ಜ.೩೦ ರಿಂದ ಸ್ಪರ್ಶ ಕುಷ್ಠ ಅರಿವು ಆಂದೋಲನ ಕಾರ್ಯಕ್ರಮ
-ಶಂಕರಗೌಡ ಎಸ್.ಸೋಮನಾಳ
ಯಾದಗಿರಿ, ಜನವರಿ ೨೮ (ಕರ್ನಾಟಕ ವಾರ್ತೆ): ಸ್ಪರ್ಶ ಕುಷ್ಠ ಅರಿವು ಆಂದೋಲನ-೨೦೨೦ ರ ಕಾರ್ಯಕ್ರಮವನ್ನು ಜನವರಿ ೩೦ರಿಂದ ಫೆಬ್ರುವರಿ ೧೩ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿಗಳಾದ ಶಂಕರಗೌಡ ಎಸ್.ಸೋಮನಾಳ ಅವರು ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಸ್ಪರ್ಶ ಕುಷ್ಠ ಅರಿವು ಆಂದೋಲನ -೨೦೨೦ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಸ್ಪರ್ಶ ಕುಷ್ಠ ಅರಿವು ಆಂದೋಲನ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಜನವರಿ ೩೦ರಂದು ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಉದ್ಘಾಟಿಸಿ ಸಂದೇಶ ನೀಡುವರು ಎಂದು ಅವರು ಹೇಳಿದರು. ಅಲ್ಲದೆ ಜಿಲ್ಲೆಯ ೧೨೩ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಗ್ರಾಮಸಭೆಗಳನ್ನು ನಡೆಸಿ, ಆಯಾ ಗ್ರಾಮ ಪಂಚಾಯತಿ ಅಧ್ಯಕರು ಕುಷ್ಠರೋಗ ನಿರ್ಮೂಲನೆ ಬಗ್ಗೆ ಸಾರ್ವಜನಿಕರಲ್ಲಿ ಮನವಿ ಮಾಡುವರು. ಮಹಾತ್ಮ ಗಾಂಧೀಜಿಯವರ ಕುಷ್ಠ ವಿರೋಧಿ ಕೊಡುಗೆ ಬಗ್ಗೆ ಪಾತ್ರಾಭಿನಯ ಕಾರ್ಯಕ್ರಮ ಮಾಡಲಾಗುವುದು. ಸಪ್ನಾ-ರೋಲ್ ಪ್ಲೇ, ಕುಷ್ಠರೋಗದ ಬಗ್ಗೆ ಪ್ರಶ್ನೋತ್ತರ ಕಾರ್ಯಕ್ರಮ ಜಿಲ್ಲೆಯಾದ್ಯಂತ ಐಇಸಿ ಕಾರ್ಯಕ್ರಮ ಸೇರಿದಂತೆ ಜಿಲ್ಲೆಯಾದ್ಯಂತ ಐಇಸಿ ಕಾರ್ಯಕ್ರಮ ನಡೆಸಲಾಗುವುದು ಎಂದು ಅವರು ಹೇಳಿದರು.
ಈ ಅವಧಿಯಲ್ಲಿ ಆಶಾ ಮತ್ತು ಕಿರಿಯ ಆರೋಗ್ಯ ಸಹಾಯಕರು ಸಮೀಕ್ಷೆ ನಡೆಸಿ ಕುಷ್ಠ ರೋಗಿಗಳನ್ನು ಗುರುತಿಸಲಿದ್ದು, ಬಳಿಕ ಇವರಿಗೆ ಚಿಕಿತ್ಸೆ ಕೊಡಲಾಗುವುದು ಎಂದು ಅವರು ಹೇಳಿದರು. ಕುಷ್ಠರೋಗವು ಮೈಕ್ರೋಬ್ಯಾಕ್ಟೀರಿಯಂ ಲೆಪ್ರೆಯಿಂದ ಉಂಟಾಗುವ ರೋಗ. ಇದು ಅನುವಂಶಿಕ ರೋಗವಲ್ಲ. ಕುಷ್ಠ ರೋಗವು ಶಾಪಗ್ರಸ್ತವೂ ಅಲ್ಲ. ಪಾಪದ ಫಲವೂ ಅಲ್ಲ ಎಂದು ಹೇಳಿದ ಅವರು, ಚರ್ಮದ ಮೇಲೆ ತಿಳಿ-ಬಿಳಿ ತಾಮ್ರವರ್ಣದ ಮಚ್ಚೆಗಳಿಗೆ ಸ್ಪರ್ಶ ಜ್ಞಾನವಿರುವುದಿಲ್ಲ. ಈ ರೋಗದ ಲಕ್ಷಣಗಳು ಕಂಡು ಬಂದಾಗ ಗ್ರಾಮದಲ್ಲಿನ ಆಶಾ ಕಾರ್ಯಕರ್ತೆಯರು, ಎಎನ್‌ಎಮ್ ಹಾಗೂ ಆರೋಗ್ಯ ಕಾರ್ಯಕರ್ತೆಯರಿಗೆ ತಿಳಿಸಿ ಮಾರ್ಗದರ್ಶನ ಪಡೆಯಬಹುದು ಎಂದರು. ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಎಮ್‌ಡಿಟಿ ಚಿಕಿತ್ಸೆ ಉಚಿತವಾಗಿ ಲಭ್ಯವಿರುತ್ತದೆ. ಈ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು. ಶೀಘ್ರರೋಗ ಪತ್ತೆ ಮಾಡಿ ಗುಣಪಡಿಸುವುದರಿಂದ ಅಂಗವಿಕಲತೆ ತಡೆಗಟ್ಟಬಹುದು, ಅಲ್ಲದೆ ಕುಷ್ಠರೋಗ ಮುಕ್ತರನ್ನಾಗಿಸಬಹುದು ಎಂದು ಅವರು ಹೇಳಿದರು.
ನಮ್ಮ ಜಿಲ್ಲೆಯಲ್ಲಿ ಏಪ್ರಿಲ್-೨೦೧೯ ರಿಂದ ಇಲ್ಲಿಯವರೆಗೆ ೬೬ ರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗಿದೆ. ೨೦೧೯-೨೦ನೇ ಸಾಲಿನಲ್ಲಿ ಎರಡು ಜನರಿಗೆ ಆರ್‌ಸಿಎಸ್(ಶಸ್ತçಚಿಕಿತ್ಸೆ) ಮಾಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಒಬ್ಬರಿಗೆ ಆರ್‌ಸಿಎಸ್(ಶಸ್ತçಚಿಕಿತ್ಸೆ) ಮಾಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಭಗವಂತ ಅನವಾರ ಅವರು ಮಾತನಾಡಿ, ಕುಷ್ಠರೋಗದ ನಿರ್ಮೂಲನೆಗೆ ಎರಡು ವಿಧದ ಚಿಕಿತ್ಸೆಗಳಿದ್ದು ಒಂದು ಮತ್ತು ಎರಡು ವರ್ಷ ಅವಧಿಯ ಚಿಕಿತ್ಸೆ ಇರುತ್ತದೆ. ೨೦೧೮-೧೯ನೇ ಸಾಲಿನಲ್ಲಿ ೫೨ ಜನ ಕುಷ್ಠರೋಗ ಹೊಂದಿದವರನ್ನು ಗುರುತಿಸಿ ಅದರಲ್ಲಿ ೪೦ಜನರಿಗೆ ಯಶಸ್ವಿ ಚಿಕಿತ್ಸೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ಆಂದೋಲನದಲ್ಲಿ ಕುಷ್ಠರೋಗ ಹೊಂದಿದವರನ್ನು ಸನ್ಮಾನಿಸಲಾಗುವುದು, ಅಲ್ಲದೆ ಜನಪ್ರಿಯ ವ್ಯಕ್ತಿಯಿಂದ ಕಾರ್ಯಕ್ರಮದ ಕುರಿತು ಪ್ರಚಾರ ಮಾಡಲಾಗುವುದು ಎಂದು ಅವರು ಹೇಳಿದರು. ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ದೇಹದ ಮೇಲೆ ಸ್ಪರ್ಶಜ್ಞಾನವಿಲ್ಲದ ಮಚ್ಚೆಗಳು, ತ್ವಚೆಯ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು ಇವುಗಳಲ್ಲಿ ಯಾವುದೇ ಚಿಹ್ನೆಗಳು ಕಂಡುಬAದಲ್ಲಿ ತಕ್ಷಣವೇ ಸಮೀಪದ ಸರಕಾರಿ ಆಸ್ಪತ್ರೆÀಯಲ್ಲಿ ಪರೀಕ್ಷಿಸಿಕೊಳ್ಳಿ, ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತವಾಗಿ ಲಭ್ಯವಿದೆ ಎಂದು ಅವರು ಮಾಹಿತಿ ನೀಡಿದರು. ಕುಷ್ಠರೋಗ ಜಾಗೃತಿ ಅಭಿಯಾನದ ಮತ್ತು ಪ್ರತಿಜ್ಞಾವಿಧಿಯನ್ನು ಒಳಗೊಂಡ ಭಿತ್ತಿಪತ್ರಗಳನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಿರಿಯ ಆರೋಗ್ಯ ಸಹಾಯಕರಾದ ಶರಣಯ್ಯ ಸ್ವಾಮಿ, ಶರಣಬಸವ ಹೊಸಮನಿ ಅವರು ಇದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ