ಇಂದು ಸ್ಪರ್ಶ್ ಕುಷ್ಠ ಅರಿವು ಆಂದೋಲನ
ಯಾದಗಿರಿ, ಜನವರಿ 29 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಕುಷ್ಠ ವಿಭಾಗ) ಸಂಯುಕ್ತಾಶ್ರಯದಲ್ಲಿ ಸ್ಪರ್ಶ್ ಕುಷ್ಠ ಅರಿವು ಆಂದೋಲನ ಉದ್ಘಾಟನೆ ಕಾರ್ಯಕ್ರಮವನ್ನು ಜನವರಿ 30ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನಾಗನಗೌಡ ಕಂದಕೂರ, ನರಸಿಂಹ ನಾಯಕ (ರಾಜುಗೌಡ), ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಬಿ.ಜಿ.ಪಾಟೀಲ್, ಶರಣಪ್ಪ ಮಟ್ಟೂರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಖ್ಯಾತ ಹಾಸ್ಯ ಕಲಾವಿದರಾದ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಫೆ.1ರಂದು ಮಡಿವಾಳ ಮಾಚಿದೇವರ ಜಯಂತಿ
ಯಾದಗಿರಿ, ಜನವರಿ 29 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು ಫೆಬ್ರುವರಿ 1ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಯಾಮರೆಡ್ಡಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಭೀಮರಾಯ ಲಿಂಗೇರಿ ಅವರು ವಿಶೇಷ ಉಪನ್ಯಾಸ ನೀಡುವರು.
ಆರ್ಯ ವೈಶ್ಯ ಜನಾಂಗದ ಸೌಲಭ್ಯಗಳಿಗಾಗಿ ಜಾತಿ ಪ್ರಮಾಣ ಪತ್ರ
ಯಾದಗಿರಿ, ಜನವರಿ 29 (ಕರ್ನಾಟಕ ವಾರ್ತೆ): ಆರ್ಯ ವೈಶ್ಯ ಜನಾಂಗದವರಿಗೆ ಈ ಹಿಂದೆ ಜಾತಿ ಪ್ರಮಾಣ ಪತ್ರವನ್ನು ವಿದ್ಯಾಭ್ಯಾಸದ ಸಲುವಾಗಿ 18 ವರ್ಷ ಒಳಪಟ್ಟವರಿಗೆ ಮಾತ್ರ ನೀಡಲಾಗುತ್ತಿತ್ತು. ಕರ್ನಾಟಕ ರಾಜ್ಯ ಸರ್ಕಾರವು ಇನ್ಮುಂದೆ ಆರ್ಯ ವೈಶ್ಯ ಜನಾಂಗದವರಿಗೆ ಶಾಲಾ ಪ್ರವೇಶಕ್ಕೆ ಮಾತ್ರವಲ್ಲದೆ ಸರ್ಕಾರಿ ಸಂಸ್ಥೆಗಳಿಂದ ಸಾಲ, ಸಹಾಯಧನ ಮತ್ತು ತರಬೇತಿ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನಮೂನೆ-ಜಿ ಯಲ್ಲಿ ಪಡೆಯಲು 2019ರ ಡಿಸೆಂಬರ್ 16ರಂದು ಆದೇಶಿಸಲಾಗಿದೆ.
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು/ ಶೈಕ್ಷಣಿಕ ಸಾಲ ಯೋಜನೆ ಮತ್ತು ಇತರೆ ಸರ್ಕಾರಿ ಸಂಸ್ಥೆಗಳಿಂದ ಸಾಲ-ಸೌಲಭ್ಯಗಳನ್ನು ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರವು ಕಡ್ಡಾಯವಾಗಿರುತ್ತದೆ. ಆದ್ದರಿಂದ ಆರ್ಯ ವೈಶ್ಯ ಸಮುದಾಯದವರು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನಮೂನೆ-ಜಿ ಯಲ್ಲಿ ಪಡೆಯಲು ನಾಡಕಚೇರಿ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ನಾಡಕಚೇರಿಯ ಅಂತರ್ಜಾಲ www.nadakacheri.karnataka.gov.in ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 9448451111, ಇ-ಮೇಲ್ support.kacdc@karnataka.gov.in ಅಥವಾ ನಾಡಕಚೇರಿಯ ಉಚಿತ ಸಹಾಯವಾಣಿ: 18005990044 ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಗರ, ತಿಂಥಣಿ ಜಾತ್ರೆಗೆ 70 ವಿಶೇಷ ಬಸ್ ವ್ಯವಸ್ಥೆ
ಯಾದಗಿರಿ, ಜನವರಿ 29 (ಕರ್ನಾಟಕ ವಾರ್ತೆ): ಶಹಾಪುರ ತಾಲ್ಲೂಕಿನ ಸಗರದ ಶ್ರೀ ಯಲ್ಲಮ್ಮ ಮತ್ತು ಸುರಪುರ ತಾಲ್ಲೂಕಿನ ತಿಂಥಣಿ ಶ್ರೀ ಮೌನೇಶ್ವರ ದೇವರ ಜಾತ್ರೆಗೆ ಬರುವ ಭಕ್ತಾದಿ ಪ್ರಯಾಣಿಕರ ಸಾರಿಗೆ ಅನುಕೂಲಕ್ಕಾಗಿ ಫೆಬ್ರುವರಿ 3ರಿಂದ 10ರ ವರೆಗೆ ಯಾದಗಿರಿ ವಿಭಾಗದಿಂದ 70 ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ.
ಈ ವಿಶೇಷ ಬಸ್‍ಗಳು ಯಾದಗಿರಿ, ಶಹಾಪುರ, ಸುರಪುರ, ಗುರುಮಠಕಲ್, ಕಲಬುರಗಿ, ತಾಳಿಕೋಟಿ, ವಿಜಯಪುರ, ಮುದ್ದೇಬಿಹಾಳ, ನಾರಾಯಣಪುರ, ಹುಣಸಗಿ, ಕೆಂಭಾವಿ, ಸಿಂಧಗಿ ಮುಂತಾದ ಸ್ಥಳಗಳಿಗೆ ಕಾರ್ಯಾಚರಣೆ ಮಾಡುತ್ತವೆ. ಸಾರ್ವಜನಿಕ ಪ್ರಯಾಣಿಕರು ವಿಶೇಷ ಬಸ್‍ಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೊಗೇರಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ