ಸೋಮವಾರ, ಜನವರಿ 13, 2020

ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ
- ರಘುವೀರ ಸಿಂಗ್ ಠಾಕೂರ್

ಯಾದಗಿರಿ, ಜನವರಿ ೧೩ (ಕರ್ನಾಟಕ ವಾರ್ತೆ): ಬಾಲಕಾರ್ಮಿಕ ಪದ್ಧತಿ ೧೯೮೬ರ ಕಾಯ್ದೆಯಡಿಯಲ್ಲಿ ೬ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ಮತ್ತು ಇತರೆ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಹೇಳಿದರು.
ನಗರದ ಪೊಲೀಸ್ ಆಡಳಿತ ಭವನದಲ್ಲಿ ಸಿ.ಪಿ.ಐ, ಪಿ.ಎಸ್.ಐ, ಪೊಲೀಸ್ ಅಧಿಕಾರಿಗಳಿಗೆ ೧೯೮೬ರ ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಹಾಗೂ ನಿಷೇಧಿತ ತಂಬಾಕು ಕುರಿತು ಅವರು ಮಾಹಿತಿ ನೀಡಿದರು.
ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂಬ ವಿಷಯದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಜೊತೆಗೆ ನಗರದಾದ್ಯಂತ ಅನಿರೀಕ್ಷಿತ ತಪಾಸಣೆ ಕೈಗೊಂಡು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಲು ಮಾಲೀಕರುಗಳಿಗೆ ಸೂಚಿಸಲಾಗುತ್ತಿದೆ. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದಲ್ಲಿ ಮಾಲೀಕರುಗಳಿಗೆ ಪ್ರತಿ ಮಗುವಿಗೆ ೫೦,೦೦೦ ರೂ.ನಂತೆ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲು ಶಿಕ್ಷೆ ಕೂಡ ವಿಧಿಸಬಹುದಾಗಿದೆ ಎಂದು ತಿಳಿಸಿದರು.
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ ೧೯೮೬ರ ಕಾಯ್ದೆಗೆ ಸಂಬAಧಿಸಿದAತೆ ಹೊಸದಾಗಿ ತಿದ್ದುಪಡಿಯಾಗಿರುವ ಗೆಜೆಟ್ ಅಧಿಸೂಚನೆಯನ್ನು ಸಹ ನೀಡಲಾಗಿರುತ್ತದೆ. ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದು ಕಂಡುಬAದಲ್ಲಿ ಕಾರ್ಮಿಕ ಅಧಿಕಾರಿಗಳು/ ಕಾರ್ಮಿಕ ನಿರೀಕ್ಷಕರು ಆಯಾ ಸಂಬAಧಪಟ್ಟ ಪೊಲೀಸ್ ಠಾಣೆಗಳ ಕಾರ್ಯವ್ಯಾಪ್ತಿಯಲ್ಲಿ ಅನಿರೀಕ್ಷಿತ ದಾಳಿ ಅಥವಾ ತಪಾಸಣೆಯನ್ನು ಕೈಗೊಂಡು ಕೆಲಸ ಮಾಡುತ್ತಿರುವ ಮಕ್ಕಳನ್ನು ರಕ್ಷಿಸಿ, ಪುನರ್ವಸತಿ ನೀಡುವ ಮೂಲಕ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಬೇಕಾಗುತ್ತದೆ. ಆದ್ದರಿಂದ ಜಿಲ್ಲೆ, ತಾಲ್ಲೂಕಿನಾದ್ಯಂತ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಕಾರ್ಯಾಚರಣೆ ಸಮಯದಲ್ಲಿ ಸಂಬAಧಿಸಿದ ಪೊಲೀಸ್ ಠಾಣಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಅನುಸರಿಸುವ ಕ್ರಮಗಳನ್ನು ಕೈಗೊಂಡು ಕಾರ್ಮಿಕ ಇಲಾಖೆಯೊಂದಿಗೆ ಜಂಟಿಯಾಗಿ ಕಾರ್ಯನಿರ್ವಹಿಸುವ ಮೂಲಕ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ಸಹಕರಿಸುವಂತೆ ಕೋರಿದರು.

ಡಿವೈಎಸ್‌ಪಿ ಯು.ಶರಣಪ್ಪ ಅವರು ಮಾತನಾಡಿ, ಬಾಲಕಾರ್ಮಿಕ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ಬಾಲಕಾರ್ಮಿಕ ಮಕ್ಕಳ ತಪಾಸಣೆಗೆ ಅನಿರೀಕ್ಷಿತ ದಾಳಿ ಮಾಡಲು ಬಂದಾಗ ಸಂಬAಧಪಟ್ಟ ಠಾಣೆಯ ಅಧಿಕಾರಿಗಳು ಸಹಕರಿಸಿ, ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸೂಚಿಸಿದರು.

ಡಿವೈಎಸ್‌ಪಿ ವೆಂಕಟೇಶ್ ಅವರು ಮಾತನಾಡಿ, ಕೋಟ್ಪಾ-೨೦೦೩ರ ಕಾಯ್ದೆಯನ್ನು ಉಲ್ಲಂಘನೆ ಮಾಡುವ ಅಂಗಡಿ ಮಾಲೀಕರಿಗೆ ಹಗೂ ಸಾರ್ವಜನಿಕರಿಗೆ ಕಾನೂನು ಬಗ್ಗೆ ಅರಿವು ಮೂಡಿಸುತ್ತಾ ದಂಡ ವಿಧಿಸಬೇಕು ಎಂದು ಹೇಳಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷಿö್ಮÃ ಸಜ್ಜನ್ ಅವರು ಮಾತನಾಡಿ, ಕೋಟ್ಪಾ-೨೦೦೩ ಕಾಯ್ದೆಯಡಿಯಲ್ಲಿ ಸೆಕ್ಷನ್ ೪, ೫, ೬, ೬ಎ, ೬ಬಿ ಮತ್ತು ೭ರ ಪ್ರಕಾರ ಸಂಬAಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೊರೆಂಟ್, ಬಾರ್, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ ೧೦೦ ಮೀಟರ್ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬAಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಿಸಬಹುದು ಎಂದು ತಿಳಿಸಿದರು. ಜಿಲ್ಲೆಯ ಎಲ್ಲಾ ಸರ್ಕಲ್ ಇನ್‌ಸ್ಪೆಕ್ಟರ್, ಪಿಎಸ್‌ಐ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...