ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರ ಪ್ರವಾಸ
ಯಾದಗಿರಿ, ಜನವರಿ 08 (ಕರ್ನಾಟಕ ವಾರ್ತೆ): ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರಾದ ಡಾ. ಜೆ.ರವಿಶಂಕರ್ ಅವರು ಜನವರಿ 9 ಮತ್ತು 10ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜ.9ರಂದು ಮಧ್ಯಾಹ್ನ 2.30 ಗಂಟೆಗೆ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸುವರು. ಸಂಜೆ 5 ಗಂಟೆಗೆ ಯಾದಗಿರಿ ಮತ್ತು ಗುರುಮಠಕಲ್ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು ಮತ್ತು ಮತದಾರರ ಪಟ್ಟಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಿದ ಮತದಾರರೊಂದಿಗೆ ಚರ್ಚೆ ನಡೆಸುವರು.
ಜ.10ರಂದು ಬೆಳಿಗ್ಗೆ 9 ಗಂಟೆಗೆ ಶಹಾಪುರ ವಿಧಾನಸಭಾ ಕ್ಷೇತ್ರ ಮತ್ತು ವಡಗೇರಾ ವ್ಯಾಪ್ತಿಯ ಮತಗಟ್ಟೆಗಳ ವೀಕ್ಷಣೆ ನಡೆಸುವರು. ನಂತರ ಮತದಾರರ ಪಟ್ಟಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಿದ ಮತದಾರರಿಂದ ಮಾಹಿತಿ ಪಡೆದುಕೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಹುಣಸಗಿ- ಲಿಂಗಸಗೂರು ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ