ಬುಧವಾರ, ಜನವರಿ 1, 2020

ಜ.೬ರಂದು ಸ್ಥಾಯಿ ಸಮಿತಿ ಸಭೆ
ಯಾದಗಿರಿ, ಜನವರಿ ೦೧ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಭೆಯನ್ನು ಸಮಿತಿಯ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ ಅವರ ಅಧ್ಯಕ್ಷತೆಯಲ್ಲಿ ಜನವರಿ ೬ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ ಉಪ ಕಾರ್ಯದರ್ಶಿಗಳಾದ ಮುಕ್ಕಣ್ಣ ಕರಿಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೦೧ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ರಾಷ್ಟಿçಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಗೌರವಧನ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಭಾಕರ ಅವರು ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಯಾದಗಿರಿ ಕಚೇರಿಯಲ್ಲಿ ೧-ಜಿಲ್ಲಾ ಸಂಯೋಜಕರು, ೧-ಜಿಲ್ಲಾ ಕಾರ್ಯಕ್ರಮ ಸಹಾಯಕರು ಹಾಗೂ ಜಿಲ್ಲೆಯ ಶಹಾಪುರ, ಸುರಪುರ, ಯಾದಗಿರಿ, ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆಯಗಳಲ್ಲಿ ತಲಾ ೧ ತಾಲ್ಲೂಕು ಸಂಯೋಜಕರು, ೧-ತಾಲ್ಲೂಕು ಕಾರ್ಯಕ್ರಮ ಸಹಾಯಕರು ಸೇರಿ ಒಟ್ಟು ೧೦-ಹುದ್ದೆಗಳನ್ನು ಪೋಷಣ್ ಅಭಿಯಾನ ಯೋಜನೆಯು ಜಾರಿಯಲ್ಲಿರುವವರೆಗೆ ಮಾತ್ರ ಗೌರವಧನ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶನಕ್ಕೆ ಆಹ್ವಾನಿಸಿ ಸಂದರ್ಶನ, ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳು, ಅನುಭವ, ಕಂಪ್ಯೂಟರ್ ಪರೀಕ್ಷೆಗಳ ಮೂಲಕ ನೇಮಕಾತಿಗೊಳಿಸಲಾಗುವುದು.
ಈ ಹುದ್ದೆಗಳಿಗೆ ಕರ್ತವ್ಯ ನಿರ್ವಹಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಯಾದಗಿರಿ ಕಚೇರಿ ಅಥವಾ ಎನ್.ಐ.ಸಿ. ವೆಬ್‌ಸೈಟ್: http://yadgir.nic.in ನಲ್ಲಿ ಪಡೆದು ಜನವರಿ ೨೦ರವರೆಗೆ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಕಚೇರಿಗೆ ಸಲ್ಲಿಸಬೇಕು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ
ಯಾದಗಿರಿ, ಜನವರಿ ೦೧ (ಕರ್ನಾಟಕ ವಾರ್ತೆ): ಯಾದಗಿರಿ ನಗರದ ಹೊಸಳ್ಳಿ ಕ್ರಾಸ್‌ನಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್- ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಉಚಿತ ಕುರಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ೧೮ರಿಂದ ೪೫ ವರ್ಷ ವಯಸ್ಸಿನ ನಿರುದ್ಯೋಗಿ ಯುವಕ, ಯುವತಿಯರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು. ಕನಿಷ್ಠ ೭ನೇ ತರಗತಿ ವ್ಯಾಸಂಗ ಹೊಂದಿದ್ದು, ಕನ್ನಡ ಓದಲು ಮತ್ತು ಬರೆಯಲು ಬರಬೇಕು. ಗ್ರಾಮೀಣ ಪ್ರದೇಶದವರಿಗೆ ಆದ್ಯತೆ ನೀಡಲಾಗುವುದು. ಜನವರಿ ೬ರಿಂದ ೧೫ರವರೆಗೆ ನಡೆಯಲಿರುವ ಕುರಿ ಸಾಕಾಣಿಕೆ ತರಬೇತಿಗೆ ಆಸಕ್ತರು ಸಂಸ್ಥೆಯ ಕಚೇರಿಯಲ್ಲಿ ಅಂಕಪಟ್ಟಿ ಅಥವಾ ವರ್ಗಾವಣೆ ಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ಇತ್ತೀಚಿನ ೪ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು. ತರಬೇತಿ ಅವಧಿಯಲ್ಲಿ ಉಚಿತವಾಗಿ ವಸತಿ, ಊಟ ಹಾಗೂ ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ವ್ಯವಸ್ಥೆ ಮಾಡಲಾಗುತ್ತದೆ. ತರಬೇತಿ ನಂತರ ಪ್ರಮಾಣ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ನಿರ್ದೇಶಕರಾದ ಎಸ್.ಆರ್.ನಾಡಗೇರಿ ಮೊ:೯೪೪೮೯೯೪೧೬೪, ಉಪನ್ಯಾಸಕರಾದ ಎಲ್.ಎನ್. ಲಕ್ಷö್ಮಣರೆಡ್ಡಿ ಮೊ:೯೮೮೦೯೦೭೧೩೯, ಕಚೇರಿ ಸಹಾಯಕರಾದ ಭೀಮಬಾಯಿ ಮೊ:೯೫೧೩೧೮೩೬೫೧ ಹಾಗೂ ಕಚೇರಿ ದೂ:೦೮೪೭೩೨೫೩೧೭೮ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...