ಗುರುವಾರ, ಜನವರಿ 23, 2020

ಆಯುಷ್ ಇಲಾಖೆಯ ಕ್ಯಾಲೆಂಡರ್ ಬಿಡುಗಡೆ
ಯಾದಗಿರಿ, ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾ ಆಯುಷ್ ಇಲಾಖೆಯ 2020ರ ಕ್ಯಾಲೆಂಡರನ್ನು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಬಿಡುಗಡೆ ಮಾಡಿದರು.
ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಪ್ರಕಾಶ ರಾಜಾಪುರ, ಹೊನಗೇರಾ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ರಮೇಶ ಸಜ್ಜನ್ ಅವರು ಉಪಸ್ಥಿತರಿದ್ದರು.]

ಪೌರಕಾರ್ಮಿಕರಿಗೆ ಉಪಾಹಾರ ನೀಡಲು ದರಪಟ್ಟಿ ಆಹ್ವಾನ
ಯಾದಗಿರಿ, ಜನವರಿ 23 (ಕರ್ನಾಟಕ ವಾರ್ತೆ): ಶಹಾಪುರ ನಗರಸಭೆ ಆರೋಗ್ಯ ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ದಿನನಿತ್ಯ ಬೆಳಗಿನ ಜಾವದಲ್ಲಿ ಉಪಾಹಾರ ನೀಡಲು ಹೋಟೆಲ್ ಅಥವಾ ಏಜೆನ್ಸಿಯವರಿಂದ ಸೀಲಬಂದ್ ಲಕೋಟೆ ಮುಖಾಂತರ ದರಪಟ್ಟಿ ಆಹ್ವಾನಿಸಲಾಗಿದೆ.
ಒಟ್ಟು 100 ಜನ ಪೌರಕಾರ್ಮಿಕರಿದ್ದು, ಪ್ರತಿಯೊಬ್ಬ ಪೌರಕಾರ್ಮಿಕರಿಗೆ ಉಪಾಹಾರ ದರ 20 ರೂ. ನಿಗದಿಪಡಿಸಿದೆ. ಹೆಚ್ಚಿನ ವಿವರಗಳಿಗೆ ಕಚೇರಿಯ ಆರೋಗ್ಯ ಶಾಖೆಯ ಪರಿಸರ ಇಂಜಿನೀಯರರನ್ನು ಸಂಪರ್ಕಿಸಬಹುದು. ದರಪಟ್ಟಿಗಳನ್ನು ಜನವರಿ 30ರಂದು ಸಂಜೆ 4 ಗಂಟೆಗೆ ಕೊನೆಯ ದಿನವಾಗಿದ್ದು, ಜನವರಿ 31ರಂದು ಬೆಳಿಗ್ಗೆ 11 ಗಂಟೆಗೆ ಕೊಟೇಶನ ತೆರೆಯಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...