ಸೋಮವಾರ, ಜನವರಿ 13, 2020

ಇಂದು ಎಸಿಬಿ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಯಾದಗಿರಿ, ಜನವರಿ ೧೩ (ಕರ್ನಾಟಕ ವಾರ್ತೆ): ಯಾದಗಿರಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ವಡಗೇರಾ ತಾಲ್ಲೂಕಿನ ಬೆಂಡೆಬೆAಬಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜನವರಿ ೧೪ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಸಿ ಅರ್ಜಿ ಅಹವಾಲು ಸ್ವೀಕಾರ ಮಾಡಲಿದ್ದು, ಸಾರ್ವಜನಿಕರು ಅಧಿಕಾರಿಗಳಿಗೆ ಭೇಟಿಯಾಗಿ ಭ್ರಷ್ಟಾಚಾರಕ್ಕೆ ಸಂಬAಧಿಸಿದAತೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಭ್ರಷ್ಟಾಚಾರ ನಿಗ್ರಹ ದಳದ ಡಿಎಸ್‌ಪಿ ಡಾ.ಸಂತೋಷ ಕೆ.ಎಂ (ಮೊ:೯೪೮೦೮೦೬೨೪೨), ಪೊಲೀಸ್ ಇನ್‌ಸ್ಪೆಕ್ಟರ್ ಬಾಬಾಸಾಹೇಬ ಪಾಟೀಲ್ (ಮೊ:೯೪೮೦೮೦೬೩೧೩), ಪೊಲೀಸ್ ಇನ್‌ಸ್ಪೆಕ್ಟರ್ ಗುರುಪಾದ ಎಸ್.ಬಿರಾದಾರ (ಮೊ:೯೪೮೦೮೦೬೩೧೪) ಅವರು ಅಹವಾಲು ಸ್ವೀಕರಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮದ್ಯ ಮಾರಾಟ ನಿಷೇಧ
ಯಾದಗಿರಿ, ಜನವರಿ ೧೩ (ಕರ್ನಾಟಕ ವಾರ್ತೆ): ಶಹಾಪುರ ತಾಲ್ಲೂಕಿನ ಭೀಮರಾಯನಗುಡಿಯ ಶ್ರೀ ಬಲಭೀಮೇಶ್ವರ ಹಾಗೂ ದಿಗ್ಗಿ ಗ್ರಾಮದ ಶ್ರೀ ಸಂಗಮೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಅಂಗವಾಗಿ ಮದ್ಯಪಾನ ಮತ್ತು ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.
ಭೀಮರಾಯನಗುಡಿ ಹಾಗೂ ದಿಗ್ಗಿ ಗ್ರಾಮದ ಸುತ್ತಮುತ್ತಲಿನ ೩ ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಜನವರಿ ೧೪ರ ಮಧ್ಯರಾತ್ರಿಯಿಂದ ಜ.೧೫ರ ಮಧ್ಯರಾತ್ರಿವರೆಗೆ ಕರ್ನಾಟಕ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿದ್ದು, ೩ ಕಿ.ಮೀ ವ್ಯಾಪ್ತಿಯ ಎಲ್ಲಾ ವೈನ್‌ಶಾಪ್‌ಗಳು, ಬಾರ್‌ಗಳು, ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ವಿಶ್ವ ಕೌಶಲ್ಯ ಸ್ಪರ್ಧೆ ತರಬೇತಿಗೆ ಅರ್ಜಿ
ಯಾದಗಿರಿ, ಜನವರಿ ೧೩ (ಕರ್ನಾಟಕ ವಾರ್ತೆ): ವಿಶ್ವ ಕೌಶಲ್ಯ ಸ್ಪರ್ಧೆಗೆ ದೇಶದ ವಿವಿಧ ರಾಜ್ಯಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಸ್ಕಿಲ್ ಇಂಡಿಯಾ-೨೦೨೦ ಆತಿಥ್ಯವನ್ನು ರಾಜ್ಯ ವಹಿಸಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಿಂದ ಭಾಗವಹಿಸುವ ಸ್ಪರ್ಧಿಗಳಿಗೆ ಟೊಯೊಟಾ, ಬೋಶ್, ಆಟೊ ಡೆಸ್ಕ್, ಸ್ನೇಯ್ಡರ್ ಇಲೆಕ್ಟಿçಕ್, ಯುಟಿಎಲ್ ಟೆಕ್ನಾಲಜಿ ಸೇರಿದಂತೆ ಮುಂತಾದ ಸಂಸ್ಥೆಗಳಿAದ ತರಬೇತಿ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವರ್ಲ್ಡ್ ಸ್ಕಿಲ್ ಸ್ಪರ್ಧೆಗೆ ರಾಜ್ಯದಿಂದ ಸ್ಪರ್ಧಿಗಳನ್ನು ಕಳುಹಿಸಲು ಸರಕಾರವು ಸಿದ್ಧತೆ ನಡೆಸಿದ್ದು, ಇಂಡಿಯಾ ಸ್ಕಿಲ್ ಕರ್ನಾಟಕ-೨೦೨೦ರಲ್ಲಿ ವಿಜೇತರಾದವರಿಗೆ ಉತ್ತಮ ರೀತಿಯಲ್ಲಿ ತರಬೇತಿ ನೀಡಿ ಪ್ರಾದೇಶಿಕ, ರಾಷ್ಟಿçÃಯ, ಇಂಡಿಯಾ ಸ್ಕಿಲ್ ಸ್ಪರ್ಧೆ ಮತ್ತು ಚೀನಾದ ಶಾಂಘೈನಲ್ಲಿ ೨೦೨೧ ರಲ್ಲಿ ನಡೆಯುವ ವರ್ಲ್ಡ್ ಸ್ಕಿಲ್ ಸ್ಪರ್ಧೆಯಲ್ಲಿ ಭಾರತ ಪ್ರತಿನಿಧಿಸಲು ಸಜ್ಜುಗೊಳಿಸಲಾಗುತ್ತಿದೆ. ಒಟ್ಟು ೩೮ ಸ್ಕಿಲ್‌ಗಳಲ್ಲಿ ಸ್ಪರ್ಧೆ ಮಾಡಲು ಅವಕಾಶವಿರುತ್ತದೆ. ಕರ್ನಾಟಕ ರಾಜ್ಯದಿಂದ ಭಾಗವಹಿಸುವ ಸ್ಪರ್ಧಿಗಳಿಗೆ ವಿವಿಧ ಸಂಸ್ಥೆಗಳಿAದ ತರಬೇತಿ ಒದಗಿಸಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸುವವರು ೨೨ ವರ್ಷದ ಒಳಗಿನವರಾಗಿದ್ದು, ಯಾವುದೇ ಕೌಶಲ್ಯ ಹೊಂದಿರಬೇಕು. ವಿದ್ಯಾರ್ಹತೆ ಅವಶ್ಯಕತೆ ಇಲ್ಲ. ಶೈಕ್ಷಣಿಕ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರು ಹಾಗೂ ಪೋಷಕರು ತಮ್ಮ ಮಕ್ಕಳಿಗೆ ಸದರಿ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು. ಆಸಕ್ತಿ ಇರುವ ಯಾದಗಿರಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಕ-ಯುವತಿಯರು ಜನವರಿ ೧೫ರೊಳಗಾಗಿ worldskillsindia.co.in & kaushalkar.com  ನಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ (ಮೊ:೭೩೫೩೨೩೯೦೧೧, ೯೩೮೦೪೩೨೮೯೪, ೯೯೦೧೫೪೧೪೨೪)ಗಳನ್ನು ಸಂಪರ್ಕಿಸಬಹುದಾಗಿದೆ.

ಜ.೧೬ರAದು ಹಣಕಾಸು ಸಮಿತಿ ಸಭೆ
ಯಾದಗಿರಿ, ಜನವರಿ ೧೩ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿಯ ಹಣಕಾಸು, ಲೆಕ್ಕ ಪರಿಶೋಧನೆ ಹಾಗೂ ಯೋಜನಾ ಸ್ಥಾಯಿ ಸಮಿತಿಯ ಸಭೆಯನ್ನು ಜನವರಿ ೧೬ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಹಾಗೂ ಸಮಿತಿಯ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ಪ್ರವಾಸ
ಯಾದಗಿರಿ, ಜನವರಿ ೧೩ (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಶಿಕಲಾ ಟೆಂಗಳಿ ಅವರು ಜನವರಿ ೧೭ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.
ಜಿಲ್ಲೆಯಲ್ಲಿ ನಿಗಮದ ವಿವಿಧ ಯೋಜನೆಗಳ ಫಲಾನುಭವಿ ಘಟಕಗಳು ಹಾಗೂ ಫಲಾನುಭವಿಗಳ ಭೇಟಿ ಮಾಡುವರು. ಕೆಎಸ್‌ಎಫ್‌ಸಿ ಯಿಂದ ಸಾಲ ಪಡೆದ ಮಹಿಳಾ ಉದ್ದಿಮೆದಾರರ ಘಟಕಗಳಿಗೆ ಭೇಟಿ ನೀಡಿ ನಂತರ ನಿಗಮದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ತದನಂತರ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸುವರು.

ಜ.೧೮ರಂದು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ
ಯಾದಗಿರಿ, ಜನವರಿ ೧೩ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಜನವರಿ ೧೮ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಲಿಂಗೇರಿ ಕೋನಪ್ಪ ಮಹಿಳಾ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ.ಜ್ಯೋತಿಲತಾ ತಡಬಿಡಿಮಠ ಅವರು ವಿಶೇಷ ಉಪನ್ಯಾಸ ನೀಡುವರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...