ್ಕರ್ ಅವರಿಗೆ ಹಲವಾರು ದೇಶಗಳ ಸಂವಿಧಾನಗಳನ್ನು ಆಳವಾಗಿ ಅಧ್ಯಯನ ಮಾಡಿದ ಅನುಭವ ನೆರವಾಯಿತು. ಇವರ ಸೇವೆಗೆ ಮನ್ನಣೆ ದೊರೆತು ಇವರನ್ನು ‘ಸಂವಿಧಾನದ ಪಿತಾಮಹ’ ಎಂದು ನಾವು ಸ್ಮರಿಸುವಂತಾಗಿದೆ ಎಂದು ತಿಳಿಸಿದರು. 1.12 ಲಕ್ಷ ರೈತರ ಖಾತೆಗೆ ಹಣ: ಪ್ರಧಾನಮಂತ್ರಿ ಕೃಷಿ ಸಮ್ಮಾನ ನಿಧಿ ಯೋಜನೆಯಡಿ ಭೂ ಸಾಗುವಳಿ ಮಾಡುವ ಜಿಲ್ಲೆಯ ಎಲ್ಲಾ ರೈತರಿಗೆ ಭಾರತ ಸರ್ಕಾರದಿಂದ 6000 ರೂ. ಹಾಗೂ ರಾಜ್ಯ ಸರ್ಕಾರದಿಂದ 4000 ರೂ.ಗಳ ಸಹಾಯಧನ ಒಟ್ಟು 10,000 ರೂ. ಗಳನ್ನು ರೈತರ ಖಾತೆಗೆ ಜಮಾ ಆಗುತ್ತದೆ. ಯೋಜನೆಯಡಿ 1,25,182 ರೈತರು ನೋಂದಾಯಿಸಿದ್ದು, 1,12,130 ರೈತರು ಲಾಭ ಪಡೆಯುತ್ತಿದ್ದಾರೆ. 2019-20ನೇ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳ ಒಟ್ಟು 454 ಹೆಕ್ಟರ್ ಪ್ರದೇಶ ವಿಸ್ತೀರ್ಣ ಹೊಂದಿದ್ದು ಮತ್ತು 421 ಹೆಕ್ಟರ್ ಪ್ರದೇಶದಲ್ಲಿ ತೋಟಗಾರಿಕೆ ಬೇಳೆಗಳಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಹನಿ ನೀರಾವರಿ ಅಳವಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಜನ ಗುಳೆ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ನೆರವಾಗುತ್ತಿದೆ. ಈ ಯೋಜನೆಯಡಿ 2019-20ನೇ ಸಾಲಿನಲ್ಲಿ 26.61 ಲಕ್ಷ ಮಾನವ ದಿನಗಳ ಗುರಿಯನ್ನು ನಿಗದಿಪಡಿಸಲಾಗಿದೆ. ಈಗಾಗಲೇ 19.27 ಲಕ್ಷ ಮಾನವ ದಿನಗಳ ಗುರಿಯನ್ನು ತಲುಪಿದ್ದು, ಶೇ.72.41 ರಷ್ಟು ಸಾಧಿಸಲಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ 2013-14ರಿಂದ 2019-20ನೇ ಸಾಲಿನವರೆಗೆ ಒಟ್ಟು 2,506 ಕಾಮಗಾರಿಗಳನ್ನು ಕೈಗೊಂಡಿದ್ದು, ಇವುಗಳಲ್ಲಿ 1696 ಕಾಮಗಾರಿಗಳು ಪೂರ್ಣಗೊಂಡಿವೆ. 578 ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ. ಸಕಾಲ ಅರ್ಜಿಗಳ ವಿಲೆವಾರಿಯಲ್ಲಿ ನವೆಂಬರ್- 2019ರ ಮಾಹೆಯಲ್ಲಿ ಯಾದಗಿರಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವುದಕ್ಕಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸಕಾಲ ಹಾಗೂ ಕಾರ್ಮಿಕ ಸಚಿವರಾದ ಎಸ್.ಸುರೇಶ್‍ಕುಮಾರ್ ಅವರು ಜಿಲ್ಲೆಯ ಭೂಮಿ ಅಧಿಕಾರಿ/ ಸಿಬ್ಬಂದಿಗಳ ಕಾರ್ಯವನ್ನು ಅಭಿನಂದಿಸಿದ್ದಾರೆ. ಜಿಲ್ಲಾಸ್ಪತ್ರೆ ಶೀಘ್ರ ಉದ್ಘಾಟನೆ: ಜಿಲ್ಲೆಯಲ್ಲಿ 300 ಹಾಸಿಗೆಗಳ ಸುಸಜ್ಜಿತ ನೂತನ ಜಿಲ್ಲಾಸ್ಪತ್ರೆ ಕಟ್ಟಡ ಸಿದ್ಧವಾಗಿದ್ದು, ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಕಲ್ಪಿಸಲು ಶೀಘ್ರ ಉದ್ಘಾಟನೆಗೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾಸ್ಪತ್ರೆಗೆ ಮಾನವ ಸಂಪನ್ಮೂಲ ವಾರ್ಷಿಕ ವೆಚ್ಚ 50 ಕೋಟಿ ರೂಪಾಯಿ ಆಗಲಿದ್ದು, ವೈದ್ಯರು ಮತ್ತು ಸಿಬ್ಬಂದಿ ನೇಮಕಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಮೆಡಿಕಲ್ ಕಾಲೇಜಿಗೆ ಸಚಿವ ಸಂಪುಟದ ಅಸ್ತು: ಸರ್ಕಾರವು ಜಿಲ್ಲೆಗೆ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಮಂಜೂರು ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಮೆಡಿಕಲ್ ಕಾಲೇಜು ಕಟ್ಟಡ, ವಸತಿಗೃಹಗಳು ಹಾಗೂ ವಿದ್ಯಾರ್ಥಿಗಳ ವಸತಿ ನಿಲಯಕ್ಕಾಗಿ 325 ಕೋಟಿ ರೂ. ಮಂಜೂರಾಗಿದೆ. ಇದರಲ್ಲಿ ಕೇಂದ್ರದ ಪಾಲು ಶೇ.60ರಷ್ಟು ಮತ್ತು ರಾಜ್ಯದ ಪಾಲು ಶೇ.40ರಷ್ಟು ಇರುತ್ತದೆ. ಕಟ್ಟಡದ ಕಾಮಗಾರಿಗೆ ಸಚಿವ ಸಂಪುಟದ ಅನುಮೋದನೆ ದೊರಕಿದ್ದು, ಶೀಘ್ರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಟ್ಟಡ ಕಾಮಗಾರಿ ಆರಂಭಿಸಲಾಗುವುದು. ಜೊತೆಗೆ ಮಾನವ ಸಂಪನ್ಮೂಲ ಮಂಜೂರಾತಿಗೆ ಸಲ್ಲಿಸಿದ ಪ್ರಸ್ತಾವನೆಗೂ ಸರ್ಕಾರ ಒಪ್ಪಿಗೆ ನೀಡಿದ್ದು, ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿಯನ್ನು ಜೂನ್‍ನಲ್ಲಿ ಆರಂಭಿಸಲಾಗುವುದು. ತದನಂತರ ಭಾರತೀಯ ವೈದ್ಯಕೀಯ ಸಂಸ್ಥೆಯ ತಂಡ ಪರಿವೀಕ್ಷಣೆಗೆ ಆಗಮಿಸಲಿದ್ದು, 2021ರಲ್ಲಿ ವಿದ್ಯಾರ್ಥಿಗಳ ಪ್ರವೇಶ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಆಶಯ ವ್ಯಕ್ತಪಡಿಸಿದರು.
ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದವರು ವರ್ಷದಲ್ಲಿ 5 ಲಕ್ಷ ರೂ.ವರೆಗೆ ಮತ್ತು ಉಚಿತವಾಗಿ ಚಿಕಿತ್ಸೆ ಮತ್ತು ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳು 1.50 ಲಕ್ಷ ರೂ.ವರೆಗೂ ಸಹಪಾವತಿಯೊಂದಿಗೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಯೋಜನೆಯಡಿ ಹೆಸರು ನೋಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಿದರು. ಆಹಾರ ಇಲಾಖೆಯ ಮೂಲಕ ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಯಾದ್ಯಂತ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಎಲ್ಲಾ ಸದಸ್ಯರು ತಮ್ಮ ನ್ಯಾಯಬೆಲೆ ಅಂಗಡಿಗಳಿಗೆ ಹಾಜರಾಗಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಲು ಮಾರ್ಚ್ 31ರವರೆಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.
ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಿಗಮಗಳ ಮೂಲಕ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕ್ರಮ: ಜಿಲ್ಲೆಯು ಐತಿಹಾಸಿಕ ಮತ್ತು ಪ್ರವಾಸಿ ತಾಣಗಳ ಬೀಡಾಗಿದೆ. ಪ್ರವಾಸಿ ತಾಣಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಶಹಾಪುರ ತಾಲ್ಲೂಕಿನ ಬುದ್ಧ ಮಲಗಿದ ಬೆಟ್ಟ ಮತ್ತು ಅಲ್ಲಿನ ಮಾವಿನಕೆರೆ ಅಭಿವೃದ್ಧಿಯ ಅಂದಾಜು ವೆಚ್ಚ 4 ಕೋಟಿ ರೂ.ಗಳ ಪೈಕಿ 1.64 ಕೋಟಿ ರೂ. ಅನುದಾನ ಬಿಡುಗಡೆಯಾಗಿರುತ್ತದೆ. ಇದರಲ್ಲಿ ಉದ್ಯಾನವನ ನಿರ್ಮಾಣ, ಸೌಂದರ್ಯೀಕರಣ, ಸುರಕ್ಷತೆ ತಂತಿಬೇಲಿ ಅಳವಡಿಕೆ ಕಾಮಗಾರಿಗಳು ವಾರದಲ್ಲಿ ಆರಂಭವಾಗಲಿವೆ. ಇನ್ನು ಗುರುಮಠಕಲ್ ತಾಲ್ಲೂಕಿನ ನಜರಾಪುರ ಗ್ರಾಮದ ಧಬಧಬ್ ಜಲಪಾತದ ಅಭಿವೃದ್ಧಿಗೆ 147 ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಅರಣ್ಯ ಇಲಾಖೆಯಿಂದ ತೂಗುಸೇತುವೆ ನಿರ್ಮಾಣ, ವೀಕ್ಷಣಾ ಗ್ಯಾಲರಿ, ವಾಕಿಂಗ್ ಟ್ರ್ಯಾಕ್, ಸುರಕ್ಷಿತ ತಂತಿಬೇಲಿ ಅಳವಡಿಕೆಯ ಕಾಮಗಾರಿಗಳನ್ನು ಶೀಘ್ರ ಆರಂಭಿಸಲಾಗುವುದು ಎಂದು ತಿಳಿಸಿದರು.
ಯಾದಗಿರಿ ನಗರದ ದೊಡ್ಡ ಕೆರೆ ಅಭಿವೃದ್ಧಿಪಡಿಸುವ ಸಲುವಾಗಿ ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಯೋಜನಾ ವರದಿ ತಯಾರಿಗೆ ಟೆಂಡರ್ ಕರೆಯಲಾಗಿದೆ. ಕಾಮಗಾರಿ ಪೂರ್ಣಗೊಂಡರೆ ನಗರದ ಸೌಂದರ್ಯೀಕರಣದ ಜೊತೆಗೆ ಅಂತರ್ಜಲ ಮಟ್ಟ ಹೆಚ್ಚಳವಾಗಿ ಸುತ್ತಲಿನ ಜಲಸಂಪನ್ಮೂಲಗಳು ಮರುಜೀವ ಪಡೆದುಕೊಳ್ಳುತ್ತವೆ.
ಆರ್ಥಿಕ ಗಣತಿಗೆ ಮಾಹಿತಿ ನೀಡಿ: ಜಿಲ್ಲೆಯಾದ್ಯಂತ 7ನೇ ಆರ್ಥಿಕ ಗಣತಿ ನಡೆಯುತ್ತಿದ್ದು, ಸಿ.ಎಸ್.ಸಿ ಮತ್ತು ಎನ್.ಎಸ್.ಎಸ್.ಒ ಅವರಿಗೆ ಗಣತಿ ಜವಾಬ್ದಾರಿ ನೀಡಲಾಗಿದೆ. ಮನೆಯಲ್ಲಿ ನಡೆಸುತ್ತಿರುವ ಆರ್ಥಿಕ ಚಟುವಟಿಕೆಗಳ ಬಗ್ಗೆ ಗಣತಿದಾರರು ಸಂಗ್ರಹಿಸುವ ಮಾಹಿತಿಯು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ವಿವಿಧ ಅಭಿವೃದ್ಧಿ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಮಹತ್ವದ್ದಾಗಿರುತ್ತದೆ. ಟೈಲರಿಂಗ್, ಬೀಡಿ ಕಟ್ಟುವುದು, ಹೈನುಗಾರಿಕೆ, ರಸ್ತೆಬದಿ ವಹಿವಾಟು, ಸೊಪ್ಪು, ತರಕಾರಿ ವ್ಯಾಪಾರ, ಹೈನುಗಾರಿಕೆ, ಮನೆಪಾಠ, ತಳ್ಳುಗಾಡಿಯ ವ್ಯಾಪಾರ, ಇತ್ಯಾದಿಯಾಗಿ ಪ್ರತಿ ವಹಿವಾಟಿನ ಸಮಗ್ರ ವರದಿಯನ್ನು ಭೇಟಿ ನೀಡಲಿರುವ ಗಣತಿದಾರರಿಗೆ ನೀಡಲು ಈ ಸಂದರ್ಭದಲ್ಲಿ ಕೋರಿದರು. ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು. ಶಾಸಕರಾದ ವೆಂಕಟರಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿವಿಧ ಶಾಲೆಗಳ ಮಕ್ಕಳು, ಸಾರ್ವಜನಿಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಲಿಂಗೇರಿ ಸ್ಟೇಷನ್ ಮೊರಾರ್ಜಿ ದೇಸಾಯಿ ಶಾಲೆಯ ಸಂಗೀತ ಶಿಕ್ಷಕರಾದ ಚಂದ್ರಶೇಖರ ಗೋಗಿ ಮತ್ತು ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಸರಕಾರಿ ಪದವಿ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕಿ ಡಾ.ಜ್ಯೋತಿಲತಾ ತಡಿಬಿಡಿಮಠ ನಿರೂಪಿಸಿದರು. ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ ಅವರು ವಂದಿಸಿದರು.

ಶುಕ್ರವಾರ, ಜನವರಿ 24, 2020

ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ
ಫೆ.೧೧ರಂದು ಸವಿತಾ ಮಹರ್ಷಿ ಜಯಂತ್ಯೋತ್ಸವ
ಯಾದಗಿರಿ, ಜನವರಿ ೨೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ ಸವಿತಾ ಮಹರ್ಷಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಫೆಬ್ರುವರಿ ೧೧ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸವಿತಾ ಮಹರ್ಷಿ ಜಯಂತ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಸರಕಾರದ ನಿರ್ದೇಶನದಂತೆ ಫೆಬ್ರುವರಿ ೧ರಂದು ಆಚರಣೆ ಮಾಡಬೇಕಾಗಿದ್ದ ಸವಿತಾ ಮಹರ್ಷಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಸಮಾಜದ ಮುಖಂಡರ ಮನವಿ ಮೇರೆಗೆ ಜಿಲ್ಲಾ ಮಟ್ಟದಲ್ಲಿ ಫೆಬ್ರುವರಿ ೧ರ ಬದಲು ಫೆಬ್ರುವರಿ ೧೧ರಂದು ಆಚರಣೆ ಮಾಡಲು ಅಪರ ಜಿಲ್ಲಾಧಿಕಾರಿಗಳು ಒಪ್ಪಿಗೆ ನೀಡಿದರು.
ಅಂದು ಬೆಳಿಗ್ಗೆ ೯ ಗಂಟೆಗೆ ಯಾದಗಿರಿ ನಗರದಿಂದ ಜಿಲ್ಲಾಡಳಿತ ಭವನದವರೆಗೆ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು ಎಂದು ಸವಿತಾ ಮಹರ್ಷಿ ಜಯಂತ್ಯೋತ್ಸವ ಸಂಘದವರು ಸಭೆಯಲ್ಲಿ ತಿಳಿಸಿದರು. ಇದಕ್ಕೆ ಸಮ್ಮತಿಸಿದ ಅಪರ ಜಿಲ್ಲಾಧಿಕಾರಿಗಳು, ಮೆರವಣಿಗಾಗಿ ಸಂಘಕ್ಕೆ ಒಂದು ದಿನ ಮುಂಚಿತವಾಗಿ ಟ್ರಾö್ಯಕ್ಟರ್ ನೀಡುವಂತೆ ಪ್ರಾದೇಶಿಕ ಸಾರಿಗೆ ಇಲಾಖೆಗೆ ಹಾಗೂ ಸ್ಥಳೀಯ ನುರಿತ ಕಲಾತಂಡವನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಟೀ, ಟಿಫಿನ್ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ವಹಿಸಲಾಯಿತು. ಜಯಂತಿಯಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಪೊಲೀಸ್ ಇಲಾಖೆಗೆ ತಿಳಿಸಲಾಯಿತು. ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳನ್ನು ನೇಮಕ ಮಾಡಲಾಯಿತು.
ಶಿಷ್ಟಾಚಾರದಂತೆ ಫೆ.೧ರಂದು ಪೂಜೆ: ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಶಿಷ್ಟಾಚಾರದಂತೆ ಫೆಬ್ರುವರಿ ೧ರಂದು ಬೆಳಿಗ್ಗೆ ಸವಿತಾ ಮಹರ್ಷಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಸವಿತಾ ಮಹರ್ಷಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ತಾಲ್ಲೂಕು ಮಟ್ಟದಲ್ಲಿ ಕೂಡ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆಗೆ ಆಯಾ ತಹಶೀಲ್ದಾರರು ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ್ ಅವರು ಸಭೆಯ ನಡಾವಳಿ ಓದಿದರು. ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ದತ್ತಪ್ಪ ಕಲ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ ಅವರು ಉಪಸ್ಥಿತರಿದ್ದರು.
ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷರಾದ ಅಪ್ಪಣ್ಣ ಚಿನ್ನಾಕರ, ಜಿಲ್ಲಾ ಪ್ರತಿನಿಧಿ ನಾಗಪ್ಪ ವಡಿಗೇರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ ಗೌನಳ್ಳಿ, ತಾಲ್ಲೂಕು ಘಟಕದ ಅಧ್ಯಕ್ಷರಾದ ನಾಗಪ್ಪ ಹತ್ತಿಕುಣಿ, ಮುಖಂಡರಾದ ಬನ್ನಪ್ಪ ಯಲ್ಲಪ್ಪ ಕಿಲ್ಲನಕೇರಾ, ಶಂಕರ ಹಣಮಂತ ಕಲ್ಮನಿ, ಗೋಪಾಲ ಕಿಲ್ಲನಕೇರಾ, ಮಾರುತಿ ಕಟ್ಟಿಮನಿ, ಬಸವರಾಜ ಮೈಲಾಪುರ ಅಗಸಿ, ವಿಶ್ವನಾಥ ಮೈಲಾಪುರ ಅಗಸಿ, ಶ್ರೀನಿವಾಸ ಮೈಲಾಪುರ ಅಗಸಿ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಇಂದು ರಸ್ತೆ ಅಡಿಗಲ್ಲು ಸಮಾರಂಭ
ಯಾದಗಿರಿ, ಜನವರಿ ೨೪ (ಕರ್ನಾಟಕ ವಾರ್ತೆ): ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ೨೦೧೯-೨೦ನೇ ಸಾಲಿನ ಎಸ್.ಡಿ.ಪಿ (ಟಿ.ಎಸ್.ಪಿ) ಯೋಜನೆಯಡಿಯಲ್ಲಿ ಯಾದಗಿರಿ ತಾಲ್ಲೂಕಿನ ವೆಂಕಟೇಶ ನಗರದಿಂದ ವಡ್ನಳ್ಳಿ ಗ್ರಾಮದವರೆಗೆ ಕಿ.ಮೀ ೧.೫೦ರಿಂದ ೨.೫೦ರವರೆಗೆ (ಕೆಲಸದ ಭಾಗ ಕಿ.ಮೀ ೦.೪೦ರಿಂದ ೧.೯೦ರವರೆಗೆ) ರಸ್ತೆ ಸುಧಾರಣೆ (೧೧೦ ಲಕ್ಷ ರೂ.) ಹಾಗೂ ೨೦೧೯-೨೦ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಮೈಕ್ರೋ) ಯೋಜನೆಯಡಿಯಲ್ಲಿ ಯಾಗಗಿರಿ ತಾಲ್ಲೂಕಿನ ವಡ್ನಳ್ಳಿಯಿಂದ ಮುನ್ಸಿ ತಾಂಡಾದವರೆಗೆ ಡಾಂಬರೀಕರಣ ನಿರ್ಮಾಣ ಕಾಮಾಗಾರಿಯ (೯೫ ಲಕ್ಷ ರೂ.) ಅಡಿಗಲ್ಲು ಸಮಾರಂಭವನ್ನು ಜನವರಿ ೨೫ರಂದು ಬೆಳಿಗ್ಗೆ ೧೧ ಗಂಟೆಗೆ ವಡ್ನಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಶಿಲಾನ್ಯಾಸ ನೆರವೇರಿಸುವರು. ಶಾಸಕರಾದ ನಾಗನಗೌಡ ಕಂದಕೂರ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ಡಾ.ಉಮೇಶ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಬಿ.ಪಾಟೀಲ್, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರೇಮಕುಮಾರ ಚವ್ಹಾಣ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅನಿತಾಬಾಯಿ ಸುರೇಶ್ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.

ನಾಳೆ ಗಣರಾಜ್ಯೋತ್ಸವ ದಿನಾಚರಣೆ
ಯಾದಗಿರಿ, ಜನವರಿ ೨೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ ಹಾಗೂ ಭಾವೈಕ್ಯತಾ ಸಮಿತಿ ಸಂಯುಕ್ತಾಶ್ರಯದಲ್ಲಿ ೭೧ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜನವರಿ ೨೬ರಂದು ಬೆಳಿಗ್ಗೆ ೯ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ರಾಷ್ಟç ಧ್ವಜಾರೋಹಣ ನೆರವೇರಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ. ಜಾಧವ್ ಅವರು ಅತಿಥಿಗಳಾಗಿ ಭಾಗವಹಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪುರ, ನರಸಿಂಹ ನಾಯಕ(ರಾಜುಗೌಡÀ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ್, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ನಾಳೆಯಿಂದ ಫಲಪುಷ್ಪ ಪ್ರದರ್ಶನ, ಸಿರಿಧಾನ್ಯ ಮೇಳ
ಯಾದಗಿರಿ, ಜನವರಿ ೨೪ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ, ತೋಟಗಾರಿಕೆ, ಕೃಷಿ ಹಾಗೂ ಕೃಷಿ ಸಂಬAಧಿತ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳ-೨೦೨೦ ವನ್ನು ಜನವರಿ ೨೬ ಮತ್ತು ೨೭ರಂದು ಯಾದಗಿರಿ ನಗರದ ಸ್ಟೇಷನ್ ರಸ್ತೆ ಮಾರ್ಗದಲ್ಲಿರುವ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಜನವರಿ ೨೬ ಬೆಳಿಗ್ಗೆ ೧೧ ಗಂಟೆಗೆ ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ಡಾ.ಉಮೇಶ ಜಿ.ಜಾಧವ, ರಾಜಾ ಅಮರೇಶ್ವರ ನಾಯಕ, ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ಗೌರವಾನ್ವಿತ ಅತಿಥಿಗಳಾಗಿ ಆಗಮಿಸುವರು.
ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ರಾಜೇಂದ್ರಕುಮಾರ ಕಠಾರಿಯ, ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಬಿ.ವೆಂಕಟೇಶ, ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ತಾಳೆ ಬೆಳೆ ಯೋಜನೆ ಹಾಗೂ ತೋಟಗಾರಿಕೆ ಅಪರ ನಿರ್ದೇಶಕರಾದ ಡಾ.ಪ್ರಕಾಶ ಎಂ.ಸೋಬರದ್, ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾದ ಕೆ.ಎಂ.ಪರಶಿವಮೂರ್ತಿ, ಹನಿ ನಿರಾವರಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿಗಳಾದ ಕದ್ರೆಗೌಡ, ತೋಟಗಾರಿಕೆ ವಿಭಾಗೀಯ ಜಂಟಿ ನಿರ್ದೇಶಕರಾದ ಎಸ್.ಬಿ.ದಿಡ್ಡಿಮನಿ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಜ.೨೮ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
ಯಾದಗಿರಿ, ಜನವರಿ ೨೪ (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ವಿವಿಧ ಕಂಪನಿಗಳಿAದ ಉದ್ಯೋಗವನ್ನು ಕಲ್ಪಿಸಲು ಒಂದು ದಿನದ ನೇರ ಸಂದರ್ಶನವನ್ನು ಜನವರಿ ೨೮ರಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಜಿಲ್ಲಾಡಳಿತ ಭವನದ ೨ನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
೧)ವಾಯಾ ಫೀನ್‌ಸರ್ವ್ ಪ್ರೆöÊ.ಲಿ.ನ ೨೫ ಸಂಘಮಿತ್ರ ಫೀಲ್ಡ್ ಆಫೀಸರ್ ಖಾಲಿ ಹುದ್ದೆಗಳಿಗೆ ೧೦ನೇ, ಪಿಯುಸಿ, ಯಾವುದೇ ಪದವಿ ಪೂರ್ಣಗೊಳಿಸಿರಬೇಕು. ಯಾದಗಿರಿ, ಕಲಬುರಗಿ ಕೆಲಸ ನಿರ್ವಹಿಸುವ ಸ್ಥಳಗಳಾಗಿದ್ದು, ಪುರುಷರಿಗೆ ಮಾತ್ರ ಅವಕಾಶ ಇರುತ್ತದೆ. ೨) ಸ್ವತಂತ್ರ ಮೈಕ್ರೋಫಿನ್ ಪ್ರೆöÊ.ಲಿ.ನ ೪೦ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಪಿಯುಸಿ ಪಾಸಾಗಿರಬೇಕು. ಬ್ರಾಂಚ್ ಆಪರೇಷನ್ ಮ್ಯಾನೇಜರ್-೫ ಹುದ್ದೆ, ಬ್ರಾಂಚ್ ಮ್ಯಾನೇಜರ್-೫ ಹುದ್ದೆ, ಸ್ವತಂತ್ರ ರಿಸ್ಕ್ ಆಫೀಸರ್-೫ ಹುದ್ದೆಗಳಿಗೆ ಯಾವುದೇ ಪದವಿ ಪಾಸಾಗಿರಬೇಕು. ಯಾದಗಿರಿ, ಕಲಬುರಗಿ, ಬೀದರ್, ರಾಯಚೂರು, ವಿಜಯಪೂರ ಕೆಲಸ ನಿರ್ವಹಿಸುವ ಸ್ಥಳಗಳಾಗಿವೆ. ೩) ಕಿಸಾನ್ ಕ್ರಾಫ್ಟ್ ಆಗ್ರೋ ಫರ್ಟಿಲೈಜರ್ ಪ್ರೆöÊ.ಲಿ ಕಲಬುರಗಿ ೨೫ ಫೀಲ್ಡ್ ಅಸಿಸ್ಟಂಟ್ ಹುದ್ದೆಗಳಿಗೆ ಡಿಪ್ಲೋಮಾ ಅಗ್ರಿಕಲ್ಚರ್ ಅಥವಾ ಯಾವುದೇ ಪದವಿ ಪಾಸಾಗಿರಬೇಕು. ಯಾದಗಿರಿ, ಕಲಬುರಗಿ, ರಾಯಚೂರು, ಬೀದರ್ ಕೆಲಸ ನಿರ್ವಹಿಸುವ ಸ್ಥಳಗಳಾಗಿವೆ. ೪) ಭಾರತ್ ಫೈನಾನ್ಸಿಯಲ್ ಇನ್‌ಕ್ಲೂಷನ್ ಲಿ.ನ ೫೦ ಫೀಲ್ಡ್ ಅಸಿಸ್ಟಂಟ್ ಹುದ್ದೆಗಳಿಗೆ ೧೦ನೇ, ೧೨ನೇ, ಯಾವುದೇ ಪದವಿ  ವಿದ್ಯಾರ್ಹತೆ ಇರಬೇಕು. ಪುರುಷರು ಮಾತ್ರ. ಯಾದಗಿರಿ, ರಾಯಚೂರು, ಬಳ್ಳಾರಿ ಕೆಲಸ ನಿರ್ವಹಿಸುವ ಸ್ಥಳಗಳಾಗಿವೆ.
ನೇರ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ವ್ಯಕ್ತಿ ಪರಿಚಯ (ರೆಸ್ಯುಮ್/ಬಯೋಡಾಟಾ) ಪತ್ರದ ಪ್ರತಿಗಳನ್ನು ಹಾಗೂ ವಿದ್ಯಾರ್ಹತೆ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರದ ಪ್ರತಿಗಳು ಹಾಗೂ ೨ ಭಾವಚಿತ್ರ, ಆಧಾರ್ ಕಾರ್ಡ ಕಡ್ಡಾಯವಾಗಿ ತರಬೇಕು. ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ದೂ:೦೮೪೭೩-೨೫೩೭೧೮, ಮೊ:೯೪೪೮೨೫೦೮೬೮ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಪಲ್ಸ್ ಪೋಲಿಯೊದಲ್ಲಿ ಶೇ.೧೦೦.೮ರಷ್ಟು ಸಾಧನೆ
ಯಾದಗಿರಿ, ಜನವರಿ ೨೪ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜನವರಿ ೧೯ರಿಂದ ೨೨ರವರೆಗೆ ನಡೆದ ರಾಷ್ಟಿçÃಯ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಒಟ್ಟು ೧,೬೩,೨೩೧ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟಾರೆ ಶೇ.೧೦೦.೮ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್ ಮತ್ತು ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಲಕ್ಷಿö್ಮÃಕಾಂತ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ೦-೫ ವರ್ಷದೊಳಗಿನ ಒಟ್ಟು ೧,೬೨,೨೫೫ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ೧,೨೯,೯೪೪ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.೧೦೦.೮ರಷ್ಟು ಪ್ರಗತಿ ಸಾಧಿಸಲಾಗಿದೆ. ಇನ್ನು ನಗರ ಪ್ರದೇಶದಲ್ಲಿ ೩೩,೨೮೭ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.೧೦೦.೫ರಷ್ಟು ಪ್ರಗತಿ ಸಾಧಿಸಲಾಗಿದೆ.
ಯಾದಗಿರಿ ತಾಲ್ಲೂಕಿನಲ್ಲಿ ಒಟ್ಟು ೫೭,೪೧೮ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ.೧೦೦.೮ರಷ್ಟು ಪ್ರಗತಿ ಸಾಧಿಸಲಾಗಿದೆ. ಈ ಪೈಕಿ ಗ್ರಾಮೀಣ ಪ್ರದೇಶದಲ್ಲಿ ೪೦,೫೧೮ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.೧೦೧.೯ರಷ್ಟು ಪ್ರಗತಿ ಸಾಧಿಸಲಾಗಿದೆ. ಶಹಾಪೂರ ತಾಲ್ಲೂಕಿನಲ್ಲಿ ಒಟ್ಟು ೪೮,೫೨೯ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.೧೦೦.೭ರಷ್ಟು ಪ್ರಗತಿ ಸಾಧಿಸಲಾಗಿದೆ. ಈ ಪೈಕಿ ಗ್ರಾಮೀಣ ಪ್ರದೇಶದಲ್ಲಿ ೩೯,೧೫೯ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.೯೯.೩ರಷ್ಟು ಪ್ರಗತಿ ಸಾಧಿಸಲಾಗಿದೆ. ಸುರಪೂರ ತಾಲ್ಲೂಕಿನಲ್ಲಿ ಒಟ್ಟು ೫೭,೨೮೪ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.೧೦೦.೮ ರಷ್ಟು ಪ್ರಗತಿ ಸಾಧಿಸಲಾಗಿದೆ. ಈ ಪೈಕಿ ಗ್ರಾಮೀಣ ಪ್ರದೇಶದಲ್ಲಿ ೫೦,೨೬೭ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.೧೦೧.೨ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗುರುವಾರ, ಜನವರಿ 23, 2020

ರಾಷ್ಟ್ರೀಯ ಯುವ ದಿನಾಚರಣೆ

ಯಾದಗಿರಿ, ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಶಾರದಾ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆಯನ್ನು ನಗರದ ಶಾರದಾ ಆಯುರ್ವೇದಿಕ್ ಕಾಲೇಜಿನಲ್ಲಿ ಬುಧವಾರ ಆಚರಿಸಲಾಯಿತು. ಬಸವ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ನಾಗರತ್ನಾ ಕುಪ್ಪಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ತಿಳಿಸಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಬಿ.ಎ.ಎಂ.ಎಸ್ ದ್ವಿತೀಯ ವರ್ಷದ ವಿದ್ಯಾಶ್ರೀ ಅವರಿಗೆ ಮೊದಲನೆಯ ಬಹುಮಾನ, ಬಿ.ಎ.ಎಂ.ಎಸ್ ದ್ವಿತೀಯ ವರ್ಷದ ಐಶ್ವರ್ಯಾ ಅವರಿಗೆ ಎರಡನೆಯ ಬಹುಮಾನ, ಬಿ.ಎ.ಎಂ.ಎಸ್. ಪ್ರಥಮ ವರ್ಷದ ರಾಜೇಶ ಅವರಿಗೆ ಮೂರನೆಯ ಬಹುಮಾನವನ್ನು ನಗದು ರೂಪದಲ್ಲಿ ವಿತರಿಸಲಾಯಿತು. ಶಾರದಾ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ರಾಹುಲ್ ಕುಲಕರ್ಣಿ, ಏಡ್ಸ್ ನಿಯಂತ್ರಣ ಕಚೇರಿಯ ಜಿಲ್ಲಾ ಮೇಲ್ವಿಚಾರಕರಾದ ಆರತಿ ಎಂ.ಧನಶ್ರೀ, ತೇಜಶ್ವಿನಿ, ಸಬಿತಾ, ಸಿರಿನಾ, ಅನುಷಾ, ಸಂಕೇತ, ನಿಕಿತಾ ಮತ್ತು ಯಲ್ಲಪ್ಪ ಅವರು ಉಪಸ್ಥಿತರಿದ್ದರು. ಅಂಕಿತಾ ಡಿ, ತಾರಾ, ಮತ್ತು ಶಶಾಂಕ ಟಿ. ಅವರು ನಿರೂಪಿಸಿದರು. ಶರತಗೌಡ ವಂದಿಸಿದರು.

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...